AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diwali health tips: ದೀಪಾವಳಿಯಲ್ಲಿ ಸಿಹಿತಿಂಡಿ ತಿಂದು ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಸಾಮಾನ್ಯವಾಗಿ ಹಬ್ಬದ ಸಮಯದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯವಾಗುತ್ತದೆ. ವಿಶೇಷವಾಗಿ ಮಧುಮೇಹವಿರುವ ರೋಗಿಗಳು ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಬೇಕು. ಏಕೆಂದರೆ ಇಂತಹ ಸಮಯದಲ್ಲಿ, ಜನರು ವಿವಿಧ ರೀತಿಯ ಸಿಹಿ ತಿಂಡಿಗಳನ್ನು ಹೆಚ್ಚು ಹೆಚ್ಚು ಸೇವನೆ ಮಾಡುತ್ತಾರೆ. ಇವು ಅಗತ್ಯಕ್ಕಿಂತ ಹೆಚ್ಚಾದರೆ, ಅದು ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ. ಇದು ಬಹಳಷ್ಟು ರೀತಿಯಲ್ಲಿ ತೊಂದರೆಯನ್ನು ಉಂಟುಮಾಡಬಹುದು. ಆದರೆ ಹಬ್ಬದ ಸಮಯದಲ್ಲಿ ವೈದ್ಯರು ನೀಡಿರುವ ಮೂರು ಸೂತ್ರಗಳನ್ನು ಅನುಸರಿಸುವ ಮೂಲಕ ದೀಪಾವಳಿ ಹಬ್ಬವನ್ನು ಆನಂದಿಸಬಹುದು.

Diwali health tips: ದೀಪಾವಳಿಯಲ್ಲಿ ಸಿಹಿತಿಂಡಿ ತಿಂದು ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Oct 26, 2024 | 11:38 AM

Share

ವರ್ಷದ ದೊಡ್ಡ ಹಬ್ಬಗಳಲ್ಲಿ ದೀಪಾವಳಿಯೂ ಒಂದು. ಆ ಮೂರು ದಿನಗಳನ್ನು ಅತ್ಯಂತ ಸಂಭ್ರಮ, ಸಡಗರದಿಂದ ಆಚರಣೆ ಮಾಡುತ್ತಾರೆ. ಸಾಮಾನ್ಯವಾಗಿ ಹಬ್ಬವೆಂದರೆ ಶಾಸ್ತ್ರ ಸಂಪ್ರದಾಯಗಳ ಜೊತೆಗೆ ಸಿಹಿ ತಿಂಡಿಗಳ ರಸದೌತಣ. ಹಾಗಾಗಿ ಮನೆಯಲ್ಲಿ ಎಲ್ಲರೂ ಯಾವುದೇ ರೀತಿಯ ಚಿಂತೆಯಿಲ್ಲದೆ ದೀಪಾವಳಿಯನ್ನು ಆಚರಣೆ ಮಾಡುತ್ತಾರೆ, ಹಬ್ಬದ ಊಟವನ್ನು ಸವಿಯುತ್ತಾರೆ. ಆದರೆ ಇಂತಹ ಸಮಯದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯವಾಗುತ್ತದೆ. ವಿಶೇಷವಾಗಿ ಮಧುಮೇಹವಿರುವ ರೋಗಿಗಳು ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಬೇಕು. ಏಕೆಂದರೆ ಹಬ್ಬದ ಸಮಯದಲ್ಲಿ, ಜನರು ವಿವಿಧ ರೀತಿಯ ಸಿಹಿ ತಿಂಡಿಗಳನ್ನು ಹೆಚ್ಚು ಹೆಚ್ಚು ಸೇವನೆ ಮಾಡುತ್ತಾರೆ. ಇವು ಅಗತ್ಯಕ್ಕಿಂತ ಹೆಚ್ಚಾದರೆ, ಅದು ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ. ಇದು ಬಹಳಷ್ಟು ರೀತಿಯಲ್ಲಿ ತೊಂದರೆಯನ್ನು ಉಂಟುಮಾಡಬಹುದು. ಆದರೆ ಹಬ್ಬದ ಸಮಯದಲ್ಲಿ ವೈದ್ಯರು ನೀಡಿರುವ ಈ ಮೂರು ಸೂತ್ರಗಳನ್ನು ಅನುಸರಿಸುವ ಮೂಲಕ ದೀಪಾವಳಿ ಹಬ್ಬವನ್ನು ಆನಂದಿಸಬಹುದು.

ದೀಪಾವಳಿ ಮತ್ತು ಅದರ ಹಿಂದೆ ಮುಂದೆ ಬರುವ ಎಲ್ಲಾ ಹಬ್ಬಗಳ ಸಮಯದಲ್ಲಿ, ಸಿಹಿತಿಂಡಿಗಳನ್ನು ತಿನ್ನುವ ಮೊದಲು ಫೈಬರ್ ಸಮೃದ್ಧ ಆಹಾರಗಳನ್ನು ಸೇವಿಸಿ ಎಂದು ತಜ್ಞರು ಸೂಚಿಸುತ್ತಾರೆ. ಅಂದರೆ ನಿಮ್ಮ ಆಹಾರದಲ್ಲಿ ಹಣ್ಣು ಮತ್ತು ಸಲಾಡ್ಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇಂತಹ ಆಹಾರಗಳನ್ನು ಸೇವಿಸುವುದರಿಂದ ಸಕ್ಕರೆ ಮಟ್ಟವು ಇದ್ದಕ್ಕಿದ್ದಂತೆ ಹೆಚ್ಚಾಗುವುದಿಲ್ಲ. ಅಲ್ಲದೆ ಈ ಆಹಾರಗಳನ್ನು ತಿನ್ನುವ ಮೂಲಕ, ನೀವು ಸೀಮಿತ ಪ್ರಮಾಣದ ಸಿಹಿ ತಿಂಡಿಗಳನ್ನು ತಿನ್ನಬಹುದು. ಸಿಹಿಯಾದ ಆಹಾರಗಳಲ್ಲಿ ಬಾದಾಮಿ, ವಾಲ್ನಟ್ಗಳಂತಹ ಒಣ ಹಣ್ಣುಗಳನ್ನು ತಿನ್ನುವುದು ರುಚಿಯನ್ನು ಹೆಚ್ಚಿಸುವುದಲ್ಲದೆ ನಿಮ್ಮನ್ನು ಆರೋಗ್ಯವಾಗಿ ಇರಿಸುತ್ತದೆ.

ಸರಿಯಾದ ಪ್ರಮಾಣದ ಸಿಹಿತಿಂಡಿಗಳನ್ನು ಸೇವಿಸಿ

ಡಾ. ರಾಹುಲ್ ಚೌಧರಿ ಅವರು ಹೇಳುವ ಪ್ರಕಾರ, ಹಬ್ಬಗಳ ಸಮಯದಲ್ಲಿ ಮಧುಮೇಹ ರೋಗಿಗಳಿಗೆ ಸಿಹಿತಿಂಡಿಗಳನ್ನು ನಿರಾಕರಿಸುವುದು ಕಷ್ಟವಾಗುತ್ತದೆ, ಅವರಿಗೆ ಮಾತ್ರವಲ್ಲ ಯಾರಿಗಾದರೂ ಇದು ಕಷ್ಟವೇ. ಆದರೆ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಲು, ಒಂದೇ ರೀತಿಯ ತೂಕ ಕಾಪಾಡಿಕೊಳ್ಳಲು ಹಬ್ಬಗಳ ಸಮಯದಲ್ಲಿ ಸಿಹಿತಿಂಡಿಗಳನ್ನು ಸೀಮಿತ ಪ್ರಮಾಣದಲ್ಲಿ ತಿನ್ನಬೇಕು. ಅಂದರೆ ದಿನಕ್ಕೆ ಒಂದು ಅಥವಾ ಎರಡು ತುಂಡುಗಳಿಗಿಂತ ಹೆಚ್ಚು ಸಿಹಿತಿಂಡಿಗಳನ್ನು ತಿನ್ನಬೇಡಿ ಎಂದು ಅವರು ಹೇಳುತ್ತಾರೆ.

ವ್ಯಾಯಾಮ ಮಾಡಬೇಕು

ಸಿಹಿತಿಂಡಿಗಳನ್ನು ಸೇವಿಸಿದ ನಂತರ ಅಥವಾ ಮೊದಲು ವ್ಯಾಯಾಮ ಮಾಡುವುದು ಮುಖ್ಯ. ಏಕೆಂದರೆ ಸಿಹಿ ಸೇವಿಸಿದ ನಂತರ 10- 15 ನಿಮಿಷಗಳ ಲಘು ನಡಿಗೆಯು ದೇಹದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅದೂ ಅಲ್ಲದೆ ಇದು ಕ್ಯಾಲೊರಿಗಳನ್ನು ಸುಡುತ್ತದೆ. ಮಧುಮೇಹದ ಹೊರತಾಗಿ, ಬಿಪಿ ಮತ್ತು ಕೊಲೆಸ್ಟ್ರಾಲ್ ನಂತಹ ಸಮಸ್ಯೆಗಳನ್ನು ಸಹ ಈ ನಡಿಗೆಯಿಂದ ನಿಯಂತ್ರಿಸಬಹುದು ಎಂದು ಡಾ. ರಾಹುಲ್ ಹೇಳುತ್ತಾರೆ.

ಇದನ್ನೂ ಓದಿ: ಬೋರ್ ವೆಲ್ ನೀರು ಕುಡಿಯುವವರಿಗೆ ಈ ಕಾಯಿಲೆ ಬರುವುದು ಖಚಿತ

ಸಾಕಷ್ಟು ನೀರು ಕುಡಿಯಿರಿ

ಸಿಹಿತಿಂಡಿಗಳನ್ನು ತಿನ್ನುವ ಮೊದಲು ಮತ್ತು ನಂತರ ಸಾಕಷ್ಟು ನೀರು ಕುಡಿಯುವುದು ಬಹಳ ಮುಖ್ಯ, ನೀರು ದೇಹದಿಂದ ವಿಷಕಾರಿ ಆಹಾರವನ್ನು ಹೊರಗೆ ಹಾಕುತ್ತದೆ ಮತ್ತು ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ದಿನವಿಡೀ ಸಾಕಷ್ಟು ನೀರು ಕುಡಿಯಿರಿ. ಅಂದರೆ ಸುಮಾರು 7- 8 ನಿಮಿಷಗಳ ಕಾಲ ನೀರು ಕುಡಿಯುವುದು ಉತ್ತಮ. ಈ ಸಮಯದಲ್ಲಿ ಆಹಾರದ ಬಗ್ಗೆ ಕಾಳಜಿ ವಹಿಸುವುದು ಸಹ ಮುಖ್ಯವಾಗುತ್ತದೆ. ನೀವು ಜೋಳ ಮತ್ತು ರಾಗಿಯಂತಹ ಪದಾರ್ಥಗಳನ್ನು ನಿಮ್ಮ ಆಹಾರದಲ್ಲಿ ಸೇವಿಸಬೇಕು. ದೀಪಾವಳಿಯ ಸಮಯದಲ್ಲಿ ಫಾಸ್ಟ್ ಫುಡ್, ಪ್ಯಾಕ್ ಮಾಡಿದ ಆಹಾರ ಮತ್ತು ಸಿಹಿತಿಂಡಿಗಳನ್ನು ಅತಿಯಾಗಿ ತಿನ್ನುವುದನ್ನು ತಪ್ಪಿಸಿ. ಜೊತೆಗೆ ಇನ್ನಿತರ ಕಾರಣಗಳಿಂದಾಗಿ ನಿಮ್ಮ ಸಕ್ಕರೆ ಮಟ್ಟವು ಈಗಾಗಲೇ ಹೆಚ್ಚಾಗಿದ್ದರೆ ಸಿಹಿತಿಂಡಿಗಳನ್ನು ತಿನ್ನಬೇಡಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ