AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯಿಯ ಆರೋಗ್ಯಕ್ಕೂ ಹೃದಯಕ್ಕೂ ಸಂಬಂಧವಿದೆಯೇ; ಈ ಬಗ್ಗೆ ಮಾಹಿತಿ ನೀಡಿದ್ದಾರೆ ಡಾ. ಅನುಪಮಾ ವಿ. ಹೆಗ್ಡೆ

ಬಾಯಿಯ ಆರೋಗ್ಯಕ್ಕೂ ಹೃದಯಕ್ಕೂ ಸಂಬಂಧವಿದೆಯೇ; ಈ ಬಗ್ಗೆ ಮಾಹಿತಿ ನೀಡಿದ್ದಾರೆ ಡಾ. ಅನುಪಮಾ ವಿ. ಹೆಗ್ಡೆ

ಪ್ರೀತಿ ಭಟ್​, ಗುಣವಂತೆ
|

Updated on: Feb 02, 2026 | 3:15 PM

Share

ಬಾಯಿ ಮತ್ತು ಹೃದಯಕ್ಕೂ ನಿಕಟ ಸಂಬಂಧವಿದೆ ಎಂಬುದು ಹಲವರಿಗೆ ತಿಳಿದಿಲ್ಲ. ಬಾಯಿಯ ನೈರ್ಮಲ್ಯ ಸರಿಯಾಗಿ ಇಲ್ಲದಿದ್ದರೆ ಹೃದಯ ಸಂಬಂಧಿ ಕಾಯಿಲೆಗಳು ಮತ್ತು ಮಧುಮೇಹದಂತಹ ಇತರ ಆರೋಗ್ಯ ಸಮಸ್ಯೆಗಳು ಬರಲು ದಾರಿಯಾಗುತ್ತದೆ. ವಸಡಿನ ಸೋಂಕು, ಹಾನಿಕಾರಕ ರೋಗಾಣುಗಳು ಆಹಾರದ ಮೂಲಕ ದೇಹವನ್ನು ಪ್ರವೇಶಿಸುತ್ತದೆ. ಈ ರೋಗಾಣುಗಳು ನಂತರ ಹೃದಯರಕ್ತನಾಳದ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಈ ವಿಷಯದ ಕುರಿತು ಬೆಂಗಳೂರು ರಾಮಯ್ಯ ಮೆಮೋರಿಯಲ್ ಆಸ್ಪತ್ರೆಯ ಹೃದ್ರೋಗ ವಿಭಾಗದ ಹಿರಿಯ ಸಲಹೆಗಾರರಾಗಿರುವ ಡಾ. ಅನುಪಮಾ ವಿ. ಹೆಗ್ಡೆ ಅವರು ಮಾತನಾಡಿದ್ದು ಹೆಚ್ಚಿನ ಮಾಹಿತಿ ಪಡೆಯಲು ವಿಡಿಯೋ ನೋಡಿ.

ಸಾಮಾನ್ಯವಾಗಿ ಬಾಯಿಯ ಆರೋಗ್ಯದ ಬಗ್ಗೆ ಹೆಚ್ಚಾಗಿ ಕಾಳಜಿ ವಹಿಸುವುದಿಲ್ಲ. ಆದರೆ ಬಾಯಿ ಮತ್ತು ಹೃದಯಕ್ಕೂ ಸಂಬಂಧವಿದೆ ಎಂಬುದು ನಿಮಗೆ ತಿಳಿದಿದೆಯೇ. ಹೌದು, ಈ ಬಗ್ಗೆ ಸರಿಯಾಗಿ ತಿಳಿದುಕೊಂಡು ಬಾಯಿಯ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಅನಿವಾರ್ಯವಾಗಿದೆ. ಅದಕ್ಕಾಗಿಯೇ ಟಿವಿ9 ಕನ್ನಡ ಈ ವಿಷಯಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿ ಪಡೆಯಲು ಬೆಂಗಳೂರು ರಾಮಯ್ಯ ಮೆಮೋರಿಯಲ್ ಆಸ್ಪತ್ರೆಯ ಹೃದ್ರೋಗ ವಿಭಾಗದ ಹಿರಿಯ ಸಲಹೆಗಾರರಾಗಿರುವ ಡಾ. ಅನುಪಮಾ ವಿ. ಹೆಗ್ಡೆ (Dr. Anupama V. Hegde), ಅವರನ್ನು ಸಂಪರ್ಕಿಸಿತ್ತು. ಈ ವಿಷಯದ ಕುರಿತಂತೆ ಅವರು ಹೆಚ್ಚಿನ ಮಾಹಿತಿ ನೀಡಿದ್ದು, ದಂತದ ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ವಿವರವಾದ ಮಾಹಿತಿ ನೀಡಿದ್ದಾರೆ. ಅವರು ಹೇಳುವ ಪ್ರಕಾರ, ನಾವು ಸೇವಿಸುವ ಆಹಾರದ ಜೀರ್ಣಕ್ರಿಯೆಗೆ ಅತ್ಯಗತ್ಯವಾಗುವುದರಿಂದ ಬಾಯಿಯ ಆರೋಗ್ಯ ಚೆನ್ನಾಗಿರುವುದು ಅತ್ಯಮೂಲ್ಯವಾಗಿರುತ್ತದೆ. ಇಲ್ಲವಾದಲ್ಲಿ, ವಸಡಿನ ಸೋಂಕು, ಹಾನಿಕಾರಕ ರೋಗಾಣುಗಳು ಆಹಾರದ ಮೂಲಕ ದೇಹಕ್ಕೆ ಪ್ರವೇಶಿಸುತ್ತದೆ. ಈ ರೋಗಾಣುಗಳು ನಂತರ ಹೃದಯರಕ್ತನಾಳದ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಆದ್ದರಿಂದ, ಹೃದಯವನ್ನು ಆರೋಗ್ಯವಾಗಿಟ್ಟುಕೊಳ್ಳಲು ಬಾಯಿ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ ಎಂದು ಹೇಳಿದ್ದಾರೆ. ಈ ಬಗೆಗಿನ ಮತ್ತಷ್ಟು ಮಾಹಿತಿ ಪಡೆಯಲು ಈ ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More