AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿ ಪ್ಲೇಟ್‌ಲೆಟ್‌ಗಳು ಕಡಿಮೆಯಾಗುವುದಕ್ಕೆ ಈ ರೋಗಗಳೇ ಕಾರಣ ಎಂಬುದು ತಿಳಿದಿದೆಯೇ?

ದೇಹದ ಸರಿಯಾದ ಕಾರ್ಯನಿರ್ವಹಣೆಗೆ ಪ್ಲೇಟ್‌ಲೆಟ್‌ಗಳು ಬಹಳ ಮುಖ್ಯ ಎಂಬುದು ತಿಳಿದ ವಿಚಾರ. ಆದರೆ ಕೆಲವು ಕಾಯಿಲೆಗಳಿಂದಾಗಿ ಅವುಗಳ ಮಟ್ಟವು ವೇಗವಾಗಿ ಕಡಿಮೆಯಾಗಬಹುದು ಎಂಬುದು ತಿಳಿದಿದೆಯೇ? ಹೌದು, ಕೆಲವೊಮ್ಮೆ ಪ್ಲೇಟ್‌ಲೆಟ್‌ ಕಡಿಮೆಯಾಗಲು ಕೆಲವು ರೋಗಗಳು ಕಾರಣವಾಗಬಹುದು. ಹಾಗಾಗಿ ಈ ರೀತಿ ಆಗುವುದಕ್ಕೆ ನಿಜವಾದ ಕಾರಣವೇನು, ಪ್ಲೇಟ್‌ಲೆಟ್‌ಗಳ ಕೊರತೆಯಾದಾಗ ಕಂಡುಬರುವ ಲಕ್ಷಣಗಳು ಹೇಗಿರುತ್ತವೆ ಎಂಬುದನ್ನು ತಿಳಿದುಕೊಂಡಿರಬೇಕಾಗುತ್ತದೆ. ಈ ಬಗೆಗಿನ ಸಂಪೂರ್ಣ ಮಾಹಿತಿ ಸ್ಟೋರಿಯಲ್ಲಿದೆ.

ದೇಹದಲ್ಲಿ ಪ್ಲೇಟ್‌ಲೆಟ್‌ಗಳು ಕಡಿಮೆಯಾಗುವುದಕ್ಕೆ ಈ ರೋಗಗಳೇ ಕಾರಣ ಎಂಬುದು ತಿಳಿದಿದೆಯೇ?
Low Platelet Count Symptoms And CausesImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Apr 03, 2026 | 8:22 PM

Share

ನಿಮಗೆ ತಿಳಿದಿರಬಹುದು, ಪ್ಲೇಟ್‌ಲೆಟ್‌ಗಳು (Low Platelet) ನಮ್ಮ ದೇಹದ ರಕ್ತದಲ್ಲಿ ಇರುವ ಸಣ್ಣ ಕೋಶಗಳಾಗಿದ್ದು, ರಕ್ತಸ್ರಾವವನ್ನು ತಡೆಯುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ದೇಹದಲ್ಲಿ ಗಾಯವಾದಾಗ, ಈ ಪ್ಲೇಟ್‌ಲೆಟ್‌ಗಳು ಆ ಸ್ಥಳದಲ್ಲಿ ಸೇರಿ ರಕ್ತದ ಗಡ್ಡೆ (clot) ರೂಪಿಸಿ ರಕ್ತಸ್ರಾವವನ್ನು ನಿಲ್ಲಿಸುತ್ತವೆ. ಸಾಮಾನ್ಯವಾಗಿ ಆರೋಗ್ಯವಂತ ವ್ಯಕ್ತಿಯ ದೇಹದಲ್ಲಿ ಪ್ಲೇಟ್‌ಲೆಟ್‌ಗಳ ಸಂಖ್ಯೆ ಪ್ರತಿ ಮೈಕ್ರೋಲೀಟರ್ ರಕ್ತದಲ್ಲಿ 1.5 ಲಕ್ಷದಿಂದ 4.5 ಲಕ್ಷದವರೆಗೆ ಇರುತ್ತದೆ. ಇದು 1.5 ಲಕ್ಷಕ್ಕಿಂತ ಕಡಿಮೆಯಾದರೆ ಅದು ಅಪಾಯದ ಸೂಚನೆ. 50 ಸಾವಿರಕ್ಕಿಂತ ಕಡಿಮೆಯಾದರೆ ಗಂಭೀರ ಎಂದು ಪರಿಗಣಿಸಲಾಗುತ್ತದೆ. 20 ಸಾವಿರಕ್ಕಿಂತ ಕಡಿಮೆಯಾದರೆ ಒಳಾಂಗಿಕ ರಕ್ತಸ್ರಾವದ ಅಪಾಯ ಹೆಚ್ಚುತ್ತದೆ, ಇದು ಜೀವಕ್ಕೆ ಅಪಾಯಕಾರಿಯೂ ಆಗಬಹುದು. ದೀರ್ಘಕಾಲ ಪ್ಲೇಟ್‌ಲೆಟ್‌ಗಳ ಕೊರತೆ ಇದ್ದರೆ ಸಣ್ಣ ಗಾಯವೂ ದೊಡ್ಡ ಸಮಸ್ಯೆಯಾಗಬಹುದು. ಆದರೆ ನಿಮಗೆ ಈ ರೀತಿ ಆಗುವುದಕ್ಕೆ ಕಾರಣವೇನು, ಪ್ಲೇಟ್‌ಲೆಟ್‌ಗಳ ಕೊರತೆಯಾದಾಗ ಕಂಡುಬರುವ ಲಕ್ಷಣಗಳು ಹೇಗಿರುತ್ತವೆ ಎಂಬುದು ತಿಳಿದಿದೆಯೇ, ಈ ಬಗ್ಗೆ ಸಂಪೂರ್ಣ ಮಾಹಿತಿ ಸ್ಟೋರಿಯಲ್ಲಿದೆ.

ಪ್ಲೇಟ್‌ಲೆಟ್‌ ಕಡಿಮೆಯಾಗಲು ಕಾರಣವಾಗುವ ರೋಗಗಳು:

  • ವೈರಲ್ ಸೋಂಕುಗಳಾದ ಡೆಂಗ್ಯೂ, ಚಿಕನ್‌ಗುನ್‌ಯಾ ಮತ್ತು ಮಲೇರಿಯಾ
  • ಟೈಫಾಯ್ಡ್ ಮತ್ತು ವೈರಲ್ ಜ್ವರ
  • ಲೀವರ್ ಸಮಸ್ಯೆಗಳು ಅದರಲ್ಲಿಯೂ ಸಿರೋಸಿಸ್ ಸಮಸ್ಯೆ
  • ಬೋನ್ ಮ್ಯಾರೋ ಸಮಸ್ಯೆಗಳು
  • ಕ್ಯಾನ್ಸರ್ ಮತ್ತು ಕೀಮೋಥೆರಪಿ
  • ಆಟೋಇಮ್ಯೂನ್ ರೋಗಗಳು ಈ ರೋಗಗಳಲ್ಲಿ ಸಮಯಕ್ಕೆ ಸರಿಯಾಗಿ ಪರೀಕ್ಷೆ ಮತ್ತು ಚಿಕಿತ್ಸೆ ಪಡೆಯುವುದು ಅತ್ಯಂತ ಮುಖ್ಯ.

ಪ್ಲೇಟ್‌ಲೆಟ್‌ಗಳ ಕೊರತೆಯಾದಾಗ ಕಂಡುಬರುವ ಲಕ್ಷಣಗಳು:

  • ಬೇಗ ಗಾಯವಾಗುವುದು
  • ರಕ್ತಸ್ರಾವ ಬೇಗ ನಿಲ್ಲದಿರುವುದು
  • ಚರ್ಮದ ಮೇಲೆ ಕೆಂಪು ಅಥವಾ ನೇರಳೆ ಚುಕ್ಕೆಗಳು ಕಂಡುಬರುವುದು
  • ಮೂಗು ಅಥವಾ ಹಲ್ಲಿನ ಮಸೂರಿನಿಂದ ರಕ್ತಸ್ರಾವ
  • ಮಹಿಳೆಯರಲ್ಲಿ ಪೀರಿಯಡ್ಸ್ ಸಮಯದಲ್ಲಿ ಹೆಚ್ಚು ರಕ್ತಸ್ರಾವ
  • ದಣಿವು, ದುರ್ಬಲತೆ ಮತ್ತು ತಲೆಸುತ್ತು ಈ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ.

ಇದನ್ನೂ ಓದಿ: ಒಸಡು ಹಾಗೂ ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುತ್ತಿದೆಯೇ? ಲಕ್ಷಣಗಳು ಯಾವ ಆರೋಗ್ಯ ಸಮಸ್ಯೆಯನ್ನು ಸೂಚಿಸುತ್ತದೆ?

ಪ್ಲೇಟ್‌ಲೆಟ್‌ಗಳ ಕೊರತೆಯಿಂದ ಹೇಗೆ ರಕ್ಷಿಸಿಕೊಳ್ಳುವುದು?

  • ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು
  • ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ
  • ಸೊಳ್ಳೆಗಳಿಂದ ದೂರವಿರಿ
  • ಪೌಷ್ಟಿಕ ಆಹಾರ ಸೇವಿಸಿ (ಹಸಿರು ತರಕಾರಿಗಳು, ಹಣ್ಣುಗಳು, ಪ್ರೋಟೀನ್)
  • ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ
  • ಜ್ವರ ಅಥವಾ ದುರ್ಬಲತೆಯನ್ನು ನಿರ್ಲಕ್ಷಿಸಬೇಡಿ
  • ವೈದ್ಯರ ಸಲಹೆಯಿಲ್ಲದೆ ಔಷಧಿ ಸೇವಿಸಬೇಡಿ

ಒಟ್ಟಿನಲ್ಲಿ, ಪ್ಲೇಟ್‌ಲೆಟ್‌ಗಳ ಪ್ರಮಾಣ ದೇಹದ ಆರೋಗ್ಯಕ್ಕೆ ಬಹಳ ಮುಖ್ಯ. ಯಾವುದೇ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯುವುದು ಅತ್ಯಗತ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ