AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಪೇರಳೆ ಎಲೆಗಳ ಚಹಾ ಕುಡಿದು ಹೃದ್ರೋಗದ ಸಮಸ್ಯೆಗಳನ್ನು ಕಡಿಮೆ ಮಾಡಿಕೊಳ್ಳಿ

ಪೇರಳೆ ಹಣ್ಣಿನೊಂದಿಗೆ ಎಷ್ಟು ಆರೋಗ್ಯ ಪ್ರಯೋಜನಗಳಿವೆಯೋ, ಪೇರಳೆ ಎಲೆಗಳಿಂದ ಇನ್ನೂ ಹೆಚ್ಚಿನ ಪ್ರಯೋಜನಗಳಿವೆ ಎಂದು ಪೌಷ್ಟಿಕ ತಜ್ಞರು ಹೇಳುತ್ತಾರೆ. ಈ ಎಲೆಗಳನ್ನು ನಿಯಮಿತವಾಗಿ ಸೇವಿಸುವ ಮೂಲಕ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಸಹ ಗುಣಪಡಿಸಬಹುದು ಎಂದು ತಜ್ಞರು ಹೇಳುತ್ತಾರೆ. ಈ ಎಲೆಗಳಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಸೂಕ್ಷ್ಮಜೀವಿ ವಿರೋಧಿ ಗುಣಗಳನ್ನು ಹೊಂದಿವೆ. ಇದು ಹೊಟ್ಟೆ ಹುಣ್ಣುಗಳಿಂದ ದೇಹವನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಕೆಮ್ಮು, ತುರಿಕೆ ಇತ್ಯಾದಿಗಳಿಂದ ಬಳಲುತ್ತಿರುವ ಜನರು ಪೇರಳೆ ಎಲೆಗಳನ್ನು ತಿನ್ನಬೇಕು. ಏಕೆಂದರೆ ಅವು ದೇಹಕ್ಕೆ ಪರಿಹಾರವನ್ನು ನೀಡುವ ಅಲರ್ಜಿ ವಿರೋಧಿ ಗುಣಗಳನ್ನು ಹೊಂದಿವೆ.

Health Tips: ಪೇರಳೆ ಎಲೆಗಳ ಚಹಾ ಕುಡಿದು ಹೃದ್ರೋಗದ ಸಮಸ್ಯೆಗಳನ್ನು ಕಡಿಮೆ ಮಾಡಿಕೊಳ್ಳಿ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ|

Updated on: Sep 15, 2024 | 12:24 PM

Share

ಪೇರಳೆ ಹಣ್ಣು ಆರೋಗ್ಯಕ್ಕೆ ಹಲವಾರು ರೀತಿಯ ಪ್ರಯೋಜನಗಳನ್ನು ನೀಡುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಅವುಗಳ ಎಲೆಯಲ್ಲಿರುವ ಶಕ್ತಿ ಅದಕ್ಕಿಂತಲೂ ಉಪಯೋಗಕಾರಿ ಎಂಬುದು ನಿಮಗೆ ತಿಳಿದಿದೆಯೇ? ಹೌದು. ಈ ಎಲೆಗಳಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಸೂಕ್ಷ್ಮಜೀವಿ ವಿರೋಧಿ ಗುಣಗಳನ್ನು ಹೊಂದಿವೆ. ಇದು ಹೊಟ್ಟೆ ಹುಣ್ಣುಗಳಿಂದ ದೇಹವನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಕೆಮ್ಮು, ತುರಿಕೆ ಇತ್ಯಾದಿಗಳಿಂದ ಬಳಲುತ್ತಿರುವ ಜನರು ಪೇರಳೆ ಎಲೆಗಳನ್ನು ತಿನ್ನಬೇಕು. ಏಕೆಂದರೆ ಅವು ದೇಹಕ್ಕೆ ಪರಿಹಾರವನ್ನು ನೀಡುವ ಅಲರ್ಜಿ ವಿರೋಧಿ ಗುಣಗಳನ್ನು ಹೊಂದಿವೆ.

  1. ಪೇರಳೆ ಎಲೆಗಳನ್ನು ವಿವಿಧ ರೂಪಗಳಲ್ಲಿ ತೆಗೆದುಕೊಳ್ಳುವುದು ಆರೋಗ್ಯವನ್ನು ಸುಧಾರಿಸುತ್ತದೆ. ಈ ಎಲೆಗಳು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ದೇಹಕ್ಕೆ ಸಹಾಯ ಮಾಡುವ ಅನೇಕ ಗುಣಗಳನ್ನು ಹೊಂದಿವೆ. ಪೇರಳೆ ಎಲೆಯ ಚಹಾ ಕುಡಿಯುವುದರಿಂದ ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಬಹುದು. ಜೊತೆಗೆ ಇದು ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲ, ಇದು ದೇಹದಲ್ಲಿ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ ಮತ್ತು ಹೃದ್ರೋಗದ ಸಮಸ್ಯೆಗಳನ್ನು ತಡೆಯುತ್ತದೆ.
  2. ಪೇರಳೆ ಎಲೆಯಿಂದ ಮಾಡಿದ ಚಹಾವು ಜೀರ್ಣಾಂಗ ವ್ಯವಸ್ಥೆಯಿಂದ ಕೆಟ್ಟ ಬ್ಯಾಕ್ಟೀರಿಯಾವನ್ನು ತೆಗೆದು ಹಾಕುತ್ತದೆ. ಇದರಲ್ಲಿರುವ ನಾರಿನಂಶವು ಜೀರ್ಣಕಾರಿ ಸಮಸ್ಯೆಗಳನ್ನು ತಡೆಯುತ್ತದೆ.
  3. ಪೇರಳೆ ಎಲೆಗಳನ್ನು ಸೇವಿಸುವುದರಿಂದ ಡೆಂಗ್ಯೂನಿಂದ ವೇಗವಾಗಿ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ. ಜೊತೆಗೆ ಇದರ ಸೇವನೆ ರಕ್ತದಲ್ಲಿ ಪ್ಲೇಟ್ಲೆಟ್ಗಳ ಸಂಖ್ಯೆ ವೇಗವಾಗಿ ಹೆಚ್ಚಾಗುವಂತೆ ಮಾಡುತ್ತದೆ. ಜ್ವರದ ತೀವ್ರತೆಯೂ ಕಡಿಮೆಯಾಗುತ್ತದೆ.
  4. ಪೇರಳೆ ಎಲೆಗಳು, ಉತ್ಕರ್ಷಣ ನಿರೋಧಕಗಳು, ಸೂಕ್ಷ್ಮಜೀವಿ ವಿರೋಧಿ ಮತ್ತು ಉರಿಯೂತದ ಗುಣಲಕ್ಷಣಗಳಿಂದ ಸಮೃದ್ಧವಾಗಿವೆ. ಜೊತೆಗೆ ಈ ಎಲೆಗಳು ಕ್ಯಾಲೊರಿ ಮುಕ್ತವಾಗಿವೆ. ಇದು ತೂಕ ನಷ್ಟದಲ್ಲಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತದೆ.
  5. ಪೇರಳೆ ಎಲೆಗಳನ್ನು ಹಸಿಯಾಗಿ ತಿನ್ನುವಾಗ ರುಚಿಕರವಾಗಿರುತ್ತದೆ. ನೀವು ಬಯಸಿದರೆ, ಇದನ್ನು ನೀರಿನೊಂದಿಗೆ ಬೆರೆಸಿ ಜ್ಯೂಸ್ ನಂತೆ ಸೇವನೆ ಮಾಡಬಹುದು. ಇದರಲ್ಲಿ ಫೈಬರ್ ಸಮೃದ್ಧವಾಗಿದೆ. ಇದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.
  6. ಇದರ ಸೇವನೆ ಮಾಡುವುದರಿಂದ ಚರ್ಮದ ಸುಕ್ಕು ಮಾಯವಾಗುತ್ತವೆ. ಪೇರಳೆ ಎಲೆಗಳು ಮೊಡವೆ ಮತ್ತು ಕಪ್ಪು ಕಲೆಗಳನ್ನು ನಿವಾರಣೆ ಮಾಡಲು ಸಹಾಯ ಮಾಡುತ್ತದೆ. ಜೊತೆಗೆ ಈ ಎಲೆಗಳು ಹೈಪರ್ಪಿಗ್ಮೆಂಟೇಶನ್ ಅನ್ನು ಕಡಿಮೆ ಮಾಡುತ್ತದೆ. ಪೇರಳೆ ಎಲೆಗಳ ಪೇಸ್ಟ್ ಅನ್ನು ಹಚ್ಚುವುದರಿಂದ ಉತ್ತಮ ಫಲಿತಾಂಶ ಸಿಗುತ್ತದೆ. ಅಲ್ಲದೆ ಈ ಎಲೆಯ ರಸವು ಕೂದಲನ್ನು ದಪ್ಪವಾಗಿಸಲು ಸಹಾಯ ಮಾಡುತ್ತದೆ. ಈ ರಸವನ್ನು ಸೇವಿಸುವುದರಿಂದ ಕೂದಲನ್ನು ಬೇರುಗಳಿಂದ ಬಲಪಡಿಸುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ