AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲಂಗಡಿ ಜತೆಗೆ ಅದರ ಬೀಜ ಕೂಡ ತಿನ್ನಿ, ಮತ್ತೆ ನೋಡಿ ದೇಹದಲಾಗುವ ಬದಲಾವಣೆ

ಕಲ್ಲಂಗಡಿ ಬೇಸಿಗೆಯ ಹಣ್ಣು, ಈ ಹಣ್ಣಿನಲ್ಲಿ ಅನೇಕ ಆರೋಗ್ಯ ಪ್ರಯೋಜನಗಳು ಇದೆ. ಇದರಲ್ಲಿ ನೀರಿನ ಅಂಶಗಳಿದ್ದು, ನಿರ್ಜಲೀಕರಣದಿಂದ ತಪ್ಪಿಸಿಕೊಳ್ಳಬಹುದು. ಶೇಕಡಾ 92 ರಷ್ಟು ನೀರು ಈ ಕಲ್ಲಂಗಡಿಯಲ್ಲಿದೆ. ಕಲ್ಲಂಗಡಿ ಮಾತ್ರವಲ್ಲದೆ, ಅದರ ಬೀಜ ಕೂಡ ಅತ್ಯಂತ ಪ್ರಯೋಜನಕಾರಿಯಾಗಿದೆ. ಈ ಬಗ್ಗೆ ಇಲ್ಲಿದೆ ಮಾಹಿತಿ.

ಕಲ್ಲಂಗಡಿ ಜತೆಗೆ ಅದರ ಬೀಜ ಕೂಡ ತಿನ್ನಿ, ಮತ್ತೆ ನೋಡಿ ದೇಹದಲಾಗುವ ಬದಲಾವಣೆ
Water MelonImage Credit source: Getty Images
ಸಾಯಿನಂದಾ
| Edited By: |

Updated on: Apr 26, 2025 | 5:47 PM

Share

ಕಲ್ಲಂಗಡಿ ಹಣ್ಣು (Water Melon) ಈ ಬೇಸಿಗೆಯಲ್ಲಿ ದೇಹಕ್ಕೆ ಒಳ್ಳೆಯದು, ಬಹಳ ಪೌಷ್ಟಿಕಾಂಶವನ್ನು ಒದಗಿಸುವ ಹಣ್ಣು ಈ ಕಲ್ಲಂಗಡಿ ಹಣ್ಣು. ಇದರಲ್ಲಿ ನೀರಿನ ಅಂಶಗಳಿದ್ದು, ನಿರ್ಜಲೀಕರಣದಿಂದ ತಪ್ಪಿಸಿಕೊಳ್ಳಬಹುದು. ಶೇಕಡಾ 92 ರಷ್ಟು ನೀರು ಈ ಕಲ್ಲಂಗಡಿಯಲ್ಲಿದೆ. ಜೀವಸತ್ವಗಳು ಮತ್ತು ಕಬ್ಬಿಣದಂತಹ ಪೋಷಕಾಂಶಗಳನ್ನು ಸಹ ಒಳಗೊಂಡಿದೆ. ಈ ಹಣ್ಣಿನಲ್ಲಿ ಕ್ಯಾಲೋರಿಗಳು ಕಡಿಮೆ ಇರುವುದರಿಂದ, ಮಧುಮೇಹ ಮತ್ತು ಹೃದ್ರೋಗದಿಂದ ಬಳಲುತ್ತಿರುವ ರೋಗಿಗಳಿಗೆ ಇದು ಪ್ರಯೋಜನಕಾರಿಯಾಗಿದೆ. ಈ ಕಲ್ಲಂಗಡಿ ಮಾತ್ರವಲ್ಲದೆ, ಅದರ ಬೀಜ ಕೂಡ ಹೆಚ್ಚು ಆರೋಗ್ಯ ಉಪಯುಕ್ತವಾಗಿದೆ. ಕಲ್ಲಂಗಡಿ ಬೀಜಗಳನ್ನು ತಿನ್ನುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಇಲ್ಲಿದೆ ನೋಡಿ.

ಕಲ್ಲಂಗಡಿ ಬೀಜಗಳನ್ನು ತಿನ್ನುವುದರಿಂದ ಏನೆಲ್ಲಾ ಪ್ರಯೋಜನ

ಜೀರ್ಣಾಂಗ ವ್ಯವಸ್ಥೆ : ಕಲ್ಲಂಗಡಿಯ ಮಧ್ಯ ಭಾಗವು ಪೊಟ್ಯಾಸಿಯಮ್ ಮತ್ತು ಹೆಚ್ಚಿನ ಫೈಬರ್ ಅನ್ನು ಹೊಂದಿರುತ್ತದೆ, ಇದು ನಿಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಕಲ್ಲಂಗಡಿ ಬೀಜಗಳನ್ನು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆ ಸರಿಯಾಗಿರುತ್ತದೆ. ಮಲಬದ್ಧತೆಯಂತಹ ಸಮಸ್ಯೆಗಳು ಕಡಿಮೆಯಾಗುತ್ತದೆ.

ಹೊಳೆಯುವ ಚರ್ಮ; ಚರ್ಮದ ಸಮಸ್ಯೆಗಳಿರುವವರು ಕಲ್ಲಂಗಡಿ ಬೀಜಗಳನ್ನು ಖಂಡಿತವಾಗಿ ತಿನ್ನಬೇಕು, ಏಕೆಂದರೆ ಅವುಗಳು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಇದು ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ.

ತೂಕ ಇಳಿಕೆ: ಕಲ್ಲಂಗಡಿಯಲ್ಲಿ ಕ್ಯಾಲೋರಿಗಳು ಕಡಿಮೆ ಮತ್ತು ನೀರಿನ ಅಂಶ ಹೆಚ್ಚಿದ್ದು, ಇದರಲ್ಲಿ ಫೈಬರ್, ವಿಟಮಿನ್ ಎ, ಫೋಲೇಟ್, ಪೊಟ್ಯಾಸಿಯಮ್, ಪ್ರೋಟೀನ್ ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ. ತೂಕ ಇಳಿಸಿಕೊಳ್ಳಲು ಬಯಸುವವರು ಈ ಹಣ್ಣನ್ನು ತಮ್ಮ ಆಹಾರದ ಭಾಗವಾಗಿ ಮಾಡಿಕೊಳ್ಳಬಹುದು.

ರೋಗನಿರೋಧಕ ಶಕ್ತಿ: ಕಲ್ಲಂಗಡಿ ಬೀಜಗಳನ್ನು ತಿನ್ನುವುದರಿಂದ ಸತುವಿನ ಮಟ್ಟ ನಿಯಂತ್ರಣದಲ್ಲಿರುತ್ತದೆ. ಸತುವು ಪ್ರತಿರಕ್ಷಣಾ ವ್ಯವಸ್ಥೆಯ ಜೀವಕೋಶಗಳನ್ನು ಬಲಪಡಿಸಲು ಕೆಲಸ ಮಾಡುತ್ತದೆ. ಆದ್ದರಿಂದ ನೀವು ಅನಾರೋಗ್ಯದಿಂದ ದೂರ ಇರಬಹುದು.

ಆರೋಗ್ಯಕರ ಕೊಬ್ಬು: ಏಕಾಪರ್ಯಾಪ್ತ ಮತ್ತು ಬಹುಅಪರ್ಯಾಪ್ತ ಕೊಬ್ಬಿನಾಮ್ಲಗಳು ಆರೋಗ್ಯಕರ ಕೊಬ್ಬುಗಳಾಗಿವೆ. ಈ ಆರೋಗ್ಯಕರ ಕೊಬ್ಬುಗಳು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು, ಹೃದಯಾಘಾತ ಮತ್ತು ಪಾರ್ಶ್ವವಾಯುಗಳನ್ನು ತಡೆಯಲು ಮುಖ್ಯವಾಗಿವೆ.

ನರಮಂಡಲ: ಕಲ್ಲಂಗಡಿ ಬೀಜಗಳಲ್ಲಿ ವಿಟಮಿನ್ ಬಿ ಇದ್ದು, ಇದು ನಮ್ಮ ನರಮಂಡಲದ ಕಾರ್ಯನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಒಬ್ಬ ವ್ಯಕ್ತಿಯು ಬುದ್ಧಿಮಾಂದ್ಯತೆ ಅಥವಾ ಯಾವುದೇ ರೀತಿಯ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರೆ ಇದು ಸಹಾಯಕವಾಗಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು