ಡೆಂಗ್ಯೂ ಭಾದಿಸಿದಾಗ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಬೇಡಿ, ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುವ ಸಾಧ್ಯತೆ ಹೆಚ್ಚು

ಇತ್ತೀಚಿಗೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಈ ಕಾಯಿಲೆಗೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡದಿದ್ದರೆ, ಅದು ಜೀವಕ್ಕೆ ಅಪಾಯ ತಂದೊಡ್ಡಬಹುದು. ಡೆಂಗ್ಯೂ ಭಾದಿಸಿದಾಗ ರಕ್ತದಲ್ಲಿನ ಪ್ಲೇಪ್ಲೆಟ್​​​ಗಳು ವೇಗವಾಗಿ ಕುಸಿಯಲು ಪ್ರಾರಂಭಿಸುತ್ತದೆ. ಹಾಗಾಗಿ ಸರಿಯಾದ ಸಮಯದಲ್ಲಿ ಸೂಕ್ತ ಚಿಕಿತ್ಸೆಯನ್ನು ಪಡೆಯುವುದು ಅವಶ್ಯಕ. ಜೊತೆಗೆ ಈ ಸಮಯದಲ್ಲಿ ಆಹಾರಕ್ರಮದ ಮೇಲೂ ನಿಗಾ ವಹಿಸಬೇಕಾಗುತ್ತದೆ. ಏಕೆಂದರೆ ಈ ಸಮಯದಲ್ಲಿ ತಪ್ಪು ಆಹಾರಕ್ರಮದ ಪಾಲನೆಯಿಂದ ಜ್ವರವು ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆಯಿದೆ.

ಡೆಂಗ್ಯೂ ಭಾದಿಸಿದಾಗ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಬೇಡಿ, ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುವ ಸಾಧ್ಯತೆ ಹೆಚ್ಚು
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 05, 2023 | 5:30 PM

ಮಳೆಗಾಲ ಬಂತೆಂದರೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತದೆ. ಈಡಿಸ್ ಸೊಳ್ಳೆಯ ಕಡಿತದಿಂದ ಡೆಂಗ್ಯೂ ಜ್ವರ ಕಾಣಿಸಿಕೊಳ್ಳುತ್ತದೆ. ಮತ್ತೊಂದೆಡೆ ಡೆಂಗ್ಯೂ ಜ್ವರದ 3 ದಿನಗಳಿಂದ 14 ದಿನಗಳ ವರೆಗೆ ಇರುತ್ತದೆ. ಈ ಕಾರಣದಿಂದಾಗಿ ರೋಗಿಗಳಲ್ಲಿ ತೀವ್ರಜ್ವರ, ತಲೆನೋವು, ಸ್ನಾಯುಗಳ ನೋವು ಈ ರೀತಿಯ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಅಲ್ಲದೆ ವೇಗವಾಗಿ ದೇಹದ ಪ್ಲೇಪ್ಲೆಟ್ ಅಂಶ ಕುಸಿಯಲು ಪ್ರಾರಂಭಿಸುತ್ತದೆ. ಡೆಂಗ್ಯೂಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ, ಇದು ಪ್ರಾಣಾಪಾಯವನ್ನು ತಂದೊಡ್ಡುವ ಸಾಧ್ಯತೆಯಿದೆ. ವೈದ್ಯಕೀಯ ಚಿಕಿತ್ಸೆಯ ಜೊತೆಗೆ ಡೆಂಗ್ಯೂ ಜ್ವರ ಶೀಘ್ರದಲ್ಲಿ ಗುಣಮುಖವಾಗಬೇಕೆಂದರೆ ನೀವು ಈ ಕೆಲವೊಂದು ಆಹಾರಗಳನ್ನು ಸೇವಿಸುವುದನ್ನು ತಪ್ಪಿಸಬೇಕು. ಈ ಮೂಲಕ ಜ್ವರದಿಂದ ವೇಗವಾಗಿ ಗುಣಮುಖವಾಗಬಹುದು.

ಡೆಂಗ್ಯೂ ರೋಗಿಗಳು ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಬಾರದು:

ಮಸಾಲೆಯುಕ್ತ ಆಹಾರಗಳು:

ಡೆಂಗ್ಯೂ ರೋಗಿಗಳು ಮಸಾಲೆಯುಕ್ತ ಆಹಾರದಿಂದ ದೂರವಿರಬೇಕು. ಈ ಆಹಾರಗಳು ಡೆಂಗ್ಯೂ ರೋಗಿಗೆ ಸಮಸ್ಯೆ ತಂದೊಡ್ಡಬಹುದು. ಹೇಗೆಂದರೆ ಮಸಾಲೆಯುಕ್ತ ಆಹಾರ ಸೇವನೆಯಿಂದ ವ್ಯಕ್ತಿಯ ಹೊಟ್ಟೆಯಲ್ಲಿ ಅಸಿಡಿಟಿ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದು ಡೆಂಗ್ಯೂ ಹೆಚ್ಚಾಗಲು ಕಾರಣವಾಗಬಹುದು. ಅಲ್ಲದೆ ಇದು ಅಲ್ಸರ್ ಸಮಸ್ಯೆಯನ್ನು ಹೆಚ್ಚಿಸುತ್ತದೆ ಈ ಕಾರಣದಿಂದ ರೋಗಿಯು ರೋಗದಿಂದ ಚೇತರಿಸಿಕೊಳ್ಳಲು ಬಹಳ ಸಮಯ ಬೇಕಾಗುತ್ತದೆ.

ಕಾಫಿ:

ಡೆಂಗ್ಯೂ ಭಾದಿಸಿದಾಗ ಕಾಫಿ ಅಥವಾ ಕೆಫಿನ್ ಸಂಬಂಧಿ ವಸ್ತುಗಳನ್ನು ಸಹ ಸೇವಿಸಬಾರದು. ಈ ಸಮಯದಲ್ಲಿ ದೇಹದಲ್ಲಿ ಜಲಸಂಚಯನವನ್ನು ಹೆಚ್ಚಿಸಲು ಆರೋಗ್ಯಕರ ಪಾನೀಯ ಮತ್ತು ಹಣ್ಣಿನ ರಸಗಳನ್ನು ಸೇವಿಸಿ ಮತ್ತು ಕೆಫಿನ್ ಪಾನೀಯಗಳಿಂದ ದೂರವಿರಿ ಏಕೆಂದರೆ ಅವು ಹೃದಯ ಬಡಿತ, ಆಯಾಸ ಮತ್ತು ಸ್ನಾಯು ನೋವಿನ ಸಮಸ್ಯೆಯನ್ನು ಹೆಚ್ಚಿಸಬಹುದು.

ಇದನ್ನೂ ಓದಿ: ಡೆಂಗ್ಯೂ ನಿವಾರಣೆಗೆ ತೆಂಗಿನ ನೀರು ಕುಡಿಯುವ ಬದಲು ಈ ಆಹಾರ ಸೇವಿಸಿದರೆ ಹೆಚ್ಚು ಪರಿಣಾಮಕಾರಿ

ಮಾಂಸಾಹಾರಿ ಆಹಾರವನ್ನು ತಪ್ಪಿಸಿ:

ಡೆಂಗ್ಯೂ ರೋಗಿಗಳು ಸಹ ಮಾಂಸಹಾರವನ್ನು ಸೇವಿಸಬಾರದು ಏಕೆಂದರೆ ಈ ಆಹಾರಗಳು ಬಹಳಷ್ಟು ಮಸಾಲೆಗಳನ್ನು ಹೊಂದಿರುತ್ತದೆ ಮತ್ತು ಇದು ಸುಲಭವಾಗಿ ಜೀರ್ಣವಾಗುವುದಿಲ್ಲ. ಅಲ್ಲದೆ ಮಾಂಸಹಾರ ಸೇವನೆಯಿಂದ ಜ್ವರ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆಯಿದೆ.

ಎಣ್ಣೆಯುಕ್ತ ಅಥವಾ ಕರಿದ ಆಹಾರಗಳು:

ಎಣ್ಣೆಯುಕ್ತ ಆಹಾರವನ್ನು ತ್ಯಜಿಸಿ ಆರೋಗ್ಯಕರ ಆಹಾರವನ್ನು ಸೇವಿಸುವುದು ಉತ್ತಮ. ಎಣ್ಣೆಯುಕ್ತ ಆಹಾರಗಳು ಹೆಚ್ಚಿನ ಕೊಬ್ಬನ್ನು ಹೊಂದಿರುತ್ತವೆ, ಇದು ಅಧಿಕ ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಉಂಟಾಗಲು ಕಾರಣವಾಗಬಹುದು. ಅಲ್ಲದೆ ಈ ಆಹಾರಗಳು ಪ್ರತಿರಕ್ಷಣಾ ವ್ಯವಸ್ಥೆಯನ್ನು ದುರ್ಬಲಗೊಳಿಸುವುದರಿಂದ ಡೆಂಗ್ಯೂ ಕಾಯಿಲೆಯಿಂದ ಚೇತರಿಸಿಕೊಳ್ಳಲು ಕಷ್ಟಸಾಧ್ಯವಾಗಬಹುದು.

ಡೆಂಗ್ಯೂ ಸಮಯದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಇವುಗಳನ್ನು ಸೇವನೆ ಮಾಡಿ:

ಎಳನೀರು:

ಡೆಂಗ್ಯೂ ಜ್ವರದ ಸಮಯದಲ್ಲಿ ಎಳನೀರು ಕುಡಿಯುವುದು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಎಳನೀರು ಅಗತ್ಯ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಇದು ದೇಹದಲ್ಲಿ ನೀರಿನಾಂಶದ ಕೊರತೆಯನ್ನು ನೀಗಿಸುವುದರ ಜೊತೆಗೆ ಅಗತ್ಯ ಪೋಷಕಾಂಶಗಳನ್ನು ಸಹ ಒದಗಿಸುತ್ತದೆ.

ಪಪ್ಪಾಯಿ ಎಲೆ ರಸ:

ಪಪ್ಪಾಯಿ ಎಲೆಗಳಲ್ಲಿ ಪಾಪೈನ್ ಮತ್ತು ಚೈಮೊಪಪೈನ್ ನಂತಹ ಕಿಣ್ವಗಳು ಕಂಡುಬರುತ್ತವೆ. ಅವುಗಳು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಹೊಟ್ಟೆಯುಬ್ಬರ ಸಮಸ್ಯೆಯನ್ನು ಸಹ ತಡೆಯುತ್ತದೆ. ಇದಲ್ಲದೆ ಅವುಗಳು ಪ್ಲೇಪ್ಲೆಟ್ ಸಂಖ್ಯೆಯನ್ನು ತ್ವರಿತವಾಗಿ ಹೆಚ್ಚಿಸುತ್ತದೆ. ಅದಕ್ಕಾಗಿಯೇ ಡೆಂಗ್ಯೂ ಜ್ವರವನ್ನು ಹೋಗಲಾಡಿಸಲು ಅಲ್ಪ ಪ್ರಮಾಣದಲ್ಲಿ ಪಪ್ಪಾಯಿ ಎಲೆಯ ರಸವನ್ನು ಸೇವಿಸುವುದು ಉತ್ತಮ ಎಂದು ಹೇಳಲಾಗುತ್ತದೆ.

ಕಿವಿ ಹಣ್ಣು:

ಕಿವಿಯಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಎ, ಇ ಜೊತೆಗೆ ಪೊಟ್ಯಾಸಿಯಂ ಸಮೃದ್ಧವಾಗಿದೆ. ಇದು ಅಧಿಕ ರಕ್ತದೊತ್ತಡ ಮತ್ತು ನಿಯಂತ್ರಿಸುತ್ತದೆ. ಆರೋಗ್ಯಕರ ಕಂಪು ರಕ್ತಕಣಗಳ ಉತ್ಪತ್ತಿಗೆ ಸಹಾಯಕವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ ಮತ್ತು ಡೆಂಗ್ಯೂ ಜ್ವರದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು