AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲಿ ಹೊಳೆಯುವ ಚರ್ಮಕ್ಕಾಗಿ ಈ ಆಹಾರಗಳನ್ನು ಸೇವನೆ ಮಾಡಿ

ಆರೋಗ್ಯಕರ ಆಹಾರ ನಿಮ್ಮ ಚರ್ಮಕ್ಕೆ ಹೊಳಪು ನೀಡುವುದಲ್ಲದೆ ಚಳಿಗಾಲದಲ್ಲಿ ಕಂಡು ಬರುವ ನಾನಾ ರೀತಿಯ ಚರ್ಮ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ. ನಮ್ಮ ತ್ವಚೆ ಅಂದವಾಗಿ ಕಾಣಲು ಹಲವಾರು ಮಾರ್ಗಗಳಿವೆ. ಚರ್ಮವನ್ನು ಹೊರಗಿನಿಂದ ರಕ್ಷಿಸಲು ನಾನಾ ಬಗೆಯ ಫೇಸ್ ಪ್ಯಾಕ್, ಕ್ರೀಮ್, ಲೋಷನ್, ಮಾಯಿಶ್ಚರೈಸರ್ ಮುಂತಾದ ಹಲವು ಉತ್ಪನ್ನಗಳನ್ನು ಬಳಸುತ್ತೇವೆ. ಆದರೆ, ಚರ್ಮ ಉತ್ತಮವಾಗಲು ನೀವು ಒಳಗಿನಿಂದ ಆಹಾರ ನೀಡಬೇಕು. ಇದಕ್ಕಾಗಿ ಆರೋಗ್ಯಕರ ಆಹಾರ ಕ್ರಮವನ್ನು ಅನುಸರಿಸುವುದು ಬಹಳ ಮುಖ್ಯ. ಹಾಗಾದರೆ ಚಳಿಗಾಲದಲ್ಲಿ ಉತ್ತಮ ತ್ವಚೆಯನ್ನು ಪಡೆಯಲು ಯಾವ ರೀತಿಯ ಆಹಾರಗಳನ್ನು ಸೇವಿಸಬೇಕು ಎಂಬುದನ್ನು ತಿಳಿದುಕೊಳ್ಳಿ.

ಚಳಿಗಾಲದಲ್ಲಿ ಹೊಳೆಯುವ ಚರ್ಮಕ್ಕಾಗಿ ಈ ಆಹಾರಗಳನ್ನು ಸೇವನೆ ಮಾಡಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Feb 03, 2025 | 4:47 PM

Share

ಚಳಿಗಾಲದಲ್ಲಿ ಸಾಮಾನ್ಯವಾಗಿ ಚರ್ಮದ ಹೊಳಪು ಕಡಿಮೆಯಾಗುವುದಲ್ಲದೆ ಸುಕ್ಕು, ಕಪ್ಪು ಚುಕ್ಕೆಗಳು ಕಂಡು ಬರುತ್ತದೆ. ಹೊಳೆಯುವ ಚರ್ಮ ಬೇಕಾದರೆ ಅದೇ ರೀತಿ ನಿಮ್ಮ ಆಹಾರ ಕ್ರಮಗಳನ್ನು ರೂಢಿಸಿಕೊಳ್ಳಬೇಕಾಗುತ್ತದೆ. ಏಕೆಂದರೆ ಆರೋಗ್ಯಕರ ಆಹಾರ ನಿಮ್ಮ ಚರ್ಮಕ್ಕೆ ಹೊಳಪು ನೀಡುವುದಲ್ಲದೆ ಚಳಿಗಾಲದಲ್ಲಿ ಕಂಡು ಬರುವ ನಾನಾ ರೀತಿಯ ಚರ್ಮ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ. ನಮ್ಮ ತ್ವಚೆ ಅಂದವಾಗಿ ಕಾಣಲು ಹಲವಾರು ಮಾರ್ಗಗಳಿವೆ. ಹೊರಗಿನಿಂದ ನಾನಾ ಬಗೆಯ ಫೇಸ್ ಪ್ಯಾಕ್, ಕ್ರೀಮ್, ಲೋಷನ್, ಮಾಯಿಶ್ಚರೈಸರ್ ಮುಂತಾದ ಹಲವು ಉತ್ಪನ್ನಗಳನ್ನು ಬಳಸುತ್ತೇವೆ. ಆದರೆ, ಚರ್ಮ ಉತ್ತಮವಾಗಲು ನೀವು ಒಳಗಿನಿಂದ ಆಹಾರ ನೀಡಬೇಕು. ಇದಕ್ಕಾಗಿ ಆರೋಗ್ಯಕರ ಆಹಾರ ಕ್ರಮವನ್ನು ಅನುಸರಿಸುವುದು ಬಹಳ ಮುಖ್ಯ. ಹಾಗಾದರೆ ಚಳಿಗಾಲದಲ್ಲಿ ಉತ್ತಮ ತ್ವಚೆಯನ್ನು ಪಡೆಯಲು ಯಾವ ರೀತಿಯ ಆಹಾರಗಳನ್ನು ಸೇವಿಸಬೇಕು ಎಂಬುದನ್ನು ತಿಳಿದುಕೊಳ್ಳಿ.

ಸಿಹಿ ಆಲೂಗೆಡ್ಡೆ

ಬೀಟಾ -ಕ್ಯಾರೋಟಿನ್ ನಿಂದ ಸಮೃದ್ಧವಾಗಿದ್ದು ಇದನ್ನು ವಿಟಮಿನ್ ಎ ಆಗಿ ಪರಿವರ್ತಿಸುತ್ತದೆ. ಈ ಅಂಶವು ಆರೋಗ್ಯಕರ ಚರ್ಮವನ್ನು ಉತ್ತೇಜಿಸುತ್ತದೆ. ಅದಲ್ಲದೆ ಸಿಹಿ ಆಲೂಗೆಡ್ಡೆಯಲ್ಲಿ ಮೈಕ್ರೊನ್ಯೂಟ್ರಿಯೆಂಟ್ ಸಮೃದ್ಧವಾಗಿದೆ ಮತ್ತು ಹೆಚ್ಚಿನ ಫೈಬರ್ ಅನ್ನು ಸಹ ಹೊಂದಿದೆ. ಇದು ಸ್ವಲ್ಪ ಕಡಿಮೆ ಕ್ಯಾಲೊರಿಗಳನ್ನು ಹೊಂದಿದ್ದು, ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದೆ.

ಆವಕಾಡೊ

ಈ ಹಣ್ಣಿನಲ್ಲಿ ಆರೋಗ್ಯಕರ ಕೊಬ್ಬುಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಒದಗಿಸುತ್ತದೆ. ಅದರಲ್ಲಿಯೂ ಶುಷ್ಕ ತಿಂಗಳುಗಳಲ್ಲಿ ಚರ್ಮದ ಆರೋಗ್ಯ ಕಾಪಾಡಿಕೊಳ್ಳಲು ಇದು ಸಹಾಯ ಮಾಡುತ್ತದೆ.

ಪಾಲಕ್ ಸೊಪ್ಪು

ಈ ಸೊಪ್ಪಿನಲ್ಲಿ ಇರುವಂತಹ ಆಂಟಿಆಕ್ಸಿಡೆಂಟ್ ಅಂಶವು ಚರ್ಮದಲ್ಲಿನ ನೆರಿಗೆ ಮತ್ತು ಗೆರೆಗಳನ್ನು ನಿವಾರಣೆ ಮಾಡುತ್ತದೆ. ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಗೆ ಹಾಕಿ, ಚರ್ಮಕ್ಕೆ ಕಾಂತಿ ನೀಡುತ್ತದೆ. ಆದ್ದರಿಂದ ನಿಯಮಿತವಾಗಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಪಾಲಕ ಜ್ಯೂಸ್ ಕುಡಿಯುವುದು ಬಹಳ ಒಳ್ಳೆಯದು ಇದರಿಂದ ಚರ್ಮಕ್ಕೆ ಕಾಂತಿ ಸಿಗುತ್ತದೆ.

ಬಾದಾಮಿ

ಇದನ್ನು ನಿಯಮಿತವಾಗಿ ಸೇವನೆ ಮಾಯುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ. ಅದಲ್ಲದೆ ಬಾದಾಮಿ ಎಣ್ಣೆಯನ್ನು ಹಚ್ಚುವುದರಿಂದಲೂ ಕೂಡ ಇದು ಮೈಬಣ್ಣ ಮತ್ತು ಚರ್ಮದ ಟೋನ್ ಸುಧಾರಿಸುತ್ತದೆ. ಜೊತೆಗೆ ಇದರಲ್ಲಿರುವ ಎಮೋಲಿಯಂಟ್ ಗುಣಲಕ್ಷಣಗಳು ಚರ್ಮಕ್ಕೆ ಬಹಳ ಒಳ್ಳೆಯದು.

ಕ್ಯಾರೆಟ್

ಈ ತರಕಾರಿಯಲ್ಲಿ ಬೀಟಾ -ಕ್ಯಾರೋಟಿನ್ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು ಚರ್ಮವನ್ನು ಯುವಿ ಕಿರಣಗಳಿಂದ ರಕ್ಷಿಸುತ್ತದೆ ಮತ್ತು ಚರ್ಮ ಹೊಳಪಿನಿಂದ ಕೂಡಿರುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ