
ದಿನದಿಂದ ದಿನಕ್ಕೆ ಬದಲಾಗುತ್ತಿರುವ ಹವಾಮಾನದಲ್ಲಿ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಂಡುಬರುವುದು ಸಾಮಾನ್ಯ. ಅವುಗಳಲ್ಲಿ ಹೊಟ್ಟೆ ಉಬ್ಬರ, ಗ್ಯಾಸ್ಟ್ರಿಕ್ ಹಾಗೂ ಮಲಬದ್ಧತೆ (Constipation) ಸಮಸ್ಯೆಗಳು ಕೂಡ ಒಂದು. ಸಾಮಾನ್ಯವಾಗಿ ಇಂತಹ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತದೆ. ಅದರಲ್ಲಿಯೂ ಉಷ್ಣತೆ ಹೆಚ್ಚಿದ್ದಾಗ ದೇಹದಲ್ಲಿ ನೀರಿನ ಕೊರತೆ ಉಂಟಾಗಿ ಮಲ ವಿಸರ್ಜನೆ ಕಷ್ಟಕರವಾಗಬಹುದು. ಇದರ ಪರಿಣಾಮವಾಗಿ ದೇಹದಲ್ಲಿ ದೌರ್ಬಲ್ಯ, ಅಸ್ವಸ್ಥತೆ ಮತ್ತು ದಣಿವು ಕಾಣಿಸಿಕೊಳ್ಳಬಹುದು. ತಜ್ಞರ ಪ್ರಕಾರ, ದೇಹವು ಹೆಚ್ಚು ಬೆವರುವವರು ಸಾಕಷ್ಟು ನೀರು ಕುಡಿಯದಿದ್ದರೆ ದೇಹವು ತನ್ನಲ್ಲಿರುವ ನೀರನ್ನೇ ಹೀರಿಕೊಳ್ಳುತ್ತದೆ. ಇದರಿಂದ ಮಲ ಗಟ್ಟಿಯಾಗುತ್ತದೆ ಮತ್ತು ಮಲ ವಿಸರ್ಜನೆ ವೇಳೆ ತೊಂದರೆ ಉಂಟಾಗುತ್ತದೆ. ಹಾಗಾದರೆ ಮಲಬದ್ಧತೆಯ ಲಕ್ಷಣಗಳು ಹೇಗಿರುತ್ತವೆ, ಈ ಸಮಸ್ಯೆ ತಡೆಗಟ್ಟಲು ಯಾವ ರೀತಿಯ ಆಹಾರ ಸೇವನೆ ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
ನೀರಿನ ಕೊರತೆ: ಸಾಕಷ್ಟು ನೀರು ಕುಡಿಯದಿದ್ದರೆ ದೇಹದಲ್ಲಿ ಡೀಹೈಡ್ರೇಶನ್ ಉಂಟಾಗುತ್ತದೆ. ಇದು ಮಲಬದ್ಧತೆಗೆ ಪ್ರಮುಖ ಕಾರಣವಾಗಿದೆ.
ಫೈಬರ್ ಆಹಾರದ ಕೊರತೆ: ಹಣ್ಣು, ತರಕಾರಿ ಮತ್ತು ಪೌಷ್ಟಿಕ ಆಹಾರ ಕಡಿಮೆ ಸೇವಿಸಿದರೆ ಜೀರ್ಣಕ್ರಿಯೆ ನಿಧಾನವಾಗಬಹುದು.
ಜಂಕ್ ಫುಡ್ ಸೇವನೆ: ಹೆಚ್ಚು ಎಣ್ಣೆ, ಮಸಾಲೆ ಮತ್ತು ಪ್ರಾಸೆಸ್ಡ್ ಆಹಾರ ಸೇವಿಸುವುದರಿಂದ ಹೊಟ್ಟೆ ಸಮಸ್ಯೆಗಳು ಹೆಚ್ಚಾಗಬಹುದು.
ವ್ಯಾಯಾಮದ ಕೊರತೆ: ತೀವ್ರ ಬಿಸಿಲಿನ ಕಾರಣದಿಂದ ಅನೇಕರು ವ್ಯಾಯಾಮ ಅಥವಾ ನಡೆಯುವ ಅಭ್ಯಾಸವನ್ನು ಕಡಿಮೆ ಮಾಡುತ್ತಾರೆ. ಇದರಿಂದ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುತ್ತದೆ.
ಇದನ್ನೂ ಓದಿ: ಗರ್ಭಾವಸ್ಥೆಯಲ್ಲಿ ಕಂಡುಬರುವ ಮಲಬದ್ಧತೆಗೆ ಇಲ್ಲಿದೆ ಪರಿಹಾರ
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ