AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cholesterol tips: ಡಾರ್ಕ್​​ ಚಾಕೊಲೇಟ್ ತಿನ್ನುವುದರಿಂದ ಕಡಿಮೆಯಾಗುತ್ತಾ ಕೊಲೆಸ್ಟ್ರಾಲ್? ತಜ್ಞರ ಸಲಹೆ ಏನು?

ಡಾರ್ಕ್ ಚಾಕಲೇಟ್​ಗಳನ್ನು ನಿಯಮಿತವಾಗಿ ತಿನ್ನುವುದರಿಂದ ದೇಹದ ತೂಕ ಕಡಿಮೆಯಾಗುವುದಲ್ಲದೆ, ನಮ್ಮ ದೇಹದಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್​ನ್ನು ಕರಗಿಸುತ್ತದೆ.

Cholesterol tips: ಡಾರ್ಕ್​​ ಚಾಕೊಲೇಟ್ ತಿನ್ನುವುದರಿಂದ ಕಡಿಮೆಯಾಗುತ್ತಾ ಕೊಲೆಸ್ಟ್ರಾಲ್? ತಜ್ಞರ ಸಲಹೆ ಏನು?
chocolate
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 09, 2022 | 7:00 AM

Share

ಚಾಕೊಲೇಟ್ ಮಕ್ಕಳಿಗೆ ಮಾತ್ರವಲ್ಲ ಪ್ರತಿಯೊಬ್ಬರಿಗೂ ಇಷ್ಟ. ಇವುಗಳಲ್ಲಿ ಕೆಲವು ಚಾಕೊಲೇಟ್‌ಗಳು ತುಂಬಾ ಆರೋಗ್ಯಕರ. ಎಲ್ಲಾ ವಿಧದ ಚಾಕೊಲೇಟ್ (Chocolate) ಸೇವನೆಯು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ಅದರಲ್ಲೂ ಡಾರ್ಕ್ ಚಾಕಲೇಟ್​ಗಳನ್ನು ನಿಯಮಿತವಾಗಿ ತಿನ್ನುವುದರಿಂದ ದೇಹದ ತೂಕ ಕಡಿಮೆಯಾಗುವುದಲ್ಲದೆ, ನಮ್ಮ ದೇಹದಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್​ನ್ನು (Cholesterol) ಕರಗಿಸುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಸಹ ಸುಧಾರಿಸುತ್ತದೆ. ಡಾರ್ಕ್ ಚಾಕೊಲೇಟ್‌ನಲ್ಲಿರುವ ಫ್ಲೇವನಾಯ್ಡ್‌ಗಳು ದೇಹದಲ್ಲಿನ ಅಪಧಮನಿಗಳು ಮತ್ತು ರಕ್ತನಾಳಗಳ ಕಾರ್ಯನಿರ್ವಹಣೆಯನ್ನು ಸುಧಾರಿಸುತ್ತದೆ. ಹೃದಯಾಘಾತದ ಸಾಧ್ಯತೆಯನ್ನು ಬಹಳ ಮಟ್ಟಿಗೆ ಕಡಿಮೆ ಮಾಡುತ್ತದೆ. ದೇಹಕ್ಕೆ ಕೊಲೆಸ್ಟ್ರಾಲ್ ಅತ್ಯಗತ್ಯ. ಆದರೆ ನಮ್ಮ ದೇಹಕ್ಕೆ ಯಾವ ಕೊಲೆಸ್ಟ್ರಾಲ್ ಬೇಕು ಎಂದು ತಿಳಿಯಬೇಕು. ಕೊಲೆಸ್ಟ್ರಾಲ್ HDL ಮತ್ತು LDL ಎರಡು ವಿಧಗಳಿವೆ. ಎಚ್‌ಡಿಎಲ್ ಉತ್ತಮ ಕೊಲೆಸ್ಟ್ರಾಲ್ ಮತ್ತು ಎಲ್‌ಡಿಎಲ್ ಕೆಟ್ಟ ಕೊಲೆಸ್ಟ್ರಾಲ್. ಅದೇ ಸಮಯದಲ್ಲಿ ದೇಹದಲ್ಲಿ ಯಾವುದೇ ಕೊಲೆಸ್ಟ್ರಾಲ್ ಮಧ್ಯಮವಾಗಿರಬೇಕು. ಅದು ಮೀರಿದರೆ ಅಪಾಯ ಕಟ್ಟಿಟ್ಟ ಬುತ್ತಿ.

ನಿಮ್ಮ ಒಟ್ಟು ಕೊಲೆಸ್ಟ್ರಾಲ್ 200-239 mg/dL ನಡುವೆ ಇದ್ದರೆ ಅದನ್ನು ಸ್ವಲ್ಪ ಹೆಚ್ಚು ಎಂದು ಪರಿಗಣಿಸಲಾಗುತ್ತದೆ. 240 mg/dL ಗಿಂತ ಹೆಚ್ಚಿನದನ್ನು ಹೆಚ್ಚು ಎಂದು ಪರಿಗಣಿಸಲಾಗುತ್ತದೆ. ನಿಮ್ಮ LDL ಕೊಲೆಸ್ಟ್ರಾಲ್ 130 -159 mg/dL ನಡುವೆ ಇದ್ದರೆ, ಅದನ್ನು ಸ್ವಲ್ಪ ಹೆಚ್ಚು ಎಂದು ಪರಿಗಣಿಸಲಾಗುತ್ತದೆ. ಇದು 160 mg/dL ಗಿಂತ ಹೆಚ್ಚಿದ್ದರೆ ಅದನ್ನು ಹೆಚ್ಚು ಎಂದು ಪರಿಗಣಿಸಲಾಗುತ್ತದೆ. ನಿಮ್ಮ HDL ಕೊಲೆಸ್ಟ್ರಾಲ್ 40 mg/dL ಗಿಂತ ಕಡಿಮೆಯಿದ್ದರೆ ಅದನ್ನು ಕೆಟ್ಟ ಕೊಲೆಸ್ಟ್ರಾಲ್ ಎಂದು  ಪರಿಗಣಿಸಲಾಗುತ್ತದೆ.

ನಮ್ಮ ಜೀವನಶೈಲಿ, ವ್ಯಾಯಾಮ, ಆಹಾರ ಮತ್ತು ಕೆಲವು ಔಷಧಿಗಳು ದೇಹದಲ್ಲಿ ಕೊಲೆಸ್ಟ್ರಾಲ್​ನ್ನು ನಿರ್ಮಿಸುವುದನ್ನು ತಡೆಯಬಹುದು. ಕೊಲೆಸ್ಟ್ರಾಲ್ ಮಟ್ಟವನ್ನು ಸಾಮಾನ್ಯವಾಗಿ ಆಹಾರ ಮತ್ತು ನಿಯಮಿತ ವ್ಯಾಯಾಮದಿಂದ ಸಮತೋಲನಗೊಳಿಸಬಹುದು. ಡಾರ್ಕ್ ಚಾಕೊಲೇಟ್ ತಿನ್ನುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು ಎಂದು ತಜ್ಞರು ಹೇಳುತ್ತಾರೆ.

ಡಾರ್ಕ್ ಚಾಕೊಲೇಟ್‌ನಂತಹ ಕೋಕೋ ಉತ್ಪನ್ನಗಳು 70% ಕ್ಕಿಂತ ಹೆಚ್ಚು ಪಾಲಿಫಿನಾಲ್‌ಗಳನ್ನು ಹೊಂದಿರುತ್ತವೆ. ಇವು ನಮ್ಮ ದೇಹದಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ (HDL) ಹೆಚ್ಚಿಸಲು ಮತ್ತು ನಮ್ಮ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವುದರಿಂದ ರಕ್ತದೊತ್ತಡ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ. ಕೋಕೋ ಪೌಡರ್​ಗಿಂತ ಕೋಕೋ ಪೌಡರ್ ಬಳಸುವುದು ಉತ್ತಮ ಎನ್ನುತ್ತಾರೆ ತಜ್ಞರು. ಏಕೆಂದರೆ ಕೋಕೋ ಪೌಡರ್‌ನಲ್ಲಿ ಪಾಲಿಫಿನಾಲ್‌ಗಳು ಅಧಿಕವಾಗಿರುತ್ತವೆ. ಇದು ಕೊಲೆಸ್ಟ್ರಾಲ್ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎನ್ನುತ್ತಾರೆ ವೈದ್ಯಕೀಯ ತಜ್ಞರು.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ