Heart Attack: ಹೃದಯಾಘಾತದ ಲಕ್ಷಣಗಳನ್ನು 30 ದಿನಗಳ ಮುಂಚಿತವಾಗಿ ಪತ್ತೆಹಚ್ಚಬಹುದು
ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ವಿಶ್ವದಾದ್ಯಂತ ಪ್ರತಿ ವರ್ಷ 17.9 ಮಿಲಿಯನ್ ಜನರು ಹೃದಯರಕ್ತನಾಳದ ಕಾಯಿಲೆಗಳಿಂದ ಸಾಯುತ್ತಿದ್ದಾರೆ. ಇದರಲ್ಲಿ ಮುಕ್ಕಾಲು ಭಾಗ ಹೃದಯಾಘಾತದಿಂದ ಸಂಭವಿಸುತ್ತಿದೆ ಎಂದು ತಿಳಿಸಿದೆ. ಹಾಗಾಗಿ ಈ ಬಗ್ಗೆ ಸರಿಯಾಗಿ ತಿಳಿದುಕೊಂಡು ಇದಕ್ಕೆ ಸಂಬಂಧಿಸಿದ ಲಕ್ಷಣಗಳು ಕಂಡುಬಂದರೆ ಎಚ್ಚೆತ್ತುಕೊಳ್ಳಬೇಕಾಗಿದೆ. ಅದರಲ್ಲಿಯೂ ಹೆಚ್ಚಿನವರು, ಹೃದಯಾಘಾತ ಇದ್ದಕ್ಕಿದ್ದಂತೆ ಬರುತ್ತದೆ ಎಂದು ಭಾವಿಸಿರುತ್ತಾರೆ. ಆದರೆ ವಾಸ್ತವದಲ್ಲಿ ಇದು ಸಂಪೂರ್ಣವಾಗಿ ಭಿನ್ನವಾಗಿದೆ. ಸಾಮಾನ್ಯವಾಗಿ ಹೃದಯಾಘಾತ ಸಂಭವಿಸುವ ಮೊದಲು, ಅನೇಕ ರೀತಿಯ ರೋಗಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಇದನ್ನು ಹೃದಯಾಘಾತದ ಮೊದಲ ಚಿಹ್ನೆ ಎಂದು ಕರೆಯಲಾಗುತ್ತದೆ. ಇತ್ತೀಚಿನ ಅಧ್ಯಯನವು ಅಂತಹ 7 ರೋಗಲಕ್ಷಣಗಳನ್ನು ಗುರುತಿಸಿದೆ. ಅವು ಯಾವವು? ಇಲ್ಲಿದೆ ಮಾಹಿತಿ.
ಇತ್ತೀಚಿನ ದಿನಗಳಲ್ಲಿ ಹೃದಯಾಘಾತವು ಸೈಲೆಂಟ್ ಕಿಲ್ಲರ್ ಆಗುತ್ತಿದೆ. ಇದೊಂದು ಮಾರಣಾಂತಿಕ ವೈದ್ಯಕೀಯ ಸ್ಥಿತಿಯಾಗಿದ್ದು ಪ್ರತಿಯೊಬ್ಬರೂ ಕೂಡ ಈ ಬಗ್ಗೆ ಜಾಗೃತಿ ವಹಿಸಿ ಆರೋಗ್ಯ ಕಾಪಾಡಿಕೊಳ್ಳಬೇಕಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ವಿಶ್ವದಾದ್ಯಂತ ಪ್ರತಿ ವರ್ಷ 17.9 ಮಿಲಿಯನ್ ಜನರು ಹೃದಯರಕ್ತನಾಳದ ಕಾಯಿಲೆಗಳಿಂದ ಸಾಯುತ್ತಿದ್ದಾರೆ. ಇದರಲ್ಲಿ ಮುಕ್ಕಾಲು ಭಾಗ ಹೃದಯಾಘಾತದಿಂದ ಸಂಭವಿಸುತ್ತಿದೆ ಎಂದು ತಿಳಿಸಿದೆ. ಹಾಗಾಗಿ ಈ ಬಗ್ಗೆ ಸರಿಯಾಗಿ ತಿಳಿದುಕೊಂಡು ಇದಕ್ಕೆ ಸಂಬಂಧಿಸಿದ ಲಕ್ಷಣಗಳು ಕಂಡುಬಂದರೆ ಎಚ್ಚೆತ್ತುಕೊಳ್ಳಬೇಕಾಗಿದೆ. ಅದರಲ್ಲಿಯೂ ಹೆಚ್ಚಿನವರು, ಹೃದಯಾಘಾತ ಇದ್ದಕ್ಕಿದ್ದಂತೆ ಬರುತ್ತದೆ ಎಂದು ಭಾವಿಸಿರುತ್ತಾರೆ. ಆದರೆ ವಾಸ್ತವದಲ್ಲಿ ಇದು ಸಂಪೂರ್ಣವಾಗಿ ಭಿನ್ನವಾಗಿದೆ. ಸಾಮಾನ್ಯವಾಗಿ ಹೃದಯಾಘಾತ ಸಂಭವಿಸುವ ಮೊದಲು, ಅನೇಕ ರೀತಿಯ ರೋಗಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಇದನ್ನು ಹೃದಯಾಘಾತದ ಮೊದಲ ಚಿಹ್ನೆ ಎಂದು ಕರೆಯಲಾಗುತ್ತದೆ. ಇತ್ತೀಚಿನ ಅಧ್ಯಯನವು ಅಂತಹ 7 ರೋಗಲಕ್ಷಣಗಳನ್ನು ಗುರುತಿಸಿದೆ. ಅವು ಯಾವವು? ಇಲ್ಲಿದೆ ಮಾಹಿತಿ.
ಎನ್ಸಿಬಿಐನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಹೃದಯಾಘಾತದ ಲಕ್ಷಣಗಳು ಒಂದು ತಿಂಗಳೊಳಗೆ ಕಂಡುಬರುತ್ತದೆ ಎಂಬ ವಿಷಯವನ್ನು ಬಹಿರಂಗಪಡಿಸಿದೆ. 243 ವ್ಯಕ್ತಿಗಳ ಮೇಲೆ ನಡೆಸಿದ ಅಧ್ಯಯನದ ಪ್ರಕಾರ. ಆರೋಗ್ಯ ಕೇಂದ್ರದಲ್ಲಿ ಹೃದಯಾಘಾತಕ್ಕೆ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಶೇಕಡಾ 41 ರಷ್ಟು ಜನರು ಒಂದು ತಿಂಗಳ ಹಿಂದೆಯೇ ಅದಕ್ಕೆ ಸಂಬಂಧಿಸಿದ ಕೆಲವು ರೋಗಲಕ್ಷಣಗಳನ್ನು ಅನುಭವಿಸಿದ್ದಾರೆ ಎಂದು ವರದಿಯಾಗಿದೆ.
1 ತಿಂಗಳ ಮೊದಲು ಕಂಡುಬರುವ ಲಕ್ಷಣಗಳು
*ಎದೆ ನೋವು
*ಭಾರವಾದ ಮನಸ್ಸು
*ಹೃದಯ ಬಡಿತ ವೇಗವಾಗುವುದು
*ಉಸಿರಾಟದ ತೊಂದರೆ
*ಎದೆಯುರಿ
*ದಣಿವು
*ನಿದ್ರೆಯ ಸಮಸ್ಯೆ
ಈ ರೋಗಲಕ್ಷಣಗಳು ಸಾಮಾನ್ಯ;
ಅಧ್ಯಯನದ ಪ್ರಕಾರ, ಹೃದಯಾಘಾತದ ಈ ಆರಂಭಿಕ ಲಕ್ಷಣಗಳು ಪುರುಷರಿಗಿಂತ ಮಹಿಳೆಯರಲ್ಲಿ ಹೆಚ್ಚು ಕಂಡುಬರುತ್ತದೆ. ಸಂಶೋಧಕರ ಪ್ರಕಾರ, ಶೇಕಡಾ 50 ರಷ್ಟು ಮಹಿಳೆಯರು ಹೃದಯಾಘಾತಕ್ಕೆ ಮೊದಲು ನಿದ್ರೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಅನುಭವಿಸಿದ್ದರು. ಇನ್ನು ಪುರುಷರಲ್ಲಿ ಕೇವಲ 32 ಪ್ರತಿಶತದಷ್ಟು ಜನರಿಗೆ ಮಾತ್ರ ಈ ರೋಗಲಕ್ಷಣಗಳು ಕಂಡು ಬಂದಿದ್ದವು.
ಇದನ್ನೂ ಓದಿ: ಒಂದು ಕಾಲಿನ ಮೇಲೆ ಎಷ್ಟು ಸಮಯ ನಿಲ್ಲಬಹುದು?
ತಕ್ಷಣ ವೈದ್ಯರನ್ನು ಸಂಪರ್ಕಿಸಿ
2022 ರಲ್ಲಿ ನಡೆಸಿದ ಅಧ್ಯಯನದ ಪ್ರಕಾರ, ಎದೆ ನೋವು ಹೃದಯಾಘಾತದ ಸಾಮಾನ್ಯ ಲಕ್ಷಣವಾಗಿದೆ. ಇದು ಪುರುಷರು – ಮಹಿಳೆಯರಲ್ಲಿ ಬಹುತೇಕ ಸಮಾನವಾಗಿ ಕಂಡುಬರುತ್ತದೆ. ಈ ಲಕ್ಷಣವು ಶೇಕಡಾ 93 ರಷ್ಟು ಪುರುಷರು ಮತ್ತು ಶೇಕಡಾ 94 ರಷ್ಟು ಮಹಿಳೆಯರಲ್ಲಿ ಕಂಡು ಬಂದಿದೆ. ಏನೇ ಇರಲಿ ಈ ರೀತಿಯ ರೋಗಲಕ್ಷಣಗಳು ಕಂಡುಬಂದರೆ, ವೈದ್ಯರನ್ನು ಸಂಪರ್ಕಿಸಿ ಪರೀಕ್ಷೆ ಮಾಡಿಸಿಕೊಂಡು ಸರಿಯಾದ ಚಿಕಿತ್ಸೆ ಪಡೆಯುವುದು ಉತ್ತಮ ಎಂದು ತಜ್ಞರು ಹೇಳುತ್ತಾರೆ.
ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ