Drinking less water: ನೀವು ಕಡಿಮೆ ನೀರು ಕುಡಿಯುತ್ತೀರಾ? ಹಾಗಾದರೆ ಈ ಅಪಾಯ ತಪ್ಪಿದ್ದಲ್ಲ!

ಒಬ್ಬ ವ್ಯಕ್ತಿಯು ದಿನಕ್ಕೆ ಕನಿಷ್ಠ ಎರಡರಿಂದ ನಾಲ್ಕು ಲೀಟರ್ ನೀರನ್ನು ಕುಡಿಯಬೇಕು ಎಂದು ಹೇಳಲಾಗುತ್ತದೆ. ಹೀಗೆ ಮಾಡುವುದರಿಂದ ಅನೇಕ ರೋಗಗಳನ್ನು ದೂರವಿಡಬಹುದು.

Drinking less water: ನೀವು ಕಡಿಮೆ ನೀರು ಕುಡಿಯುತ್ತೀರಾ? ಹಾಗಾದರೆ ಈ ಅಪಾಯ ತಪ್ಪಿದ್ದಲ್ಲ!
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Aug 04, 2022 | 7:00 AM

ನಾವು ಆರೋಗ್ಯವಾಗಿರಬೇಕಾದರೆ ನಮ್ಮ ದೇಹದಲ್ಲಿ ಸಾಕಷ್ಟು ನೀರು (Drinking less water) ಇರಬೇಕು ಎಂದು ನಮಗೆಲ್ಲರಿಗೂ ತಿಳಿದಿದೆ. ನೀರು ಕುಡಿಯದಿರುವುದರಿಂದ ದೇಹದಲ್ಲಿ ನಿರ್ಜಲೀಕರಣ ಸಮಸ್ಯೆ ಉಂಟಾಗುತ್ತದೆ. ಏಕೆಂದರೆ ನಮ್ಮ ದೇಹದ ಶೇಕಡ 70ರಷ್ಟು ಮಾತ್ರ ನೀರಿದೆ. ಆದ್ದರಿಂದ ದೇಹವನ್ನು ಆರೋಗ್ಯವಾಗಿಡಲು ಸರಿಯಾದ ಪ್ರಮಾಣದಲ್ಲಿ ನೀರು ಕುಡಿಯುವುದು ಬಹಳ ಮುಖ್ಯ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಒಬ್ಬ ವ್ಯಕ್ತಿಯು ದಿನಕ್ಕೆ ಕನಿಷ್ಠ ಎರಡರಿಂದ ನಾಲ್ಕು ಲೀಟರ್ ನೀರನ್ನು ಕುಡಿಯಬೇಕು ಎಂದು ಹೇಳಲಾಗುತ್ತದೆ. ಹೀಗೆ ಮಾಡುವುದರಿಂದ ಅನೇಕ ರೋಗಗಳನ್ನು ದೂರವಿಡಬಹುದು. ಹಾಗಾದರೆ ಕಡಿಮೆ ನೀರನ್ನು ಕುಡಿಯುವುದರಿಂದ ಏನಾದರೂ ತೊಂದರೆ ಇದೆಯೇ ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.

ಇದನ್ನೂ ಓದಿ; Immunity: ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರಗಳಿವು

ದೇಹದಲ್ಲಿ ನೀರಿನ ಕೊರತೆಯಾದರೆ ಏನಾಗುತ್ತೆ?

ಸ್ಥೂಲಕಾಯ ಸಮಸ್ಯೆ:

ಸ್ಥೂಲಕಾಯವು ಅನೇಕ ರೋಗಗಳನ್ನು ಉಂಟುಮಾಡುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕಡಿಮೆ ನೀರು ಕುಡಿಯುವುದರಿಂದ ಬೊಜ್ಜು ಬೆಳೆಯಬಹುದು. ನಾವು ಯಾವಾಗಲೂ ಹಸಿವಿನಿಂದ್ದು, ಹಾಗಾಗಿ ನಾವು ಅತಿಯಾಗಿ ತಿನ್ನುತ್ತೇವೆ. ಇದು ತೂಕ ಹೆಚ್ಚಾಗಲು ಕಾರಣವಾಗುತ್ತದೆ. ಹಾಗಾಗಿ ನಿಮಗೂ ಕಡಿಮೆ ನೀರು ಕುಡಿಯುವ ಅಭ್ಯಾಸವಿದ್ದರೆ ಈ ಅಭ್ಯಾಸವನ್ನು ಬದಲಾಯಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ.

ಬಾಯಿ ದುರ್ವಾಸನೆ:

ದೇಹದಲ್ಲಿ ನೀರಿನ ಕೊರತೆ ಉಂಟಾದರೆ ಬಾಯಿಯಲ್ಲಿ ಹಾಲಿಟೋಸಿಸ್ ಸಮಸ್ಯೆಯೂ ಉಂಟಾಗುತ್ತದೆ. ಕಡಿಮೆ ನೀರು ಕುಡಿಯುವುದರಿಂದ ಬಾಯಿ ಒಣಗಬಹುದು. ಇದರಿಂದಾಗಿ ಬಾಯಲ್ಲಿ ಬ್ಯಾಕ್ಟೀರಿಯಾಗಳು ಬೆಳೆದು ಬಾಯಿಯಿಂದ ದುರ್ವಾಸನೆ ಬರಲು ಪ್ರಾರಂಭಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಬಾಯಿಯ ದುರ್ವಾಸನೆ ತಪ್ಪಿಸಲು ನೀರನ್ನು ಕುಡಿಯಬೇಕು.

ಇದನ್ನೂ ಓದಿ; ನಿಮ್ಮ ಮೆದುಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತೆ ಈ ತರಕಾರಿಗಳು

ಮುಖದ ಸೌಂದರ್ಯ ಕಳೆದುಕೊಳ್ಳುವುದು:

ಕಡಿಮೆ ನೀರು ಕುಡಿಯುವ ಅಭ್ಯಾಸವಿದ್ದರೆ ಮುಖ ಕ್ರಮೇಣ ಸೌಂದರ್ಯ ಕಳೆದುಕೊಳ್ಳುತ್ತದೆ. ಅಷ್ಟೇ ಅಲ್ಲ, ದೇಹದಲ್ಲಿ ನೀರಿನ ಕೊರತೆಯಿಂದ ಮುಖದಲ್ಲಿ ಮೊಡವೆಗಳ ಸಮಸ್ಯೆ ಹೆಚ್ಚುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಮುಖವು ಕಾಂತಿಯುತವಾಗಿರಲು ಸರಿಯಾದ ಪ್ರಮಾಣದ ನೀರನ್ನು ಕುಡಿಯುವುದು ಅವಶ್ಯಕ. ನೀರಿನ ಕೊರತೆಯಿಂದ ಮುಖವೂ ದಣಿದಂತಿ ಕಾಣುತ್ತದೆ.

(ಸೂಚನೆ: ಈ ಮೇಲೆ ನೀಡಿದ ವಿಷಯವು ಮಾಹಿತಿಗಾಗಿ ಮಾತ್ರವಾಗಿದ್ದು, ಟಿವಿ9 ಡಿಜಿಟಲ್​ಗೆ ಸಂಬಂಧಿಸಿರುವುದಿಲ್ಲ. ಸೂಕ್ತ ಮಾರ್ಗದರ್ಶನ ಅಥವಾ ಚಿಕಿತ್ಸೆಗಾಗಿ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.)

Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ