Ginger Tea: ಪ್ರತಿದಿನ ಶುಂಠಿ ಚಹಾ ಕುಡಿಯುವುದು ಆರೋಗ್ಯಕ್ಕೆ ಉತ್ತಮವೇ?

| Updated By: shivaprasad.hs

Updated on: Nov 06, 2021 | 7:25 AM

ಶುಂಠಿ ಸೇವನೆಯು ನಿಮ್ಮ ಆರೋಗ್ಯಕ್ಕೆ ಎಷ್ಟು ಉತ್ತಮ ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಆಹಾರದಲ್ಲಿ ಶುಂಠಿ ಸೇರಿಸುವ ಮೂಲಕ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಿ.

Ginger Tea: ಪ್ರತಿದಿನ ಶುಂಠಿ ಚಹಾ ಕುಡಿಯುವುದು ಆರೋಗ್ಯಕ್ಕೆ ಉತ್ತಮವೇ?
ಸಂಗ್ರಹ ಚಿತ್ರ
Follow us on

ಸಾಮಾನ್ಯವಾಗಿ ಹೆಚ್ಚಿನವರಿಗೆ ಬೆಳಿಗ್ಗೆ ಎದ್ದ ತಕ್ಷಣ ಚಹಾ ಸವಿಯುವ ಅಭ್ಯಾಸ. ಅದರಲ್ಲಿಯೂ ಮುಖ್ಯವಾಗಿ ಕೆಲವರು ಶುಂಠಿ ಚಹಾವನ್ನು ಹೆಚ್ಚು ಇಷ್ಟಪಡುತ್ತಾರೆ. ಅಡುಗೆಯಲ್ಲಿ ರುಚಿ ಹೆಚ್ಚುಸುವ ಜೊತೆಗೆ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿಯಾಗಿರುವ ಶುಂಠಿಯಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿಯೋಣ.

ಶುಂಠಿ ವಿಟಮಿನ್ ಸಿ ಅಂಶ, ಮೆಗ್ನೀಶಿಯಮ್ ಮತ್ತು ಇತರ ಖನಿಜಾಂಶಗಳಿಂದ ಸಮೃದ್ಧವಾಗಿರುತ್ತದೆ. ಇದು ನಮ್ಮ ದೇಹ ಸದೃಢವಾಗಿರಲು ಅವಶ್ಯಕವಾದ ಖನಿಜಾಂಶಗಳು. ಹಾಗಿರುವಾಗ ನಿಮ್ಮ ಆಹಾರದಲ್ಲಿ ಶುಂಠಿ ಸೇರಿಸುವ ಮೂಲಕ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಿ.

ಶುಂಠಿ ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಶುಂಠಿಯಲ್ಲಿರುವ ಜಿಂಜರಾಲ್ ಮತ್ತು ಜಿಂಜರೋನ್ ರಕ್ತ ಪರಿಚಲನೆಗೆ ಸಹಾಯ ಮಾಡುತ್ತದೆ. ಇದು ರಕ್ತನಾಳಗಳಲ್ಲಿ ಉಂಟಾಗುವ ಅಡೆತಡೆಗಳನ್ನು ತೆಗೆದುಹಾಕುತ್ತದೆ. ಅಷ್ಟೇ ಅಲ್ಲ ಶುಂಠಿ ಜೀರ್ಣ ಕ್ರಿಯೆಗೂ ಸಹಾಯಕ. ವಾಕರಿಗೆ ಮತ್ತು ಆಯಾಸಕ್ಕೆ ಒಂದು ಕಪ್ ಶುಂಠಿ ಚಹಾವನ್ನು ಕುಡಿಯುವುದು ಒಳ್ಳೆಯ ಪರಿಹಾರ ನೀಡುತ್ತದೆ.

ಮಧುಮೇಹಿಗಳಿಗೆ ಶುಂಠಿ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ರಕ್ತದಲ್ಲಿನ ಗ್ಲುಕೋಸ್ ಮಟ್ಟವನ್ನು ಕಡಿಮೆ ಮಾಡಲು ಶುಂಠಿ ಸಹಾಯ ಮಾಡುತ್ತದೆ. ಶುಂಠಿ ಚಹಾವನ್ನು ಕುಡಿಯುವುದರಿಂದ ಕೆಮ್ಮು ಮತ್ತು ನೆಗಡಿಯಂತಹ ಆರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತವೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಶುಂಠಿ ಚಹಾವು ತುಂಬಾ ಉಪಯುಕ್ತವಾಗಿದೆ. ಹೊಟ್ಟೆಯಲ್ಲಿ ಉಂಟಾಗುವ ಕಿರಿಕಿರಿ, ನೋವು, ಒತ್ತಡ ಜೊತೆಗೆ ಮಲಬದ್ಧತೆ ಸಮಸ್ಯೆಯಿಂದ ಪರಿಹಾರ ನೀಡುತ್ತದೆ.

ಇದನ್ನೂ ಓದಿ:

Health Tips: ಈ ಕೆಲವು ಪೌಷ್ಟಿಕಾಂಶಯುಕ್ತ ಪಾನೀಯಗಳು ನಿಮ್ಮ ಆರೋಗ್ಯಕ್ಕೆ ಉತ್ತಮ

Health Tips: ಕಹಿಯಾಗಿದ್ದರೂ ಆರೋಗ್ಯಕರ ಗುಣಗಳನ್ನು ಹೊಂದಿರುವ ಈ 5 ಪದಾರ್ಥಗಳ ಬಗ್ಗೆ ತಿಳಿಯಿರಿ