
ಚಳಿಗಾಲದಲ್ಲಿ ಸಾಮಾನ್ಯವಾಗಿ ಚರ್ಮದ ಹೊಳಪು ಕಡಿಮೆಯಾಗುವುದಲ್ಲದೆ ಸುಕ್ಕು, ಕಪ್ಪು ಚುಕ್ಕೆಗಳು ಕಂಡು ಬರುತ್ತದೆ. ಹೊಳೆಯುವ ಚರ್ಮ ಬೇಕಾದರೆ ಅದೇ ರೀತಿ ನಿಮ್ಮ ಆಹಾರ ಕ್ರಮಗಳನ್ನು ರೂಢಿಸಿಕೊಳ್ಳಬೇಕಾಗುತ್ತದೆ. ಏಕೆಂದರೆ ಆರೋಗ್ಯಕರ ಆಹಾರ ನಿಮ್ಮ ಚರ್ಮಕ್ಕೆ ಹೊಳಪು ನೀಡುವುದಲ್ಲದೆ ಚಳಿಗಾಲದಲ್ಲಿ ಕಂಡು ಬರುವ ನಾನಾ ರೀತಿಯ ಚರ್ಮ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ. ನಮ್ಮ ತ್ವಚೆ ಅಂದವಾಗಿ ಕಾಣಲು ಹಲವಾರು ಮಾರ್ಗಗಳಿವೆ. ಹೊರಗಿನಿಂದ ನಾನಾ ಬಗೆಯ ಫೇಸ್ ಪ್ಯಾಕ್, ಕ್ರೀಮ್, ಲೋಷನ್, ಮಾಯಿಶ್ಚರೈಸರ್ ಮುಂತಾದ ಹಲವು ಉತ್ಪನ್ನಗಳನ್ನು ಬಳಸುತ್ತೇವೆ. ಆದರೆ, ಚರ್ಮ ಉತ್ತಮವಾಗಲು ನೀವು ಒಳಗಿನಿಂದ ಆಹಾರ ನೀಡಬೇಕು. ಇದಕ್ಕಾಗಿ ಆರೋಗ್ಯಕರ ಆಹಾರ ಕ್ರಮವನ್ನು ಅನುಸರಿಸುವುದು ಬಹಳ ಮುಖ್ಯ. ಹಾಗಾದರೆ ಚಳಿಗಾಲದಲ್ಲಿ ಉತ್ತಮ ತ್ವಚೆಯನ್ನು ಪಡೆಯಲು ಯಾವ ರೀತಿಯ ಆಹಾರಗಳನ್ನು ಸೇವಿಸಬೇಕು ಎಂಬುದನ್ನು ತಿಳಿದುಕೊಳ್ಳಿ.
ಬೀಟಾ -ಕ್ಯಾರೋಟಿನ್ ನಿಂದ ಸಮೃದ್ಧವಾಗಿದ್ದು ಇದನ್ನು ವಿಟಮಿನ್ ಎ ಆಗಿ ಪರಿವರ್ತಿಸುತ್ತದೆ. ಈ ಅಂಶವು ಆರೋಗ್ಯಕರ ಚರ್ಮವನ್ನು ಉತ್ತೇಜಿಸುತ್ತದೆ. ಅದಲ್ಲದೆ ಸಿಹಿ ಆಲೂಗೆಡ್ಡೆಯಲ್ಲಿ ಮೈಕ್ರೊನ್ಯೂಟ್ರಿಯೆಂಟ್ ಸಮೃದ್ಧವಾಗಿದೆ ಮತ್ತು ಹೆಚ್ಚಿನ ಫೈಬರ್ ಅನ್ನು ಸಹ ಹೊಂದಿದೆ. ಇದು ಸ್ವಲ್ಪ ಕಡಿಮೆ ಕ್ಯಾಲೊರಿಗಳನ್ನು ಹೊಂದಿದ್ದು, ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದೆ.
ಈ ಹಣ್ಣಿನಲ್ಲಿ ಆರೋಗ್ಯಕರ ಕೊಬ್ಬುಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಒದಗಿಸುತ್ತದೆ. ಅದರಲ್ಲಿಯೂ ಶುಷ್ಕ ತಿಂಗಳುಗಳಲ್ಲಿ ಚರ್ಮದ ಆರೋಗ್ಯ ಕಾಪಾಡಿಕೊಳ್ಳಲು ಇದು ಸಹಾಯ ಮಾಡುತ್ತದೆ.
ಈ ಸೊಪ್ಪಿನಲ್ಲಿ ಇರುವಂತಹ ಆಂಟಿಆಕ್ಸಿಡೆಂಟ್ ಅಂಶವು ಚರ್ಮದಲ್ಲಿನ ನೆರಿಗೆ ಮತ್ತು ಗೆರೆಗಳನ್ನು ನಿವಾರಣೆ ಮಾಡುತ್ತದೆ. ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಗೆ ಹಾಕಿ, ಚರ್ಮಕ್ಕೆ ಕಾಂತಿ ನೀಡುತ್ತದೆ. ಆದ್ದರಿಂದ ನಿಯಮಿತವಾಗಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಪಾಲಕ ಜ್ಯೂಸ್ ಕುಡಿಯುವುದು ಬಹಳ ಒಳ್ಳೆಯದು ಇದರಿಂದ ಚರ್ಮಕ್ಕೆ ಕಾಂತಿ ಸಿಗುತ್ತದೆ.
ಇದನ್ನು ನಿಯಮಿತವಾಗಿ ಸೇವನೆ ಮಾಯುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ. ಅದಲ್ಲದೆ ಬಾದಾಮಿ ಎಣ್ಣೆಯನ್ನು ಹಚ್ಚುವುದರಿಂದಲೂ ಕೂಡ ಇದು ಮೈಬಣ್ಣ ಮತ್ತು ಚರ್ಮದ ಟೋನ್ ಸುಧಾರಿಸುತ್ತದೆ. ಜೊತೆಗೆ ಇದರಲ್ಲಿರುವ ಎಮೋಲಿಯಂಟ್ ಗುಣಲಕ್ಷಣಗಳು ಚರ್ಮಕ್ಕೆ ಬಹಳ ಒಳ್ಳೆಯದು.
ಈ ತರಕಾರಿಯಲ್ಲಿ ಬೀಟಾ -ಕ್ಯಾರೋಟಿನ್ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು ಚರ್ಮವನ್ನು ಯುವಿ ಕಿರಣಗಳಿಂದ ರಕ್ಷಿಸುತ್ತದೆ ಮತ್ತು ಚರ್ಮ ಹೊಳಪಿನಿಂದ ಕೂಡಿರುತ್ತದೆ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ