AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diabetes: ಶುಗರ್ ಲೆವೆಲ್ ಕಂಟ್ರೋಲ್ ಆಗ್ಬೇಕು ಅಂದ್ರೆ ಈ ತರಕಾರಿಯನ್ನು ನಿತ್ಯ ಸೇವಿಸಿ

ಮಧುಮೇಹವು ದೀರ್ಘಕಾಲದವರೆಗೆ ಇರುವ ಕಾಯಿಲೆಗಳಲ್ಲಿ ಒಂದಾಗಿದ್ದು, ಆಹಾರದಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಕೂಡ ಸಕ್ಕರೆ ಪ್ರಮಾಣವು ಹೆಚ್ಚಾಗುತ್ತದೆ. ನಿಮಗೂ ಕೂಡ ಈ ಕಾಯಿಲೆಯಿದ್ದರೆ ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ. ನೀವು ಸೇವಿಸುವ ಆಹಾರದಲ್ಲಿ ಸೌತೆಕಾಯಿಯನ್ನು ಸೇರಿಸಿಕೊಳ್ಳಿ. ಇದರ ನಿಯಮಿತ ಸೇವನೆಯೂ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಹಾಗಾದ್ರೆ ಈ ತರಕಾರಿಯೂ ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ಹೇಗೆ ನಿಯಂತ್ರಣದಲ್ಲಿಡುತ್ತದೆ? ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Diabetes: ಶುಗರ್ ಲೆವೆಲ್ ಕಂಟ್ರೋಲ್ ಆಗ್ಬೇಕು ಅಂದ್ರೆ ಈ ತರಕಾರಿಯನ್ನು ನಿತ್ಯ ಸೇವಿಸಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Dec 06, 2024 | 12:07 PM

Share

ಇತ್ತೀಚೆಗಿನ ದಿನಗಳಲ್ಲಿ ಮಧುಮೇಹಿ ರೋಗಿಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಸಣ್ಣ ಮಕ್ಕಳಿಂದ ಹಿಡಿದು ವಯೋವೃದ್ಧವರೆಗೂ ಈ ಕಾಯಿಲೆಯೂ ಕಾಡುತ್ತಿದೆ. ಈ ಆರೋಗ್ಯ ಸಮಸ್ಯೆಯಿರುವವರು ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಅತ್ಯಗತ್ಯ. ಸೇವಿಸುವ ಆಹಾರದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಹೀಗಾಗಿ ಈ ಸೌತೆಕಾಯಿಯನ್ನು ಆಹಾರ ಭಾಗವಾಗಿ ಮಾಡಿಕೊಳ್ಳುವುದು ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಬಹಳಷ್ಟು ಪ್ರಯೋಜನಕಾರಿಯಾಗಿದೆ.

ಸೌತೆಕಾಯಿ ಮಧುಮೇಹಿಗಳಿಗೆ ಎಷ್ಟು ಸಹಕಾರಿ?

* ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಮೂತ್ರ ವಿಸರ್ಜನೆಯ ಸಮಸ್ಯೆಯೂ ಹೆಚ್ಚಾಗಿ ಕಾಡುತ್ತದೆ. ಪದೇ ಪದೇ ಮೂತ್ರ ವಿಸರ್ಜನೆ ಮಾಡುವುದರಿಂದ ದೇಹದಲ್ಲಿ ನೀರಿನ ಕೊರತೆ ಉಂಟಾಗುತ್ತದೆ. ಹೀಗಾಗಿ ಸೌತೆಕಾಯಿಯಲ್ಲಿ ನಿಯಮಿತವಾದ ಸೇವನೆಯೂ ದೇಹದಲ್ಲಿನ ನೀರಿನ ಕೊರತೆಯನ್ನು ನೀಗಿಸುತ್ತದೆ.

* ಸಾಮಾನ್ಯವಾಗಿ ತೂಕ ಹೆಚ್ಚಾಗುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗುವ ಸಾಧ್ಯತೆಯಿರುತ್ತದೆ. ಹೀಗಾಗಿ ಸೌತೆಕಾಯಿಯನ್ನು ಸೇವಿಸುವುದರಿಂದ ಬೊಜ್ಜು ನಿವಾರಣೆಯಾಗಿ ತೂಕವನ್ನು ನಿಯಂತ್ರಿಸುತ್ತದೆ. ಒಂದು ವೇಳೆ ದೇಹದಲ್ಲಿ ಬೊಜ್ಜು ಹೆಚ್ಚಾದರೆ ಸಕ್ಕರೆ ಕಾಯಿಲೆ ಬರುವ ಸಾಧ್ಯತೆಯಿದ್ದು, ಈ ತರಕಾರಿಯೂ ಬೊಜ್ಜಿನ ಅಪಾಯವನ್ನು ಕಡಿಮೆ ಮಾಡುತ್ತದೆ.

* ಸೌತೆಕಾಯಿಯಲ್ಲಿ ಉತ್ಕರ್ಷಣ ನಿರೋಧಕಗಳು ಅಧಿಕವಾಗಿದ್ದು, ಇದರ ನಿಯಮಿತ ಸೇವನೆಯೂ ದೇಹಕ್ಕೆ ಶಕ್ತಿಯನ್ನು ನೀಡುವುದರೊಂದಿಗೆ ದೀರ್ಘಕಾಲದ ಕಾಯಿಲೆಗಳ ಅಪಾಯ ಮಟ್ಟವನ್ನು ಕಡಿಮೆ ಮಾಡುತ್ತದೆ.

* ಸೌತೆಕಾಯಿಯಲ್ಲಿ ಫೈಬರ್ ಪ್ರಮಾಣವು ಅಧಿಕವಾಗಿದ್ದು, ಇದು ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ. ಆಹಾರವನ್ನು ಜೀರ್ಣಗೊಳಿಸಿ ಹೊಟ್ಟೆಯ ಸಮಸ್ಯೆಗಳು ಬಾರದಂತೆ ನೋಡಿಕೊಳ್ಳುತ್ತದೆ.

* ಮದುಮೇಹಿಗಳಲ್ಲಿ ಕಣ್ಣಿನ ಸಮಸ್ಯೆಯೂ ಹೆಚ್ಚಿರುತ್ತದೆ. ಆದರೆ ಈ ಸೌತೆಕಾಯಿಯಲ್ಲಿ ವಿಟಮಿನ್ ಎ ಸಮೃದ್ಧವಾಗಿದ್ದು, ಇದರ ಸೇವನೆಯು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದ್ದು, ಕಣ್ಣಿನ ದೃಷ್ಟಿ ಸುಧಾರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ.

ಇದನ್ನೂ ಓದಿ: ಮಲ್ಲಿಗೆಯಂತೆ ಮೃದುವಾದ ಓಟ್ಸ್ ಇಡ್ಲಿ ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ರೆಸಿಪಿ

ಸೌತೆಕಾಯಿಯನ್ನು ಈ ರೀತಿ ದಿನನಿತ್ಯ ಸೇವಿಸಿ

* ಸೌತೆಕಾಯಿ ಸೂಪ್ : ಸೌತೆಕಾಯಿ ಸೂಪ್ ಮಾಡಿ ಸೇವಿಸುವುದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ. ಹೀಗಾಗಿ ಕತ್ತರಿಸಿಟ್ಟ ಸೌತೆಕಾಯಿಗೆ ಒಂದೆರಡು ಚಮಚ ನಿಂಬೆ ರಸ, ಒಂದು ಈರುಳ್ಳಿ, ಬೆಳ್ಳುಳ್ಳಿ, ಕಾಲು ಚಮಚ ಆಲಿವ್ ಎಣ್ಣೆ, ಅರ್ಧ ಕಪ್ ಕೊತ್ತಂಬರಿ ಸೊಪ್ಪು, ಒಂದು ಚಮಚ ಜೀರಿಗೆ, ಉಪ್ಪು ಮತ್ತು ಮೆಣಸು ಪುಡಿ ಸೇರಿಸಿ ಮಿಶ್ರಣ ಮಾಡಿಕೊಳ್ಳಿ. ಅಗತ್ಯವಿದ್ದಷ್ಟು ಮೊಸರು ಸೇರಿಸಿ ಸೇವಿಸಿದರೆ ಆರೋಗ್ಯದಲ್ಲಿ ಬದಲಾವಣೆವನ್ನು ಕಾಣಬಹುದು.

* ಸೌತೆಕಾಯಿ ಸಲಾಡ್ : ಮದ್ಯಾಹ್ನ ಇಲ್ಲವಾದರೆ ರಾತ್ರಿ ಊಟಕ್ಕೆ ಸೈಡ್ ಡಿಶ್ ಆಗಿ ಸೌತೆಕಾಯಿ ಸಲಾಡ್ ಮಾಡಿ ಸೇವಿಸಬಹುದು. ಇದು ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.

* ಸೌತೆಕಾಯಿ ಕೋಸಂಬರಿ : ಸೌತೆಕಾಯಿಯನ್ನು ತುರಿದು ಮತ್ತು ಮೊಸರಿನಲ್ಲಿ ಬೆರೆಸಿ, ರುಚಿಗೆ ತಕ್ಕಂತೆ ಕಪ್ಪು ಉಪ್ಪು ಸೇರಿಸಿಕೊಳ್ಳಿ. ಇದನ್ನು ದಿನನಿತ್ಯ ಸೇವನೆ ಮಾಡುವುದರಿಂದ ಶುಗರ್ ಲೆವೆಲ್ ನಿಯಂತ್ರಣದಲ್ಲಿರಿಸಿಕೊಳ್ಳಬಹುದು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ