Weight loss Tips: ತೂಕವನ್ನು ಇಳಿಸಲು ದೇಹದಂಡನೆ ಮಾಡುವುದನ್ನು ಬಿಡಿ; ಈ ಸರಳ ಆಹಾರ ಪದ್ಧತಿಯನ್ನು ಅನುಸರಿಸಿ

ತೀವ್ರವಾದ ವ್ಯಾಯಾಮ ಮಾಡುವುದರಿಂದ ಹೆಚ್ಚಿನ ಕ್ಯಾಲೊರಿಗಳನ್ನು ಮತ್ತು ದೇಹದ ಅನಗತ್ಯ ಕೊಬ್ಬನ್ನು ದೂರಮಾಡಬಹುದು. ಕ್ಯಾಲೋರಿ ಕಡಿಮೆ ಮಾಡುವ ಇನ್ನೊಂದು ಪ್ರಕ್ರಿಯೆ ಕೂಡ ಇದೆ. ಅದುವೆ ಸರಿಯಾದ ರೀತಿಯಲ್ಲಿ ಆಹಾರವನ್ನು ಸೇವಿಸುವುದು.

Weight loss Tips: ತೂಕವನ್ನು ಇಳಿಸಲು ದೇಹದಂಡನೆ ಮಾಡುವುದನ್ನು ಬಿಡಿ; ಈ ಸರಳ ಆಹಾರ ಪದ್ಧತಿಯನ್ನು ಅನುಸರಿಸಿ
ಸಾಂದರ್ಭಿಕ ಚಿತ್ರ
Follow us
preethi shettigar
| Updated By: Skanda

Updated on: Jun 08, 2021 | 7:41 AM

ಚಯಾಪಚಯ ಕ್ರಿಯೆಯು (ಮೆಟಬಾಲಿಕ್) ನಾವು ಸೇವಿಸುವ ಆಹಾರವನ್ನು ಶಕ್ತಿಯನ್ನಾಗಿ ಪರಿವರ್ತಿಸುವ ಪ್ರಕ್ರಿಯೆ ಎಂದು ಕರೆಯಲಾಗುತ್ತದೆ. ಇದು ದೈನಂದಿನ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಾಗಿರುತ್ತದೆ. ಚಯಾಪಚಯ ಪ್ರಕ್ರಿಯೆ ಹೆಚ್ಚಿದೆ ಎಂದರೆ ವ್ಯಕ್ತಿಯು ವೇಗವಾಗಿ ತೂಕ ಕಳೆದುಕೊಳ್ಳುವ ಸಾಮರ್ಥ್ಯ ಹೊಂದಿರುತ್ತಾನೆ ಎಂದರ್ಥ. ತೀವ್ರವಾದ ವ್ಯಾಯಾಮ ಮಾಡುವುದರಿಂದ ಹೆಚ್ಚಿನ ಕ್ಯಾಲೊರಿಗಳನ್ನು ಮತ್ತು ದೇಹದ ಅನಗತ್ಯ ಕೊಬ್ಬನ್ನು ದೂರಮಾಡಬಹುದು. ಕ್ಯಾಲೋರಿ ಕಡಿಮೆ ಮಾಡುವ ಇನ್ನೊಂದು ಪ್ರಕ್ರಿಯೆ ಕೂಡ ಇದೆ. ಅದುವೆ ಸರಿಯಾದ ರೀತಿಯಲ್ಲಿ ಆಹಾರವನ್ನು ಸೇವಿಸುವುದು. ಈ ಆಹಾರ ಪದ್ಧತಿ ಯಾವುದು ಎನ್ನುವ ಪ್ರಶ್ನೆಗೆ ಉತ್ತರ ಹೀಗಿದೆ.

ಚಯಾಪಚಯವನ್ನು ವೇಗಗೊಳಿಸಲು ಸಹಾಯ ಮಾಡುವ ಆಹಾರದ ಪಟ್ಟಿಯನ್ನು ವಿ.ಪಿ. ರೋಹಿತ್ ಶೆಲತ್ಕರ್ ಹಂಚಿಕೊಂಡಿದ್ದಾರೆ.

ಓಟ್ಸ್ ಓಟ್ಸ್ ಆರೋಗ್ಯಕರ ಧಾನ್ಯವಾಗಿದ್ದು, ಕೊಬ್ಬಿನಾಂಶ ಕರಗಬಲ್ಲಷ್ಟು ನಾರಿನಂಶವನ್ನು ಹೊಂದಿದೆ. ಜತೆಗೆ ಹಲವಾರು ಜೀವಸತ್ವಗಳು ಮತ್ತು ಖನಿಜಗಳನ್ನು ಇದು ಒದಗಿಸುತ್ತದೆ. ಇದು ಉತ್ತಮ ಉಪಹಾರವಾಗಿದೆ. ಓಟ್ಸ್‌ ಚಯಾಪಚಯ ಕ್ರಿಯೆಯನ್ನು ಪ್ರಾರಂಭಿಸಲು ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಮೊಟ್ಟೆ ಮೊಟ್ಟೆಗಳು ಅಮೈನೋ ಆಮ್ಲಗಳನ್ನು ಒಳಗೊಂಡಿರುವ ಆಹಾರವಾಗಿದ್ದು, ಬೆಳಿಗ್ಗೆ ತಿಂಡಿ ಜತೆಗೆ ಬೇಯಿಸಿದ ಮೊಟ್ಟೆಯನ್ನು ಸೇವಿಸಬಹುದು. ಈ ಅಭ್ಯಾಸವು ಹಸಿವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ರಕ್ತದಲ್ಲಿನ ಗ್ಲೂಕೋಸ್ ಮತ್ತು ಇನ್ಸುಲಿನ್ ಮಟ್ಟವನ್ನು ಸ್ಥಿರಗೊಳಿಸಲು ಮೊಟ್ಟೆಗಳು ಸಹಾಯ ಮಾಡುತ್ತವೆ. ಹೃದಯದ ಆರೋಗ್ಯದ ಮೇಲೆ ಸಕಾರಾತ್ಮಕ ಫಲಿತಾಂಶವನ್ನು ಹೊಂದಲು ಕೂಡ ಮೊಟ್ಟೆ ಸಹಕಾರಿಯಾಗಿದೆ.

ಮೊಸರು ಮೊಸರು ಕ್ಯಾಲ್ಸಿಯಂ ಮತ್ತು ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿದೆ. ಇದು ಉರಿಯೂತದ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಮೊಸರು ಕರುಳಿನ ಆರೋಗ್ಯಕ್ಕೆ ಅಗತ್ಯವಾದ ಪ್ರೋಬಯಾಟಿಕ್‌ಗಳನ್ನು ಹೊಂದಿರುತ್ತದೆ. ಪ್ರೋಬಯಾಟಿಕ್​ಗಳು ಕರುಳು ಮತ್ತು ಜೀರ್ಣಾಂಗವ್ಯೂಹದ ಆರೋಗ್ಯವನ್ನು ಸಮತೋಲನಗೊಳಿಸುತ್ತದೆ ಹಾಗೂ ಚಯಾಪಚಯ ಪ್ರಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಬೆಳಗಿನ ಉಪಹಾರಕ್ಕಾಗಿ ಅಥವಾ ಊಟದ ಸಮಯದಲ್ಲಿ ಮೊಸರು ಸೇವಿಸುವುದರಿಂದ ದೇಹಕ್ಕೆ ಅಗತ್ಯವಾದ ಶಕ್ತಿ ಸಿಗುತ್ತದೆ.

ಡ್ರೈ ಫ್ರೂಟ್ಸ್ ಡ್ರೈ ಫ್ರೂಟ್ಸ್ ಹೆಚ್ಚಿನ ಪ್ರೋಟೀನ್ ಅಂಶಗಳನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ದೇಹದಲ್ಲಿನ ಕೊಬ್ಬಿನಾಂಶವನ್ನು ವೇಗವಾಗಿ ಶಮನ ಮಾಡುತ್ತದೆ. ಆ ಮೂಲಕ ಚಯಾಪಚಯ  ಪ್ರಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಡ್ರೈ ಫ್ರೂಟ್ಸ್ ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಅಂಶ ಸ್ಥಿರವಾಗಿರುತ್ತದೆ. ಗಾತ್ರದಲ್ಲಿ ಸಣ್ಣದಾಗಿದ್ದರೂ, ಡ್ರೈ ಫ್ರೂಟ್ಸ್ ಸಮೃದ್ಧ ಕ್ಯಾಲೊರಿ ಹೊಂದಿರುತ್ತದೆ. ಹೀಗಾಗಿ ಮಿತವಾಗಿ ಸೇವಿಸಬೇಕು.

ಬಾಳೆಹಣ್ಣು ಬಾಳೆಹಣ್ಣಿನ ಮೇಲೆ ಇರುವ ಸಾಮಾನ್ಯ ತಪ್ಪುಗ್ರಹಿಕೆಯೆಂದರೆ ಅವು ತೂಕ ಹೆಚ್ಚಿಸಲು ಸಹಾಯ ಮಾಡುತ್ತವೆ. ಆದರೆ ಇದು ಸಂಪೂರ್ಣ ಸುಳ್ಳು. ಬಾಳೆಹಣ್ಣಿನಲ್ಲಿ ಸುಮಾರು 100 ಕ್ಯಾಲೋರಿಗಳು ಮತ್ತು ಕಡಿಮೆ ಸಕ್ಕರೆ ಅಂಶ ಇರುತ್ತದೆ. ಬಾಳೆಹಣ್ಣು ಚಯಾಪಚಯ ಪ್ರಕ್ರಿಯೆಯನ್ನು ಹೆಚ್ಚಿಸುತ್ತದೆ. ಇದು ಪೊಟ್ಯಾಶಿಯಮ್ ಅಂಶವನ್ನು ಹೊಂದಿರುವುದರಿಂದ, ಜೀವಕೋಶಗಳಿಗೆ ಪೋಷಕಾಂಶಗಳನ್ನು ನೀಡುತ್ತದೆ.

ಇದನ್ನೂ ಓದಿ: Carrot Benefits: ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಕ್ಯಾರೆಟ್ ಬೀಜದಿಂದ ತಯಾರಿಸಿದ ತೈಲವನ್ನು ಬಳಸಿ

Immunity Boosters: ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಯಾವೆಲ್ಲಾ ಜ್ಯೂಸ್ ಕುಡಿಯಬೇಕು?

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ