World Milk Day 2023: ಕತ್ತೆ ಹಾಲಿನಿಂದ ಆರೋಗ್ಯದ ಮೇಲಾಗುವ ಪ್ರಯೋಜನಗಳು ಇಲ್ಲಿವೆ

ಕತ್ತೆ ಹಾಲು ನಿಮ್ಮ ಚರ್ಮ ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಪ್ರಯೋಜನವನ್ನು ನೀಡುತ್ತದೆ ಎಂದು ಅನೇಕ ಅಧ್ಯಯನಗಳು ತೋರಿಸಿವೆ. ಹಸು ಆಡು, ಕುರಿ, ಎಮ್ಮೆ ಮತ್ತು ಒಂಟೆಗಳ ಹಾಲಿಗೆ ಹೋಲಿಸಿದರೆ, ಕತ್ತೆ ಹಾಲು ಮಾನವನ ಎದೆ ಹಾಲನ್ನು ಹೋಲುತ್ತದೆ.

World Milk Day 2023: ಕತ್ತೆ ಹಾಲಿನಿಂದ ಆರೋಗ್ಯದ ಮೇಲಾಗುವ ಪ್ರಯೋಜನಗಳು ಇಲ್ಲಿವೆ
Donkey Milk health benefits
Follow us
ಅಕ್ಷತಾ ವರ್ಕಾಡಿ
|

Updated on:Jun 01, 2023 | 1:28 PM

ಕತ್ತೆ ಹಾಲು ನಿಮ್ಮ ಚರ್ಮ ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಪ್ರಯೋಜನವನ್ನು ನೀಡುತ್ತದೆ ಎಂದು ಅನೇಕ ಅಧ್ಯಯನಗಳು ತೋರಿಸಿವೆ. ಹಸು ಆಡು, ಕುರಿ, ಎಮ್ಮೆ ಮತ್ತು ಒಂಟೆಗಳ ಹಾಲಿಗೆ ಹೋಲಿಸಿದರೆ, ಕತ್ತೆ ಹಾಲು ಮಾನವನ ಎದೆ ಹಾಲನ್ನು ಹೋಲುತ್ತದೆ. ಆದ್ದರಿಂದ ಇದನ್ನು 19ನೇ ಶತಮಾನದಲ್ಲಿ ಅನಾಥ ಶಿಶುಗಳಿಗೆ ತಾಯಿಯ ಎದೆಹಾಲಿನ ರೂಪದಲ್ಲಿ ನೀಡಲಾಗುತ್ತಿತ್ತು ಎಂದು ಹೆಲ್ತ್​​ ಲೈನ್​​​ ಡಾಟ್​​​ ಕಾಮ್​​​ನಲ್ಲಿ ಪ್ರಕಟವಾದ ಲೇಖನದಲ್ಲಿ ಉಲ್ಲೇಖಿಸಲಾಗಿದೆ. ಆದ್ದರಿಂದ ಕತ್ತೆ ಹಾಲಿನಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂದು ಇಲ್ಲಿ ತಿಳಿದುಕೊಳ್ಳಿ.

ಕತ್ತೆ ಹಾಲಿನ ಕೆಲವು ಆರೋಗ್ಯ ಪ್ರಯೋಜನಗಳು ಇಲ್ಲಿವೆ:

ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ:

ವಿಟಮಿನ್‌ಗಳು, ಖನಿಜ ಮತ್ತು ಪ್ರಮುಖ ಕೊಬ್ಬಿನಾಮ್ಲಗಳು ಕತ್ತೆ ಹಾಲಿನಲ್ಲಿ ಹೇರಳವಾಗಿವೆ. ಇದು ಬಲವಾದ ಮೂಳೆಗಳು ಮತ್ತು ಆರೋಗ್ಯಕರ ಹಲ್ಲುಗಳಿಗೆ ಅಗತ್ಯವಾದ ಕ್ಯಾಲ್ಸಿಯಂ, ರಂಜಕ ಮತ್ತು ಪೊಟ್ಯಾಸಿಯಮ್ ಅನ್ನು ಹೊಂದಿರುತ್ತದೆ.

ನೈಟ್ರಿಕ್ ಆಕ್ಸೈಡ್ ಉತ್ಪಾದನೆಯನ್ನು ಉತ್ತೇಜಿಸುತ್ತದೆ:

ಕತ್ತೆ ಹಾಲು ನೈಟ್ರಿಕ್ ಆಕ್ಸೈಡ್ ಉತ್ಪಾದನೆಗೆ ಸಹಾಯ ಮಾಡುತ್ತದೆ. ಈ ರಾಸಾಯನಿಕವು ನಿಮ್ಮ ರಕ್ತನಾಳಗಳನ್ನು ಹಿಗ್ಗಿಸುತ್ತದೆ, ಪರಿಚಲನೆ ಸುಧಾರಿಸುತ್ತದೆ ಮತ್ತು ನಿಮ್ಮ ಅಪಧಮನಿಗಳಲ್ಲಿ ರಕ್ತ ಪರಿಚಲನೆ ಸರಾಗವಾಗಲು ಸಹಕರಿಸುತ್ತದೆ.

ಸೌಂದರ್ಯವರ್ಧಕಗಳಲ್ಲಿ ಬಳಕೆ:

ಪ್ರಾಚೀನ ಕಾಲದಿಂದಲೂ ಕತ್ತೆ ಹಾಲನ್ನು ಸೌಂದರ್ಯ ಚಿಕಿತ್ಸೆಯಾಗಿ ಬಳಸಲಾಗುತ್ತಿದೆ. ಚರ್ಮದ ಆರೈಕೆ ಕತ್ತೆ ಹಾಲು ಉತ್ತಮ ಔಷಧಿಯಾಗಿರುವುದರಿಂದ ಸೌಂದರ್ಯವರ್ಧಕ ಉತ್ಪನ್ನಗಳಲ್ಲಿ ಇದನ್ನು ಬಳಸುವುದುಂಟು.

ಇದನ್ನೂ ಓದಿ: World Milk Day 2023: ಆಚರಣೆ ಏಕೆ? ಏನಿದರ ಮಹತ್ವ? ಈ ದಿನದ ಇತಿಹಾಸ ತಿಳಿದುಕೊಳ್ಳಿ..

ಅಲರ್ಜಿ ಸಮಸ್ಯೆ ನಿವಾರಣೆ:

ಕತ್ತೆ ಹಾಲು ಮಾನವನ ಎದೆ ಹಾಲನ್ನು ಹೋಲುತ್ತದೆ, ಇದು ಹಸುವಿನ ಹಾಲಿಗೆ ಉತ್ತಮ ಪರ್ಯಾಯವಾಗಿದೆ. ಕಡಿಮೆಯಾದ ಅಲರ್ಜಿಯ ಅಪಾಯದಿಂದಾಗಿ ನವಜಾತ ಶಿಶುಗಳಿಗೆ ಕತ್ತೆ ಹಾಲನ್ನು ದೀರ್ಘಕಾಲದವರೆಗೆ ನೀಡಲಾಗುತ್ತದೆ. ನೀವು ಲ್ಯಾಕ್ಟೋಸ್ ಅಸಹಿಷ್ಣುತೆ ಹೊಂದಿದ್ದರೆ ನೀವು ಕತ್ತೆಯ ಹಾಲನ್ನು ಸೇವಿಸಬಹುದು.

ಮಧುಮೇಹಿಗಳಿಗೆ ಪ್ರಯೋಜನಕಾರಿ:

ಕತ್ತೆ ಹಾಲು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎಂದು ಭಾವಿಸಲಾಗಿದೆ ಮತ್ತು ಕೆಲವು ಅಧ್ಯಯನಗಳು ಟೈಪ್ II ಮಧುಮೇಹಕ್ಕೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ ಎಂದು ನಂಬುತ್ತಾರೆ! ಇದು ಗ್ಲೂಕೋಸ್ ಚಯಾಪಚಯ ಮತ್ತು ಇನ್ಸುಲಿನ್ ಪ್ರತಿರೋಧಕ್ಕೆ ಸಹಾಯ ಮಾಡಬಹುದು.

ಕತ್ತೆ ಹಾಲಿನ ಅನಾನುಕೂಲಗಳು:

ಕತ್ತೆ ಹಾಲಿನ ಒಂದು ದೊಡ್ಡ ಅನಾನುಕೂಲವೆಂದರೆ ಇದು ಸಾಕಷ್ಟು ದುಬಾರಿಯಾಗಿದೆ. ಇದಲ್ಲದೇ ಈ ಹಾಲು ಕೆಲವು ದೇಶಗಳಲ್ಲಿ ಮಾತ್ರ ಲಭ್ಯವಿರುವುದರಿಂದ, ಹಾಲನ್ನು ಬಯಸಿದರೆ ಮಾರುಕಟ್ಟೆಯಲ್ಲಿ ಪೌಡರ್​​ ರೂಪದಲ್ಲಿ ಖರೀದಿಸಬಹುದು. ಆದರೆ ಈ ಪೌಡರ್​​ ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಜೊತೆಗೆ ಹಾಲಿನಲ್ಲಿರುವ ಲಾಕ್ಟೋಸ್​​​ ಅಂಶವು ಹೊಟ್ಟೆ ಉಬ್ಬರ, ಆಸಿಡಿಟಿ ಮುಂತಾದ ಆರೋಗ್ಯ ಸಮಸ್ಯೆಗೂ ಕಾರಣವಾಗುತ್ತದೆ ಎಂದು ತಿಳಿದುಬಂದಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 1:27 pm, Thu, 1 June 23

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?