Health Tips: ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಈ ಆಹಾರ ಪದಾರ್ಥಗಳನ್ನು ಪ್ರಯತ್ನಿಸಿ

ನೀವು ಅಧಿಕ ರಕ್ತದೊತ್ತಡವನ್ನು ಹೊಂದಿದ್ದರೆ ಮತ್ತು ಸರಳ ಪರಿಹಾರಗಳನ್ನು ಹುಡುಕುತ್ತಿದ್ದರೆ ನಿಮ್ಮ ರಕ್ತದೊತ್ತಡವನ್ನು ಕಡಿಮೆ ಮಾಡಲು ನೀವು ಕೆಲವು ಮನೆ ಆಹಾರಗಳನ್ನು ಸೇವಿಸಬಹುದು. ಅವುಗಳು ಯಾವುದು ಎಂದು ಈ ಸ್ಟೋರಿಯಲ್ಲಿ ನೀಡಿದ್ದೇವೆ.

Health Tips: ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಈ ಆಹಾರ ಪದಾರ್ಥಗಳನ್ನು ಪ್ರಯತ್ನಿಸಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on: Jun 04, 2022 | 8:00 AM

ಅನೇಕ ಜನರು ಅಧಿಕ ರಕ್ತದೊತ್ತಡ(Hypertension)ದಿಂದ ಬಳಲುತ್ತಿದ್ದಾರೆ. ಇಂಥವರಿಗೆ ಆರೋಗ್ಯಕರ ಆಹಾರ ಮತ್ತು ಅವರ ಆಹಾರವನ್ನು ಸರಿಹೊಂದಿಸುವಂತಹ ಜೀವನಶೈಲಿ (Lifestyle) ಅಳವಡಿಸಿಕೊಳ್ಳುವುದು ಅಗತ್ಯವಿರುತ್ತದೆ. ನೀವು ಅಧಿಕ ರಕ್ತದೊತ್ತಡವನ್ನು ಹೊಂದಿದ್ದರೆ ಮತ್ತು ಸರಳ ಪರಿಹಾರಗಳನ್ನು ಹುಡುಕುತ್ತಿದ್ದರೆ ನಿಮ್ಮ ರಕ್ತದೊತ್ತಡವನ್ನು ಕಡಿಮೆ ಮಾಡಲು ನೀವು ಕೆಲವು ಮನೆ ಆಹಾರಗಳನ್ನು ಸೇವಿಸಬೇಕು.

ಇದನ್ನೂ ಓದಿ: Health Tips: ಹೆಚ್ಚಿದ ತಾಪಮಾನ, ಹೃದಯದ ರಕ್ಷಣೆ ಹೇಗೆ? ಇಲ್ಲಿದೆ ಕೆಲವೊಂದು ಸಲಹೆಗಳು

ರಕ್ತದೊತ್ತಡ ಕಡಿಮೆ ಮಾಡಲು ಏನು ಸೇವಿಸಬೇಕು?

  • ಬಾಳೆಹಣ್ಣು: ಸುಲಭವಾಗಿ ಸಿಪ್ಪೆ ತೆಗೆಯಬಹುದಾದ ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್ ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಇದು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದನ್ನು ಮಿಲ್ಕ್​ಶೇಕ್​ ಮತ್ತು ಇತರ ಆಹಾರಗಳೊಂದಿಗೆ ಸೇವಿಸಬಹುದು.
  • ಬೀಟ್ರೂಟ್: ಕಡುಗೆಂಪು ಬೀಟ್ರೂಟ್​ನಲ್ಲಿ ಹೇರಳವಾಗಿರುವ ನೈಟ್ರೇಟ್‌ಗಳು ರಕ್ತನಾಳಗಳನ್ನು ವಿಶ್ರಾಂತಿ ಮಾಡಲು ಮತ್ತು ರಕ್ತದ ಹರಿವನ್ನು ವರ್ಧಿಸಲು ಸಹಾಯ ಮಾಡುತ್ತದೆ.
  • ಬೆಳ್ಳುಳ್ಳಿ: ಇದು ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿಫಂಗಲ್ ಆಹಾರವಾಗಿದ್ದು, ಸ್ನಾಯುಗಳನ್ನು ವಿಶ್ರಾಂತಿ ಮಾಡುವ ಮೂಲಕ ಮತ್ತು ರಕ್ತನಾಳಗಳ ವಿಸ್ತರಣೆಯ ಮೂಲಕ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
  • ಹೆಚ್ಚು ನೀರು: ನಮ್ಮ ದೇಹದ ವಿಷಕಾರಕ ವಸ್ತುಗಳನ್ನು ಹೊರಹಾಕಲು ಮತ್ತು ದೇಹದ ರಕ್ತದೊತ್ತಡವನ್ನು ನಿಯಂತ್ರಿಸಲು ಅತೀ ಅಗತ್ಯವಾದದ್ದು ನೀರು. ಹೀಗಾಗಿ ದಿನಕ್ಕೆ 3 ರಿಂದ 4 ಲೀಟರ್​ನಷ್ಟು ನೀಡು ಕುಡಿಯಿರಿ.
  • ಸಮತೋಲನ ಆಹಾರ ಸೇವನೆ: ದೇಹವು ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗುವ ಸಮತೋಲಿತ ಆಹಾರ ಸೇವಿಸಿ. ತಾಜಾ ಹಣ್ಣುಗಳು, ಹಸಿ ತರಕಾರಿಗಳು, ಧಾನ್ಯಗಳು ಹಾಗೂ ಪೋಷಕಾಂಶಯುಕ್ತ ಆಹಾರವನ್ನು ಸೇವಿಸಬೇಕು.

ಇದನ್ನೂ ಓದಿ: ಚೂರಿಯಂತೆ ಚೂಪಾದ ಮುಳ್ಳುಗಳಿಂದ ಆವೃತ್ತವಾದ, ಕೆಂಪು ಕೆಂಪಾದ ಹಣ್ಣುಗಳಿಂದ ಆಕರ್ಷಿಸುವ ಪಾಪಾಸುಕಳ್ಳಿ ಆರೋಗ್ಯದ ಖಜಾನೆಯನ್ನೇ ಹೊಂದಿದೆ!

ರಕ್ತದೊತ್ತಡ ನಿಯಂತ್ರಣಕ್ಕೆ ಏನನ್ನು ತ್ಯಜಿಸಬೇಕು?

  1. ಧೂಮಪಾನ, ಮದ್ಯಪಾನ ತ್ಯಜಿಸಿ: ನಿರಂತರ ಧೂಮಪಾನ, ಮದ್ಯಪಾನವು ರಕ್ತದೊತ್ತಡ, ಹೃದಯಾಘಾತಕ್ಕೆ ಕಾರಣವಾಗಬಹುದು. ಧೂಮಪಾನ ಮಾಡುವುದರಿಂದ ರಕ್ತನಾಳಗಳು ಕುಗ್ಗಿಕೊಂಡು ರಕ್ತದೊತ್ತಡವನ್ನು ಉಂಟುಮಾಡುತ್ತದೆ. ಹೀಗಾಗಿ ಈ ದುಶ್ಚಟಗಳಿಂದ ದೂರ ಇರಿ.
  2. ಉಪ್ಪಿನಾಂಶ ತ್ಯಜಿಸಿ: ಉಪ್ಪಿನ ಅಂಶ ಜಾಸ್ತಿ ಇರುವ ಆಹಾರಗಳಾದ ಉಪ್ಪಿನಕಾಯಿ, ಕರಿದ ತಿಂಡಿಗಳು, ಸಿದ್ಧ ಆಹಾರಗಳನ್ನು ತ್ಯಜಿಸಬೇಕು.
  3. ಒತ್ತಡದ ವಾತಾವರಣದಲ್ಲಿ ಕೆಲಸ ಮಾಡುವುದನ್ನು ಕಡಿಮೆ ಮಾಡಬೇಕು: ಕೆಲಸದ ಸಮಯದಲ್ಲಿ ಅತಿಯಾದ ಒತ್ತಡದಿಂದ ರಸದೂತಗಳು ಸ್ರವಿಸುವಿಕೆಯಲ್ಲಿ ಏರುಪೇರಾಗಿ ರಕ್ತದೊತ್ತಡಕ್ಕೆ ಕಾರಣವಾಗಬಹುದು. ಹೀಗಾಗಿ ಒತ್ತಡದ ವಾತಾವರಣದಲ್ಲಿ ಕೆಲಸ ಮಾಡುವುದನ್ನು ಕಡಿಮೆ ಮಾಡಬೇಕು.‘

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ