AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಮಲಗುವ ಮುನ್ನ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ಹಾಗಿದ್ರೆ ಮಿಸ್ ಮಾಡ್ದೆ ಸ್ಟೋರಿ ಓದಿ

ನೀರು ಪ್ರತಿಯೊಬ್ಬ ಮನುಷ್ಯನಿಗೂ ಅಗತ್ಯ. ಇದು ಎಲ್ಲರಿಗೂ ತಿಳಿದಿರುವ ಸತ್ಯ. ದಿನನಿತ್ಯ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಮಲಗುವ ಮುನ್ನ ನೀರು ಕುಡಿಯುವ ವಿಷಯಕ್ಕೆ ಬಂದರೆ ಇದೆ ಅಭಿಪ್ರಾಯಗಳು ಭಿನ್ನವಾಗಿರುತ್ತವೆ. ಹೌದು, ಈ ಅಭ್ಯಾಸ ಬಹಳ ಪ್ರಯೋಜನಗಳನ್ನು ಹೊಂದಿದ್ದರೂ ಕೂಡ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದಿದ್ದರೆ ನಿದ್ರೆಗೆ ಅಡ್ಡಿಯಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಹಾಗಾದರೆ ಮಲಗುವ ಮುನ್ನ ನೀರು ಕುಡಿಯುವುದರಿಂದ ಯಾವ ರೀತಿಯ ಪ್ರಯೋಜನ ಸಿಗುತ್ತದೆ, ಅತಿಯಾಗಿ ನೀರು ಕುಡಿದರೆ ಯಾವ ರೀತಿಯ ಸಮಸ್ಯೆಗಳಾಗುತ್ತದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ರಾತ್ರಿ ಮಲಗುವ ಮುನ್ನ ನೀರು ಕುಡಿಯುವ ಅಭ್ಯಾಸ ನಿಮಗಿದ್ಯಾ? ಹಾಗಿದ್ರೆ ಮಿಸ್ ಮಾಡ್ದೆ ಸ್ಟೋರಿ ಓದಿ
Water Before BedImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jan 27, 2026 | 9:41 PM

Share

ನಮ್ಮ ದೇಹಕ್ಕೆ ನೀರು (Water) ಎಷ್ಟು ಮುಖ್ಯ ಎಂಬುದು ತಿಳಿದಿರುವ ವಿಷಯ. ದೇಹದ ಶೇಕಡಾ 60 ರಿಂದ 70 ರಷ್ಟು ಭಾಗ ನೀರಿನಿಂದ ಕೂಡಿದೆ. ಅದಕ್ಕಾಗಿಯೇ ವೈದ್ಯರು ಪ್ರತಿದಿನ ಕನಿಷ್ಠ 8 ಗ್ಲಾಸ್ ನೀರು ಕುಡಿಯಲು ಶಿಫಾರಸು ಮಾಡುತ್ತಾರೆ. ಆದರೆ ಮಲಗುವ ಮುನ್ನ ನೀರು ಕುಡಿಯುವ ವಿಷಯಕ್ಕೆ ಬಂದರೆ ಇದೆ ಅಭಿಪ್ರಾಯಗಳು ಭಿನ್ನವಾಗಿರುತ್ತವೆ. ಹೌದು, ಈ ಅಭ್ಯಾಸ ಬಹಳ ಪ್ರಯೋಜನಗಳನ್ನು ಹೊಂದಿದ್ದರೂ ಕೂಡ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳದಿದ್ದರೆ ನಿದ್ರೆಗೆ ಅಡ್ಡಿಯಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. ಹಾಗಾದರೆ ಮಲಗುವ ಮುನ್ನ ನೀರು ಕುಡಿಯುವುದರಿಂದ ಯಾವ ರೀತಿಯ ಪ್ರಯೋಜನ ಸಿಗುತ್ತದೆ, ಅತಿಯಾಗಿ ನೀರು ಕುಡಿದರೆ ಯಾವ ರೀತಿಯ ಸಮಸ್ಯೆಗಳಾಗುತ್ತದೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಲಗುವ ಮುನ್ನ ನೀರು ಕುಡಿಯುವುದರಿಂದಾಗುವ ಪ್ರಯೋಜನಗಳು:

ಮಲಗುವ ಮುನ್ನ ನೀರು ಕುಡಿಯುವುದರಿಂದ ದೇಹದಲ್ಲಿರುವ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದು ರಕ್ತ ಪರಿಚಲನೆ ಸುಧಾರಿಸುತ್ತದೆ. ಕುಡಿಯುವ ನೀರು ದೇಹವನ್ನು ತಂಪಾಗಿಸುತ್ತದೆ ಮತ್ತು ನಿದ್ರೆ ಚೆನ್ನಾಗಿ ಬರಲು ಸಹಾಯ ಮಾಡುತ್ತದೆ. ಇನ್ನು, ಬೆಚ್ಚಗಿನ ನೀರು ಕುಡಿಯುವುದರಿಂದ ಸ್ನಾಯು ನೋವು ಕಡಿಮೆಯಾಗುವುದಲ್ಲದೆ ಜೀರ್ಣಕ್ರಿಯೆಯೂ ಸುಧಾರಿಸುತ್ತದೆ. ನಿಂಬೆ ರಸದೊಂದಿಗೆ ಬೆರೆಸಿದ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಮತ್ತು ಚರ್ಮ ಕಾಂತಿಯುತವಾಗುತ್ತದೆ.

ಅತಿಯಾಗಿ ನೀರು ಕುಡಿಯುವುದರಿಂದಾಗುವ ಸಮಸ್ಯೆಗಳು:

ಮಲಗುವ ಮುನ್ನ ಹೆಚ್ಚು ನೀರು ಕುಡಿದರೆ, ನೋಕ್ಟೋರಿಯಾ ಎಂಬ ಸಮಸ್ಯೆ ಬರುವ ಸಾಧ್ಯತೆ ಇರುತ್ತದೆ. ಹೆಚ್ಚು ನೀರು ಕುಡಿಯುವುದರಿಂದ ರಾತ್ರಿಯಲ್ಲಿ ಪದೇ ಪದೇ ಮೂತ್ರ ವಿಸರ್ಜನೆಗೆ ಹೋಗಬೇಕಾಗಿ ಬರಬಹುದು. ಇದು ನಿದ್ರೆಗೆ ಭಂಗ ತರಬಹುದು. ಸರಿಯಾಗಿ ನಿದ್ರೆ ಆಗದಿದ್ದರೆ ಮರುದಿನ ಆಯಾಸ, ತಲೆನೋವು ಮತ್ತು ಏಕಾಗ್ರತೆಯ ಕೊರತೆ ಉಂಟಾಗಬಹುದು. ದೀರ್ಘಾವಧಿಯಲ್ಲಿ, ಇದು ಹೃದಯದ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಇದನ್ನೂ ಓದಿ: ಕಣ್ಣುಗಳಿಂದ ಆಗಾಗ ನೀರು ಬರುವುದು ಕೆಲವು ರೋಗದ ಮುನ್ಸೂಚನೆಯಾಗಿರಬಹುದು ಎಚ್ಚರ!

ವೈದ್ಯರ ಈ ಸಲಹೆಯನ್ನು ತಪ್ಪದೆ ಪಾಲಿಸಿ:

  • ನೀರು ಕುಡಿದ ತಕ್ಷಣ ಮಲಗುವುದು ಒಳ್ಳೆಯದಲ್ಲ.
  • ನಿದ್ರೆಗೆ ಹೋಗುವ ಕನಿಷ್ಠ 2 ಗಂಟೆಗಳ ಮೊದಲು ನೀರು ಕುಡಿಯುವುದು ಒಳ್ಳೆಯದು.
  • ರಾತ್ರಿ ಊಟದ ಒಂದು ಗಂಟೆಯ ನಂತರ ನೀರು ಕುಡಿಯುವುದು ಸರಾಗ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.
  • ಮಲಗುವ ಮೊದಲು ಬಾಯಾರಿಕೆಯಾದಲ್ಲಿ, ಗ್ಲಾಸ್‌ ತುಂಬಾ ನೀರು ಕುಡಿಯುವುದಕ್ಕಿಂತ ಕೆಲವು ಸಿಪ್ಸ್ ನೀರು ಕುಡಿಯುವುದು ಒಳ್ಳೆಯದು.

ನೀರು ಕುಡಿಯುವುದು ನಿಮ್ಮ ಆರೋಗ್ಯಕ್ಕೆ ಒಳ್ಳೆಯದು, ಆದರೆ ಅದು ನಿಮ್ಮ ನಿದ್ರೆಗೆ ತೊಂದರೆಯಾಗಬಾರದು. ಆದ್ದರಿಂದ, ಮಲಗುವ ಮೊದಲು ಸಮಯಕ್ಕೆ ಅನುಗುಣವಾಗಿ ನೀರು ಕುಡಿಯಿರಿ ಮತ್ತು ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಳ್ಳಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜೈಲಿಗೆ ಕರೆದೊಯ್ಯವಾಗ ಅಡ್ಡಹಾಕಿದ ರಾಜೀವ್ ಗೌಡನ ಬೆಂಬಲಿಗರಿಗೆ ಲಾಠಿ ರುಚಿ!
ಜೈಲಿಗೆ ಕರೆದೊಯ್ಯವಾಗ ಅಡ್ಡಹಾಕಿದ ರಾಜೀವ್ ಗೌಡನ ಬೆಂಬಲಿಗರಿಗೆ ಲಾಠಿ ರುಚಿ!
ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?
ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ
ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ
'ಮಿನಿ ಕಾಶ್ಮೀರ'ದಲ್ಲಿ ಮಕ್ಕಳ ಆಟ
'ಮಿನಿ ಕಾಶ್ಮೀರ'ದಲ್ಲಿ ಮಕ್ಕಳ ಆಟ
ಅರೆಸ್ಟ್​ ಆದ್ರೂ ಖುಷಿ ಖುಷಿಯಲ್ಲಿರುವ ರಾಜೀವ್ ಗೌಡ ಹೇಳಿದ್ದೇನು?
ಅರೆಸ್ಟ್​ ಆದ್ರೂ ಖುಷಿ ಖುಷಿಯಲ್ಲಿರುವ ರಾಜೀವ್ ಗೌಡ ಹೇಳಿದ್ದೇನು?
ಏಮ್ಸ್ ಆಸ್ಪತ್ರೆ ಲಿಫ್ಟ್‌ನಲ್ಲಿ ಸರಗಳ್ಳತನ
ಏಮ್ಸ್ ಆಸ್ಪತ್ರೆ ಲಿಫ್ಟ್‌ನಲ್ಲಿ ಸರಗಳ್ಳತನ