Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಬೆಳಗ್ಗಿನ ಉಪಹಾರದಲ್ಲಿ ಬ್ರೆಡ್ ತಿನ್ನುವುದನ್ನು ತಪ್ಪಿಸಿ; ಆರೋಗ್ಯಕ್ಕೆ ಎಷ್ಟೆಲ್ಲಾ ಹಾನಿ ಎಂಬುದನ್ನು ತಿಳಿಯಿರಿ

ಬಿಳಿ ಬ್ರೆಡ್ ತಯಾರಿಸಲು ಗೋಧಿ ಹಿಟ್ಟಿನಲ್ಲಿ ಅನೇಕ ರೀತಿಯ ರಾಸಾಯನಿಕಗಳನ್ನು ಬಳಸಲಾಗುತ್ತದೆ. ಈ ಕಾರಣದಿಂದಾಗಿ ಹಿಟ್ಟು ಬಿಳಿಯಾಗಿ ಕಾಣುತ್ತದೆ. ಇದು ಆರೋಗ್ಯಕ್ಕೆ ಹಾನಿಕಾರಕ ಎಂಬುದು ನೆನಪಿರಲಿ.

Health Tips: ಬೆಳಗ್ಗಿನ ಉಪಹಾರದಲ್ಲಿ ಬ್ರೆಡ್ ತಿನ್ನುವುದನ್ನು ತಪ್ಪಿಸಿ; ಆರೋಗ್ಯಕ್ಕೆ ಎಷ್ಟೆಲ್ಲಾ ಹಾನಿ ಎಂಬುದನ್ನು ತಿಳಿಯಿರಿ
ಬ್ರೆಡ್​
Follow us
TV9 Web
| Updated By: Skanda

Updated on: Jul 08, 2021 | 6:55 AM

ಹೆಚ್ಚಿನ ಜನರು ಬೆಳಿಗ್ಗೆ ಉಪಾಹಾರಕ್ಕಾಗಿ ಬ್ರೆಡ್, ಟೋಸ್ಟ್ ಅಥವಾ ಬ್ರೆಡ್ ಜಾಮ್ ಇತ್ಯಾದಿಗಳನ್ನು ತಿನ್ನುತ್ತಾರೆ. ಆದರೆ ಬಿಳಿ ಬ್ರೆಡ್ ಆರೋಗ್ಯಕ್ಕೆ ಹಾನಿಕಾರಕ ಎಂಬುದು ಅದೆಷ್ಟೋ ಜನರಿಗೆ ತಿಳಿದಿರುವುದಿಲ್ಲ. ಬೆಳಿಗ್ಗೆ ಗಡಿಬಿಡಿಯಲ್ಲಿ ಕೆಲಸಕ್ಕೆ ತೆರಳುವಾಗ ಬ್ರೆಡ್​-ಜಾಮ್​ ಸೇವಿಸಿ ಲಘುಬಗೆಯಿಂದ ಹೊರಟು ಬಿಡುತ್ತಾರೆ. ಆದರೆ ಪೌಷ್ಟಿಕಾಂಶದ ವಿಷಯಕ್ಕೆ ಬಂದಾಗ ಬ್ರೆಡ್‌ಗಳು ಆರೋಗ್ಯಕ್ಕೆ ಅಷ್ಟು ಉತ್ತಮವಲ್ಲ. ಅದರಲ್ಲಿಯೂ ಬೆಳಗ್ಗಿನ ಉಪಹಾರದಲ್ಲಿ ಬ್ರೆಡ್​ಗಳನ್ನು ಸೇವಿಸುವುದು ಒಳ್ಳೆಯದಲ್ಲ.

ಬಿಳಿ ಬ್ರೆಡ್ ಹೇಗೆ ತಯಾರಿಸಲಾಗುತ್ತದೆ ಎಂದು ತಿಳಿಯಿರಿ ಬಿಳಿ ಬ್ರೆಡ್ ತಯಾರಿಸಲು ಗೋಧಿ ಹಿಟ್ಟಿನಲ್ಲಿ ಅನೇಕ ರೀತಿಯ ರಾಸಾಯನಿಕಗಳನ್ನು ಬಳಸಲಾಗುತ್ತದೆ. ಈ ಕಾರಣದಿಂದಾಗಿ ಹಿಟ್ಟು ಬಿಳಿಯಾಗಿ ಕಾಣುತ್ತದೆ. ಬೆಜಾಯ್ಲ್ ಪೆರಾಕ್ಸೈಡ್, ಕ್ಲೋರಿನ್ ಡೈಆಕ್ಸೈಡ್ ಮತ್ತು ಪೊಟ್ಯಾಸಿಯಮ್ ಬ್ರೋಮೇಟ್ ಸೇರಿಸಲಾಗುತ್ತದೆ. ಆರೋಗ್ಯಕ್ಕೆ ಹಾನಿಯಾಗದಂತೆ ಈ ವಸ್ತುಗಳನ್ನು ಬಹಳ ಕಡಿಮೆ ಪ್ರಮಾಣದಲ್ಲಿ ಬೆರೆಸಲಾಗುತ್ತದೆ.

ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುತ್ತದೆ ಬಿಳಿ ಬ್ರೆಡ್ ಅತಿ ಹೆಚ್ಚು ಗ್ಲೈಸೆಮಿಕ್ ಅಂಶವನ್ನು ಹೊಂದಿದೆ. ಇದು ದೇಹದಲ್ಲಿ ಗ್ಲೂಕೋಸ್ ಅನ್ನು ಹೆಚ್ಚಿಸುತ್ತದೆ. ಬಿಳಿ ಬ್ರೆಡ್ ತಿನ್ನುವುದು ಮಧುಮೇಹ ರೋಗಿಗಳಿಗೆ ಹಾನಿಯುಂಟು ಮಾಡುತ್ತದೆ. ಏಕೆಂದರೆ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ. ದೇಹದಲ್ಲಿ ನಿರಂತರವಾಗಿ ಹೆಚ್ಚಿನ ಮಟ್ಟದ ಗ್ಲೂಕೋಸ್ ಹೈಪರ್ ಗ್ಲೈಸೆಮಿಕ್​ಗೆ ಕಾರಣವಾಗಬಹುದು. ಇದು ಹೃದ್ರೋಗಗಳು ಮತ್ತು ಮೂತ್ರಪಿಂಡದ ವೈಫಲ್ಯದ ಅಪಾಯವನ್ನು ಹೆಚ್ಚಿಸುತ್ತದೆ.

ದೇಹದ ತೂಕ ಹೆಚ್ಚಳ ನೀವು ಆರೋಗ್ಯವಾಗಿರಲು ಬಯಸಿದ್ದೇ ಆದರೆ ನಿಮ್ಮ ಆಹಾರದಿಂದ ಬಿಳಿ ಬ್ರೆಡ್ ಸೇವನೆಯನ್ನು ಆದಷ್ಟು ತಪ್ಪಿಸಿ. ಬಿಳಿ ಬ್ರೆಡ್ ತಿನ್ನುವುದರಿಂದ ನಿಮ್ಮ ದೇಹದ ತೂಕವು ಹೆಚ್ಚುತ್ತದೆ. ಇದು ದೇಹದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ. ಜತೆಗೆ ಕ್ಯಾಲೋರಿ ಹೆಚ್ಚುವ ಮೂಲಕ ದೇಹದಲ್ಲಿ ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ.

ಮಾನಸಿಕ ಸ್ಥಿತಿಯನ್ನು ಹಾಳು ಮಾಡುತ್ತದೆ ಬಿಳಿ ಬ್ರೆಡ್‌ನಿಂದ ತಯಾರಿಸಿದ ವಸ್ತುಗಳು ತಿನ್ನಲು ರುಚಿಕರವಾಗಿರಬಹುದು ಆದರೆ ಅದು ನಿಮ್ಮ ಮನಸ್ಥಿತಿಯನ್ನು ಹಾಳು ಮಾಡುತ್ತದೆ. ಅಮೇರಿಕನ್ ಜರ್ನಲ್ ಆಫ್ ಕ್ಲಿನಿಕಲ್ ನ್ಯೂಟ್ರಿಷನ್​ನಲ್ಲಿ ಪ್ರಕಟವಾದ ಅಧ್ಯಯದ ಪ್ರಕಾರ ಬಿಳಿ ಬ್ರೆಡ್ ತಿನ್ನುವುದರಿಂದ 50 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರಲ್ಲಿ ಖಿನ್ನತೆ ಉಂಟಾಗುತ್ತದೆ ಎಂಬುದು ತಿಳಿದು ಬಂದಿದೆ. ಆಯಾಸ ಮತ್ತು ಖಿನ್ನತೆಯ ಲಕ್ಷಣಗಳು ಕಾಡುತ್ತವೆ.

ಇದನ್ನೂ ಓದಿ:

ಈ ಬ್ರೆಡ್​ ತಯಾರಿಸೋಕೆ ಮಹಿಳೆಯರ ಮೂತ್ರವೇ ಶ್ರೇಷ್ಠವಂತೆ! ಏಕೆ?

Health tips: ಬೆಳಗ್ಗೆ ಎದ್ದ ತಕ್ಷಣ ಬ್ರೆಡ್-ಜಾಮ್​​ ಸೇವನೆ ಒಳ್ಳೆಯದಲ್ಲ! ಆರೋಗ್ಯದ ಮೇಲೆ ಬೀರುವ ಪರಿಣಾಮಗಳೇನು? ಇಲ್ಲಿದೆ ವಿವರ

ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್