AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Non-Veg Side Effects: ವಾರ ಪೂರ್ತಿ ಮಾಂಸಾಹಾರ ಸೇವನೆ ಮಾಡುತ್ತೀರಾ, ನಿಮಗೆ ಈ ರೋಗ ತಪ್ಪಿದ್ದಲ್ಲ

ಚಿಕನ್, ಮಟನ್ ಇಲ್ಲದೆ ಊಟ ಮಾಡದವರಿದ್ದಾರೆ. ಪ್ರತಿದಿನ ಕೊಟ್ಟರೂ ಹಿಂಜರಿಯದೇ ತಿನ್ನುತ್ತಾರೆ. ವಾಸ್ತವದಲ್ಲಿ ಮಾಂಸ ತುಂಬಾ ಇಷ್ಟಪಡುವವರಿದ್ದು, ಇದು ದೇಹವನ್ನು ಬಲಪಡಿಸುವುದು ಮಾತ್ರವಲ್ಲದೆ ಕಬ್ಬಿಣ, ಸತು, ಜೀವಸತ್ವಗಳು, ಅಗತ್ಯ ಕೊಬ್ಬಿನಾಮ್ಲಗಳಿಂದ ಸಮೃದ್ಧವಾಗಿದೆ ಮತ್ತು ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ ಎಂಬುದರಲ್ಲಿ ಸಂದೇಹವಿಲ್ಲ. ಆದರೆ ನೀವು ಪ್ರತಿನಿತ್ಯ ಮಾಂಸಾಹಾರ ಸೇವನೆ ಮಾಡುತ್ತಿದ್ದರೆ ಇಂದೇ ಆ ಅಭ್ಯಾಸವನ್ನು ಬಿಟ್ಟು ಬಿಡಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಏಕೆ ಗೊತ್ತಾ?

Non-Veg Side Effects: ವಾರ ಪೂರ್ತಿ ಮಾಂಸಾಹಾರ ಸೇವನೆ ಮಾಡುತ್ತೀರಾ, ನಿಮಗೆ ಈ ರೋಗ ತಪ್ಪಿದ್ದಲ್ಲ
ಸಾಂಧರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Sep 07, 2024 | 12:20 PM

Share

ತುಂಡು ಇಲ್ಲದೆ ಊಟವಿಲ್ಲ ಎಂಬ ಮಾತನ್ನು ಶಿರಸಾ ವಹಿಸಿ ಪಾಲಿಸುವವರಿದ್ದಾರೆ. ಅಂದರೆ ಚಿಕನ್, ಮಟನ್ ಇಲ್ಲದೆ ಊಟ ಮಾಡದವರಿದ್ದಾರೆ. ಪ್ರತಿದಿನ ಕೊಟ್ಟರೂ ಹಿಂಜರಿಯದೇ ತಿನ್ನುತ್ತಾರೆ. ವಾಸ್ತವದಲ್ಲಿ ಮಾಂಸ ತುಂಬಾ ಇಷ್ಟಪಡುವವರಿದ್ದು, ಇದು ದೇಹವನ್ನು ಬಲಪಡಿಸುವುದು ಮಾತ್ರವಲ್ಲದೆ ಕಬ್ಬಿಣ, ಸತು, ಜೀವಸತ್ವಗಳು, ಅಗತ್ಯ ಕೊಬ್ಬಿನಾಮ್ಲಗಳಿಂದ ಸಮೃದ್ಧವಾಗಿದೆ ಮತ್ತು ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ ಎಂಬುದರಲ್ಲಿ ಸಂದೇಹವಿಲ್ಲ. ಆದರೆ ನೀವು ಪ್ರತಿನಿತ್ಯ ಮಾಂಸಾಹಾರ ಸೇವನೆ ಮಾಡುತ್ತಿದ್ದರೆ ಇಂದೇ ಆ ಅಭ್ಯಾಸವನ್ನು ಬಿಟ್ಟು ಬಿಡಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಏಕೆ ಗೊತ್ತಾ? ದಿನನಿತ್ಯ ಮಾಂಸಾಹಾರ ಸೇವನೆ ಮಾಡುತ್ತಿದ್ದರೆ ನೀವು ಹೃದ್ರೋಗ, ಕ್ಯಾನ್ಸರ್, ಮಧುಮೇಹ, ನ್ಯುಮೋನಿಯಾ, ರಕ್ತದೊತ್ತಡ, ಬೊಜ್ಜು, ಹೆಚ್ಚಿನ ಕೊಲೆಸ್ಟ್ರಾಲ್, ಜೀರ್ಣಕಾರಿ ಸಮಸ್ಯೆಗಳು, ಯೂರಿಕ್ ಆಮ್ಲದಂತಹ ಸಮಸ್ಯೆಗಳಿಂದ ಬಳಲಬಹುದು ಎಂದು ವೈದ್ಯಕೀಯ ತಜ್ಞರು ಎಚ್ಚರಿಸುತ್ತಾರೆ. ಹಾಗಾಗಿ ವಾರಕ್ಕೆ 3 ಬಾರಿಗಿಂತ ಹೆಚ್ಚು ಮಾಂಸ ತಿನ್ನುವುದು ಆರೋಗ್ಯಕ್ಕೆ ತುಂಬಾ ಹಾನಿಕಾರಕ ಎಂದು ಹೇಳಲಾಗುತ್ತದೆ.

9 ಬಗೆಯ ರೋಗಗಳ ಅಪಾಯ;

ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಬಿಎಂಸಿ ಮೆಡಿಸಿನ್ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಒಬ್ಬ ವ್ಯಕ್ತಿಯು ವಾರದಲ್ಲಿ 3 ದಿನ ಅಥವಾ ಅದಕ್ಕಿಂತ ಹೆಚ್ಚು ದಿನ ಕೆಂಪು ಮಾಂಸ, ಸಂಸ್ಕರಿಸಿದ ಮಾಂಸ, ಕೋಳಿ ಮಾಂಸ ಇತ್ಯಾದಿಗಳನ್ನು ಸೇವನೆ ಮಾಡಿದರೆ 9 ರೀತಿಯ ರೋಗಗಳು ಬರುವ ಅಪಾಯ ಹೆಚ್ಚಾಗಿ ಇರುತ್ತದೆ ಎಂದಿದೆ. ಕೆಂಪು ಸಂಸ್ಕರಿಸಿದ ಮಾಂಸವನ್ನು ಅತಿಯಾದ ಸೇವನೆಯಿಂದ ಹೊಟ್ಟೆಯ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗಿರುತ್ತದೆ ಎಂದು ಅನೇಕ ಅಧ್ಯಯನಗಳು ಮತ್ತು ಸಂಶೋಧನೆಗಳು ತೋರಿಸಿ ಕೊಟ್ಟಿವೆ.

ಆರೋಗ್ಯ ಕ್ಷೀಣಿಸಬಹುದು;

ಈ ಸಂಶೋಧನೆಯ ಜೊತೆಗೆ, ವಿಶ್ವ ಆರೋಗ್ಯ ಸಂಸ್ಥೆ ಕೆಂಪು ಮಾಂಸ ಮತ್ತು ಸಂಸ್ಕರಿಸಿದ ಮಾಂಸವನ್ನು ತಿನ್ನುವುದು ಆರೋಗ್ಯಕ್ಕೆ ಗಂಭೀರ ಹಾನಿಯನ್ನುಂಟು ಮಾಡುತ್ತದೆ ಎಂದು ಅನೇಕ ಬಾರಿ ಹೇಳಿದೆ. ಈ ಅಧ್ಯಯನದಲ್ಲಿ ಬ್ರಿಟನ್ನ 4 ಲಕ್ಷ 75 ಸಾವಿರ ಮಧ್ಯ ವಯಸ್ಕರನ್ನು ಈ ಅಧ್ಯಯನದಲ್ಲಿ ಸೇರಿಸಿಕೊಳ್ಳಲಾಗಿದ್ದು ಈ ಸಮಯದಲ್ಲಿ, ಸಂಶೋಧಕರು ಆ ಜನರ ಆಹಾರ ಮತ್ತು ವೈದ್ಯಕೀಯ ದಾಖಲೆಗಳು, ಆಸ್ಪತ್ರೆಗೆ ದಾಖಲಾದವರು ಮತ್ತು ಅವರ ಸಾವಿನ ಬಗ್ಗೆ ಅನೇಕ ಮಾಹಿತಿ ಕಲೆ ಹಾಕಿದೆ. ಈ ಅಧ್ಯಯನವು ಸುಮಾರು 8 ವರ್ಷಗಳ ಕಾಲ ನಡೆದಿದ್ದು ವಾರಕ್ಕೆ ಸರಾಸರಿ 3 ಅಥವಾ ಅದಕ್ಕಿಂತ ಹೆಚ್ಚು ದಿನ ಮಾಂಸವನ್ನು ಸೇವನೆ ಮಾಡುವವರು ಕಡಿಮೆ ಮಾಂಸ ಸೇವನೆ ಮಾಡುವವರಿಗೆ ಹೋಲಿಸಿದರೆ ಕೆಟ್ಟ ಆರೋಗ್ಯ ಪರಿಸ್ಥಿತಿಯನ್ನು ಹೊಂದಿದ್ದಾರೆ ಎಂದು ಅಧ್ಯಯನದ ಫಲಿತಾಂಶಗಳಿಂದ ಬಹಿರಂಗಗೊಂಡಿದೆ.

ಇದನ್ನೂ ಓದಿ: ಮಾವಿನ ಎಲೆಗಳ ಅದ್ಭುತ ಆರೋಗ್ಯ ಪ್ರಯೋಜನಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ

ಹೃದ್ರೋಗದ ಅಪಾಯ

ಸಂಸ್ಕರಿಸದ ಕೆಂಪು ಮಾಂಸ ಸೇವಿಸುವ ಜನರಲ್ಲಿ ಹೃದ್ರೋಗ, ನ್ಯುಮೋನಿಯಾ, ಡೈವರ್ಟಿಕ್ಯುಲರ್ ಕಾಯಿಲೆ ಮತ್ತು ಮಧುಮೇಹದ ಅಪಾಯ ಹೆಚ್ಚಾಗಬಹುದು. ಕೋಳಿ ಮಾಂಸ ತಿನ್ನುವವರಲಿ ಗ್ಯಾಸ್ಟ್ರೈಟಿಸ್, ಡ್ಯುಡೆನಿಟಿಸ್, ಪಿತ್ತಕೋಶದ ಕಾಯಿಲೆ ಮತ್ತು ಮಧುಮೇಹ ಹೆಚ್ಚಾಗಬಹುದು. ಪ್ರತಿದಿನ 70 ಗ್ರಾಂ ಸಂಸ್ಕರಿಸದ ಕೆಂಪು ಮಾಂಸ ಮತ್ತು ಸಂಸ್ಕರಿಸಿದ ಮಾಂಸ ಸೇವಿಸುವವರಲ್ಲಿ ಹೃದ್ರೋಗದ ಅಪಾಯವು ಶೇಕಡಾ 15 ರಷ್ಟು ಮತ್ತು ಮಧುಮೇಹದ ಅಪಾಯವು ಶೇಕಡಾ 30 ರಷ್ಟು ಹೆಚ್ಚಾಗುತ್ತದೆ. ಹಾಗಾಗಿ ಈ ಸಂಶೋಧನೆಯು ನಮ್ಮ ದೇಹಕ್ಕೆ ಅಗತ್ಯವಿರುವಷ್ಟು ಮಾಂಸವನ್ನು ಮಾತ್ರ ತಿನ್ನಬೇಕು ಎಂಬುದನ್ನು ತಿಳಿಸುತ್ತದೆ.

ಆರೋಗ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ