ನೀರು ನಿಮ್ಮ ಒಟ್ಟಾರೆ ಆರೋಗ್ಯವನ್ನು ಹೆಚ್ಚಿಸಲು ಹೇಗೆ ಸಹಕಾರಿಯಾಗಿದೆ ಎಂಬುದು ತಿಳಿದಿದೆಯಾ? ಪ್ರಯೋಜನಗಳೇನು?

ನೀರು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ ಎಂಬುದು ನಿಮಗೆ ತಿಳಿದಿರಬಹುದು ಆದರೆ ಯಾವ ರೀತಿಯಲ್ಲಿ ಸಹಕಾರಿಯಾಗಿದೆ ಎಂಬುದು ತಿಳಿದಿದೆಯೇ? ಇದು ನಿಮ್ಮ ಚರ್ಮವನ್ನು ಆರೋಗ್ಯಕರವಾಗಿಡುವುದರಿಂದ ಹಿಡಿದು ಮಲಬದ್ಧತೆಯನ್ನು ತಡೆಗಟ್ಟುತ್ತದೆ ಜೊತೆಗೆ ನಿಮ್ಮನ್ನು ಹೈಡ್ರೇಟ್ ಆಗಿರಿಸುತ್ತದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ.

ನೀರು ನಿಮ್ಮ ಒಟ್ಟಾರೆ ಆರೋಗ್ಯವನ್ನು ಹೆಚ್ಚಿಸಲು ಹೇಗೆ ಸಹಕಾರಿಯಾಗಿದೆ ಎಂಬುದು ತಿಳಿದಿದೆಯಾ? ಪ್ರಯೋಜನಗಳೇನು?
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ

Updated on: Aug 22, 2023 | 7:08 PM

ನೀರಿನ ಬಗ್ಗೆ ಪ್ರತಿಯೊಬ್ಬರಿಗೂ ಗೊತ್ತು. ಅದಿಲ್ಲದೆ ನಾವು ಬದುಕುಳಿಯುವುದು ಅಸಾಧ್ಯ. ಇನ್ನು ನೀರು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ ಎಂಬುದು ನಿಮಗೆ ತಿಳಿದಿರಬಹುದು, ಆದರೆ ಯಾವ ರೀತಿಯಲ್ಲಿ ನೀರು ನಮ್ಮ ದೇಹಕ್ಕೆ ಸಹಕಾರಿಯಾಗಿದೆ ಎಂಬುದು ತಿಳಿದಿದೆಯೇ? ಅದನ್ನು ತಿಳಿಯುವುದು ಅತ್ಯಗತ್ಯ. ಕುಡಿಯುವ ನೀರಿನ ಅನೇಕ ಪ್ರಯೋಜನಗಳಲ್ಲಿ ದೈಹಿಕ ಕಾರ್ಯಕ್ಷವನ್ನು ಬೆಂಬಲಿಸುವುದು, ಕರುಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ತಡೆಗಟ್ಟುವುದು, ಸುಧಾರಿತ ಚಯಾಪಚಯ ಮತ್ತು ಹೆಚ್ಚಿನವು ಸೇರಿಕೊಂಡಿದೆ. ನೀರಿನಲ್ಲಿ ಕ್ಯಾಲೊರಿಗಳಿಲ್ಲ. ಆದ್ದರಿಂದ, ನಿಮ್ಮ ಕಡುಬಯಕೆಗಳನ್ನು ನಿಯಂತ್ರಣದಲ್ಲಿಡುವ ಮೂಲಕ ನಿಮ್ಮ ದೇಹದ ತೂಕವನ್ನು ನಿರ್ವಹಣೆ ಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಕುಡಿಯುವ ನೀರಿನ ಪ್ರಯೋಜನಗಳನ್ನು ಅರ್ಥಮಾಡಿಕೊಳ್ಳಲು ಹೆಲ್ತ್ ಶಾಟ್ಸ್ ಮುಂಬೈನ ನಾನಾವತಿ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನೋಂದಾಯಿತ ಆಹಾರ ತಜ್ಞ ಮತ್ತು ಕ್ಲಿನಿಕಲ್ ನ್ಯೂಟ್ರಿಷನಿಸ್ಟ್ ಡಾ. ಉಷಾಕಿರಣ್ ಸಿಸೋಡಿಯಾ ಅವರು ಈ ಬಗ್ಗೆ ಕೆಲವು ಸಲಹೆಗಳನ್ನು ನೀಡಿದ್ದು. ಈ ವಿಚಾರವಾಗಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಕುಡಿಯುವ ನೀರಿನ ಆರೋಗ್ಯ ಪ್ರಯೋಜನಗಳಾವುವು?

ಜಲಸಂಚಯನವು ವರ್ಷಪೂರ್ತಿ ಮುಖ್ಯವಾಗಿದೆ. ಕಡಿಮೆ ಅಥವಾ ಹೆಚ್ಚಿನ ತಾಪಮಾನದಲ್ಲಿ ಅಥವಾ ಹೆಚ್ಚಿದ ತೇವಾಂಶವಿರುವ ಸಮಯಗಳಲ್ಲಿ, ನೀರು ಕುಡಿಯಲು ಮರೆಯಬೇಡಿ. ದೇಹವು ಅಗತ್ಯವಾದ ದ್ರವಗಳು ಮತ್ತು ಎಲೆಕ್ಟ್ರೋಲೈಟ್ಗಳನ್ನು ಕಳೆದುಕೊಂಡಾಗ, ಅದು ನಿರ್ಜಲೀಕರಣಕ್ಕೆ ಕಾರಣವಾಗಬಹುದು. ಇದು ಮೂತ್ರಪಿಂಡದ ಕಾರ್ಯವನ್ನು ಮತ್ತಷ್ಟು ದುರ್ಬಲಗೊಳಿಸುತ್ತದೆ. ಅರಿವಿನ ಸಾಮರ್ಥ್ಯಗಳನ್ನು ಕಡಿಮೆ ಮಾಡುತ್ತದೆ ಮತ್ತು ದೈಹಿಕ ಕಾರ್ಯಕ್ಷಮತೆಯನ್ನು ದುರ್ಬಲಗೊಳಿಸುತ್ತದೆ. ಹೀಗಾಗಿ, ಸರಿಯಾದ ಜಲಸಂಚಯನವು ಪ್ರಯೋಜನಕಾರಿ ಮಾತ್ರವಲ್ಲ, ಒಟ್ಟಾರೆ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಅತ್ಯವಶ್ಯಕವಾಗಿದೆ.

ತಜ್ಞರ ಪ್ರಕಾರ ಕುಡಿಯುವ ನೀರಿನ ಕೆಲವು ಪ್ರಮುಖ ಆರೋಗ್ಯ ಪ್ರಯೋಜನಗಳು ಇಲ್ಲಿವೆ:

1. ನೀರಿನ ಸೇವನೆಯು ದೇಹವನ್ನು ನಿರ್ಜಲೀಕರಣದಿಂದ ತಡೆಯುತ್ತದೆ:

ಪ್ರತಿದಿನ ಸಾಕಷ್ಟು ನೀರು ಕುಡಿಯುವುದರಿಂದ ಸೆಲ್ಯುಲಾರ್ ಹೋಮಿಯೋಸ್ಟಾಸಿಸ್ ಅನ್ನು ಕಾಪಾಡಿಕೊಳ್ಳಲು ದೇಹದಲ್ಲಿ ಸಾಕಷ್ಟು ದ್ರವ ಸಮತೋಲನವನ್ನು ಕಾಪಾಡಿಕೊಳ್ಳುತ್ತದೆ. ದೇಹವನ್ನು ನಿರ್ಜಲೀಕರಣದಿಂದ ತಡೆಯುತ್ತದೆ.

2. ನೀರು ಚಯಾಪಚಯ ಕ್ರಿಯೆಯೆನ್ನು ಸುಧಾರಿಸುತ್ತದೆ:

“ಪೋಷಕಾಂಶಗಳ ಹೀರಿಕೊಳ್ಳುವಿಕೆ, ಪರಿಚಲನೆ ಮತ್ತು ಸಾಗಣೆಯನ್ನು ಸುಗಮಗೊಳಿಸುವ ಮೂಲಕ ಜಲಸಂಚಯನವು ಪ್ರಮುಖ ಚಯಾಪಚಯ ಪ್ರಕ್ರಿಯೆಗಳನ್ನು ಬೆಂಬಲಿಸುತ್ತದೆ” ಎಂದು ತಜ್ಞರು ಹೇಳುತ್ತಾರೆ.

3. ನೀರು ಜೀರ್ಣಾಂಗ ವ್ಯವಸ್ಥೆ ಸರಿಯಾಗಿ ಕಾರ್ಯ ನಿರ್ವಹಿಸಲು ಸಹಕಾರಿಯಾಗಿದೆ:

ಸಾಕಷ್ಟು ನೀರು ಕುಡಿಯುವುದು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಮಲಬದ್ಧತೆಯನ್ನು ತಡೆಯುತ್ತದೆ ಮತ್ತು ಆರೋಗ್ಯಕರ ಜೀರ್ಣಾಂಗವ್ಯೂಹವನ್ನು ಉತ್ತೇಜಿಸುತ್ತದೆ. ಜೀರ್ಣಾಂಗ ವ್ಯವಸ್ಥೆ ಸರಿಯಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳುತ್ತದೆ.

4.  ನೀರಿನ ಸೇವನೆಯು ಅರಿವಿನ ವರ್ಧನೆಗೆ ಕಾರಣವಾಗಿದೆ:

ಸರಿಯಾದ ನೀರಿನ ಸೇವನೆ ಮೆದುಳಿನ ಕಾರ್ಯವನ್ನು ಬೆಂಬಲಿಸುತ್ತದೆ, ಅರಿವಿನ ದುರ್ಬಲತೆಯ ಅಪಾಯವನ್ನು ಕಡಿಮೆ ಮಾಡುತ್ತದೆ ಮತ್ತು ಗಮನ ಮತ್ತು ಸ್ಪಷ್ಟತೆಯನ್ನು ಹೆಚ್ಚಿಸುತ್ತದೆ.

5.  ಸಾಕಷ್ಟು ನೀರಿನ ಸೇವನೆಯು ದೇಹದ ತಾಪಮಾನವನ್ನು ನಿಯಂತ್ರಿಸುತ್ತದೆ:

“ನೀರಿನಂತಹ ಅಗತ್ಯ ದ್ರವಗಳು ದೇಹದ ತಾಪಮಾನವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ವಿಶೇಷವಾಗಿ ಉಷ್ಣವಲಯದ ಹವಾಮಾನದಲ್ಲಿ, ಬೆವರುವಿಕೆಯಂತಹ ಪ್ರಕ್ರಿಯೆಗಳಲ್ಲಿ ನೀರು ಅಗತ್ಯ” ಎಂದು ತಜ್ಞರು ಹೇಳುತ್ತಾರೆ.

ಇದನ್ನೂ ಓದಿ: ಪ್ರತಿದಿನ ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ಏಕೆ? ಈ ಪಾತ್ರೆಯಲ್ಲಿ ಯಾರೆಲ್ಲ ನೀರು ಕುಡಿಯಬಾರದು

6. ನೀರು ನಿರ್ವಿಷೀಕರಣಕ್ಕೆ ಕಾರಣವಾಗುತ್ತದೆ:

ಮೂತ್ರಪಿಂಡದ ತ್ಯಾಜ್ಯ ಉತ್ಪನ್ನಗಳನ್ನು ಪರಿಣಾಮಕಾರಿಯಾಗಿ ಫಿಲ್ಟರ್ ಮಾಡಲು ಅನುವು ಮಾಡಿಕೊಡುತ್ತದೆ, ಇದರಿಂದಾಗಿ ನಿರ್ವಿಷೀಕರಣಕ್ಕೆ ನೀರು ಸಹಾಯ ಮಾಡುತ್ತದೆ ಎನ್ನಲಾಗುತ್ತದೆ.

7. ದೈಹಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ನೀರು ಸಹಾಯ ಮಾಡುತ್ತದೆ:

“ನಿಯಮಿತವಾಗಿ ನೀರು ಕುಡಿಯುವುದು ಸ್ನಾಯುಗಳ ಕಾರ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ ಮತ್ತು ಕೀಲುಗಳನ್ನು ನಯಗೊಳಿಸುತ್ತದೆ ಮತ್ತು ಸೆಳೆತ ಮತ್ತು ಒತ್ತಡಗಳ ಅಪಾಯವನ್ನು ಕಡಿಮೆ ಮಾಡುತ್ತದೆ” ಎಂದು ತಜ್ಞರು ಹೇಳುತ್ತಾರೆ.

8. ನೀರು ಚರ್ಮದ ಆರೋಗ್ಯವನ್ನು ಹೆಚ್ಚಿಸುತ್ತದೆ:

ನೀರು ಚರ್ಮದ ಕೋಶಗಳಿಗೆ ಅಗತ್ಯವಾದ ಜಲಸಂಚಯನವನ್ನು ಒದಗಿಸುತ್ತದೆ, ಚರ್ಮವು ಹೆಚ್ಚು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ ಮತ್ತು ಶುಷ್ಕತೆ ಮತ್ತು ಸುಕ್ಕುಗಳನ್ನು ಶಮನಗೊಳಿಸುತ್ತದೆ.

9.  ನಿರ್ಜಲೀಕರಣ ಸಂಬಂಧಿತ ಕಾಯಿಲೆಗಳ ಅಪಾಯವನ್ನು ನೀರು ಕಡಿಮೆ ಮಾಡುತ್ತದೆ:

“ಜಲಸಂಚಯನವು ಮೂತ್ರಪಿಂಡದ ಕಲ್ಲುಗಳು, ಮೂತ್ರನಾಳದ ಸೋಂಕುಗಳು ಮತ್ತು ಕೆಲವು ರೀತಿಯ ತಲೆನೋವುಗಳಂತಹ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡುತ್ತದೆ” ಎಂದು ತಜ್ಞರು ಹೇಳುತ್ತಾರೆ.

9. ಎಲೆಕ್ಟ್ರೋಲೈಟ್ ಸಮತೋಲನವನ್ನು ಕಾಪಾಡಿಕೊಳ್ಳಲು ನೀರು ಸಹಾಯ ಮಾಡುತ್ತದೆ:

ನಿಯಮಿತವಾಗಿ ನೀರಿನ ಸೇವನೆಯನ್ನು ಸೇವಿಸುವುದರಿಂದ ಸೋಡಿಯಂ, ಪೊಟ್ಯಾಸಿಯಮ್ ಮತ್ತು ಕ್ಲೋರೈಡ್ ನಂತಹ ಅಗತ್ಯ ಖನಿಜಗಳ ನಷ್ಟವನ್ನು ತಡೆಯುತ್ತದೆ. ಇದು ಅನೇಕ ಶಾರೀರಿಕ ಪ್ರಕ್ರಿಯೆಗಳಿಗೆ ನಿರ್ಣಾಯಕವಾಗಿದೆ.

ಒಬ್ಬ ವ್ಯಕ್ತಿಯು ಪ್ರತಿದಿನ ಎಷ್ಟು ಲೀ. ನೀರು ಕುಡಿಯಬೇಕು?

ನೀವು ಉಸಿರಾಡುವಾಗ, ಬೆವರುವಾಗ, ಮೂತ್ರ ವಿಸರ್ಜಿಸುವಾಗ ಮತ್ತು ಮಲವಿಸರ್ಜನೆ ಮಾಡುವಾಗ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗುತ್ತದೆ. ಆದ್ದರಿಂದ, ನೀರನ್ನು ಒಳಗೊಂಡಿರುವ ಆಹಾರ ಮತ್ತು ಪಾನೀಯಗಳನ್ನು ಸೇವಿಸುವ ಮೂಲಕ ನಿಮ್ಮ ದೇಹದಲ್ಲಿನ ನೀರನ್ನು ಮರುಪೂರಣ ಮಾಡುವುದು ಅತ್ಯಗತ್ಯ. ಸರಾಸರಿ ಪುರುಷ ಅಥವಾ ಮಹಿಳೆಗೆ, ಅವರ ದೈಹಿಕ ಚಟುವಟಿಕೆ ಮತ್ತು ಹವಾಮಾನ ಪರಿಸ್ಥಿತಿಗಳನ್ನು ಅವಲಂಬಿಸಿ ಪ್ರತಿದಿನ 2.5 ರಿಂದ 3.5 ಲೀಟರ್ ನೀರನ್ನು ಕುಡಿಯುವುದು ಸೂಕ್ತ. ಪುರುಷರಿಗೆ, ದಿನಕ್ಕೆ 3.7 ಲೀಟರ್ ನೀರು ಬೇಕಾಗುತ್ತದೆ. ಆದರೆ ಮಹಿಳೆಯರಿಗೆ, 2.7 ಲೀಟರ್ ನೀರು ಅಥವಾ ದ್ರವ ಪದಾರ್ಥಗಳನ್ನು ತಿನ್ನಲು ಸೂಚಿಸಲಾಗುತ್ತದೆ.

ಸಾಕಷ್ಟು ಪ್ರಮಾಣದ ನೀರನ್ನು ಕುಡಿಯುವುದು ನಿಮ್ಮ ದೇಹಕ್ಕೆ ಯಾವ ರೀತಿಯ ಪ್ರಯೋಜನಗಳಾಗುತ್ತದೆ?

  • ಪ್ರಮುಖ ಚಯಾಪಚಯ ಪ್ರಕ್ರಿಯೆಗಳನ್ನು ಬೆಂಬಲಿಸುತ್ತದೆ.
  • ಆಹಾರದ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.
  • ಅರಿವಿನ ಕಾರ್ಯಗಳನ್ನು ಹೆಚ್ಚಿಸುತ್ತದೆ.
  • ಸೂಕ್ತವಾದ ಭೌತಿಕ ಉತ್ಪಾದನೆಯನ್ನು ಖಚಿತಪಡಿಸುತ್ತದೆ.

ಪ್ರತಿದಿನ ಸಾಕಷ್ಟು ನೀರು ಕುಡಿಯುವ ಮೂಲಕ, ಹೆಚ್ಚು ಆರೋಗ್ಯಕರ ಚರ್ಮ, ವರ್ಧಿತ ಶಕ್ತಿಯ ಮಟ್ಟಗಳು ಮತ್ತು ನಿರ್ಜಲೀಕರಣಕ್ಕೆ ಸಂಬಂಧಿತ ಕಾಯಿಲೆಗಳ ಇಳಿಕೆಯಂತಹ ಹಲವಾರು ಆರೋಗ್ಯ ಸುಧಾರಣೆಗಳನ್ನು ಗಮನಿಸಬಹುದು. ಆದ್ದರಿಂದ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ನಿಮ್ಮ ಯೋಗಕ್ಷೇಮವನ್ನು ಬಲಪಡಿಸಲು ಪ್ರತಿದಿನ ಮತ್ತು ನಿರ್ದಿಷ್ಟ ಸಮಯದ ನಂತರ ನೀರು ಕುಡಿಯುವ ಆರೋಗ್ಯಕರ ಅಭ್ಯಾಸವನ್ನು ಅಳವಡಿಸಿಕೊಳ್ಳಿ ಮತ್ತು ಆರೋಗ್ಯವಾಗಿರಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ