ಮಹಿಳೆಯರಲ್ಲಿ ಡ್ರಗ್ಸ್ ಚಟ: ಯುವತಿಯರಲ್ಲಿ ಹೆಚ್ಚುತ್ತಿರುವ ಮಾದಕ ವ್ಯಸನ.. ಕಾರಣ ಇದೇ!

Drug addiction in Women: ಖಿನ್ನತೆಯಿಂದ ಅನೇಕ ಮಹಿಳೆಯರು ವ್ಯಸನದ ಬಲೆಗೆ ಬೀಳುತ್ತಾರೆ. ವಿಘಟನೆ ಅಥವಾ ವೃತ್ತಿಜೀವನದಲ್ಲಿ ಅಪೇಕ್ಷಿತ ಯಶಸ್ಸು ಸಿಗದ ಕಾರಣ ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಖಿನ್ನತೆಯಿಂದ ಬಳಲುತ್ತಿದ್ದಾರೆ. ಅದರಿಂದ ಹೊರಬರಲು ಅನೇಕ ಜನರು ಈ ರೀತಿಯ ತಪ್ಪು ಮಾರ್ಗವನ್ನು ಕಂಡುಕೊಳ್ಳುತ್ತಾರೆ.

ಮಹಿಳೆಯರಲ್ಲಿ ಡ್ರಗ್ಸ್ ಚಟ: ಯುವತಿಯರಲ್ಲಿ ಹೆಚ್ಚುತ್ತಿರುವ ಮಾದಕ ವ್ಯಸನ.. ಕಾರಣ ಇದೇ!
ಯುವತಿಯರಲ್ಲಿ ಹೆಚ್ಚುತ್ತಿದೆ ಮಾದಕ ವ್ಯಸನ.. ಇದೇ ಕಾರಣ!
Follow us
|

Updated on: Mar 27, 2024 | 6:06 AM

ಮಾದಕ ವ್ಯಸನ (drug addiction) ಆರೋಗ್ಯಕ್ಕೆ ತುಂಬಾ ಹಾನಿಕಾರಕ. ಆದರೆ ಇಂದಿನ ಕಾಲಘಟ್ಟದಲ್ಲಿ ಯುವ ಸಮೂಹ ಅದರಲ್ಲಿ ಯುವತಿಯರೂ (young women) ಸಹ ಮದ್ಯ, ಗಾಂಜಾ, ಚರಸ್, ಸಿಗರೇಟಿನ ಮೋಹಕ್ಕೆ ಸಿಲುಕಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಸಮಾಜದಲ್ಲಿ ಪುರುಷರಲ್ಲಿ ಈ ವ್ಯಸನದ ಪ್ರಮಾಣವು ತುಂಬಾ ಹೆಚ್ಚಾಗಿದೆ. ಆದರೆ ಹುಡುಗಿಯರಲ್ಲಿಯೂ ಈ ಚಟಗಳ ಟ್ರೆಂಡ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎನ್ನುತ್ತಾರೆ ತಜ್ಞರು. ಈ ಪ್ರವೃತ್ತಿಯು ಮುಖ್ಯವಾಗಿ ನಗರಗಳು ಮತ್ತು ಉಪನಗರಗಳಲ್ಲಿ ಹೆಚ್ಚುತ್ತಿದೆ. ಹಳ್ಳಿಗಳಲ್ಲಿ ಈ ಪ್ರವೃತ್ತಿ ಕಡಿಮೆ. ಹೆಣ್ಣುಮಕ್ಕಳಲ್ಲಿ ಮಾದಕ ವ್ಯಸನ ಏಕೆ ಹೆಚ್ಚುತ್ತಿದೆ ಎಂಬ ಪ್ರಶ್ನೆ ಎಲ್ಲರ ಮನದಲ್ಲಿ ಮೂಡುವುದು ಸಹಜ. ಹುಡುಗಿಯರಲ್ಲಿ ವ್ಯಸನದ ಕಾರಣಗಳನ್ನು ನೋಡೋಣ (Health Tips).

ಈ ಚಟವು ಕುಟುಂಬ ವ್ಯವಸ್ಥೆಯೊಂದಿಗೆ ಸಂಬಂಧ ಹೊಂದಿವೆ ಎಂದು ತಜ್ಞರು ಹೇಳುತ್ತಾರೆ. ಪೋಷಕರು ಮತ್ತು ಕುಟುಂಬ ಸದಸ್ಯರು ನಿಯಮಿತವಾಗಿ ಮಾದಕ ದ್ರವ್ಯ ಸೇವಿಸುವವರಾಗಿದ್ದರೆ ಈ ರೀತಿಯ ಪ್ರವೃತ್ತಿಯು ಮಗ ಮತ್ತು ಮಗಳಲ್ಲಿ ಕಂಡುಬರುತ್ತದೆ. ಮಹಿಳೆಯ ಮಾನಸಿಕ ಸ್ಥಿತಿಯು ಸಹ ಈ ಚಟಕ್ಕೆ ಮತ್ತೊಂದು ಕಾರಣವಾಗಿದೆ. ಹೌದು.. ಆತ್ಮಸ್ಥೈರ್ಯ ಕಡಿಮೆ ಇರುವವರು ಯಾವುದೇ ಸಂದರ್ಭದಲ್ಲೂ ಆತಂಕಕ್ಕೆ ಒಳಗಾಗುತ್ತಾರೆ. ಸಾಮಾನ್ಯವಾಗಿ ಇಂತಹವರಿಗೆ ಮಾನಸಿಕ ಗಟ್ಟಿತನ ಕಡಿಮೆ ಇರುತ್ತದೆ. ಮಾನಸಿಕ ಶಕ್ತಿಯ ಕೊರತೆಯಿಂದ ಚಟಗಳ ಬಲೆಯಲ್ಲಿ ಸಿಲುಕಿಕೊಳ್ಳುತ್ತಾರೆ.

ಖಿನ್ನತೆಯಿಂದ ಅನೇಕ ಮಹಿಳೆಯರು ವ್ಯಸನದ ಬಲೆಗೆ ಬೀಳುತ್ತಾರೆ. ವಿಘಟನೆ ಅಥವಾ ವೃತ್ತಿಜೀವನದಲ್ಲಿ ಅಪೇಕ್ಷಿತ ಯಶಸ್ಸು ಸಿಗದ ಕಾರಣ ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಖಿನ್ನತೆಯಿಂದ ಬಳಲುತ್ತಿದ್ದಾರೆ. ಅದರಿಂದ ಹೊರಬರಲು ಅನೇಕ ಜನರು ಈ ರೀತಿಯ ತಪ್ಪು ಮಾರ್ಗವನ್ನು ಕಂಡುಕೊಳ್ಳುತ್ತಾರೆ.

ಮಾದಕ ವ್ಯಸನದಲ್ಲಿ ವ್ಯಕ್ತಿತ್ವ ಅಸ್ವಸ್ಥತೆಗಳು ಕೂಡ ಒಂದು ಅಂಶವಾಗಿರಬಹುದು. ಅನೇಕ ಜನರು ತಮ್ಮ ಸ್ನೇಹಿತರು ಮತ್ತು ನೆರೆಹೊರೆಯವರು ಡ್ರಗ್ಸ್ ತೆಗೆದುಕೊಳ್ಳುವುದನ್ನು ನೋಡಿದಾಗ ಅದೇ ಉತ್ಸಾಹವನ್ನು ಅನುಭವಿಸುತ್ತಾರೆ. ವ್ಯಸನದ ಬಲೆಯಲ್ಲಿ ಎಷ್ಟೋ ಜನ ಸಿಕ್ಕಿಬೀಳುವುದು ಹೀಗೆ.

ಆದರೆ ಒಂದು ವಿಷಯ ನೆನಪಿಟ್ಟುಕೊಳ್ಳಬೇಕು.. ಮದ್ಯಪಾನ, ಡ್ರಗ್ಸ್ ಸೇವನೆಯಿಂದ ಯಾವ ಸಮಸ್ಯೆಯೂ ಪರಿಹಾರವಾಗುವುದಿಲ್ಲ. ಇದಲ್ಲದೆ, ಈ ಅಭ್ಯಾಸಗಳು ದೇಹಕ್ಕೆ ವಿವಿಧ ಹಾನಿಗಳನ್ನು ಉಂಟುಮಾಡುತ್ತವೆ. ಧೂಮಪಾನವು ಅಸ್ತಮಾ ಮತ್ತು ಬ್ರಾಂಕೈಟಿಸ್‌ನಂತಹ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಹೆಣ್ಣು ಮಕ್ಕಳಿಗೆ ನಿಯಮಿತ ಅವಧಿ ಇರುವುದಿಲ್ಲ. ಗರ್ಭಾವಸ್ಥೆಯ ಸಮಸ್ಯೆಗಳು ಉದ್ಭವಿಸುತ್ತವೆ. ಮಾದಕ ವ್ಯಸನ ಮುಕ್ತ ಜೀವನವು ಆರೋಗ್ಯಕರ ಜೀವನಕ್ಕೆ ಬಹಳ ಲಾಭದಾಯಕವಾಗಿರುತ್ತದೆ.

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ