ಒಂದು ತಿಂಗಳ ಕಾಲ ಉಪ್ಪು ತಿನ್ನದಿದ್ದರೆ ಏನಾಗುತ್ತದೆ? ಇಲ್ಲಿದೆ ನೋಡಿ ಅಪಾಯ
ಇತ್ತೀಚಿಗೆ ಆರೋಗ್ಯ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಗಾಗಿ ಈ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ತೂಕ ನಷ್ಟ ಮತ್ತು ಉತ್ತಮ ಆರೋಗ್ಯಕ್ಕಾಗಿ ಸಕ್ಕರೆ ಸೇವನೆ ಕಡಿಮೆ ಮಾಡಿ ಎಂದು ಆರೋಗ್ಯ ತಜ್ಞರು ಶಿಫಾರಸು ಮಾಡುತ್ತಾರೆ. ಇದರಿಂದ ಅನೇಕ ಉಪಯೋಗಗಳಿವೆ. ಆದರೆ ಸಕ್ಕರೆಯಂತೆಯೇ ಒಂದು ತಿಂಗಳ ಕಾಲ ಉಪ್ಪನ್ನು ಸಂಪೂರ್ಣವಾಗಿ ಸೇವನೆ ಮಾಡುವುದನ್ನು ಬಿಟ್ಟರೆ ಅದರಿಂದ ದೇಹಕ್ಕೆ ಅನುಕೂಲವಿದೆಯೇ ಅಥವಾ ಇಲ್ಲವೇ ಎಂಬುದನ್ನು ನೀವು ಎಂದಾದರೂ ಯೋಚಿಸಿದ್ದೀರಾ? ಈ ಬಗ್ಗೆ ಆಹಾರ ತಜ್ಞರ ಅಭಿಪ್ರಾಯವೇನು? ಇಲ್ಲಿದೆ ಮಾಹಿತಿ.
ಪ್ರಸ್ತುತ ಸಮಯದಲ್ಲಿ ಆರೋಗ್ಯ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಗಾಗಿ ಈ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ತೂಕ ನಷ್ಟ ಮತ್ತು ಉತ್ತಮ ಆರೋಗ್ಯಕ್ಕಾಗಿ ಸಕ್ಕರೆ ಸೇವನೆ ಕಡಿಮೆ ಮಾಡಿ ಎಂದು ಆರೋಗ್ಯ ತಜ್ಞರು ಶಿಫಾರಸು ಮಾಡುತ್ತಾರೆ. ಇದರಿಂದ ಅನೇಕ ಉಪಯೋಗಗಳಿವೆ. ಆದರೆ ಸಕ್ಕರೆಯಂತೆಯೇ ಒಂದು ತಿಂಗಳ ಕಾಲ ಉಪ್ಪನ್ನು ಸಂಪೂರ್ಣವಾಗಿ ಸೇವನೆ ಮಾಡುವುದನ್ನು ಬಿಟ್ಟರೆ ಅದರಿಂದ ದೇಹಕ್ಕೆ ಅನುಕೂಲವಿದೆಯೇ ಅಥವಾ ಇಲ್ಲವೇ ಎಂಬುದನ್ನು ನೀವು ಎಂದಾದರೂ ಯೋಚಿಸಿದ್ದೀರಾ?
ನೀವು ಒಂದು ತಿಂಗಳ ಕಾಲ ಉಪ್ಪನ್ನು ಸೇವಿಸದಿದ್ದರೆ ಇದರಿಂದ ನೀವು ನಂಬಲಾಗದಂತಹ ಪರಿಣಾಮ ಬೀರುತ್ತದೆ. ಅದು ಉಪವಾಸ ಆಗಿರಲಿ ಅಥವಾ ಆರೋಗ್ಯ ಯೋಜನೆಯ ಭಾಗವಾಗಿರಲಿ. ಕೆಲವು ಸಂದರ್ಭಗಳಲ್ಲಿ ಉಪ್ಪಿನ ಪದಾರ್ಥಗಳನ್ನು ತ್ಯಜಿಸುವುದು ಸಾಮಾನ್ಯವಾಗಿರುತ್ತದೆ. ಆದರೆ, ಇದು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡಗಳ ಪ್ರಕಾರ, ಆರೋಗ್ಯವಂತ ವ್ಯಕ್ತಿಯು ದಿನಕ್ಕೆ 4 ಗ್ರಾಂಗಿಂತ ಹೆಚ್ಚು ಉಪ್ಪನ್ನು ತಿನ್ನಬಾರದು. ಆದರೆ ಉಪ್ಪನ್ನು ಸಂಪೂರ್ಣವಾಗಿ ನಿಷೇಧಿಸಿದರೆ ಅಥವಾ ಸೇವನೆ ಮಾಡದಿದ್ದರೆ ಏನಾಗುತ್ತದೆ? ಈ ಬಗ್ಗೆ ಆಹಾರ ತಜ್ಞರ ಅಭಿಪ್ರಾಯವೇನು? ಇಲ್ಲಿದೆ ಮಾಹಿತಿ.
ವಾಸ್ತವದಲ್ಲಿ ಉಪ್ಪು ನಮ್ಮ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ನೀಡುತ್ತದೆ. ದೇಹಕ್ಕೆ ಅಗತ್ಯವಿರುವಷ್ಟು ಪ್ರಮಾಣದ ಉಪ್ಪನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು. ಆದರೆ ಅದನ್ನು ಸೇವನೆ ಮಾಡುವುದನ್ನು ನಿಲ್ಲಿಸಿದರೆ, ಇದರಿಂದ ಸಾಕಷ್ಟು ಅಡ್ಡಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಒಂದು ವೇಳೆ ನೀವು ದೀರ್ಘಕಾಲದ ವರೆಗೆ ಉಪ್ಪನ್ನು ಸೇವನೆ ಮಾಡದಿದ್ದರೆ ಕೆಲವೊಮ್ಮೆ ಕೋಮಾಕ್ಕೆ ಹೋಗಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ.
ನೀವು 30 ದಿನಗಳವರೆಗೆ ಉಪ್ಪು ತಿನ್ನದಿದ್ದರೆ ಏನಾಗುತ್ತದೆ?
ಇದ್ದಕ್ಕಿದ್ದಂತೆ ತೂಕ ಕಡಿಮೆಯಾಗುತ್ತದೆ
ಉಪ್ಪು ಸೇವನೆ ಮಾಡದಿದ್ದರೆ ಕ್ರಮೇಣ ತೂಕ ಕಡಿಮೆಯಾಗುತ್ತದೆ. 30 ದಿನಗಳ ವರೆಗೆ ಉಪ್ಪು ತಿನ್ನದಿದ್ದರೆ ದೇಹವು ಕಡಿಮೆ ತಿನ್ನುವುದಕ್ಕೆ ಒಗ್ಗಿಕೊಳ್ಳುತ್ತದೆ. ಇದು ನಿಮ್ಮ ಹೊಟ್ಟೆ ಮತ್ತು ಸೊಂಟದ ಕೊಬ್ಬನ್ನು ಕಡಿಮೆ ಮಾಡುತ್ತದೆ. ಆದರೆ ನೀವು ಒಮ್ಮೆಲೇ ಹೆಚ್ಚು ತೂಕ ಕಡಿಮೆ ಮಾಡಿಕೊಂಡರೆ ನಿಮ್ಮ ಆರೋಗ್ಯ ಮತ್ತಷ್ಟು ಹದಗೆಡುತ್ತದೆ ಎಂಬುದು ನೆನಪಿನಲ್ಲಿಡಬೇಕು.
ಜೀರ್ಣಕ್ರಿಯೆಯಲ್ಲಿ ತೊಂದರೆ
ಒಂದು ತಿಂಗಳ ಕಾಲ ಉಪ್ಪು ಸೇವನೆ ಮಾಡದಿದ್ದರೆ ನಿಮ್ಮ ದೇಹದ ವಿವಿಧ ವ್ಯವಸ್ಥೆಗಳ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ನಿಮ್ಮ ಜೀರ್ಣಾಂಗ ವ್ಯವಸ್ಥೆಗೆ ಹಾನಿಯಾಗಬಹುದು. ಅಲ್ಲದೆ ಇದು ನಿಮ್ಮ ಕರುಳಿನ ಮೇಲೆ ಪರಿಣಾಮ ಬೀರುತ್ತದೆ. ಹೊಟ್ಟೆ ಮತ್ತು ಇತರ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ.
ಮಾನಸಿಕ ಆರೋಗ್ಯ ಸಮಸ್ಯೆ
ನಿಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ದೃಷ್ಟಿಯಿಂದ, ನೀವು ಉಪ್ಪು ತಿನ್ನುವುದನ್ನು ಸಂಪೂರ್ಣವಾಗಿ ನಿಲ್ಲಿಸಬಾರದು. ಇದು ನಿಮ್ಮ ಮನಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ. ಒತ್ತಡ, ಬಿಪಿ ಕಡಿಮೆಯಾಗುವುದರ ಜೊತೆಗೆ ಆತಂಕಕ್ಕೆ ಕಾರಣವಾಗುತ್ತದೆ. ಇದರರ್ಥ ಸೀಮಿತ ಪ್ರಮಾಣದ ಉಪ್ಪಿನ ಸೇವನೆಯ ದೇಹಕ್ಕೆ ಅಗತ್ಯವಿದೆ.
ಇದನ್ನೂ ಓದಿ: ನೋವು ನಿವಾರಕ ಮಾತ್ರೆ ತೆಗೆದುಕೊಳ್ಳುತ್ತಿದ್ದೀರಾ? ನಿಮ್ಮ ಜೀವಕ್ಕೆ ಅಪಾಯವಿದೆ
ಇದನ್ನು ಮರೆಯಬೇಡಿ;
ಒಂದು ತಿಂಗಳ ವರೆಗೆ ಉಪ್ಪನ್ನು ಸಂಪೂರ್ಣವಾಗಿ ಸೇವನೆ ಮಾಡದಿರುವುದು ದೇಹಕ್ಕೆ ಹಾನಿಕಾರಕವಾಗಿದೆ. ಹಾಗಾಗಿ ಭವಿಷ್ಯದಲ್ಲಿ ಉಂಟಾಗುವ ಪರಿಣಾಮಗಳನ್ನು ಅರ್ಥಮಾಡಿಕೊಳ್ಳಬೇಕು. ಇದಲ್ಲದೆ, ಈ ರೀತಿ ನಿರ್ಧಾರ ತೆಗೆದುಕೊಳ್ಳುವ ಮೊದಲು ನಿಮ್ಮ ವೈದ್ಯರು ಮತ್ತು ಆಹಾರ ತಜ್ಞರ ಅಭಿಪ್ರಾಯ ತೆಗೆದುಕೊಳ್ಳುವುದು ಸೂಕ್ತ. ಉಪ್ಪಿನಲ್ಲಿ ಸೋಡಿಯಂ ಅಂಶವಿರುತ್ತದೆ. ಇದು ನಮ್ಮ ದೇಹಕ್ಕೆ ಅತ್ಯಗತ್ಯವಾದ ಪೋಷಕಾಂಶವಾಗಿದೆ. ಅದರ ಕೊರತೆ ಒಳ್ಳೆಯದಲ್ಲ. ಅದಕ್ಕಾಗಿಯೇ ಇದನ್ನು ಸೀಮಿತ ಪ್ರಮಾಣದಲ್ಲಿ ಸೇವನೆ ಮಾಡುವುದು ಒಳ್ಳೆಯದು.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ