ಬೆಳಿಗ್ಗೆ ಎದ್ದ ತಕ್ಷಣ ನೀರು ಕುಡಿಯುವ ಅಭ್ಯಾಸ ಈ ಆರೋಗ್ಯ ಸಮಸ್ಯೆಗಳಿರುವವರಿಗೆ ಒಳ್ಳೆಯದಲ್ಲ
ಬೆಳಿಗ್ಗೆ ಎದ್ದ ನಂತರ ದೇಹವನ್ನು ಹೈಡ್ರೇಟ್ ಮಾಡಲು ವೈದ್ಯರು ಸಲಹೆ ನೀಡುತ್ತಾರೆ. ಆದರೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಎಲ್ಲರಿಗೂ ಸುರಕ್ಷಿತವೇ? ಈ ಪ್ರಶ್ನೆಗೆ ವೈದ್ಯರು ಉತ್ತರಿಸಿದ್ದು, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಒಳ್ಳೆಯ ಅಭ್ಯಾಸವಾದರೂ ಕೂಡ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಇದು ಯಾರಿಗೆ ಒಳ್ಳೆಯದಲ್ಲ ಮತ್ತು ಯಾಕೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮನೆಯ ಹಿರಿಯರು ಪಾಲಿಸಿಕೊಂಡು ಬಂದ ಕೆಲವು ಆರೋಗ್ಯಕರ ಅಭ್ಯಾಸಗಳು ಇಂದಿಗೂ ಅಷ್ಟೇ ಪರಿಣಾಮಕಾರಿಯಾಗಿರುತ್ತವೆ ಎಂಬುದು ಸುಳ್ಳಲ್ಲ. ಆರೋಗ್ಯ (Health) ತಜ್ಞರು ಕೂಡ ಅಂತಹ ಅಭ್ಯಾಸಗಳ ಹಿಂದಿರುವ ವೈಜ್ಞಾನಿಕ ದೃಷ್ಟಿಕೋನವನ್ನು ತಿಳಿಸಲು ಪ್ರಯತ್ನಿಸುತ್ತಾರೆ. ಈ ರೀತಿಯ ಆರೋಗ್ಯಕರ ಅಭ್ಯಾಸಗಳಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು (Water on an Empty Stomach) ಕುಡಿಯುವುದು ಕೂಡ ಒಂದಾಗಿದೆ. ಈ ಅಭ್ಯಾಸವು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದ್ದು, ಹಲವರ ಬೆಳಗ್ಗಿನ ದಿನಚರಿಯ ಭಾಗವಾಗಿರುತ್ತದೆ. ಆದರೆ ಅದು ಎಲ್ಲರಿಗೂ ಸೂಕ್ತವಲ್ಲ ಹೌದು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು (Water) ಕುಡಿಯುವುದು ಒಳ್ಳೆಯ ಅಭ್ಯಾಸವಾದರೂ ಕೂಡ ಕೆಲವರ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಇದು ಯಾರಿಗೆ ಒಳ್ಳೆಯದಲ್ಲ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
ನೀರು ಕುಡಿಯುವ ಅಭ್ಯಾಸ ಕೂಡ ಒಳ್ಳೆಯದಲ್ಲವೇ? ಈ ರೀತಿಯ ಪ್ರಶ್ನೆ ಹಲವರಲ್ಲಿ ಮೂಡಬಹುದು. ನೀರು ಕುಡಿಯುವುದು ಕೆಟ್ಟ ಅಭ್ಯಾಸ ಖಂಡಿತ ಅಲ್ಲ. ಆದರೆ ಕೆಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇದರಿಂದ ಸಿಗುವ ಪ್ರಯೋಜನಕ್ಕಿಂತ ನಷ್ಟವೇ ಜಾಸ್ತಿಯಾಗಿರುತ್ತದೆ. ಹಾಗಾಗಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸವನ್ನು ಆರಂಭಿಸುವ ಮೊದಲು ನಿಮ್ಮ ವೈದ್ಯರನ್ನು ಸಂಪರ್ಕಿಸಿ, ಸಲಹೆ ತೆಗೆದುಕೊಳ್ಳಿ.
ಖಾಲಿ ಹೊಟ್ಟೆಯಲ್ಲಿ ನೀರಿನ ಸೇವನೆ ಯಾರಿಗೆ ಒಳ್ಳೆಯದಲ್ಲ?
ಸಾಮಾನ್ಯವಾಗಿ ಬಾಯಿ ಅಥವಾ ದಂತ ಸಂಬಂಧಿತ ಕಾಯಿಲೆಗಳಿರುವವರು ಖಾಲಿ ಹೊಟ್ಟೆಯಲ್ಲಿ ನೇರವಾಗಿ ನೀರು ಕುಡಿಯುವುದನ್ನು ತಪ್ಪಿಸಬೇಕು. ಇದರಲ್ಲಿ ಪಯೋರಿಯಾ (ಒಸಡು ಕಾಯಿಲೆ), ಬಾಯಿ ಹುಣ್ಣು ಮತ್ತು ಬಾಯಿಯ ಕ್ಯಾನ್ಸರ್‌ನಂತಹ ಸಮಸ್ಯೆಗಳು ಸೇರಿವೆ. ಈ ಕಾಯಿಲೆಗಳಿದ್ದಲ್ಲಿ ಬಾಯಿಯಲ್ಲಿ ಇರುವ ಲಾಲಾರಸವು ಹಾನಿಕಾರಕ ಅಂಶಗಳು ಮತ್ತು ಸೋಂಕುಗಳಿಗೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸಿದ್ದು, ಅಂತವರು ಬೆಳಿಗ್ಗೆ ಎದ್ದ ತಕ್ಷಣ ನೀರು ಕುಡಿಯುವುದರಿಂದ ನೀರಿನೊಂದಿಗೆ ಲಾಲಾರಸವನ್ನು ನುಂಗಿದರೆ, ಹಾನಿಕಾರಕ ಅಂಶಗಳು ದೇಹವನ್ನು ಪ್ರವೇಶಿಸಬಹುದು. ಹಾಗಾಗಿ ಈ ರೀತಿಯ ಆರೋಗ್ಯ ಸಮಸ್ಯೆ ಇರುವವರು ನೀರು ಕುಡಿಯುವ ಮೊದಲು ಬಾಯಿಯನ್ನು ಚೆನ್ನಾಗಿ ತೊಳೆಯಬೇಕು. ಆಗ ಬಾಯಿಯಲ್ಲಿರುವ ಬ್ಯಾಕ್ಟೀರಿಯಾ ಮತ್ತು ವಿಷಕಾರಿ ವಸ್ತುಗಳು ಹೊರಹೋಗುತ್ತದೆ. ಆ ಬಳಿಕ ನೀರು ಕುಡಿಯಲು ಸುರಕ್ಷಿತವಾಗಿರುತ್ತದೆ.
ಇದನ್ನೂ ಓದಿ: ಹವಾಮಾನಕ್ಕೆ ಅನುಗುಣವಾಗಿ ಯಾವ ಪಾತ್ರೆಯಲ್ಲಿ ನೀರು ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು
ಆರೋಗ್ಯವಂತ ವ್ಯಕ್ತಿಗಳಿಗೆ, ಲಾಲಾರಸವನ್ನು ಉಗುಳುವುದಕ್ಕಿಂತ ನುಂಗುವುದು ಉತ್ತಮವೆಂದು ಪರಿಗಣಿಸಲಾಗುತ್ತದೆ. ಏಕೆಂದರೆ ಲಾಲಾರಸದಲ್ಲಿರುವ ಕಿಣ್ವಗಳು ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತದೆ ಮತ್ತು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಆದ್ದರಿಂದ, ಅನಗತ್ಯವಾಗಿ ಲಾಲಾರಸವನ್ನು ಉಗುಳುವುದು ಆರೋಗ್ಯಕ್ಕೆ ಹಾನಿಕಾರಕ. ಖಾಲಿ ಹೊಟ್ಟೆಯಲ್ಲಿ ಸರಿಯಾಗಿ ನೀರು ಕುಡಿಯುವುದು ಮತ್ತು ಮೌಖಿಕ ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದರಿಂದ ನಮ್ಮ ಒಟ್ಟಾರೆ ಆರೋಗ್ಯವನ್ನು ಸುಧಾರಿಸಬಹುದು.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




