AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roasted Garlic: ರಾತ್ರಿ ಮಲಗುವ ಮುನ್ನ ಹುರಿದ ಬೆಳ್ಳುಳ್ಳಿ ತಿಂದರೆ ಏನಾಗುತ್ತದೆ ಗೊತ್ತಾ?

ಬೆಳ್ಳುಳ್ಳಿಯು ದೇಹದಲ್ಲಿನ ಕೊಬ್ಬಿನಾಂಶವನ್ನು ಕಡಿಮೆ ಮಾಡುವ ಕಾರಣ ತೂಕ ಕಡಿಮೆ ಮಾಡಿಕೊಳ್ಳಲು ಇಚ್ಚೆ ಇರುವವರು ರಾತ್ರಿ ಮಲಗುವ ಮುನ್ನ ಹುರಿದ ಬೆಳ್ಳುಳ್ಳಿಯನ್ನು ಸೇವಿಸುವುದು ಒಳಿತು. ಅಲ್ಲದೇ ಹೀಗೆ ನಿಯಮಿತವಾಗಿ ಹುರಿದ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ದೇಹದ ಎಲುಬುಗಳು ಮತ್ತು ಸ್ನಾಯುಗಳ ಬಲ ವೃದ್ಧಿಯಾಗುತ್ತದೆ.

Roasted Garlic: ರಾತ್ರಿ ಮಲಗುವ ಮುನ್ನ ಹುರಿದ ಬೆಳ್ಳುಳ್ಳಿ ತಿಂದರೆ ಏನಾಗುತ್ತದೆ ಗೊತ್ತಾ?
ರಾತ್ರಿ ಮಲಗುವ ಮುನ್ನ ಹುರಿದ ಬೆಳ್ಳುಳ್ಳಿ ತಿನ್ನುವುದರಿಂದ ಆಗುವ ಆರೋಗ್ಯ ಲಾಭಗಳು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Feb 24, 2022 | 10:25 AM

ಸಾಮಾನ್ಯವಾಗಿ ಅಡುಗೆ ಮನೆಯಲ್ಲಿ ನಾವು ನೋಡಿರಬಹುದಾದ ಒಂದು ಪದಾರ್ಥವೆಂದರೆ ಬೆಳ್ಳುಳ್ಳಿ (Garlic). ಅಡುಗೆಯಲ್ಲಿ ಬೆಳ್ಳುಳ್ಳಿಯ ಪಾತ್ರ ಅಪಾರವಾದದ್ದು. ಅದರಲ್ಲಿಯೂ ಮಾಂಸಾಹಾರ ಅಡುಗೆಯನ್ನು ತಯಾರಿಸುವಲ್ಲಿ ಬೆಳ್ಳುಳ್ಳಿಯ ಪಾತ್ರ ಬಹಳ ಮಹತ್ತರವಾದದ್ದು, ಅಲ್ಲದೇ ಈ ಬೆಳ್ಳುಳ್ಳಿಯ ವಾಸನೆಯೂ ಕೂಡಾ ಬಹಳ ಬೇಗ ನಮ್ಮ ಮೂಗಿಗೆ ತಗುಲುವಂತಹದ್ದು. ಅಲ್ಲದೇ ಈ ಬೆಳ್ಳುಳ್ಳಿಯು ಸಾಕಷ್ಟು ಔಷದೀಯ ಗುಣಗಳನ್ನು (Garlic benefits) ಒಳಗೊಂಡಿದೆ. ಇನ್ನು ಕಡಿಮೆ ಕ್ಯಾಲೋರಿಯ ಬೆಳ್ಳುಳ್ಳಿಯಲ್ಲಿ ಪ್ರೊಟೀನ್, ವಿಟಮಿನ್ ಸಿ, ವಿಟಮಿನ್ ಬಿ, ಮೆಗ್ನಿಶಿಯಂ, ಕ್ಯಾಲ್ಸಿಯಂ, ಜಿಂಕ್ ಸೇರಿದಂತೆ ಹಲವಾರು ಅವಶ್ಯಕ ಪೋಷಕಾಂಶಗಳ ಮಹಾಪೂರವೇ ಅಡಗಿರುತ್ತದೆ (Roasted Garlic).

ಕ್ಯಾನ್ಸರ್ ಕಾರಕ ಅಂಶಗಳನ್ನು ಹೊಡೆದೋಡಿಸುವಂತಹ ಗುಣವು ಈ ಬೆಳ್ಳುಳ್ಳಿಯಲ್ಲಿದೆ. ಅಲ್ಲದೇ ಬೆಳ್ಳುಳ್ಳಿಯು ಹೃದಯ ಸಂಬಂಧಿ ಕಾಯಿಲೆಗಳಿಗೆ ರಾಮಬಾಣದಂತೆ ಕೆಲಸ ಮಾಡುತ್ತದೆ. ಆದ್ದರಿಂದ ರಾತ್ರಿ ಮಲಗುವ ವೇಳೆ ಬೆಳ್ಳುಳ್ಳಿಯನ್ನು ತಿನ್ನುವುದು ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದು.

ರಾತ್ರಿ ಮಲಗುವ ಮುನ್ನ ಹುರಿದ ಬೆಳ್ಳುಳ್ಳಿಯನ್ನು ತಿನ್ನುವುದರಿಂದ ಹೆಚ್ಚುತ್ತಿರುವ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ. ಅಂದರೆ ದೇಹದಲ್ಲಿರುವ ಕೊಬ್ಬಿನಾಂಶ ಕಡಿಮೆಯಾಗುತ್ತದೆ. ಇದರಿಂದ ನಮ್ಮ ಹೃದಯ ಯಾವಾಗಲೂ ಆರೋಗ್ಯಕರ ಸ್ಥಿತಿಯನ್ನು ಕಾಯ್ದುಕೊಂಡಿರುತ್ತದೆ. ಅಲ್ಲದೇ ರಾತ್ರಿ ಮಲಗುವ ಮೊದಲು ಹುರಿದ ಬೆಳ್ಳುಳ್ಳಿಯ ಸೇವನೆಯಿಂದ ದೇಹದಲ್ಲಿ ಸೇರಿಕೊಂಡಿರುವ ವಿಷಕಾರಿ ವಸ್ತುಗಳು ಮೂತ್ರದ ಮೂಲಕ ಹೊರಹೋಗುತ್ತವೆ.

ಇನ್ನು, ಬೆಳ್ಳುಳ್ಳಿಯು ದೇಹದಲ್ಲಿನ ಕೊಬ್ಬಿನಾಂಶವನ್ನು ಕಡಿಮೆ ಮಾಡುವ ಕಾರಣ ತೂಕ ಕಡಿಮೆ ಮಾಡಿಕೊಳ್ಳಲು ಇಚ್ಚೆ ಇರುವವರು ರಾತ್ರಿ ಮಲಗುವ ಮುನ್ನ ಹುರಿದ ಬೆಳ್ಳುಳ್ಳಿಯನ್ನು ಸೇವಿಸುವುದು ಒಳಿತು. ಅಲ್ಲದೇ ಹೀಗೆ ನಿಯಮಿತವಾಗಿ ಹುರಿದ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ದೇಹದ ಎಲುಬುಗಳು ಮತ್ತು ಸ್ನಾಯುಗಳ ಬಲ ವೃದ್ಧಿಯಾಗುತ್ತದೆ.

ದೇಹ ತುಂಬಾ ಬಳಲಿದಂತೆ ಭಾಸವಾಗುತ್ತಿದ್ದರೆ, ದುರ್ಬಲವಾದಂತೆ ಭಾಸವಾಗುತ್ತಿದ್ದರೆ.. ಹುರಿದ ಬೆಳ್ಳುಳ್ಳಿಯ ಸೇವನೆಯಿಂದ ನಿಮ್ಮ ದೇಹದ ಆರೋಗ್ಯದಲ್ಲಿ ಸುಧಾರಣೆಯನ್ನು ಕಾಣಬಹುದಾಗಿದೆ, ಇನ್ನು ರಾತ್ರಿ ಮಲಗುವ ವೇಳೆಯಲ್ಲಿ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಉಸಿರಾಟದ ಸಮಸ್ಯೆ ಶೀಘ್ರ ಗುಣಮುಖವಾಗುತ್ತದೆ. (ವಾಟ್ಸ್​​ ಅಪ್ ಸಂದೇಶ)

Also Read: ಬಿಎಂಟಿಸಿಯಲ್ಲಿ ಮಹಿಳೆಯರಿಗೆ ಉಚಿತ ಸಂಚಾರಕ್ಕಾಗಿ ಆಗ್ರಹ, ಬಜೆಟ್‌ನಲ್ಲಿ ಗುಡ್‌ನ್ಯೂಸ್‌ ಕೊಡ್ತಾರಾ ಸಿಎಂ ಬೊಮ್ಮಾಯಿ?

Also Read: ಮೇಕೆದಾಟು 2.0ಗೆ ಕಾಂಗ್ರೆಸ್ ಸಜ್ಜು, ಟಕ್ಕರ್ ಕೊಡಲು ಕೇಸರಿ ಪಡೆ ಡಿಫರೆಂಟ್ ಪ್ಲ್ಯಾನ್!

Published On - 9:48 am, Thu, 24 February 22

ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?