AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿ ಇಬ್ಬರು ಉದ್ಯೋಗಿಗಳಲ್ಲಿ ಒಬ್ಬರಿಗೆ ಮಧುಮೇಹದ ಅಪಾಯ! ಸಮೀಕ್ಷೆಯಲ್ಲಿ ಆತಂಕಕಾರಿ ಅಂಶ ಬಹಿರಂಗ

ಇತ್ತೀಚೆಗೆ ಬಿಡುಗಡೆಯಾದ ಸಮೀಕ್ಷಾ ವರದಿಯ ಪ್ರಕಾರ, ಭಾರತದಲ್ಲಿ ಪ್ರತಿ 10 ಕೆಲಸ ಮಾಡುವ ಜನರಲ್ಲಿ 5 ಜನರು ಪ್ರಿಡಿಯಾಬಿಟಿಸ್‌ನಿಂದ ಬಳಲುತ್ತಿದ್ದಾರೆ ಅಥವಾ ಮಧುಮೇಹದಿಂದ ಬಳಲುತ್ತಿದ್ದಾರೆ. ಈ ಅಂಕಿ ಅಂಶವು ದೇಶದಲ್ಲಿ ವೇಗವಾಗಿ ಹೆಚ್ಚುತ್ತಿರುವ ಆರೋಗ್ಯ ಅಪಾಯಗಳನ್ನು ಸೂಚಿಸುತ್ತದೆ. ದೀರ್ಘಕಾಲ ಇದನ್ನು ಗಮನಿಸದಿದ್ದರೆ ಹೃದಯ, ಮೂತ್ರಪಿಂಡ ಮತ್ತು ಕಣ್ಣುಗಳಿಗೆ ಸಂಬಂಧಿಸಿದ ಗಂಭೀರ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಹಾಗಾದರೆ ಈ ರೀತಿ ಆಗುವುದಕ್ಕೆ ಕಾರಣವೇನು, ಈ ರೀತಿಯ ಸಮಸ್ಯೆಗಳನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪ್ರತಿ ಇಬ್ಬರು ಉದ್ಯೋಗಿಗಳಲ್ಲಿ ಒಬ್ಬರಿಗೆ ಮಧುಮೇಹದ ಅಪಾಯ! ಸಮೀಕ್ಷೆಯಲ್ಲಿ ಆತಂಕಕಾರಿ ಅಂಶ ಬಹಿರಂಗ
Workplace Stress and Diabetes: A Growing Concern in IndiaImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Apr 13, 2026 | 8:58 PM

Share

ಭಾರತದಲ್ಲಿ ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಗಳು ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಇತ್ತೀಚೆಗೆ ಅಪೊಲೊ ಆಸ್ಪತ್ರೆ ಬಿಡುಗಡೆ ಮಾಡಿದ ‘ಹೆಲ್ತ್ ಆಫ್ ದ ನೇಶನ್ (HoN) 2026’ ವರದಿ ಪ್ರಕಾರ, ದೇಶದಲ್ಲಿ ಪ್ರತೀ 10 ಉದ್ಯೋಗಿಗಳಲ್ಲಿ ಸುಮಾರು 5 ಜನರು ಪ್ರೀಡಯಾಬಿಟೀಸ್ ಅಥವಾ ಡಯಾಬಿಟೀಸ್ (Diabetes) ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಭವಿಷ್ಯದಲ್ಲಿ ದೊಡ್ಡ ಆರೋಗ್ಯ ಸವಾಲಾಗಿ ಪರಿಣಮಿಸುವ ಸಾಧ್ಯತೆ ಇದೆ ಎಂದು ಹೇಳಿದೆ. ಇದು ಒಂದು ರೀತಿಯ ಸೈಲೆಂಟ್ ಕಾಯಿಲೆಯಾದ್ದರಿಂದ ಹಲವರಿಗೆ ತಮ್ಮ ಶುಗರ್ ಮಟ್ಟ ಹೆಚ್ಚಾಗಿರುವುದೇ ತಿಳಿಯುವುದಿಲ್ಲ. ಆರಂಭಿಕ ಲಕ್ಷಣಗಳು ಬಹಳ ಸೂಕ್ಷ್ಮವಾಗಿರುವುದರಿಂದ ಇದನ್ನು ನಿರ್ಲಕ್ಷಿಸುವ ಪ್ರವೃತ್ತಿ ಹೆಚ್ಚಾಗಿದೆ. ದೀರ್ಘಕಾಲ ಇದನ್ನು ಗಮನಿಸದಿದ್ದರೆ ಹೃದಯ, ಮೂತ್ರಪಿಂಡ ಮತ್ತು ಕಣ್ಣುಗಳಿಗೆ ಸಂಬಂಧಿಸಿದ ಗಂಭೀರ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಹಾಗಾದರೆ ಈ ರೀತಿ ಆಗುವುದಕ್ಕೆ ಕಾರಣವೇನು, ಈ ರೀತಿಯ ಸಮಸ್ಯೆಗಳನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಜೀವನಶೈಲಿ ಮುಖ್ಯ ಕಾರಣ:

ಪ್ರತಿನಿತ್ಯ ಕೆಲಸಕ್ಕೆ ಹೋಗುವವರ ಜೀವನದಲ್ಲಿ ಹೆಚ್ಚು ಸಮಯ ಕುಳಿತು ಕೆಲಸ ಮಾಡುವುದು, ವ್ಯಾಯಾಮದ ಕೊರತೆ ಮತ್ತು ಜಂಕ್ ಫುಡ್ ಸೇವನೆ ಪ್ರಮುಖ ಕಾರಣಗಳಾಗಿವೆ. ಅಧಿಕ ಸ್ಕ್ರೀನ್ ಟೈಮ್, ಒತ್ತಡ ಮತ್ತು ಅಸ್ಥಿರ ಆಹಾರ ಪದ್ಧತಿ ದೇಹದ ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಗ್ಗಿಸುತ್ತದೆ. ಇದರಿಂದ ಶುಗರ್ ನಿಯಂತ್ರಣ ಕಷ್ಟವಾಗುತ್ತದೆ. ವರದಿ ಪ್ರಕಾರ, ಮಧುಮೇಹದ ಜೊತೆಗೆ ಹೈ ಬಿಪಿ, ಅತಿಯಾದ ತೂಕ ಮತ್ತು ವಿಟಮಿನ್ ಕೊರತೆಗಳೂ ಹೆಚ್ಚುತ್ತಿವೆ. ಹೆಚ್ಚಿದ ತೂಕ ಇನ್ಸುಲಿನ್ ರೆಸಿಸ್ಟೆನ್ಸ್ ಹೆಚ್ಚಿಸಿ ಶುಗರ್ ನಿಯಂತ್ರಣವನ್ನು ಕಷ್ಟವಾಗಿಸುತ್ತದೆ. ವಿಟಮಿನ್ D ಮತ್ತು B12 ಕೊರತೆ ದೇಹದ ಕಾರ್ಯವಿಧಾನವನ್ನು ಹಾಳುಮಾಡುತ್ತದೆ.

ಇದನ್ನೂ ಓದಿ: ಪದೇ ಪದೇ ಹಸಿವಾಗುವುದು ಮಧುಮೇಹದ ಆರಂಭಿಕ ಲಕ್ಷಣವೇ? ಇಲ್ಲಿದೆ ತಜ್ಞರ ಉತ್ತರ

ತಡೆಗಟ್ಟಲು ಏನು ಮಾಡಬೇಕು?

ತಜ್ಞರ ಪ್ರಕಾರ, ದಿನಕ್ಕೆ ಕನಿಷ್ಠ 30 ನಿಮಿಷ ವ್ಯಾಯಾಮ ಮಾಡುವುದು, ಸಮತೋಲನ ಆಹಾರ ಸೇವಿಸುವುದು ಮತ್ತು ಸಿಹಿ ಹಾಗೂ ಪ್ರೊಸೆಸ್ಡ್ ಆಹಾರಗಳಿಂದ ದೂರವಿರುವುದು ಅತ್ಯಗತ್ಯ. ಸರಿಯಾಗಿ ನಿದ್ರೆ ಮತ್ತು ಒತ್ತಡ ನಿಯಂತ್ರಣವೂ ಮುಖ್ಯ. ನಿಯಮಿತ ಆರೋಗ್ಯ ತಪಾಸಣೆ ಮೂಲಕ ಶುಗರ್ ಮತ್ತು ಬಿಪಿ ಮಟ್ಟವನ್ನು ಪರಿಶೀಲಿಸುವುದು ಉತ್ತಮ. ಏಕೆಂದರೆ ಮಧುಮೇಹವು ಈಗ ವಯೋವೃದ್ಧರಲ್ಲಿ ಮಾತ್ರವಲ್ಲದೆ, ಯುವ ಉದ್ಯೋಗಿಗಳಲ್ಲೂ ವೇಗವಾಗಿ ಹೆಚ್ಚುತ್ತಿದೆ. ಸರಿಯಾದ ಸಮಯದಲ್ಲಿ ಜೀವನಶೈಲಿ ಬದಲಾವಣೆ ಮಾಡಿಕೊಂಡರೆ ಈ ಅಪಾಯವನ್ನು ಕಡಿಮೆ ಮಾಡಬಹುದು. ಆರೋಗ್ಯಕರ ಅಭ್ಯಾಸಗಳೇ ಈ ಸಮಸ್ಯೆಗೆ ಶಾಶ್ವತ ಪರಿಹಾರವಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!