AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಅತಿಯಾಗಿ ಮದ್ಯಪಾನ ಮಾಡುತ್ತೀರಾ? ನಿಮ್ಮ ಚರ್ಮದಲ್ಲಿ ಉಂಟಾಗುವ ಕೆಲವು ಬದಲಾವಣೆಗಳಿಂದ ತಿಳಿಯಬಹುದು

ನೀವು ಹೆಚ್ಚು ಮದ್ಯಪಾನ ಮಾಡುತ್ತಿದ್ದೀರಿ ಎಂಬುದಕ್ಕೆ ನಿಮ್ಮ ಚರ್ಮವೇ ಸಾಕ್ಷಿ ಎಂಬಂತೆ ಕೆಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಹಾಗಾಗಿ ನಿಮ್ಮ ಸೌಂದರ್ಯವನ್ನು ಹಾಳು ಮಾಡುವ ಜೊತೆಗೆ ಆರೋಗ್ಯ ಸ್ಥಿತಿಯನ್ನು ಹದಗೆಡಿಸುವ ದೀರ್ಘಕಾಲದ ಮದ್ಯಪಾನ ಸೇವನೆಯಿಂದ ದೂರವಿರಿ.

ನೀವು ಅತಿಯಾಗಿ ಮದ್ಯಪಾನ ಮಾಡುತ್ತೀರಾ? ನಿಮ್ಮ ಚರ್ಮದಲ್ಲಿ ಉಂಟಾಗುವ ಕೆಲವು ಬದಲಾವಣೆಗಳಿಂದ ತಿಳಿಯಬಹುದು
ಸಂಗ್ರಹ ಚಿತ್ರ
TV9 Web
| Edited By: |

Updated on: Nov 19, 2021 | 10:03 AM

Share

ಮದ್ಯಪಾನ ಧೂಮಪಾನಗಳೆಲ್ಲಾ ಆರೋಗ್ಯಕ್ಕೆ ಹಾನಿಕಾರಕ ಎಂಬ ವಿಷಯ ತಿಳಿದಿದೆ. ಆದರೂ ಕೆಲವು ಆಲ್ಕೋಹಾಲ್​ಗೆ ಅತಿಯಾಗಿ ಹೊಂದಿಕೊಂಡಿರುತ್ತಾರೆ. ಅತಿಯಾದ ಮದ್ಯಪಾನದಿಂದ ಸ್ಥೂಲಕಾಯದ ಅಪಾಯ ಹೆಚ್ಚುವುದರ ಜೊತೆಗೆ ಹೃದಯ (Heart Health) ಮತ್ತು ಯಕೃತ್ತಿನ ಆರೋಗ್ಯದ ಮೇಲೂ ಪರಿಣಾಮ ಉಂಟಾಗುತ್ತದೆ. ಅದಾಗ್ಯೂ ಕೆಲವು ರೋಗ ಲಕ್ಷಣಗಳು ಚರ್ಮದ (Skin Problems) ಮೇಲೆ ಕಾಣಿಸಿಕೊಳ್ಳತ್ತದೆ. ಯಾವುದೇ ಪೌಷ್ಟಿಕಾಂಶವನ್ನು ಹೊಂದಿರದ ಮದ್ಯಪಾನವು ನಿಮ್ಮ ಸುಂದರ ಕಾಂತಿಯುಕ್ತ ಚರ್ಮದ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರುತ್ತದೆ. ನೀವು ಹೆಚ್ಚು ಮದ್ಯಪಾನ (Alcohol) ಮಾಡುತ್ತಿದ್ದೀರಿ ಎಂಬುದಕ್ಕೆ ನಿಮ್ಮ ಚರ್ಮವೇ ಸಾಕ್ಷಿ ಎಂಬಂತೆ ಮುಖದ ಮೇಲೆ ಗುಳ್ಳೆಗಳು, ಕೆನ್ನೆ ಕೆಂಪಾಗುವುದು ಈ ರೀತಿಯ ಲಕ್ಷಣಗಳು ಕಂಡು ಬರುತ್ತದೆ.

ದೀರ್ಘಕಾಲದ ಆಲ್ಕೋಹಾಲ್ ಸೇವನೆಯು ಪುರುಷರಲ್ಲಿ ದುರ್ಬಲತೆ ಮತ್ತು ಮಹಿಳೆಯರಲ್ಲಿ ಬಂಜೆತನಕ್ಕೆ ಕಾರಣವಾಗುತ್ತದೆ. ಹೆಚ್ಚಿನ ಆಲ್ಕೋಹಾಲ್​ ಸೇವನೆ ನರಮಂಡಲವನ್ನು ಹಾನಿಗೊಳಿಸಬಹುದು. ಜೊತೆಗೆ ದೀರ್ಘಕಾಲದ ಆಲ್ಕೋಹಾಲ್ ಮೆದುಳಿನ ಕಾರ್ಯವನ್ನು ನಿಧಾನಗೊಳಿಸುತ್ತದೆ. ಮೆದುಳಿನ ಆರೋಗ್ಯದ ಮೇಲೂ ಪರಿಣಾಮವನ್ನು ಬೀರುತ್ತದೆ.

ಚರ್ಮ ಕೆಂಪಾಗುವುದು ಆಲ್ಕೋಹಾಲ್ ಸೇವನೆಯು ದೇಹದಲ್ಲಿ ಉರಿಯೂತಕ್ಕೆ ಕಾರಣವಾಗುತ್ತದೆ. ದಿರ್ಘಕಾಲದ ಉರಿಯೂತದಿಂದ ಚರ್ಮವು ಕೆಂಪು ಬಣ್ಣಕ್ಕೆ ತಿರುಗುತ್ತವೆ. ದೀರ್ಘಕಾಲದ ಮದ್ಯಪಾನವು ಮುಖದ ಟೆಲಂಜಿಯೆಕ್ಟಾಸಿಯಾವನ್ನು ಪ್ರಚೋದಿಸಬಹುದು. ಮುಖದ ಮೇಲೆ ರಾಶಿಗಟ್ಟಲೆ ಮೊಡವೆಗಳು ಮತ್ತು ಬಿರಿಯುವ ಚರ್ಮ ಈ ರೀತಿಯ ಸಮಸ್ಯೆಗೆ ಕಾರಣವಾಗುತ್ತದೆ.

ಮಂದ ಚರ್ಮ ಅತಿಯಾದ ಆಲ್ಕೋಹಾಲ್ ಸೇವನೆಯು ನಿಮ್ಮ ಚರ್ಮದ ಹೊಳಪು, ಟೋನ್ಅನ್ನು ಹಾಳು ಮಾಡುತ್ತದೆ. ಜೊತೆಗೆ ನಿಮ್ಮ ಮೈ ಬಣ್ಣ ಮಂದವಾಗುತ್ತದೆ ಅಂದರೆ ಹೊಳಪು ಕಳೆದುಕೊಳ್ಳುತ್ತದೆ. ಇದರಿಂದ ನೀವು ಹೆಚ್ಚು ವಯಸ್ಸಾದವರಂತೆ ಕಾಣಿಸುತ್ತೀರಿ.

ಸುಕ್ಕುಗಳು ಆಲ್ಕೋಹಾಲ್ ಅತಿಯಾದ ಬಳಕೆ ನಿಮ್ಮ ಚರ್ಮವನ್ನು ತುಂಬಾ ಬೇಗ ಹಾನಿಗೊಳಿಸುತ್ತದೆ. ನೀವು ಬೇಗ ವಯಸ್ಸಾದವರಂತೆ ಕಾಣಿಸಲು ಕಾರಣವಾಗುತ್ತದೆ. ಸುಕ್ಕುಗೆಟ್ಟ ಚರ್ಮ, ಮಂದ ಚರ್ಮ, ಮುಖದಲ್ಲಿ ಗುಳ್ಳೆಗಳು ಈ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ದೀರ್ಘಕಾಲದ ಆಲ್ಕೋಹಾಲ್ ಸೇವನೆಯು ರೋಗಲಕ್ಷಣಗಳನ್ನು ಉಲ್ಭಣಗೊಳಿಸುತ್ತದೆ.

ಇದನ್ನೂ ಓದಿ:

Health Tips: ಪಾರ್ಶ್ವವಾಯುವಿನ ಲಕ್ಷಣ, ಅಪಾಯ, ಮುನ್ನೆಚ್ಚರಿಕೆ ಕ್ರಮಗಳೇನು?

Health Tips: ಧೂಮಪಾನ ಒಮ್ಮೆಲೆ ಬಿಡಲು ಪ್ರಯತ್ನಿಸುತ್ತಿದ್ದೀರಾ? ವೈದ್ಯರ ಸಲಹೆ ಏನು ತಿಳಿಯಿರಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ