AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Benefits: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ನೆಲ್ಲಿಕಾಯಿ, ಶುಂಠಿ ಜ್ಯೂಸ್ ಕುಡಿಯಿರಿ

ನೆಲ್ಲಿಕಾಯಿ (Amla) ಮತ್ತು ಶುಂಠಿ (Ginger) ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಿಂದ ಮಾಡುವ ಜ್ಯೂಸ್ ರೋಗ ನಿರೋಧಕ ಶಕ್ತಿ ಹೆಚ್ಚಿಸುವುದರಿಂದ, ಕೊರೊನಾ ಸೋಂಕಿನ ವಿರುದ್ಧ ಹೋರಾಡುತ್ತದೆ.

Health Benefits: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ನೆಲ್ಲಿಕಾಯಿ, ಶುಂಠಿ ಜ್ಯೂಸ್ ಕುಡಿಯಿರಿ
TV9 Web
| Edited By: |

Updated on: Aug 07, 2021 | 5:47 PM

Share

ಕೊರೊನಾ (Coronaviru) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಜನರಿಗೆ ಮತ್ತೆ ಆತಂಕ ಶುರುವಾಗಿದೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವ ದೇಹಕ್ಕೆ ಮಹಾಮಾರಿ ಕೊರೊನಾ ಬೇಗ ಹೊಕ್ಕುತ್ತದೆ. ಹೀಗಾಗಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಅನಿವಾರ್ಯವಾಗಿದೆ. ನೆಲ್ಲಿಕಾಯಿ (Amla) ಮತ್ತು ಶುಂಠಿ (Ginger) ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಿಂದ ಮಾಡುವ ಜ್ಯೂಸ್ ರೋಗ ನಿರೋಧಕ ಶಕ್ತಿ ಹೆಚ್ಚಿಸುವುದರಿಂದ, ಕೊರೊನಾ ಸೋಂಕಿನ ವಿರುದ್ಧ ಹೋರಾಡುತ್ತದೆ.

* ನೆಲ್ಲಿಕಾಯಿಯ ಪ್ರಯೋಜನಗಳು ನೆಲ್ಲಿಕಾಯಿ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್ ಸಿ ಇದೆ. ನೆಲ್ಲಿಕಾಯಿ ಮಧುಮೇಹವನ್ನು ನಿಯಂತ್ರಿಸುತ್ತದೆ. ಜೊತೆಗೆ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ನ ಕಡಿಮೆ ಮಾಡುತ್ತದೆ.

* ಶುಂಠಿಯ ಆರೋಗ್ಯ ಪ್ರಯೋಜನಗಳು  ಶುಂಠಿ ಕೆಮ್ಮು, ಗಂಟಲು ನೋವು ಮತ್ತು ಇತರ ಉರಿಯೂತದ ಕಾಯಿಲೆಗಳನ್ನು ನಿವಾರಿಸುವ ಶಕ್ತಿಯನ್ನು ಹೊಂದಿದೆ. ಇದರಲ್ಲಿ ಆ್ಯಂಟಿಆಕ್ಸಿಡೆಂಟ್ ಮತ್ತು ಜಿಂಗರೋನ್ ಇದ್ದು, ಇದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ. ಅಲ್ಲದೇ ಶುಂಠಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

* ಪುದೀನ ಪ್ರಯೋಜನಗಳು ಪುದೀನ ಉರಿಯೂತ ಮತ್ತು ಸೋಂಕಿನ ವಿರುದ್ಧ ಹೋರಾಡುತ್ತದೆ. ಹಲವಾರು ಅಧ್ಯಯನಗಳ ಪ್ರಕಾರ, ಪುದೀನ ಉತ್ಕರ್ಷಣ ನಿರೋಧಕ ಮತ್ತು ಉರಿಯೂತವನ್ನು ನಿವಾರಿಸುತ್ತದೆ. ಇದು ಗಂಟಲು ನೋವು ಮತ್ತು ಕೆಮ್ಮಿನಿಂದ ತಕ್ಷಣದ ಪರಿಹಾರವನ್ನು ನೀಡುತ್ತದೆ. ಅಲ್ಲದೆ, ಇದರ ಪರಿಮಳ ತಲೆನೋವನ್ನು ಕಡಿಮೆಗೊಳಿಸುತ್ತದೆ.

ನೆಲ್ಲಿಕಾಯಿ- 5 ರಿಂದ 6 ಕಾಯಿ ಶುಂಠಿ ರಸ – 1 ಚಮಚ ಪುದೀನ ಎಲೆಗಳು – 3ರಿಂದ 4 ಜೇನುತುಪ್ಪ – 1 ಚಮಚ

ಎಲ್ಲಾ ಪದಾರ್ಥಗಳನ್ನು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ. ನೆಲ್ಲಿಕಾಯಿಯನ್ನು ಕತ್ತರಿಸಿ ಮಿಕ್ಸಿಗೆ ಹಾಕಿ. ಎಲ್ಲಾ ಪದಾರ್ಥಗಳನ್ನು ಸೇರಿಸಿ, ಚೆನ್ನಾಗಿ ಮಿಶ್ರಣ ಮಾಡಿ. ನೀವು ಚಾಟ್ ಮಸಾಲವನ್ನು ಕೂಡ ಸೇರಿಸಬಹುದು. ಆ ನಂತರ ಸಿದ್ಧವಾದ ಜ್ಯೂಸ್​ನ ಕುಡಿಯಿರಿ.

ಇದನ್ನೂ ಓದಿ

Health Tips: ಈ ಮೂರು ಸಮಯದಲ್ಲಿ ನೀರು ಕುಡಿಯುವ ಅಭ್ಯಾಸ ಆರೋಗ್ಯಕ್ಕೆ ಹಾನಿಕಾರಕ ಇಂದೇ ಅದನ್ನು ಬದಲಾಯಿಸಿ

Watermelon: ಕಲ್ಲಂಗಡಿ ಹಣ್ಣಿನ ಆರೋಗ್ಯ ಪ್ರಯೋಜನಗಳು; ಹಿತ-ಮಿತವಾಗಿ ಬಳಸಿ ಆರೋಗ್ಯ ಕಾಪಾಡಿಕೊಳ್ಳಿ

(Drink Amla and ginger juice to boost Immunity Power)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ