AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹವಾಮಾನ ಬದಲಾವಣೆಯಿಂದ ಹೆಚ್ಚುತ್ತಿದೆ ಒಣ ಕೆಮ್ಮಿನ ಸಮಸ್ಯೆ: ತಡೆಗಟ್ಟಲು ಈ ಸಲಹೆ ಪರಿಣಾಮಕಾರಿ

ದೇಶದ ಕೆಲವು ರಾಜ್ಯಗಳಲ್ಲಿ ಕಳೆದ ಕೆಲವು ದಿನಗಳಿಂದ ಹವಾಮಾನದಲ್ಲಿ ಬದಲಾವಣೆಗಳು ಕಂಡುಬರುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ, ಅನೇಕರಿಗೆ ಒಣ ಕೆಮ್ಮಿನ ಸಮಸ್ಯೆಗಳು ಕಂಡುಬರುತ್ತಿದೆ. ಆದರೆ ಈ ಸಮಸ್ಯೆಯನ್ನು ಸಮಯಕ್ಕೆ ಸರಿಯಾಗಿ ತಡೆಯದಿದ್ದರೆ ಇದು ದೀರ್ಘಕಾಲದ ವರೆಗೆ ಮುಂದುವರಿಯಬಹುದು ಮತ್ತು ದೈನಂದಿನ ಜೀವನದ ಚಟುವಟಿಕೆಗಳ ಮೇಲೆ ಪರಿಣಾಮ ಬೀರಬಹುದು. ಮಾತನಾಡಲು, ಕೆಲಸ ಮಾಡಲು ಮತ್ತು ನಿದ್ರೆ ಮಾಡಲು ಸಹ ತೊಂದರೆ ಉಂಟಾಗಬಹುದು. ಆದ್ದರಿಂದ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ ಕೆಲವು ಸರಳ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಅತ್ಯಗತ್ಯ.

ಹವಾಮಾನ ಬದಲಾವಣೆಯಿಂದ ಹೆಚ್ಚುತ್ತಿದೆ ಒಣ ಕೆಮ್ಮಿನ ಸಮಸ್ಯೆ: ತಡೆಗಟ್ಟಲು ಈ ಸಲಹೆ ಪರಿಣಾಮಕಾರಿ
Dry Cough Prevention TipsImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Mar 18, 2026 | 8:11 PM

Share

ದೇಶದ ಹಲವು ರಾಜ್ಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹವಾಮಾನದಲ್ಲಿ ತೀವ್ರ ಬದಲಾವಣೆ ಕಂಡುಬರುತ್ತಿದೆ. ಬೆಳಿಗ್ಗೆ ಬಿಸಿಲು ಸಂಜೆಯಾಗುತ್ತಿದ್ದಂತೆ ತಂಪಾದ ವಾತಾವರಣ ಇನ್ನು ಕೆಲವು ಕಡೆಗಳಲ್ಲಿ ಮಳೆ ಇರುವುದರಿಂದ ದೇಹಕ್ಕೆ ಹೊಂದಿಕೊಳ್ಳಲು ಕಷ್ಟವಾಗುತ್ತಿದೆ. ಈ ಪರಿಸ್ಥಿತಿಯಲ್ಲಿ ಅನೇಕರಲ್ಲಿ ಒಣ ಕೆಮ್ಮಿನ (Dry Cough) ಸಮಸ್ಯೆ ಹೆಚ್ಚಾಗುತ್ತಿದೆ. ಹವೆಯಲ್ಲಿ ಇರುವ ಧೂಳು, ಹೊಗೆ, ಸಣ್ಣ ಸಣ್ಣ ಕಣಗಳು ಮತ್ತು ಮಾಲಿನ್ಯ ಕೆಮ್ಮನ್ನು ಪ್ರೇರೇಪಿಸುತ್ತವೆ. ಅದರಲ್ಲಿಯೂ ರೋಗನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ. ಆದರೆ ಈ ಸಮಸ್ಯೆಯನ್ನು ಸಮಯಕ್ಕೆ ಸರಿಯಾಗಿ ತಡೆಯದಿದ್ದರೆ ಇದು ದೀರ್ಘಕಾಲದವರೆಗೆ ಮುಂದುವರಿಯಬಹುದು ಮತ್ತು ದೈನಂದಿನ ಜೀವನದ ಚಟುವಟಿಕೆಗಳ ಮೇಲೆ ಪರಿಣಾಮ ಬೀರಬಹುದು. ಮಾತನಾಡಲು, ಕೆಲಸ ಮಾಡಲು ಮತ್ತು ನಿದ್ರೆ ಮಾಡಲು ಸಹ ತೊಂದರೆ ಉಂಟಾಗಬಹುದು. ಆದ್ದರಿಂದ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ ಕೆಲವು ಸರಳ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಅತ್ಯಗತ್ಯ.

ಒಣ ಕೆಮ್ಮು ಎಷ್ಟು ದಿನ ಇರುತ್ತದೆ?

ತಜ್ಞರ ಪ್ರಕಾರ, ಒಣ ಕೆಮ್ಮು ಒಮ್ಮೆ ಆರಂಭವಾದರೆ ಸಾಮಾನ್ಯವಾಗಿ ಒಂದು ಅಥವಾ ಎರಡು ವಾರಗಳ ವರೆಗೆ ಮುಂದುವರಿಯಬಹುದು. ಇದು ವ್ಯಕ್ತಿಯ ರೋಗನಿರೋಧಕ ಶಕ್ತಿ ಮತ್ತು ಕಾರಣಗಳ ಮೇಲೆ ಅವಲಂಬಿತವಾಗಿರುತ್ತದೆ. ಇದರ ಪ್ರಮುಖ ಲಕ್ಷಣಗಳಲ್ಲಿ ಗಂಟಲಿನಲ್ಲಿ ಕರಕರೆ ಅಥವಾ ಉರಿ ಭಾವನೆ, ನಿರಂತರ ಕೆಮ್ಮು, ಗಂಟಲು ಒಣಗಿದಂತಾಗುವುದು ಮತ್ತು ಮಾತನಾಡುವಾಗ ತೊಂದರೆ ಅನುಭವಿಸುವುದು ಸೇರಿವೆ. ಹಲವು ಸಂದರ್ಭಗಳಲ್ಲಿ ರಾತ್ರಿ ವೇಳೆ ಕೆಮ್ಮು ಹೆಚ್ಚಾಗುತ್ತದೆ, ಇದರಿಂದ ನಿದ್ರೆ ಸರಿಯಾಗಿ ಮಾಡಲು ಸಾಧ್ಯವಾಗುವುದಿಲ್ಲ. ಕೆಲವರಿಗೆ ಎದೆ ಭಾಗದಲ್ಲಿ ಸಣ್ಣ ಒತ್ತಡ ಅಥವಾ ಜಡತ್ವವೂ ಕಾಣಿಸಬಹುದು. ಒಣ ಕೆಮ್ಮು ದೀರ್ಘಕಾಲ ಮುಂದುವರಿದರೆ ಅಥವಾ ಜ್ವರ, ಉಸಿರಾಟದ ತೊಂದರೆ ಅಥವಾ ದುರ್ಬಲತೆ ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ. ಸಮಯಕ್ಕೆ ಸರಿಯಾದ ಚಿಕಿತ್ಸೆ ಪಡೆದರೆ ಸಮಸ್ಯೆಯನ್ನು ನಿಯಂತ್ರಿಸಬಹುದು.

ಇದನ್ನೂ ಓದಿ: ಪದೇ ಪದೇ ಒಣ ಕೆಮ್ಮು ಬರುವುದಕ್ಕೆ ಈ ಮನೆಮದ್ದನ್ನು ಪ್ರಯತ್ನಿಸಿ

ಹೇಗೆ ತಡೆಗಟ್ಟುವುದು?

ಒಣ ಕೆಮ್ಮಿನಿಂದ ಮುಕ್ತಿ ಪಡೆಯಲು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಅದಕ್ಕಾಗಿ ಸಮತೋಲನ ಆಹಾರ ಸೇವಿಸಬೇಕು, ವಿಟಮಿನ್ ಮತ್ತು ಖನಿಜಾಂಶಗಳು ಸಮೃದ್ಧವಾಗಿರಬೇಕು. ದಿನಪೂರ್ತಿ ಸಾಕಷ್ಟು ನೀರು ಕುಡಿಯುವುದು ಮತ್ತು ಗಂಟಲು ಒಣಗದಂತೆ ನೋಡಿಕೊಳ್ಳುವುದು ಅಗತ್ಯ. ತಣ್ಣನೆಯ ಪದಾರ್ಥಗಳು ಮತ್ತು ಧೂಳು-ಮಾಲಿನ್ಯದಿಂದ ದೂರವಿರಬೇಕು. ಹೊರಗೆ ಹೋಗುವಾಗ ಮಾಸ್ಕ್ ಧರಿಸುವುದು ಸಹಾಯಕವಾಗಬಹುದು. ಇದಲ್ಲದೆ, ಬಿಸಿ ನೀರಿನ ಆವಿಯನ್ನು ತೆಗೆದುಕೊಳ್ಳುವುದು ಮತ್ತು ಉಪ್ಪು ನೀರಿನಿಂದ ಗಾರ್ಗ್ಲ್ ಕೂಡ ಉಪಯುಕ್ತ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಭಾವೈಕ್ಯತೆ ಸಾರಿದ ವಿನೋದ್ ರಾಜ್: ಮಸೀದಿಗಳಲ್ಲಿ ಹಣ್ಣು ವಿತರಣೆ: ವಿಡಿಯೋ
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ಕಾಂಗ್ರೆಸ್​​​ ಹೈಕ,ಮಾಂಡ್​​​ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಮುಖಂಡರು!
ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್
ರಾಹುಲ್ ಗಾಂಧಿಯನ್ನು ಟಪೋರಿ ಎಂದು ಕರೆದ ಕಂಗನಾ ರಣಾವತ್
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಮಕ್ಕಳು ಗ್ರೇಟ್​​ ಎಸ್ಕೇಪ್​​
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಮುಗಿಯಿತು ‘ಲವ್ ಸೀಸನ್ಸ್’ ಸಿನಿಮಾ ಶೂಟಿಂಗ್; ಇಲ್ಲಿದೆ ಮೇಕಿಂಗ್ ವಿಡಿಯೋ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಕೋಗಿಲು ನಿರಾಶ್ರಿತರಿಗೆ ಯುಗಾದಿ, ರಂಜಾನ್ ಗಿಫ್ಟ್: ಹಕ್ಕುಪತ್ರ ವಿತರಣೆ
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಎಂಥಾ ಕಾಲ ಬಂತಪ್ಪ: ಪೊಲೀಸ್​​ ಭದ್ರತೆಯಲ್ಲಿ LPG ಸಿಲಿಂಡರ್​​ಗಳ ವಿತರಣೆ!
ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!
ಡಿಜೆ ನಿಷೇಧಿಸುವಂತೆ ಲಾಡ್ ಆಗ್ರಹ: ಆಝಾನ್ ಬ್ಯಾನ್ ಮಾಡಿ ಎಂದು ಬಿಜೆಪಿ ಶಾಸಕ!
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ
ಐಪಿಎಲ್ ಟಿಕೆಟ್ ವಂಚನೆ ನಡೆಯುತ್ತಿದೆ ಎಚ್ಚರ