AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಯಾಗಿ ಸನ್‌ಸ್ಕ್ರೀನ್ ಬಳಕೆ ಮಾಡುವುದರಿಂದಲೂ ವಿಟಮಿನ್ ಡಿ ಕೊರತೆ ಉಂಟಾಗುತ್ತದೆಯೇ?

ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ವಿಟಮಿನ್ ಡಿ ಕೊರತೆಯಿಂದ ಬಳಲುತ್ತಿದ್ದಾರೆ. ಕೆಲವರು ನಿಯಮಿತವಾಗಿ ಸೂರ್ಯನ ಬೆಳಕಿನಲ್ಲಿ ಇದ್ದರೂ ಕೂಡ ವಿಟಮಿನ್ ಡಿ ಕೊರತೆಯಿಂದ ಬಳಲುತ್ತಾರೆ. ಇದಕ್ಕೆ ಚರ್ಮದ ಬಣ್ಣ, ವಯಸ್ಸು, ದೇಹದ ಸ್ಥಿತಿ ಮತ್ತು ವಿಟಮಿನ್ ಶೋಷಣೆಯ ಸಾಮರ್ಥ್ಯ ಕಾರಣವಾಗಬಹುದು. ಹಾಗಾದರೆ ವಿಟಮಿನ್ ಡಿ ಕೊರತೆ ಉಂಟಾಗುವುದಕ್ಕೆ ಕಾರಣವೇನು, ಅತಿಯಾಗಿ ಸನ್‌ಸ್ಕ್ರೀನ್ ಬಳಕೆ ಮಾಡುವುದರಿಂದ ಈ ರೀತಿಯ ಸಮಸ್ಯೆ ಉಂಟಾಗುತ್ತದೆಯೇ, ವಿಟಮಿನ್ ಡಿ ಹೆಚ್ಚಿಸಿಕೊಳ್ಳಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಅತಿಯಾಗಿ ಸನ್‌ಸ್ಕ್ರೀನ್ ಬಳಕೆ ಮಾಡುವುದರಿಂದಲೂ ವಿಟಮಿನ್ ಡಿ ಕೊರತೆ ಉಂಟಾಗುತ್ತದೆಯೇ?
Vitamin D DeficiencyImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 04, 2026 | 7:56 PM

Share

ಇಂದಿನ ಜೀವನಶೈಲಿಯಲ್ಲಿ ವಿಟಮಿನ್ ಡಿ (Vitamin D) ಕೊರತೆ ಸಾಮಾನ್ಯ ಸಮಸ್ಯೆಯಾಗುತ್ತಿದೆ. ಮನೆಯೊಳಗೆ ಹೆಚ್ಚು ಸಮಯ ಕಳೆಯುವುದು, ಸೂರ್ಯನ ಬೆಳಕಿಗೆ ಕಡಿಮೆ ಒಡ್ಡಿಕೊಳ್ಳುವುದು ಮತ್ತು ಅಸಮತೋಲನ ಆಹಾರ ಪದ್ಧತಿ ಈ ಸಮಸ್ಯೆಗೆ ಪ್ರಮುಖ ಕಾರಣಗಳಾಗಿವೆ. ತಜ್ಞರ ಪ್ರಕಾರ, ಸೂರ್ಯನ ಬೆಳಕು ವಿಟಮಿನ್ ಡಿಗೆ ಪ್ರಮುಖ ಮೂಲವಾದರೂ, ಎಲ್ಲರಿಗೂ ಇದು ಸಾಕಾಗುವುದಿಲ್ಲ. ಕೆಲವರು ನಿಯಮಿತವಾಗಿ ಸೂರ್ಯನ ಬೆಳಕಿನಲ್ಲಿ ಇದ್ದರೂ ಕೂಡ ವಿಟಮಿನ್ ಡಿ ಕೊರತೆಯಿಂದ ಬಳಲುತ್ತಾರೆ. ಇದಕ್ಕೆ ಚರ್ಮದ ಬಣ್ಣ, ವಯಸ್ಸು, ದೇಹದ ಸ್ಥಿತಿ ಮತ್ತು ವಿಟಮಿನ್ ಶೋಷಣೆಯ ಸಾಮರ್ಥ್ಯ ಕಾರಣವಾಗಬಹುದು. ಸರಿಯಾದ ಸಮಯದಲ್ಲಿ ಸೂರ್ಯನ ಬೆಳಕನ್ನು ಪಡೆಯದಿದ್ದರೆ ಅದರ ಪ್ರಯೋಜನ ಕಡಿಮೆಯಾಗುತ್ತದೆ. ಹಾಗಾದರೆ ವಿಟಮಿನ್ ಡಿ ಕೊರತೆ ಉಂಟಾಗುವುದಕ್ಕೆ ಕಾರಣವೇನು, ಅತಿಯಾಗಿ ಸನ್‌ಸ್ಕ್ರೀನ್ (Sunscreen) ಬಳಕೆ ಮಾಡುವುದರಿಂದ ಈ ರೀತಿಯ ಸಮಸ್ಯೆ ಉಂಟಾಗುತ್ತದೆಯೇ, ವಿಟಮಿನ್ ಡಿ ಹೆಚ್ಚಿಸಿಕೊಳ್ಳಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ವಿಟಮಿನ್ ಡಿ ಕೊರತೆ ಉಂಟಾಗುವುದಕ್ಕೆ ಕಾರಣ:

ಅತಿಯಾಗಿ ಸನ್‌ಸ್ಕ್ರೀನ್ ಬಳಕೆ, ಮಾಲಿನ್ಯ ಮತ್ತು ಜೀವನಶೈಲಿಯ ಬದಲಾವಣೆಗಳು ಸೂರ್ಯನ ಕಿರಣಗಳಿಂದ ದೊರೆಯುವುದನ್ನು ಕಡಿಮೆ ಮಾಡುತ್ತವೆ. ಜೊತೆಗೆ, ದೇಹದಲ್ಲಿ ವಿಟಮಿನ್ ಡಿ ಸರಿಯಾಗಿ ಸಿಗದಿದ್ದರೂ ಕೊರತೆ ಉಂಟಾಗಬಹುದು. ಆದ್ದರಿಂದ ಕೇವಲ ಸೂರ್ಯನ ಬೆಳಕಿನ ಮೇಲೆ ಅವಲಂಬಿಸಿಕೊಳ್ಳುವುದು ಸಾಕಾಗುವುದಿಲ್ಲ.

ಇದನ್ನೂ ಓದಿ: ಡಾರ್ಕ್ ಸ್ಕಿನ್ ಮತ್ತು ಒಬೆಸಿಟಿ ಇರುವವರಲ್ಲಿ ವಿಟಮಿನ್ ಡಿ ಕೊರತೆ ಹೆಚ್ಚಾಗಿ ಕಂಡು ಬರುವುದಕ್ಕೆ ಕಾರಣ ಏನ್ ಗೊತ್ತಾ?

ವಿಟಮಿನ್ ಡಿ ಹೆಚ್ಚಿಸಲು ಏನು ಮಾಡಬೇಕು?

ಸಮತೋಲನ ಆಹಾರ ಬಹಳ ಮುಖ್ಯ. ಹಾಲು, ಮೊಸರು, ಮೊಟ್ಟೆ, ಮೀನು ಮತ್ತು ಫೋರ್ಟಿಫೈಡ್ ಆಹಾರಗಳನ್ನು ದಿನನಿತ್ಯದ ಆಹಾರದಲ್ಲಿ ಸೇರಿಸಬೇಕು. ಅಗತ್ಯವಿದ್ದರೆ ವೈದ್ಯರ ಸಲಹೆಯಂತೆ ಸಪ್ಲಿಮೆಂಟ್ಸ್ ತೆಗೆದುಕೊಳ್ಳಬಹುದು. ನಿಯಮಿತ ವ್ಯಾಯಾಮ ಮತ್ತು ಸಕ್ರಿಯ ಜೀವನಶೈಲಿಯೂ ಸಹ ದೇಹದ ಆರೋಗ್ಯವನ್ನು ಉತ್ತಮವಾಗಿಡಲು ಸಹಕಾರಿ. ಈ ವಿಟಮಿನ್ ಡಿ ಕೊರತೆಯನ್ನು ನಿರ್ಲಕ್ಷ್ಯ ಮಾಡುವುದು ಸರಿಯಲ್ಲ. ಸರಿಯಾದ ಆಹಾರ, ಜೀವನಶೈಲಿ ಮತ್ತು ವೈದ್ಯಕೀಯ ಸಲಹೆಯೊಂದಿಗೆ ಮಾತ್ರ ಈ ಕೊರತೆಯನ್ನು ನಿಯಂತ್ರಿಸಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಐಷಾರಾಮಿ ಪ್ರವಾಸಿ ರೈಲಿನಲ್ಲಿ ಪ್ರಯಾಣಿಸಿ ಖುಷಿ ಹಂಚಿಕೊಂಡ ಸಿಎಂ ಡಿಕೆಶಿ !
ಐಷಾರಾಮಿ ಪ್ರವಾಸಿ ರೈಲಿನಲ್ಲಿ ಪ್ರಯಾಣಿಸಿ ಖುಷಿ ಹಂಚಿಕೊಂಡ ಸಿಎಂ ಡಿಕೆಶಿ !