ಕಾರಣ ಹೇಳದೆ ರೋಗಿಗಳಿಗೆ ವೈದ್ಯರು ಆ್ಯಂಟಿ ಬಯೋಟಿಕ್ ನೀಡುವಂತಿಲ್ಲ; ಸರ್ಕಾರ ಸೂಚನೆ

ಆ್ಯಂಟಿಮೈಕ್ರೊಬಿಯಲ್​ಗಳನ್ನು ಶಿಫಾರಸು ಮಾಡುವಾಗ ನಿಖರವಾದ ಸೂಚನೆ/ಕಾರಣ/ಸಮರ್ಥನೆಯನ್ನು ಕಡ್ಡಾಯವಾಗಿ ನಮೂದಿಸಬೇಕು" ಎಂದು ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ.

ಕಾರಣ ಹೇಳದೆ ರೋಗಿಗಳಿಗೆ ವೈದ್ಯರು ಆ್ಯಂಟಿ ಬಯೋಟಿಕ್ ನೀಡುವಂತಿಲ್ಲ; ಸರ್ಕಾರ ಸೂಚನೆ
ಆ್ಯಂಟಿಬಯೋಟಿಕ್‌
Follow us
|

Updated on: Jan 18, 2024 | 12:14 PM

ನವದೆಹಲಿ: ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೂ ಆ್ಯಂಟಿ ಬಯೋಟಿಕ್ ಮಾತ್ರೆಗಳನ್ನು ಸೇವಿಸುವವರಿದ್ದಾರೆ. ಆದರೆ, ಇದರಿಂದ ಆರೋಗ್ಯಕ್ಕೆ ಹಲವು ರೀತಿಯ ತೊಂದರೆ ಉಂಟಾಗುತ್ತದೆ. ಹೀಗಾಗಿ, ಆ್ಯಂಟಿಬಯೋಟಿಕ್‌ಗಳ ಮಿತಿಮೀರಿದ ಪ್ರಿಸ್ಕ್ರಿಪ್ಷನ್‌ಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರವು ಸೂಚನೆಯನ್ನು ಹೊರಡಿಸಿದ್ದು, “ವೈದ್ಯರು ರೋಗಿಗಳಿಗೆ ಆ್ಯಂಟಿಬಯೋಟಿಕ್‌ಗಳನ್ನು ತೆಗೆದುಕೊಳ್ಳಲು ಶಿಫಾರಸು ಮಾಡುವಾಗ ಕಡ್ಡಾಯವಾಗಿ ಅದಕ್ಕೆ ಕಾರಣ ಅಥವಾ ಸಮರ್ಥನೆಯನ್ನು ತಿಳಿಸಲೇಬೇಕು” ಎಂದು ಹೇಳಿದೆ.

ಮೂಲಗಳ ಪ್ರಕಾರ, ಆರೋಗ್ಯ ಸೇವೆಗಳ ಮಹಾನಿರ್ದೇಶಕ ಡಾ. ಅತುಲ್ ಗೋಯೆಲ್ ವೈದ್ಯಕೀಯ ಕಾಲೇಜುಗಳಲ್ಲಿನ ಎಲ್ಲಾ ವೈದ್ಯರಿಗೆ ಪತ್ರದಲ್ಲಿ “ಆ್ಯಂಟಿಮೈಕ್ರೊಬಿಯಲ್​ಗಳನ್ನು ಶಿಫಾರಸು ಮಾಡುವಾಗ ನಿಖರವಾದ ಸೂಚನೆ/ಕಾರಣ/ಸಮರ್ಥನೆಯನ್ನು ಕಡ್ಡಾಯವಾಗಿ ನಮೂದಿಸಬೇಕು” ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ: ನಿಮ್ಮ ಲಿವರ್ ಆರೋಗ್ಯಕ್ಕೆ ಆಲ್ಕೋಹಾಲ್​ಗಿಂತ ಹೆಚ್ಚು ಅಪಾಯಕಾರಿ ಆಹಾರಗಳಿವು

ಆ್ಯಂಟಿಮೈಕ್ರೊಬಿಯಲ್‌ಗಳ ದುರ್ಬಳಕೆ ಮತ್ತು ಮಿತಿಮೀರಿದ ಬಳಕೆಯು ರೋಗಕಾರಕಗಳ ಹೊರಹೊಮ್ಮುವಿಕೆಯ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಸರ್ಕಾರದ ಪ್ರಕಾರ, ಆ್ಯಂಟಿಮೈಕ್ರೊಬಿಯಲ್ ರೆಸಿಸ್ಟನ್ಸ್ (AMR) ಜಾಗತಿಕ ಸಾರ್ವಜನಿಕ ಆರೋಗ್ಯ ಆತಂಕಗಳಲ್ಲಿ ಒಂದಾಗಿದೆ. 2019ರಲ್ಲಿ 1.27 ಮಿಲಿಯನ್ ಜಾಗತಿಕ ಸಾವುಗಳಿಗೆ ಬ್ಯಾಕ್ಟೀರಿಯಾದ AMR ನೇರವಾಗಿ ಕಾರಣವಾಗಿದೆ ಎಂದು ಅಂದಾಜಿಸಲಾಗಿದೆ. 4.95 ಮಿಲಿಯನ್ ಸಾವುಗಳು ಔಷಧ ನಿರೋಧಕ ಸೋಂಕುಗಳೊಂದಿಗೆ ಸಂಬಂಧಿಸಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವಾಲಯ ಈ ಸೂಚನೆಯನ್ನು ಹೊರಡಿಸಿದೆ.

ಇದನ್ನೂ ಓದಿ: ನೊಣ ಬಿದ್ದ ಆಹಾರ ಸೇವಿಸುತ್ತೀರಾ?; ನಿಮಗೆ ಗೊತ್ತಿಲ್ಲದ ಸಂಗತಿ ಇಲ್ಲಿದೆ

AMR ನಿರೋಧಕ ಸೂಕ್ಷ್ಮಜೀವಿಗಳಿಂದ ಉಂಟಾಗುವ ಸೋಂಕುಗಳ ಪರಿಣಾಮಕಾರಿ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಗೆ ಅಪಾಯವನ್ನು ಉಂಟುಮಾಡುತ್ತದೆ. ಇದು ದೀರ್ಘಕಾಲದ ಅನಾರೋಗ್ಯ ಮತ್ತು ಸಾವಿನ ಹೆಚ್ಚಿನ ಅಪಾಯವನ್ನು ಉಂಟುಮಾಡುತ್ತದೆ. ಚಿಕಿತ್ಸೆಯ ವೈಫಲ್ಯಗಳು ಸಹ ದೀರ್ಘಾವಧಿಯ ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತವೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ