Health Tips: ದಿನಕ್ಕೆ 2 ಬಾಳೆಹಣ್ಣು ತಿನ್ನಿ; ಪ್ರಯೋಜನ ಸಾಕಷ್ಟಿವೆ
ದಿನಕ್ಕೆ ಎರಡು ಬಾಳೆಹಣ್ಣುಗಳನ್ನು ಸೇವಿಸುವುದರಿಂದ ಕರುಳಿನ ಕಾರ್ಯ ಮತ್ತು ಜೀರ್ಣಕಾರಿ ಆರೋಗ್ಯವನ್ನು ಸುಧಾರಿಸುತ್ತದೆ. ಇದಲ್ಲದೇ ಬಾಳೆಹಣ್ಣನ್ನು ನಿಯಮಿತವಾಗಿ ಸೇವಿಸುವುದರಿಂದ ಮೆದುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಆದ್ದರಿಂದ ಪ್ರತೀ ದಿನ ಕನಿಷ್ಟ ಒಂದು ಅಥವಾ ಎರಡು ಬಾಳೆಹಣ್ಣು ತಿನ್ನಿ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.
ಬಾಳೆಹಣ್ಣು ತಿನ್ನುವುದರಿಂದ ಹಲವಾರು ರೋಗಗಳನ್ನು ತಡೆಯಬಹುದು. ಪ್ರತಿ ಋತುವಿನಲ್ಲೂ ಸಿಗುವ ಬಾಳೆಹಣ್ಣು ದೇಹಕ್ಕೆ ಒಳ್ಳೆಯದು. ಬಾಳೆಹಣ್ಣಿನಲ್ಲಿ ವಿಟಮಿನ್ ಬಿ6, ವಿಟಮಿನ್ ಸಿ, ಫೈಬರ್ ಮತ್ತು ಮ್ಯಾಂಗನೀಸ್ ಇದೆ. ಅಲ್ಲದೆ ಇದು ಕೊಲೆಸ್ಟ್ರಾಲ್ ಮುಕ್ತ ಹಣ್ಣು ಎಂದು ಪರಿಗಣಿಸಲಾಗಿದೆ. ಆದ್ದರಿಂದ ಪ್ರತೀ ದಿನ ಕನಿಷ್ಟ ಒಂದು ಅಥವಾ ಎರಡು ಬಾಳೆಹಣ್ಣು ತಿನ್ನಿ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ.
ತೂಕ ನಷ್ಟ:
ಬಾಳೆಹಣ್ಣಿನಲ್ಲಿ ನಾರಿನಂಶ ಮತ್ತು ವಿಟಮಿನ್ ಗಳು ಇರುವುದರಿಂದ ಸುಲಭವಾಗಿ ತೂಕ ಇಳಿಸಲು ಸಹಾಯ ಮಾಡುತ್ತದೆ. ಬಾಳೆಹಣ್ಣಿನ ಕ್ಯಾಲೋರಿ ಅಂಶದಿಂದಾಗಿ, ಇದು ಹೊಟ್ಟೆಯನ್ನು ತ್ವರಿತವಾಗಿ ತುಂಬುತ್ತದೆ. ದೀರ್ಘಕಾಲದವರೆಗೆ ಹಸಿವನ್ನು ತಡೆಯುತ್ತದೆ.
ಮೂಳೆಗಳ ಆರೋಗ್ಯ:
ಬಾಳೆಹಣ್ಣಿನಲ್ಲಿರುವ ಕ್ಯಾಲ್ಸಿಯಂ ಮೂಳೆಗಳನ್ನು ಬಲವಾಗಿಡುತ್ತದೆ. ಮೆಗ್ನೀಸಿಯಮ್ ಮೂಳೆಗಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ನೀವು ಪ್ರತಿದಿನ ಬಾಳೆಹಣ್ಣು ಮತ್ತು ಹಾಲನ್ನು ಸೇವಿಸಿದರೆ ಅದು ನಿಮ್ಮ ದುರ್ಬಲ ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ.
ಹೊಟ್ಟೆಯ ಆರೋಗ್ಯ:
ದಿನಕ್ಕೆ ಎರಡು ಬಾಳೆಹಣ್ಣುಗಳನ್ನು ಸೇವಿಸುವುದರಿಂದ ಕರುಳಿನ ಕಾರ್ಯ ಮತ್ತು ಜೀರ್ಣಕಾರಿ ಆರೋಗ್ಯವನ್ನು ಸುಧಾರಿಸುತ್ತದೆ. ಬಾಳೆಹಣ್ಣುಗಳು ಕರಗುವ ಫೈಬರ್ ಅನ್ನು ಹೊಂದಿರುತ್ತವೆ. ಇದು ಜೀರ್ಣಕ್ರಿಯೆಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಕರಗುವ ಫೈಬರ್ ನೀರನ್ನು ಹೀರಿಕೊಳ್ಳುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆಯ ಮೂಲಕ ಚಲಿಸುತ್ತದೆ. ಇದು ಮಲಬದ್ಧತೆಯ ಸಮಸ್ಯೆಯನ್ನು ನಿವಾರಿಸುತ್ತದೆ. ಪ್ರತಿದಿನ ಬಾಳೆಹಣ್ಣು ತಿನ್ನುವುದರಿಂದ ಹೊಟ್ಟೆಯ ಆಮ್ಲವನ್ನು ಕಡಿಮೆ ಮಾಡುತ್ತದೆ ಮತ್ತು ದೇಹದಿಂದ ತ್ಯಾಜ್ಯವನ್ನು ತೆಗೆದುಹಾಕುತ್ತದೆ.
ಇದನ್ನೂ ಓದಿ: ಶವಾಸನ ಮಾಡುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ?
ಮೆದುಳಿನ ಆರೋಗ್ಯ:
ಬಾಳೆಹಣ್ಣನ್ನು ನಿಯಮಿತವಾಗಿ ಸೇವಿಸುವುದರಿಂದ ಮೆದುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಬಾಳೆಹಣ್ಣಿನಲ್ಲಿ ವಿಟಮಿನ್ ಬಿ6 ಸಮೃದ್ಧವಾಗಿದೆ. ಸಂತೋಷದ ಹಾರ್ಮೋನ್‌ಗಳಾದ ಸಿರೊಟೋನಿನ್ ಮತ್ತು ಡೋಪಮೈನ್ ಅನ್ನು ಬಿಡುಗಡೆ ಮಾಡುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ಇದು ನಿಮ್ಮನ್ನು ಸಂತೋಷದ ಮನಸ್ಥಿತಿಯಲ್ಲಿ ಇರಿಸುತ್ತದೆ. ಜೊತೆಗೆ ಒಳ್ಳೆಯ ನಿದ್ದೆಯನ್ನೂ ನೀಡುತ್ತದೆ. ಉತ್ತಮ ಜ್ಞಾನಕ್ಕೆ ಕಾರಣವಾಗುತ್ತದೆ. ಬಾಳೆಹಣ್ಣಿನಲ್ಲಿರುವ ಮೆಗ್ನೀಸಿಯಮ್ ರಕ್ತ ಪರಿಚಲನೆ ಸುಧಾರಿಸುತ್ತದೆ. ರಕ್ತನಾಳಗಳನ್ನು ಸಡಿಲಗೊಳಿಸುತ್ತದೆ. ಇದು ಮೆದುಳಿಗೆ ಸರಿಯಾದ ಆಮ್ಲಜನಕವನ್ನು ಒದಗಿಸುವ ಮೂಲಕ ಮೆದುಳಿನ ಕಾರ್ಯವನ್ನು ಸುಧಾರಿಸುತ್ತದೆ.
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ