AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diabetes in Children: ನಿಮ್ಮ ಮಕ್ಕಳಿಗೆ ಈ ಆಹಾರಗಳನ್ನು ನೀಡಿದ್ರೆ ಖಂಡಿತ ಈ ಕಾಯಿಲೆ ಬರಬಹುದು

ಮಕ್ಕಳಲ್ಲಿ ಮಧುಮೇಹದ ಪ್ರಕರಣಗಳು ಹೆಚ್ಚುತ್ತಿದೆ. ಭಾರತದಲ್ಲಿ ಮಕ್ಕಳಲ್ಲಿ ಕಾಣಿಸಿಕೊಳ್ಳುವ ಮಧುಮೇಹದ ಕಾಯಿಲೆಯ ಪ್ರಮಾಣವು ಗಣನೀಯವಾಗಿ ಏರಿಕೆ ಕಂಡಿದೆ. ದೇಹದಲ್ಲಿನ ರಕ್ತದಲ್ಲಿನ ಸಕ್ಕರೆಯ ಹೆಚ್ಚಳವು ಇತರ ಅಂಗಗಳ ಮೇಲೂ ಪರಿಣಾಮ ಬೀರುತ್ತದೆ. ಆದರೆ ಮಕ್ಕಳಲ್ಲಿ ಈ ಕಾಯಿಲೆ ಬರಲು ಆನುವಂಶಿಕತೆತೆ ಮಾತ್ರ ಕಾರಣವಾಗಿರುವುದಿಲ್ಲ. ಈ ಕೆಲವು ಕಾರಣಗಳು ಸೇರಿರಬಹುದು.

Diabetes in Children: ನಿಮ್ಮ ಮಕ್ಕಳಿಗೆ ಈ ಆಹಾರಗಳನ್ನು ನೀಡಿದ್ರೆ ಖಂಡಿತ ಈ ಕಾಯಿಲೆ ಬರಬಹುದು
ಸಾಯಿನಂದಾ
| Edited By: |

Updated on: May 16, 2024 | 10:14 AM

Share

ಹೆಚ್ಚಿನವರನ್ನು ಕಾಡುತ್ತಿರುವ ಸಮಸ್ಯೆಗಳಲ್ಲಿ ಮಧುಮೇಹವೂ ಒಂದು. 50 ವರ್ಷ ದಾಟಿದವರಲ್ಲಿ ಮಾತ್ರ ಕಾಣುತ್ತಿದ್ದ ಈ ಸಮಸ್ಯೆಯು ಇದೀಗ ವಯಸ್ಸಾಗದವರಲ್ಲಿ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ದೊಡ್ಡವರಿಂದ ಹಿಡಿದು ಮಕ್ಕಳು ಕೂಡ ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಮಕ್ಕಳಲ್ಲಿ ಸಕ್ಕರೆ ಕಾಯಿಲೆಯು ಕಾಣಿಸಿಕೊಳ್ಳುವ ಪ್ರಮಾಣವು ಏರಿಕೆಯಾಗುತ್ತಿರುವುದು ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮಕ್ಕಳಲ್ಲಿ ಈ ರೋಗ ಲಕ್ಷಣಗಳು ಕಾಣಿಸಿಕೊಂಡರೆ ಮಧುಮೇಹ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಸರಿಯಾದ ಚಿಕಿತ್ಸೆಯಿಂದ ಈ ಕಾಯಿಲೆಯನ್ನು ನಿಯಂತ್ರಣದಲ್ಲಿಡಬಹುದು.

ಮಕ್ಕಳಲ್ಲಿ ಕಾಣಿಸಿಕೊಳ್ಳುವ ಮಧುಮೇಹದ ಲಕ್ಷಣಗಳು

* ಅತಿಯಾದ ಬಾಯಾರಿಕೆ

* ಪದೇ ಪದೇ ಮೂತ್ರ ವಿಸರ್ಜನೆ

* ಅತಿಯಾದ ಹಸಿವು

* ತೂಕ ಇಳಿಕೆ

* ಆಯಾಸ

* ದೃಷ್ಟಿ ಮಂದವಾಗುವುದು

* ಗಾಯವಾಗಿದ್ದರೆ ಗುಣಮುಖವಾಗದೇ ಇರುವುದು, ಈ ಎಲ್ಲಾ ಲಕ್ಷಣಗಳು ನಿಮ್ಮ ಮಕ್ಕಳಲ್ಲಿ ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

ಇದನ್ನೂ ಓದಿ: ಈ ರೀತಿಯ ಆಹಾರ ಪದ್ಧತಿ ಬಂಜೆತನಕ್ಕೆ ಕಾರಣವಾಗಬಹುದು; ಸಂಶೋಧನೆ

ಮಕ್ಕಳಿಗೆ ಈ ಆಹಾರವನ್ನು ನೀಡಬೇಡಿ

ಪೋಷಕರು ತಮ್ಮ ಮಕ್ಕಳಿಗೆ ಕುಕೀಸ್, ಮಿಠಾಯಿಗಳು ಮತ್ತು ಪೇಸ್ಟ್ರಿಗಳನ್ನು ನೀಡುತ್ತಾರೆ. ಇದರ ಸೇವನೆಯಿಂದ ಸಕ್ಕರೆ ಪ್ರಮಾಣ ಹೆಚ್ಚಾಗಿಗಿ ಸಣ್ಣ ಮಕ್ಕಳು ಮಧುಮೇಹಕ್ಕೆ ತುತ್ತಾಗುತ್ತಾರೆ. ಚಿಪ್ಸ್, ಪಿಜ್ಜಾ, ಬರ್ಗರ್ ನಂತಹ ಜಂಕ್ ಫುಡ್ ಗೆ ಮಕ್ಕಳನ್ನು ಒಗ್ಗುವಂತೆ ಮಾಡುವುದು ಒಳ್ಳೆಯದಲ್ಲ. ಹೆಚ್ಚಿನ ಕ್ಯಾಲೋರಿ ಆಹಾರದಿಂದ ಮಕ್ಕಳನ್ನು ದೂರವಿರಿಸಬೇಕು. ಯಾವುದೇ ಸಂದರ್ಭದಲ್ಲೂ ಕೂಲ್ ಡ್ರಿಂಕ್ಸ್ ಕೊಡಬಾರದು ಎನ್ನುತ್ತಾರೆ ತಜ್ಞರು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?