AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಯಲ್ಲಿ ಕಣ್ಣಿಗೆ ಹಾನಿಯಾಗುವುದನ್ನು ತಡೆಯಲು ಆರೋಗ್ಯ ಇಲಾಖೆ ನೀಡಿರುವ ಈ ಸಲಹೆಗಳನ್ನು ಪಾಲಿಸಿ

ದೀಪಾವಳಿ ಹಬ್ಬಗಳಲ್ಲಿಯೇ ಅತಿದೊಡ್ಡ ಹಬ್ಬ. ಹಾಗಾಗಿ ಈ ಮೂರು ದಿನ ಎಲ್ಲರ ಮನೆಯಲ್ಲಿಯೂ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಣೆ ಮಾಡಲಾಗುತ್ತದೆ. ಬೆಳಕಿನ ಹಬ್ಬವಾದ್ದರಿಂದ ಪಟಾಕಿಗಳಿಲ್ಲದೆ ಹಬ್ಬ ಪರಿಪೂರ್ಣ ಆಗುವುದಿಲ್ಲ ಎಂಬ ಮನಸ್ಥಿತಿ ಹಲವರದ್ದು. ಇದು ತಪ್ಪಲ್ಲ ಆದರೆ ಪಟಾಕಿ ಹಚ್ಚುವುದಕ್ಕಿಂತ ಮೊದಲು ಕೆಲವು ಮುನ್ನೆಚ್ಚರಿಕೆಗಳನ್ನು ಪಾಲನೆ ಮಾಡಿದಲ್ಲಿ ಹಬ್ಬದ ಸಡಗರದಲ್ಲಿ ಆಗುವಂತಹ ಕೆಲವು ಅನಾಹುತಗಳನ್ನು ತಪ್ಪಿಸಬಹುದು. ಅದರಲ್ಲಿಯೂ ಪಟಾಕಿಗಳಿಂದ ಕಣ್ಣಿನ ರಕ್ಷಣೆ ಮಾಡುವುದು ಅವಶ್ಯಕ. ಈ ಕುರಿತು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದು ಅವುಗಳನ್ನು ಪಾಲನೆ ಮಾಡುವ ಮೂಲಕ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಾಗಾದರೆ ಏನದು ಸಲಹೆ? ಪಟಾಕಿ ಸಿಡಿಸುವಾಗ ಯಾವ ರೀತಿಯ ಕಾಳಜಿ ವಹಿಸಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ದೀಪಾವಳಿಯಲ್ಲಿ ಕಣ್ಣಿಗೆ ಹಾನಿಯಾಗುವುದನ್ನು ತಡೆಯಲು ಆರೋಗ್ಯ ಇಲಾಖೆ ನೀಡಿರುವ ಈ ಸಲಹೆಗಳನ್ನು ಪಾಲಿಸಿ
Eye Safety During Diwali
ಪ್ರೀತಿ ಭಟ್​, ಗುಣವಂತೆ
|

Updated on: Oct 20, 2025 | 1:45 PM

Share

ದೀಪಾವಳಿಯಲ್ಲಿ (Diwali) ಜನರು ದೀಪಗಳನ್ನು ಹಚ್ಚುವುದಕ್ಕಿಂತಲೂ ಪಟಾಕಿ ಸಿಡಿಸಿ ಸಂಭ್ರಮ ಪಡುತ್ತಾರೆ. ಈ ಮೂರು ದಿನಗಳ ಸಂಭ್ರಮದಲ್ಲಿ ಪಟಾಕಿಗಳು ಇಲ್ಲದಿದ್ದರೆ ಅದು ಹಬ್ಬವೇ ಅಲ್ಲ ಎಂಬ ಮನಸ್ಥಿತಿ ಹಲವರದ್ದು. ಅದು ತಪ್ಪಲ್ಲ. ಆದರೆ ಎಲ್ಲವೂ ಇತಿಮಿತಿಯಲ್ಲಿದ್ದರೆ ಬಹಳ ಒಳಿತು. ಅತಿಯಾದರೆ ಅಥವಾ ಅಗತ್ಯವಿದ್ದಾಗ ಮಾಡುವ ನಿರ್ಲಕ್ಷ್ಯ ಅಥವಾ ನಿಷ್ಕಾಳಜಿ ಹಲವು ಸಮಸ್ಯೆಗಳಿಗೆ ಎಡೆಮಾಡಿಕೊಡುತ್ತದೆ. ಹಾಗಾಗಿ ಹಬ್ಬದ ಸಂಭ್ರಮದಲ್ಲಿ ಆರೋಗ್ಯದ ಬಗ್ಗೆ ಅದರಲ್ಲಿಯೂ ಕಣ್ಣಿನ ವಿಷಯದಲ್ಲಿ ಹೆಚ್ಚಿನ ಕಾಳಜಿ ಮಾಡುವುದು ಬಹಳ ಅವಶ್ಯಕವಾಗಿದೆ. ಇಲ್ಲವಾದಲ್ಲಿ ಖುಷಿಯ ಕ್ಷಣ ಸೆಕೆಂಡುಗಳಲ್ಲಿ ಮಾಯವಾಗುತ್ತದೆ. ದೀಪಾವಳಿ ಸಂದರ್ಭ ಪಟಾಕಿ ಸಿಡಿಸುವಾಗ ನಿಮ್ಮ ಕಣ್ಣಿನ ಆರೈಕೆ (Eye Care) ವಹಿಸಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದು ಅವುಗಳನ್ನು ಪಾಲನೆ ಮಾಡುವ ಮೂಲಕ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಜೊತೆಗೆ ದೃಷ್ಠಿ ನಷ್ಟವಾಗುವುದನ್ನು ತಡೆಯಬಹುದು. ಹಾಗಾದರೆ ಏನದು ಸಲಹೆ? ಪಟಾಕಿ ಸಿಡಿಸುವಾಗ ಯಾವ ರೀತಿಯ ಕಾಳಜಿ ವಹಿಸಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು?

  • ಪಟಾಕಿ ಇಲ್ಲದೆ ದೀಪಾವಳಿ ಹಬ್ಬವನ್ನು ಊಹಿಸಲೂ ಸಾಧ್ಯವಿಲ್ಲ ಎನ್ನುವವರು ಪಟಾಕಿ ತರುವುದಕ್ಕಿಂತಲೂ ಮೊದಲು ಕೆಲವು ಮುನ್ನೆಚ್ಚರಿಕೆಗಳನ್ನು ಪಾಲನೆ ಮಾಡಲು ಮನೆಯವರಿಗೆ ಅದರಲ್ಲಿಯೂ ಮಕ್ಕಳಿಗೆ ತಿಳಿ ಹೇಳಬೇಕು.
  • ಪಟಾಕಿಗಳು ಸುಟ್ಟಗಾಯಗಳು, ಕಿಡಿಗಳು, ಕಾಂಜಂಕ್ಟಿವಿಟಿಸ್, ಆಘಾತಕಾರಿ ಆಪ್ಟಿಕ್ ನರರೋಗ ಮತ್ತು ಕಣ್ಣುಗಳಿಗೆ ರಾಸಾಯನಿಕ ಗಾಯವನ್ನು ಉಂಟುಮಾಡಬಹುದು. ಹಾಗಾಗಿ ಪಟಾಕಿ ಹಚ್ಚುವ ಮುನ್ನ ಎಚ್ಚರಿಕೆ ವಹಿಸಿ.
  • ಪಟಾಕಿ ಹಚ್ಚುವಾಗ ರಕ್ಷಣಾತ್ಮಕ ಕನ್ನಡಕಗಳನ್ನು ಬಳಕೆ ಮಾಡಬೇಕು. ಯಾವಾಗಲೂ ಪಟಾಕಿಯಿಂದ ಸುರಕ್ಷಿತ ಅಂತರವನ್ನು ಕಾಪಾಡಿಕೊಳ್ಳಬೇಕು. ಅದರಲ್ಲಿಯೂ ಮಕ್ಕಳು ಪಟಾಕಿ ಸಿಡಿಸುತ್ತಾರೆ ಎನ್ನುವಾಗ ಪೋಷಕರು ಹೆಚ್ಚಿನ ಕಾಳಜಿ ವಹಿಸಬೇಕು.
  • ಶಬ್ದ ಮಾಡುವ ಪಟಾಕಿಗಳಿಗಿಂತ ಸುರಕ್ಷಿತ, ಕಡಿಮೆ ತೀವ್ರತೆಯ ಪಟಾಕಿಗಳನ್ನು ಬಳಕೆ ಮಾಡುವುದು ಬಹಳ ಉತ್ತಮ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಮನೆಯಲ್ಲಿಯೇ ಪಟಾಕಿಗಳನ್ನು ತಯಾರಿಸುವುದು ಹೆಚ್ಚಾಗಿದೆ. ಆದರೆ ಇದು ಕೂಡ ಒಳ್ಳೆಯದಲ್ಲ. ಏಕೆಂದರೆ ಅವುಗಳಲ್ಲಿ ಗುಣಮಟ್ಟದ ಕೊರತೆ ಇದ್ದು ಅನಿರೀಕ್ಷಿತ ಸ್ಫೋಟಗಳಿಗೆ ಕಾರಣವಾಗಬಹುದು, ಕಣ್ಣಿನ ಗಾಯಗಳ ಅಪಾಯವನ್ನು ಹೆಚ್ಚಿಸಬಹುದು.
  • ಕಣ್ಣಿನ ಸಮಸ್ಯೆ ಮತ್ತು ಅಲರ್ಜಿ ಇರುವವರು ಪಟಾಕಿಯ ಹೊಗೆಗಳಿಂದ ಆದಷ್ಟು ದೂರವಿರಿ. ಪರಿಸರ ಸ್ನೇಹಿ ಪಟಾಕಿಗಳು ಮತ್ತು ಬೆಳಕಿನ ಪರ್ಯಾಯಗಳನ್ನು ಆರಿಸಿಕೊಳ್ಳಿ, ಅದು ಪರಿಸರ ಮತ್ತು ನಿಮ್ಮ ಆರೋಗ್ಯಕ್ಕೆ ಉಂಟಾಗುವ ಹಾನಿಯನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ: Deepavali: ಸಂಭ್ರಮದ ಜೊತೆ ಮುನ್ನೆಚ್ಚರಿಕೆಯೂ ಇರಲಿ; ಸುರಕ್ಷಿತ ದೀಪಾವಳಿ ನಿಮ್ಮದಾಗಲಿ!

ಆರೋಗ್ಯ ಇಲಾಖೆ ನೀಡಿರುವ ಸಲಹೆಯಲ್ಲಿ ಏನಿದೆ?

  • ನಿಮ್ಮ ಕಣ್ಣುಗಳಿಗೆ ಗಾಯವಾದಲ್ಲಿ ಕಣ್ಣುಗಳನ್ನು ಉಜ್ಜಬೇಡಿ.
  • ವೈದ್ಯರನ್ನು ಸಂಪರ್ಕಿಸದೆ ಕಣ್ಣಿಗೆ ಯಾವುದೇ ರೀತಿಯ ಔಷಧಗಳನ್ನು ಬಳಸಬೇಡಿ.
  • ಕಣ್ಣಿನಲ್ಲಿ ಸಿಲುಕಿಕೊಂಡಿರುವ ಯಾವುದೇ ಕಣಗಳನ್ನು ತೆಗೆಯಲು ಪ್ರಯತ್ನ ಪಡಬೇಡಿ.
  • ತಕ್ಷಣ ಹತ್ತಿರದ ಆಸ್ಪತ್ರೆಗೆ ಅಥವಾ ಕಣ್ಣಿನ ತಜ್ಞರ ಬಳಿ ಹೋಗಿ.

ದೀಪಾವಳಿಯನ್ನು ಸಂಭ್ರಮ ಸಡಗರದಿಂದ ಆಚರಿಸಬೇಕು ಆದರೆ ಅದರ ಜೊತೆಗೆ ಆರೋಗ್ಯದ ಬಗ್ಗೆ ಜವಾಬ್ದಾರಿ ತೆಗೆದುಕೊಳ್ಳುವುದು ಅದರಲ್ಲಿಯೂ ಕಣ್ಣುಗಳು ಮತ್ತು ನಿಮ್ಮ ಸುತ್ತಮುತ್ತಲಿನವರ ಸುರಕ್ಷತೆಗೆ ಆದ್ಯತೆ ನೀಡುವುದು ಅತ್ಯಗತ್ಯ. ಅದರ ಜೊತೆಗೆ ಪಟಾಕಿಗಳಿಂದ ಕಣ್ಣಿನ ಮೇಲೆ ಉಂಟಾಗುವ ಪರಿಣಾಮಗಳ ಬಗ್ಗೆ ತಿಳಿದುಕೊಳ್ಳುವುದು ಮತ್ತು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಹಬ್ಬವನ್ನು ಸುಂದರವಾಗಿ ಮತ್ತು ಸುರಕ್ಷಿತವಾಗಿ ಆಚರಿಸಲು ನೆರವಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್