ನಿಮ್ಮ ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುವ 8 ಆಹಾರಗಳು ಯಾವುವು?

ರೋಗಗಳನ್ನು ದೂರವಿಡಲು ರೋಗನಿರೋಧಕ ಶಕ್ತಿ ಬಹಳ ಮುಖ್ಯ. ಅದರಲ್ಲಿಯೂ ನೀವು ಸೇವಿಸುವ ಆಹಾರವು ಪ್ರಮುಖ ಪಾತ್ರ ವಹಿಸುತ್ತದೆ, ಆದ್ದರಿಂದ ನಿಮ್ಮ ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುವ ಕೆಲವು ಆಹಾರಗಳ ಬಗ್ಗೆ ನೀವು ತಿಳಿದುಕೊಳ್ಳಬೇಕು. ಹೆಚ್ಚಿನ ಮಾಹಿತಿ ಇಲ್ಲಿದೆ.

ನಿಮ್ಮ ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುವ 8 ಆಹಾರಗಳು ಯಾವುವು?
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 14, 2023 | 6:29 PM

ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುವಲ್ಲಿ ಆಹಾರ ಪ್ರಮುಖ ಪಾತ್ರ ವಹಿಸುತ್ತದೆ. ಅದು ಚಹಾ, ಕಾಫಿ, ಮಿಲ್ಕ್ಶೇಕ್ ಅಥವಾ ಯಾವುದೇ ಪಾನೀಯವಾಗಿರಲಿ, ನಾವು ಪ್ರತಿದಿನ ಕೆಲವು ಚಮಚ ಸಕ್ಕರೆಯನ್ನು ಬೆರೆಸಲು ಇಷ್ಟಪಡುತ್ತೇವೆ. ಈ ಪಾನೀಯಗಳು ನಮ್ಮ ದಿನವನ್ನು ತಂಪಾಗಿಸಲು ಅಥವಾ ಪ್ರಾರಂಭಿಸಲು ನಮಗೆ ಶಕ್ತಿಯನ್ನು ನೀಡಲು ಸಹಾಯ ಮಾಡುತ್ತವೆ ಎಂಬುದು ನಮ್ಮ ನಂಬಿಕೆ. ಆದರೆ ಈ ಪಾನೀಯಗಳಲ್ಲಿರುವ ಸಕ್ಕರೆ ನಿಜವಾಗಿಯೂ ನಮ್ಮ ರೋಗನಿರೋಧಕ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆಯೇ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್ ಪ್ರಕಟಿಸಿದ ಅಧ್ಯಯನದ ಪ್ರಕಾರ, ಸಕ್ಕರೆ ಪ್ರತಿರಕ್ಷಣಾ ವ್ಯವಸ್ಥೆಯನ್ನು ದುರ್ಬಲಗೊಳಿಸುವುದರಿಂದ ಬಿಳಿ ರಕ್ತ ಕಣಗಳು ಕೆಟ್ಟ ಬ್ಯಾಕ್ಟೀರಿಯಾ ಅಥವಾ ವೈರಸ್ ಅನ್ನು ನಾಶಪಡಿಸಲು ಸಾಧ್ಯವಾಗುವುದಿಲ್ಲ.

ಹಾಗಾಗಿ ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುವ ಸಕ್ಕರೆ ಮತ್ತು ಇತರ ಆಹಾರಗಳ ಬಗ್ಗೆ ತಿಳಿದುಕೊಳ್ಳಲು ಹೆಲ್ತ್ ಶಾಟ್ಸ್ ಹಿರಿಯ ಸಲಹೆಗಾರ, ಇಂಟರ್ನಲ್ ಮೆಡಿಸಿನ್, ಫೋರ್ಟಿಸ್ ಆಸ್ಪತ್ರೆಯ ಡಾ ಗೋಯಲ್ ಅವರು ಕೆಲವು ಸಲಹೆಗಳನ್ನು ನೀಡಿದ್ದಾರೆ.

ರೋಗ ನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುವ ಆಹಾರಗಳು:

ನೀವು ಆರೋಗ್ಯವಾಗಿರಲು ಬಯಸುವುದಾದರೆ ಮೊದಲು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಿಕೊಳ್ಳುವುದು ಬಹಳ ಮುಖ್ಯ. ಬ್ಯಾಕ್ಟೀರಿಯಾ, ಪರಾವಲಂಬಿಗಳು ಮತ್ತು ವೈರಸ್ಗಳಿಂದ ಉಂಟಾಗುವ ಸೋಂಕುಗಳಿಂದ ನಮ್ಮನ್ನು ರಕ್ಷಿಸಲು ಇದು ನಮಗೆ ಸಹಾಯ ಮಾಡುತ್ತದೆ ಎಂದು ಡಾ ಗೋಯಲ್ ಹೇಳುತ್ತಾರೆ. ವಿವಿಧ ಹಾನಿಕಾರಕ ರೋಗಗಳನ್ನು ಎದುರಿಸಲು ಆರೋಗ್ಯಕರ ಪ್ರತಿರಕ್ಷಣಾ ವ್ಯವಸ್ಥೆಯು ಅತ್ಯಗತ್ಯ. ಕೆಲವು ಆಹಾರಗಳ ಅತಿಯಾದ ಸೇವನೆಯು ರೋಗನಿರೋಧಕ ಶಕ್ತಿಯನ್ನು ನಿಧಾನಗೊಳಿಸುತ್ತದೆ. ಅಂತಹ ಕೆಲವು ಆಹಾರಗಳ ಪಟ್ಟಿ ಇಲ್ಲಿವೆ.

1. ಸಕ್ಕರೆ:

ಹೆಚ್ಚಿನ ಸಕ್ಕರೆ ಸೇವನೆಯು ಬ್ಯಾಕ್ಟೀರಿಯಾ ಮತ್ತು ವೈರಸ್ಗಳ ವಿರುದ್ಧ ಹೋರಾಡಲು ಬಿಳಿ ರಕ್ತ ಕಣಗಳ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ, ಹಾಗಾಗಿ ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಎಂದು ತಜ್ಞರು ಹೇಳುತ್ತಾರೆ.

2. ಸಂಸ್ಕರಿಸಿದ ಆಹಾರಗಳು:

ಸಂಸ್ಕರಿಸಿದ ಆಹಾರದಲ್ಲಿ ಸೋಡಿಯಂ ಅಂಶ ಅಧಿಕವಾಗಿರುತ್ತದೆ, ಇವು ಅನಾರೋಗ್ಯಕರ ಕೊಬ್ಬನ್ನು ಹೊಂದಿರುವುದರಿಂದ ಕೃತಕ ಸಂರಕ್ಷಕಗಳನ್ನು ಹೊಂದಿರುತ್ತದೆ, ಹಾಗಾಗಿ ಇವು ದೀರ್ಘಕಾಲದ ಉರಿಯೂತಕ್ಕೆ ಕಾರಣವಾಗುತ್ತದೆ ಮತ್ತು ಪ್ರತಿರಕ್ಷಣಾ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ.

3. ಆಲ್ಕೋಹಾಲ್:

ಕೆಲಸದ ನಂತರ ಪ್ರತೀ ರಾತ್ರಿ ಆಲ್ಕೋಹಾಲ್ ಸೇವನೆ ಮಾಡುತ್ತಿದ್ದರೆ ಅದನ್ನು ಆದಷ್ಟು ಬೇಗ ನಿಲ್ಲಿಸಿ. ಏಕೆಂದರೆ ಹೆಚ್ಚಿನ ಮಟ್ಟದ ಆಲ್ಕೋಹಾಲ್ ಸೇವನೆಯು ಪ್ರತಿರಕ್ಷಣಾ ಕಾರ್ಯವನ್ನು ನಿಗ್ರಹಿಸುತ್ತದೆ, ಇದು ಸೋಂಕುಗಳಿಗೆ ಕಾರಣವಾಗುತ್ತದೆ. ಜೊತೆಗೆ ಇದು ಸೋಂಕಿನ ವಿರುದ್ಧ ಹೋರಾಡುವ ನಿಮ್ಮ ದೇಹದ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಎಂದು ಡಾ. ಗೋಯಲ್ ಹೇಳುತ್ತಾರೆ.

4. ಹುರಿದ ಆಹಾರಗಳು:

ಹುರಿದ ಆಹಾರಗಳ ಅತಿಯಾದ ಸೇವನೆಯಿಂದ ಪ್ರತಿರಕ್ಷಣಾ ಕಾರ್ಯದ ಮೇಲೆ ಪರಿಣಾಮ ಬೀರಬಹುದು, ಜೊತೆಗೆ ಒತ್ತಡ ಮತ್ತು ದೀರ್ಘಕಾಲದ ಉರಿಯೂತಕ್ಕೆ ಕಾರಣವಾಗುತ್ತದೆ.

5. ಟ್ರಾನ್ಸ್ ಕೊಬ್ಬುಗಳು ಅಥವಾ ​​ಟ್ರಾನ್ಸ್ ಫ್ಯಾಟ್:

ಫಾಸ್ಟ್ ಫುಡ್ ಮತ್ತು ಬೇಯಿಸಿದ ಆಹಾರದಲ್ಲಿ ಟ್ರಾನ್ಸ್ ಕೊಬ್ಬು ಅಧಿಕವಾಗಿರುತ್ತದೆ, ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ಈ ಬಗೆಯ ಕೊಬ್ಬಿನ ಆಹಾರಗಳಿಂದ ಯಾವುದೇ ಆರೋಗ್ಯಕರ ಪ್ರಯೋಜನಗಳು ಇರುವುದಿಲ್ಲ. ಇವು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತವೆ. ಜೊತೆಗೆ ಹೃದಯ ಸಂಬಂಧಿ ಆರೋಗ್ಯ ಸಮಸ್ಯೆಗಳ ಹೆಚ್ಚಳಕ್ಕೆ ಕಾರಣವಾಗುತ್ತದೆ.

6. ಅಧಿಕ ಸೋಡಿಯಂ ಆಹಾರಗಳು:

ಸೋಡಿಯಂನ ಹೆಚ್ಚಾಗಿ ಇರುವ ಆಹಾರಗಳು ರಕ್ತದೊತ್ತಡವನ್ನು ಹೆಚ್ಚಿಸುತ್ತವೆ ಮತ್ತು ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುತ್ತವೆ.

7. ಹೆಚ್ಚು ಸಂಸ್ಕರಿಸಿದ ಧಾನ್ಯಗಳು:

ಇವುಗಳಲ್ಲಿ ಪೌಷ್ಠಿಕಾಂಶ ಮತ್ತು ನಾರಿನ ಮೌಲ್ಯಗಳು ಕಡಿಮೆಯಿದ್ದು, ಇದು ಕರುಳಿನ ಮೈಕ್ರೋಬಿಯಾದಲ್ಲಿ ಅಸಮತೋಲನಕ್ಕೆ ಕಾರಣವಾಗುತ್ತದೆ, ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಹದಗೆಡಿಸುತ್ತದೆ.

8. ಅತಿಯಾದ ಕೆಫೀನ್:

ನಿಮ್ಮ ದೇಹದಲ್ಲಿ ಹೆಚ್ಚಿನ ಮಟ್ಟದ ಕೆಫೀನ್ ನಿದ್ರೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ, ಇವು ಪ್ರತಿರಕ್ಷಣಾ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ.

ಇದನ್ನೂ ಓದಿ: ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವ ಬಿಸಿ ಬಿಸಿ ಚಹಾಗಳ ಬಗ್ಗೆ ಇಲ್ಲಿದೆ ಮಾಹಿತಿ

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕೆಲವು ಸಲಹೆಗಳು

ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರುವುದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಒಂದು ಮಾರ್ಗವಾಗಿದೆ. ಕೆಲವು ಹಾನಿಕಾರಕ ಆಹಾರಗಳು ಪ್ರತಿರಕ್ಷಣಾ ವ್ಯವಸ್ಥೆಯನ್ನು ಹಾನಿಗೊಳಿಸಬಹುದು. ಹಾಗಾದರೆ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುವ ಇತರ ಮಾರ್ಗಗಳು ಯಾವವು? ಇಲ್ಲಿದೆ ಮಾಹಿತಿ.

1. ಸಮತೋಲಿತ ಆಹಾರವನ್ನು ಸೇವಿಸುವುದು:

ಪೋಷಕಾಂಶ ಭರಿತ ಸಮತೋಲಿತ ಆಹಾರವು ಪ್ರತಿರಕ್ಷಣಾ ವ್ಯವಸ್ಥೆಯ ಕಾರ್ಯ ನಿರ್ವಹಣೆಯನ್ನು ಹೆಚ್ಚಿಸುತ್ತದೆ, ಹಾಗಾಗಿ ಆದಷ್ಟು ಆಹಾರದಲ್ಲಿ ತರಕಾರಿಗಳು, ಹಣ್ಣುಗಳು, ಖನಿಜಗಳು, ಆರೋಗ್ಯಕರ ಕೊಬ್ಬುಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಆಹಾರಗಳ ಸೇವನೆ ಅತ್ಯಗತ್ಯ.

2. ದೇಹಕ್ಕೆ ಅಗತ್ಯವಿರುವಷ್ಟು ನೀರು ಕುಡಿಯಬೇಕು:

ಉತ್ತಮ ರೋಗನಿರೋಧಕ ಶಕ್ತಿ ಮತ್ತು ಉತ್ತಮ ಆರೋಗ್ಯವನ್ನು ಪಡೆಯಲು ಪ್ರತಿದಿನ ಸಾಕಷ್ಟು ಪ್ರಮಾಣದ ನೀರನ್ನು ಕುಡಿಯಬೇಕು.

3. ನಿಯಮಿತವಾಗಿ ವ್ಯಾಯಾಮ ಮಾಡಿ:

ಪ್ರತಿರಕ್ಷಣಾ ವ್ಯವಸ್ಥೆಯ ಹೆಚ್ಚಿಸಿಕೊಳ್ಳಲು ನಿಮ್ಮ ದಿನಚರಿಗೆ ಸ್ವಲ್ಪ ಮಟ್ಟಿನ ದೈಹಿಕ ಚಟುವಟಿಕೆಗಳನ್ನು ಸೇರಿಸಿಕೊಳ್ಳಿ ಎಂದು ಡಾ. ಗೋಯಲ್ ಸಲಹೆ ನೀಡುತ್ತಾರೆ. ಇವು ಹೇಹಕ್ಕೂ ಒಳ್ಳೆಯದು.

4. ಚೆನ್ನಾಗಿ ನಿದ್ರೆ ಮಾಡಿ:

7 ರಿಂದ 8 ಗಂಟೆಗಳ ಒಳ್ಳೆ ನಿದ್ರೆಯು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ, ಅಲ್ಲದೆ ಇದು ಸೋಂಕಿನ ಅಪಾಯವನ್ನು ಕಡಿಮೆ ಮಾಡುತ್ತದೆ.

5. ಒತ್ತಡದ ಮಟ್ಟವನ್ನು ಸರಿಯಾಗಿ ನಿರ್ವಹಿಸಿ:

ಹೆಚ್ಚಿನ ಮಟ್ಟದ ಒತ್ತಡವು ಪ್ರತಿರಕ್ಷಣಾ ವ್ಯವಸ್ಥೆಗೆ ಹಾನಿಕಾರಕವಾಗಿದೆ. ಧ್ಯಾನ ಮತ್ತು ಕೆಲವು ಉಸಿರಾಟದ ಚಟುವಟಿಕೆಗಳಂತಹ ಒತ್ತಡ ನಿವಾರಕ ಚಟುವಟಿಕೆಗಳನ್ನು ನಿಮ್ಮ ದಿನಚರಿಯಲ್ಲಿ ಅಳವಡಿಸಿಕೊಳ್ಳಿ.

ನೀವು ಸಮತೋಲಿತ ಆಹಾರವನ್ನು ಸೇವಿಸುವುದರಿಂದ ಮತ್ತು ನಿಯಮಿತವಾಗಿ ವ್ಯಾಯಾಮ ಮಾಡುವುದರಿಂದ, ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಲು ಮತ್ತು ಸ್ಥೂಲಕಾಯತೆಯನ್ನು ತಡೆಗಟ್ಟಲು ಸಹಾಯ ಮಾಡುತ್ತದೆ, ಇದು ಪ್ರತಿರಕ್ಷಣಾ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತದೆ. ಆದ್ದರಿಂದ, ಚೆನ್ನಾಗಿ ತಿನ್ನಿ ಮತ್ತು ನಿದ್ರಿಸಿ, ಬಿಡುವಿನಲ್ಲಿ ಕುಳಿತುಕೊಳ್ಳದೇ ಓಡಾಡುತ್ತಿರಿ, ವ್ಯಾಯಾಮವನ್ನು ಮಾಡಿ.

ಇನ್ನಷ್ಟು ಆರೋಗ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ