AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ್ಪನ್ನು ಹೆಚ್ಚಾಗಿ ಸೇವನೆ ಮಾಡುವುದರಿಂದ ಕ್ಯಾಲ್ಸಿಯಂ ಕೊರತೆ ಉಂಟಾಗುತ್ತದೆಯೇ?

ಉಪ್ಪು ಸೇವನೆ ನಮ್ಮ ದೈನಂದಿನ ಆಹಾರದ ಒಂದು ಭಾಗವಾಗಿದೆ, ಆದರೆ ಅದನ್ನು ಅತಿಯಾಗಿ ಸೇವಿಸುವುದರಿಂದ ಆರೋಗ್ಯಕ್ಕೆ ಹಾನಿಯಾಗುತ್ತದೆ ಎಂಬುದು ತಿಳಿದಿರಬಹುದು. ಅದಲ್ಲದೆ ಹೆಚ್ಚು ಉಪ್ಪು ಸೇವಿಸುವುದರಿಂದ ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ಹೆಚ್ಚಾಗಬಹುದು ಎಂದು ಹೇಳೆಲಾಗುತ್ತಿದೆ. ಹಾಗಾದರೆ ಉಪ್ಪು ಮತ್ತು ಕ್ಯಾಲ್ಸಿಯಂ ನಡುವೆ ಇರುವ ಸಂಬಂಧವೇನು, ಯಾರಿಗೆ ಹೆಚ್ಚು ಅಪಾಯ ಮತ್ತು ಇಂತಹ ಸಮಸ್ಯೆಯನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಉಪ್ಪನ್ನು ಹೆಚ್ಚಾಗಿ ಸೇವನೆ ಮಾಡುವುದರಿಂದ ಕ್ಯಾಲ್ಸಿಯಂ ಕೊರತೆ ಉಂಟಾಗುತ್ತದೆಯೇ?
Excess Salt Calcium DeficiencyImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Apr 24, 2026 | 6:18 PM

Share

ಉಪ್ಪು (Salt) ನಮ್ಮ ದೈನಂದಿನ ಆಹಾರದ ಅವಿಭಾಜ್ಯ ಅಂಗವಾಗಿದ್ದರೂ, ಅದನ್ನು ಅತಿಯಾಗಿ ಸೇವಿಸುವುದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬುದು ತಿಳಿದ ವಿಚಾರ. ಹಾಗಾಗಿ ಉಪ್ಪನ್ನು ಇತಿಮಿತಿಯಲ್ಲಿ ಸೇವನೆ ಮಾಡುವುದು ಬಹಳ ಒಳ್ಳೆಯದು ಎಂದು ಹೇಳಲಾಗುತ್ತದೆ. ಆದರೆ ಇತ್ತೀಚಿಗೆ ಹೊಸ ಪ್ರಶ್ನೆಯೊಂದು ಹುಟ್ಟಿಕೊಂಡಿದ್ದು ದೇಹದಲ್ಲಿ ಕ್ಯಾಲ್ಸಿಯಂ (Calcium Deficiency) ಸಮತೋಲನದ ಮೇಲೆ ಉಪ್ಪಿನ ಪ್ರಭಾವ ಹೇಗಿರುತ್ತದೆ ಎಂಬುದು ಹೆಚ್ಚು ಚರ್ಚೆಗೆ ಕಾರಣವಾಗಿದೆ. ಹಾಗಾದರೆ ಉಪ್ಪು ಮತ್ತು ಕ್ಯಾಲ್ಸಿಯಂ ನಡುವೆ ಇರುವ ಸಂಬಂಧವೇನು, ಯಾರಿಗೆ ಹೆಚ್ಚು ಅಪಾಯ ಮತ್ತು ಇಂತಹ ಸಮಸ್ಯೆಯನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಉಪ್ಪು ಮತ್ತು ಕ್ಯಾಲ್ಸಿಯಂ ನಡುವಿನ ಸಂಬಂಧ

ಕ್ಯಾಲ್ಸಿಯಂ ನಮ್ಮ ಎಲುಬು ಮತ್ತು ಹಲ್ಲುಗಳ ಬಲಕ್ಕೆ ಅತ್ಯಂತ ಅಗತ್ಯವಾದ ಖನಿಜವಾಗಿದೆ. ಜೊತೆಗೆ ನರ ಮತ್ತು ಸ್ನಾಯುಗಳ ಸರಿಯಾದ ಕಾರ್ಯನಿರ್ವಹಣೆಗೆ ಇದು ಪ್ರಮುಖವಾಗಿದೆ. ಆದರೆ ಹೆಚ್ಚು ಉಪ್ಪು ಸೇವಿಸಿದಾಗ ದೇಹದಲ್ಲಿ ಖನಿಜಗಳ ಸಮತೋಲನ ವ್ಯತ್ಯಯಗೊಳ್ಳುವ ಸಾಧ್ಯತೆ ಇದೆ. ಕೆಲವು ಅಧ್ಯಯನಗಳ ಪ್ರಕಾರ, ಅಧಿಕ ಉಪ್ಪು ಸೇವನೆಯಿಂದ ಮೂತ್ರದ ಮೂಲಕ ಕ್ಯಾಲ್ಸಿಯಂ ಹೊರಹೋಗುವ ಪ್ರಮಾಣ ಹೆಚ್ಚಾಗಬಹುದು. ಅದಲ್ಲದೆ ದೀರ್ಘಕಾಲ ಉಪ್ಪನ್ನು ಹೆಚ್ಚಾಗಿ ಸೇವಿಸಿದರೆ ಎಲುಬುಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ. ಇದರಿಂದ ಎಲುಬುಗಳು ದುರ್ಬಲವಾಗುವ ಅಪಾಯ ಹೆಚ್ಚಾಗಿರುತ್ತದೆ. ವಿಶೇಷವಾಗಿ ಕ್ಯಾಲ್ಸಿಯಂ ಕೊರತೆಯಿರುವವರಲ್ಲಿ ಈ ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳಬಹುದು.

ಇದನ್ನೂ ಓದಿ: ಹಾಲು ನಿಜವಾಗಿಯೂ ದೇಹದಲ್ಲಿನ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸುತ್ತದೆಯೇ? ಇಲ್ಲಿದೆ ಸ್ಪಷ್ಟ ಮಾಹಿತಿ

ಯಾರು ಹೆಚ್ಚು ಅಪಾಯದಲ್ಲಿದ್ದಾರೆ?

ಹಿರಿಯರು, ಮಹಿಳೆಯರು ಮತ್ತು ಈಗಾಗಲೇ ಕ್ಯಾಲ್ಸಿಯಂ ಕೊರತೆಯಿಂದ ಬಳಲುತ್ತಿರುವವರು ಹೆಚ್ಚು ಎಚ್ಚರಿಕೆಯಿಂದಿರಬೇಕು. ಹಾರ್ಮೋನ್ ಬದಲಾವಣೆಗಳು, ಆಹಾರ ಪದ್ಧತಿ ಸರಿಯಾಗಿ ಪಾಲನೆ ಮಾಡದಿದ್ದವರು ಮತ್ತು ವ್ಯಾಯಾಮದ ಕೊರತೆಯೂ ಈ ಅಪಾಯವನ್ನು ಹೆಚ್ಚಿಸಬಹುದು.

ಹೇಗೆ ನಿಯಂತ್ರಿಸಬೇಕು?

ಉಪ್ಪಿನ ಸೇವನೆಯನ್ನು ನಿಯಂತ್ರಿತ ಮಟ್ಟದಲ್ಲಿ ಇಡುವುದು ಅತ್ಯಂತ ಮುಖ್ಯ. ಹೆಚ್ಚು ಉಪ್ಪು ಇರುವ ಪ್ರೊಸೆಸ್ಡ್ ಆಹಾರಗಳನ್ನು ಕಡಿಮೆ ಮಾಡಬೇಕು. ಜೊತೆಗೆ ಹಾಲು, ಮೊಸರು, ಹಸಿರು ತರಕಾರಿಗಳು ಮುಂತಾದ ಕ್ಯಾಲ್ಸಿಯಂ ಸಮೃದ್ಧ ಆಹಾರಗಳನ್ನು ದಿನನಿತ್ಯದ ಆಹಾರದಲ್ಲಿ ಸೇರಿಸಿಕೊಳ್ಳಬೇಕು. ಉಪ್ಪನ್ನು ಮಿತ ಪ್ರಮಾಣದಲ್ಲಿ ಬಳಸುವುದು ಮತ್ತು ಸಮತೋಲನ ಆಹಾರ ಪದ್ಧತಿಯನ್ನು ಅನುಸರಿಸುವುದು ದೇಹದ ಖನಿಜ ಸಮತೋಲನ ಕಾಪಾಡಲು ಸಹಾಯಕ. ಸರಿಯಾದ ಜೀವನಶೈಲಿಯ ಮೂಲಕ ಕ್ಯಾಲ್ಸಿಯಂ ಕೊರತೆಯ ಅಪಾಯವನ್ನು ಕಡಿಮೆ ಮಾಡಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ