AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಮೇಹ ಬಾರದಂತೆ ತಡೆಯಲು ಈ 10 ಆಹಾರ ಸೇವಿಸಿ

ಇತ್ತೀಚೆಗೆ ಎಲ್ಲ ವಯಸ್ಸಿನವರಲ್ಲೂ ಡಯಾಬಿಟಿಸ್ ಕಾಣಿಸಿಕೊಳ್ಳುತ್ತಿದೆ. ಒಂದುವೇಳೆ ನಿಮ್ಮ ಕುಟುಂಬದಲ್ಲಿ ಯಾರಿಗಾದರೂ ಮಧುಮೇಹ ಸಮಸ್ಯೆಯಿದ್ದರೆ ನಿಮಗೆ ಮಧುಮೇಹ ಉಂಟಾಗುವ ಸಾಧ್ಯತೆ ಮತ್ತಷ್ಟು ಹೆಚ್ಚಾಗಿರುತ್ತದೆ. ಸರಿಯಾದ ಆಹಾರಗಳನ್ನು ಸೇವಿಸುವುದರಿಂದ ಮಧುಮೇಹ ನಿಯಂತ್ರಿಸಬಹುದು.

ಮಧುಮೇಹ ಬಾರದಂತೆ ತಡೆಯಲು ಈ 10 ಆಹಾರ ಸೇವಿಸಿ
ಮಧುಮೇಹImage Credit source: iStock
ಸುಷ್ಮಾ ಚಕ್ರೆ
|

Updated on: Jan 15, 2024 | 2:10 PM

Share

ಕೆಲವು ಆಹಾರಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತವೆ. ಸ್ಥಿರವಾದ ರಕ್ತದ ಮಟ್ಟ ಕಾಪಾಡಿಕೊಳ್ಳುವುದು ನಮ್ಮ ಆರೋಗ್ಯಕ್ಕೆ ಬಹಳ ಮುಖ್ಯ. ಹೆಚ್ಚಿನ ಸಕ್ಕರೆ ಮತ್ತು ಕಾರ್ಬೋಹೈಡ್ರೇಟ್ ಆಹಾರಗಳ ನಿಯಮಿತ ಸೇವನೆಯು ಕ್ರಮೇಣ ಮಧುಮೇಹವನ್ನು ಹೆಚ್ಚಿಸುವ ಅಪಾಯವಿದೆ. ಅದರಲ್ಲೂ ನಿಮ್ಮ ಕುಟುಂಬದಲ್ಲಿ ಯಾರಿಗಾದರೂ ಮಧುಮೇಹ ಸಮಸ್ಯೆಯಿದ್ದರೆ ನಿಮಗೆ ಮಧುಮೇಹ ಉಂಟಾಗುವ ಸಾಧ್ಯತೆ ಮತ್ತಷ್ಟು ಹೆಚ್ಚಾಗಿರುತ್ತದೆ. ಸರಿಯಾದ ಆಹಾರಗಳನ್ನು ಸೇವಿಸುವುದರಿಂದ ಮಧುಮೇಹ ನಿಯಂತ್ರಿಸಬಹುದು.

ನಿಮ್ಮ ರಕ್ತದಲ್ಲಿನ ಸಕ್ಕರೆಮಟ್ಟ ಹೆಚ್ಚಾಗಬಾರದು ಎಂದಾದರೆ ಈ 10 ಆಹಾರಗಳನ್ನು ಸೇವಿಸಿ.

– ಬಿಳಿ ಅಕ್ಕಿಯ ಬದಲು ಕೆಂಪು ಅಥವಾ ಕಂದು ಅಕ್ಕಿ ಸೇವಿಸಲು ಆರಂಭಿಸಿ. ಇದು ನಿಮ್ಮ ನಂತರದ ರಕ್ತದ ಸಕ್ಕರೆ ಅಂಶವನ್ನು ಹೆಚ್ಚಿಸುವುದಿಲ್ಲ. ಮೈದಾ ಬದಲಿಗೆ ರಾಗಿ / ಜೋಳದ ಹಿಟ್ಟು ಬಳಸಿ.

– ಕಿಡ್ನಿ ಬೀನ್ಸ್ ಮತ್ತು ಕಪ್ಪು ಬೀನ್ಸ್‌ ಜೊತೆಗೆ ಮಸೂರ ಸೇವಿಸಿ. ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆಯ ಗಮನಾರ್ಹ ಏರಿಕೆಗೆ ಕಾರಣವಾಗುವುದಿಲ್ಲ. ಕಡಲೆ ದಾಲ್ ಮತ್ತು ಹೆಸರು ಬೇಳೆ ಅನ್ನು ಸಾಧ್ಯವಾದಷ್ಟು ಹೆಚ್ಚು ಸೇವಿಸಿ.

ಇದನ್ನೂ ಓದಿ: ಹದಿಹರೆಯದವರಲ್ಲಿ ಇತ್ತೀಚೆಗೆ ಮಧುಮೇಹ ಹೆಚ್ಚಾಗುತ್ತಿರುವುದೇಕೆ?

– ಪಾಲಕ್ ಮತ್ತು ಕೇಲ್ ಮತ್ತು ಆಂಟಿಆಕ್ಸಿಡೆಂಟ್ ಅಂಶವಿರುವ ಬೆರಿಗಳಾದ ಬ್ಲೂಬೆರಿಗಳು ಮತ್ತು ರಾಸ್​ಬೆರಿಯಂತಹ ಹಸಿರು ಸೊಪ್ಪನ್ನು ಸೇವಿಸಿ. ಇದು ರಕ್ತದಲ್ಲಿನ ಸಕ್ಕರೆ ಅಂಶದಲ್ಲಿ ಹೆಚ್ಚಳ ಉಂಟುಮಾಡದೆ ವಿಟಮಿನ್​ಗಳು ಮತ್ತು ಫೈಬರ್ ಅನ್ನು ನೀಡುತ್ತದೆ.

– ಆವಕಾಡೊ ಹಣ್ಣು, ಬಾದಾಮಿ, ವಾಲ್‌ನಟ್ಸ್ ಮತ್ತು ಆಲಿವ್ ಎಣ್ಣೆ ಆರೋಗ್ಯಕರ ಕೊಬ್ಬನ್ನು ಒದಗಿಸುತ್ತವೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸಲು ಸಹಾಯಕವಾಗಿದೆ.

– ಒಮೆಗಾ-3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿರುವ ಸಾಲ್ಮನ್ ರಕ್ತದಲ್ಲಿನ ಸಕ್ಕರೆಯನ್ನು ಹೆಚ್ಚಿಸುವುದಿಲ್ಲ. ಇದು ಹೃದಯದ ಆರೋಗ್ಯಕ್ಕೆ ಉತ್ತಮವಾಗಿದೆ. ಫೈಬರ್ ಮತ್ತು ಒಮೆಗಾ-3 ಕೊಬ್ಬಿನಾಮ್ಲಗಳಲ್ಲಿ ಅಧಿಕವಾಗಿರುವ ಚಿಯಾ ಬೀಜಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸಲು ಸಹಾಯ ಮಾಡುತ್ತದೆ.

– ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವಲ್ಲಿ ಬೆಳ್ಳುಳ್ಳಿಯ ಸಾಮರ್ಥ್ಯವು ಹೆಚ್ಚಾಗಿದೆ.

– ಮೊಟ್ಟೆಗಳು ಮತ್ತು ಮೊಸರು ಹೆಚ್ಚಿನ ಪ್ರೋಟೀನ್ ಹೊಂದಿದ್ದು, ರಕ್ತದಲ್ಲಿನ ಸಕ್ಕರೆ ಅಂಶವನ್ನು ಸ್ಥಿರವಾಗಿರಿಸಲು ಉಪಯುಕ್ತವಾಗಿದೆ.

ಇದನ್ನೂ ಓದಿ: Okra Water: ಮಧುಮೇಹಿಗಳು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರು ಸೇವಿಸಿ ನೋಡಿ

– ಮೊದಲು ಸಲಾಡ್ ಅಥವಾ ತರಕಾರಿಗಳನ್ನು ಸೇವಿಸಿ. ನಂತರ ಪ್ರೋಟೀನ್​ಗಳು ಮತ್ತು ಕೊಬ್ಬಿನಂಶವಿರುವ ಆಹಾರಗಳನ್ನು ಸೇವಿಸಿ.

– ದಾಲ್ಚಿನ್ನಿ ದೇಹದಲ್ಲಿ ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

– ಸೌತೆಕಾಯಿಗಳು ಹೆಚ್ಚಿನ ನೀರಿನ ಅಂಶ ಮತ್ತು ಕಡಿಮೆ ಕ್ಯಾಲೊರಿಗಳನ್ನು ಹೊಂದಿರುವ ಪೌಷ್ಟಿಕ ಆಹಾರವಾಗಿದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ