AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jackfruit seeds health benefits : ಹಲಸಿನ ಬೀಜದಿಂದ ಅದ್ಭುತ ಆರೋಗ್ಯ ಪ್ರಯೋಜನ, ಇಲ್ಲಿದೆ ನೋಡಿ

ಹಲಸು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಆದರೆ ಹಲಸಿನ ಹಣ್ಣಿನ ಬೀಜಗಳು ಕೂಡಾ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು ಎಂಬ ಬಗ್ಗೆ ನಿಮಗೆ ತಿಳಿದಿದೆಯೇ?. ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಹಲಸಿನ ಹಣ್ಣಿನ ಬೀಜದ ಆರೋಗ್ಯ ಪ್ರಯೋಜನಗಳ ಕುರಿತ ಮಾಹಿತಿ ಇಲ್ಲಿದೆ.

Jackfruit seeds health benefits : ಹಲಸಿನ ಬೀಜದಿಂದ ಅದ್ಭುತ ಆರೋಗ್ಯ ಪ್ರಯೋಜನ, ಇಲ್ಲಿದೆ ನೋಡಿ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on:Jul 06, 2023 | 9:33 AM

Share

ತಿನ್ನಲು ಬಲು ರುಚಿಕರವಾಗಿರುವ ಹಲಸು ನಾಗಲಿಗೆ ರುಚಿಗೆ ಮಾತ್ರವಲ್ಲದೆ ಆರೋಗ್ಯಕ್ಕೂ ಬಹಳ ಪ್ರಯೋಜನಕಾರಿ ಎಂಬುವುದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಹಲಸಿನ ಹಣ್ಣು ತಿಂದು ಅದರಲ್ಲಿರುವ ಬೀಜವನ್ನು ಹಲವರು ಎಸೆಯುತ್ತಾರೆ. ಇದನ್ನು ಎಸೆಯುವ ಬದಲು ಆ ಬೀಜಗಳನ್ನು ಸುಟ್ಟು ಅಥವಾ ಬೇಯಿಸಿ ತಿನ್ನಬಹುದು. ಏಕೆಂದರೆ ಇದು ನಾಲಿಗೆಗೆ ರುಚಿಯನ್ನು ನೀಡುವುದು ಮಾತ್ರವಲ್ಲದೆ ಆರೋಗ್ಯಕ್ಕೂ ಕೂಡಾ ಬಹಳ ಪ್ರಯೋಜನಕಾರಿ. ಈ ಹಲಸಿನ ಬೀಜಗಳು ಹೇರಳವಾಗಿ ಪ್ರೋಟೀನ್, ವಿಟಮಿನ್ ಬಿ ಮತ್ತು ಪೊಟ್ಯಾಸಿಯಂ ನಂತಹ ಪೋಷಕಾಂಶಗಳಿಂದ ತುಂಬಿರುತ್ತದೆ. ಇಂತಹ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಹಲಸಿನಹಣ್ಣಿನ ಬೀಜಗಳ ಸೇವನೆಯಿಂದ ದೊರಕುವ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯೋಣ.

ಹಲಸಿನ ಹಣ್ಣಿನ ಆರೋಗ್ಯ ಪ್ರಯೋಜನಗಳು:

ಪೌಷ್ಟಿಕತಜ್ಞೆ ಲೊವ್ನೀತ್ ಬಾತ್ರಾ ಅವರು ಇತ್ತೀಚಿಗೆ ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಹಲಸಿನ ಹಣ್ಣಿನ ಬೀಜಗಳನ್ನು ಸೇವಿಸುವುದರಿಂದ ದೊರಕುವ ಆರೋಗ್ಯ ಪ್ರಯೋಜನಗಳ ಬಗ್ಗೆ ಹಂಚಿಕೊಂಡಿದ್ದಾರೆ.

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ:

ಹಲಸಿನ ಹಣ್ಣಿನ ಬೀಜಗಳನ್ನು ಸೇವಿಸುವುದು ಜೀರ್ಣಾಂಗ ವ್ಯವಸ್ಥೆಗೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಏಕೆಂದರೆ ಹಲಸಿನ ಬೀಜಗಳಲ್ಲಿ ಫೈಬರ್ ಅಂಶ ಸಮೃದ್ಧವಾಗಿದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಹಾಗೂ ಕರುಳಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಮಾತ್ರವಲ್ಲದೆ ಹಲಸಿನ ಬೀಜದ ಸೇವನೆಯಿಂದ ಮಲಬದ್ಧತೆ ಮತ್ತು ಹೊಟ್ಟೆ ಸಂಬಂಧಿತ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು.

ಇದನ್ನೂ ಓದಿ: Jackfruit Seeds: ಹಲಸಿನ ಬೀಜದ ಆರೋಗ್ಯ ಪ್ರಯೋಜನಗಳು

ಹೃದಯದ ಆರೋಗ್ಯಕ್ಕೆ ಸಹಕಾರಿ:

ಹಲಸಿನ ಬೀಜಗಳಲ್ಲಿ ಪೊಟ್ಯಾಸಿಯಂ ಅಂಶ ಸಮೃದ್ಧವಾಗಿದೆ. ಪೊಟ್ಯಾಸಿಯಂ ರಕ್ತನಾಳಗಳಿಗೆ ವಿಶ್ರಾಂತಿಯನ್ನು ಒದಗಿಸುವ ಮೂಲಕ ರಕ್ತದೊತ್ತಡದವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮತ್ತು ಹೃದಯರಕ್ತನಾಳದ ವ್ಯವಸ್ಥೆಯ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಹಲಸಿ ಬೀಜದ ಸೇವನೆಯಿಂದ ಹೃದ್ರೋಗ ಅಪಾಯವನ್ನು ಕೂಡಾ ಕಡಿಮೆ ಮಾಡಬಹುದು.

ಮೂಳೆಗಳ ಆರೋಗ್ಯವನ್ನು ವೃದ್ದಿಸುತ್ತದೆ:

ಆರೋಗ್ಯಕರ ಮೂಳೆಗಾಗಿ ಕ್ಯಾಲ್ಸಿಯಂ ಹೊರತು ಪಡಿಸಿ ಇನ್ನು ಹಲವಾರು ಇತರ ಪೋಷಕಾಂಶಗಳು ಕೂಡಾ ನಮ್ಮ ದೇಹಕ್ಕೆ ಬೇಕಾಗುತ್ತವೆ. ಅವುಗಳಲ್ಲಿ ಮೆಗ್ನೇಸಿಯಂ ಕೂಡಾ ಒಂದು. ಹಲಸಿನ ಹಣ್ಣಿನ ಬೀಜಗಳಲ್ಲಿ ಹೇರಳವಾಗಿ ಮೆಗ್ನೇಸಿಯಂ ನಂತಹ ಅಂಶಗಳಿದ್ದು, ಇದು ಕ್ಯಾಲ್ಸಿಯಂ ಹೀರಿಕೊಳ್ಳಲು ಮತ್ತು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಅಲ್ಲದೆ ಇದು ಮೂಳೆ ಮುರಿತದ ಅಪಾಯವನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ

ಚಯಾಪಚಯ ಕ್ರಿಯೆ ಸುಧಾರಿಸುತ್ತದೆ:

ಹಲಸಿನ ಬೀಜಗಳಲ್ಲಿರುವ ಕಾರ್ಬೋಹೈಡ್ರೇಟ್ ಅಂಶದ ಕಾರಣ ಇದರ ಸೇವನೆಯಿಂದಾಗಿ ಶಕ್ತಿಯ ಉತ್ತಮ ಮೂಲವು ನಮಗೆ ದೊರಕುತ್ತದೆ. ಹೆಚ್ಚುವರಿಯಾಗಿ, ಹಲಸಿನ ಬೀಜಗಳು ವಿಟಮಿನ್ ಬಿ ಅಂಶವನ್ನು ಹೊಂದಿದೆ. ಇದು ಆಹಾರವನ್ನು ಶಕ್ತಿಯನ್ನಾಗಿ ಪರಿವರ್ತಿಸುವಲ್ಲಿ ಮತ್ತು ಆರೋಗ್ಯಕರ ಚಯಾಪಚಯವನ್ನು ಬೆಂಬಲಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.

ರಕ್ತಹೀನತೆಯನ್ನು ತಡೆಯಲು ಸಹಕಾರಿ:

ಕಬ್ಬಿಣಾಂಶ ಕೊರತೆಯ ಕಾರಣದಿಂದ ಹೆಚ್ಚಾಗಿ ಮಹಿಳೆಯರು ರಕ್ತಹೀನತೆಯ ಸಮಸ್ಯೆಯನ್ನು ಎದುರಿಸುತ್ತಿರುತ್ತಾರೆ. ಹಲಸಿನ ಬೀಜಗಳು ಕಬ್ಬಿಣಾಂಶದ ಉತ್ತಮ ಮೂಲವಾಗಿದ್ದು, ಅದು ಆರೋಗ್ಯಕರ ಕೆಂಪು ರಕ್ತಕಣಗಳ ಉತ್ಪಾದನೆಗೆ ಸಹಾಯ ಮಾಡುತ್ತದೆ. ಸಾಕಷ್ಟು ಪ್ರಮಾಣದ ಕಬ್ಬಿಣದ ಸೇವನೆಯು ರಕ್ತಹೀನತೆಯನ್ನು ತಡೆಯಲು ಸಹಾಯ ಮಾಡುವುದರ ಜೊತೆಗೆ ಅವುಗಳು ದೇಹದಾದ್ಯಂತ ಸೂಕ್ತವಾದ ಆಮ್ಲಜನಕದ ಸಾಗಣೆಯನ್ನು ಉತ್ತೇಜಿಸುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 5:36 pm, Wed, 5 July 23

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!