ಬೊಜ್ಜಿನಿಂದ ಈ ಕ್ಯಾನ್ಸರ್ ಅಪಾಯ ಹೆಚ್ಚಾಗಬಹುದು; ಸಂಶೋಧನೆಯಿಂದ ಬಹಿರಂಗ
ಇತ್ತೀಚಿನ ಸಂಶೋಧನೆಯೊಂದು ಬೊಜ್ಜಿನಿಂದಾಗಿ ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ಅಪಾಯವು 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಶೇಕಡಾ 20 ರಷ್ಟು ಹೆಚ್ಚಾಗುತ್ತಿದೆ ಎಂಬುದನ್ನು ಬಹಿರಂಗ ಪಡಿಸಿದೆ. ಓಹಿಯೋ ಸ್ಟೇಟ್ ಯೂನಿವರ್ಸಿಟಿ ವೆಕ್ಸ್ಲರ್ ಮೆಡಿಕಲ್ ಸೆಂಟರ್ ನ ಸಂಶೋಧಕರ ಪ್ರಕಾರ, ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ಬಗ್ಗೆ ಜನರಿಗೆ ಅಷ್ಟಾಗಿ ತಿಳಿದಿಲ್ಲ. ಅದರಲ್ಲಿಯೂ ಈ ರೋಗವು ವಯಸ್ಸಾದವರ ಮೇಲೆ ಮಾತ್ರ ಪರಿಣಾಮ ಬೀರುತ್ತದೆ ಎಂದು ಅನೇಕ ಜನರು ನಂಬಿಕೊಂಡಿದ್ದಾರೆ. ಆದರೆ ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ಪ್ರಮಾಣವು ಪ್ರತಿವರ್ಷ ಶೇಕಡಾ 1 ರಷ್ಟು ಹೆಚ್ಚುತ್ತಿದೆ. 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಪ್ರಕರಣಗಳು ಸಾಮಾನ್ಯವಾಗುತ್ತಿವೆ ಎಂದು ಅಧ್ಯಯನವು ಬಹಿರಂಗಪಡಿಸಿದೆ.
ಇತ್ತೀಚಿನ ದಿನಗಳಲ್ಲಿ ಅನೇಕರು ಬೊಜ್ಜಿನಿಂದ ಬಳಲುತ್ತಿದ್ದಾರೆ. ದೈಹಿಕ ಚಟುವಟಿಕೆಯ ಕೊರತೆ, ಕಳಪೆ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಇವೆಲ್ಲವೂ ಬೊಜ್ಜಿಗೆ ಕಾರಣವಾಗುತ್ತದೆ. ಈ ತೂಕ ಹೆಚ್ಚಳವು ಅನೇಕ ರೀತಿಯ ಕಾಯಿಲೆಗಳನ್ನು ಆಹ್ವಾನಿಸುತ್ತದೆ ಎಂದು ತಜ್ಞರು ಹೇಳುತ್ತಾರೆ. ಆದರೆ ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ (pancreatic cancer) ವಯಸ್ಸಿನಿಂದ ಮಾತ್ರವಲ್ಲ, ನೀವು ನಡೆಸುತ್ತಿರುವ ಜೀವನಶೈಲಿಯಿಂದಲೂ ಪರಿಣಾಮ ಬೀರುತ್ತದೆ. ಮೇದೋಜ್ಜೀರಕ ಗ್ರಂಥಿಯಲ್ಲಿ ಪ್ರಾರಂಭವಾಗುವ ಕ್ಯಾನ್ಸರ್ ಅನ್ನು ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ಎಂದು ಕರೆಯಲಾಗುತ್ತದೆ. ಈ ಗ್ರಂಥಿ ದೇಹದ ಪ್ರಮುಖ ಭಾಗವಾಗಿದ್ದು ಆಹಾರದ ಜೀರ್ಣಕ್ರಿಯೆಗೆ ಸಹಾಯ ಮಾಡುವ ಮತ್ತು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಈ ಭಾಗದಲ್ಲಿ ಉಂಟಾಗುವ ಕ್ಯಾನ್ಸರ್ ತುಂಬಾ ಗಂಭಿರ ಪರಿಣಾಮವನ್ನು ಉಂಟು ಮಾಡುತ್ತದೆ. ಅದಲ್ಲದೆ ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ಎಲ್ಲಾ ಸಾಮಾನ್ಯ ಕ್ಯಾನ್ಸರ್‌ಗಳಿಗಿಂತ ಕಡಿಮೆ ಬದುಕುಳಿಯುವಿಕೆಯ ಪ್ರಮಾಣವನ್ನು ಹೊಂದಿದೆ. ಅದಲ್ಲದೆ ಈ ಕ್ಯಾನ್ಸರ್ ಬರುವುದಕ್ಕೆ ಬೊಜ್ಜು ಕೂಡ ಒಂದು ಕಾರಣ ಎಂದು ತಜ್ಞರು ಹೇಳುತ್ತಾರೆ. ಅದರಲ್ಲಿಯೂ ಯುವಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಜೊತೆಗೆ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು ಎಂದು ಹೇಳುತ್ತಾರೆ.
ಇತ್ತೀಚಿನ ಸಂಶೋಧನೆಯೊಂದು ಬೊಜ್ಜಿನಿಂದಾಗಿ ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ಅಪಾಯವು 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಶೇಕಡಾ 20 ರಷ್ಟು ಹೆಚ್ಚಾಗುತ್ತಿದೆ ಎಂಬುದನ್ನು ಬಹಿರಂಗ ಪಡಿಸಿದೆ. ಓಹಿಯೋ ಸ್ಟೇಟ್ ಯೂನಿವರ್ಸಿಟಿ ವೆಕ್ಸ್ಲರ್ ಮೆಡಿಕಲ್ ಸೆಂಟರ್ ನ ಸಂಶೋಧಕರ ಪ್ರಕಾರ, ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ಬಗ್ಗೆ ಜನರಿಗೆ ಅಷ್ಟಾಗಿ ತಿಳಿದಿಲ್ಲ. ಅದರಲ್ಲಿಯೂ ಈ ರೋಗವು ವಯಸ್ಸಾದವರ ಮೇಲೆ ಮಾತ್ರ ಪರಿಣಾಮ ಬೀರುತ್ತದೆ ಎಂದು ಅನೇಕ ಜನರು ನಂಬಿಕೊಂಡಿದ್ದಾರೆ. ಆದರೆ ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ಪ್ರಮಾಣವು ಪ್ರತಿವರ್ಷ ಶೇಕಡಾ 1 ರಷ್ಟು ಹೆಚ್ಚುತ್ತಿದೆ. 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಪ್ರಕರಣಗಳು ಸಾಮಾನ್ಯವಾಗುತ್ತಿವೆ ಎಂದು ಅಧ್ಯಯನವು ಬಹಿರಂಗಪಡಿಸಿದೆ.
ಅಧ್ಯಯನ ಹೇಳುವುದೇನು?
ಸಂಶೋಧಕರು ಈ ವರ್ಷ ಅಕ್ಟೋಬರ್ 4 ರಿಂದ 7 ರವರೆಗೆ ಯುಎಸ್ನಲ್ಲಿ 1,004 ಜನರನ್ನು ಸಮೀಕ್ಷೆ ಮಾಡಿದ್ದಾರೆ. ಇದರಲ್ಲಿ ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ಅಪಾಯದ ಅಂಶಗಳ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗಿದ್ದು. 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅರ್ಧಕ್ಕಿಂತ ಹೆಚ್ಚು (53 ಪ್ರತಿಶತ) ವಯಸ್ಕರಲ್ಲಿ ರೋಗದ ಆರಂಭಿಕ ರೋಗಲಕ್ಷಣಗಳನ್ನು ಕಂಡುಬಂದಿರುವುದನ್ನು ಬಹಿರಂಗ ಪಡಿಸಲಾಗಿದೆ. ಅದರಲ್ಲಿ ಮೂರನೇ ಒಂದು ಭಾಗದಷ್ಟು (37 ಪ್ರತಿಶತ) ಜನರು ತಮ್ಮ ಪರಿಸ್ಥಿತಿ ಸುಧಾರಿಸಿಕೊಳ್ಳಲು ನಮ್ಮಿಂದ ಏನೂ ಮಾಡಲು ಸಾಧ್ಯವಿಲ್ಲ ಎಂದು ನಂಬಿದ್ದಾರೆ.
ಅರಿವಿನ ಕೊರತೆ: ಈ ಅಧ್ಯಯನದ ಪ್ರಕಾರ ಮೂರನೇ ಒಂದು ಭಾಗದಷ್ಟು (33 ಪ್ರತಿಶತ) ವೃದ್ಧರು ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ಬರುವ ಅಪಾಯದಲ್ಲಿದ್ದಾರೆ. ಇದನ್ನು ಕಡಿಮೆ ಮಾಡಿಕೊಳ್ಳುವ ಮೊದಲ ಹೆಜ್ಜೆ ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳುವುದು. ಏಕೆಂದರೆ ದೇಹದ ಬೊಜ್ಜು ಈ ಕ್ಯಾನ್ಸರ್ ಅಪಾಯವನ್ನು ಶೇಕಡಾ 20 ರಷ್ಟು ಹೆಚ್ಚಿಸುತ್ತದೆ.
ಜೆನೆಟಿಕ್ಸ್, ಜೀವನಶೈಲಿ ಅಂಶಗಳು: ಅಮೇರಿಕನ್ ಕ್ಯಾನ್ಸರ್ ಸೊಸೈಟಿ (ಎಸಿಎಸ್) ಪ್ರಕಾರ, ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ಗಳಲ್ಲಿ ಕೇವಲ 10 ಪ್ರತಿಶತದಷ್ಟು ಮಾತ್ರ ಆನುವಂಶಿಕ ಅಪಾಯದೊಂದಿಗೆ ಸಂಬಂಧ ಹೊಂದಿವೆ, ಆದರೆ ನೀವು ಸಾಧ್ಯವಾದಷ್ಟು ಜೀವನಶೈಲಿಯನ್ನು ಸುಧಾರಿಸಬಹುದು. ಸ್ಥೂಲಕಾಯತೆಯನ್ನು ಕಡಿಮೆ ಮಾಡಲು ಅನೇಕ ಜನರಿಗೆ ಸಾಧ್ಯವಿದೆ. ಇದು ಟೈಪ್ 2 ಮಧುಮೇಹ, ಇತರ ಕ್ಯಾನ್ಸರ್ ಮತ್ತು ಹೃದ್ರೋಗಗಳನ್ನು ತಡೆಯುತ್ತದೆ ಮತ್ತು ಆ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ.
ಇದನ್ನೂ ಓದಿ: ಟಿಬಿ ರೋಗ ಕೋವಿಡ್ ಗಿಂತ ಅಪಾಯಕಾರಿ; ವರದಿಯಿಂದ ಬಹಿರಂಗ
ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ನ ಲಕ್ಷಣಗಳು;
ವಾಕರಿಕೆ, ಉಬ್ಬರ, ಆಯಾಸ, ಕಾಮಾಲೆ, ಹಸಿವಾಗದಿರುವುದು ಮತ್ತು ತೀವ್ರ ನೋವು. ಈ ರೀತಿಯ ಯಾವುದೇ ರೋಗಲಕ್ಷಣಗಳು ಕಂಡು ಬಂದರೂ ಅದನ್ನು ನಿರ್ಲಕ್ಷ್ಯ ಮಾಡದೆಯೇ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳುವುದು ಒಳ್ಳೆಯದು.
ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ