AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಬೋಲಾ ವೈರಸ್‌ಗೆ ಲಸಿಕೆ ಲಭ್ಯವಿದ್ದರೂ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿರುವುದಕ್ಕೆ ಕಾರಣವೇನು?

ವಿಶ್ವ ಆರೋಗ್ಯ ಸಂಸ್ಥೆಯು ಎಬೋಲಾ ವೈರಸ್ ಅನ್ನು ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿದೆ. ಈ ವೈರಸ್‌ನಿಂದ ಇದುವರೆಗೆ 100 ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ. ಆಫ್ರಿಕಾದ ಅನೇಕ ಪ್ರದೇಶಗಳಲ್ಲಿ ಎಬೋಲಾ ಹರಡಿದೆ. ಆದರೆ ಈ ಎಬೋಲಾ ವೈರಸ್‌ಗೆ ಲಸಿಕೆ ಲಭ್ಯವಿದ್ದರೂ ಅಪಾಯ ಏಕೆ ಕಡಿಮೆಯಾಗಿಲ್ಲ ಎಂಬ ಪ್ರಶ್ನೆ ಹಲವರಲ್ಲಿ ಮೂಡಿದೆ. ಹಾಗಾದರೆ ಎಬೋಲಾ ವೈರಸ್ ಎಂದರೇನು, ಯಾವ ರೀತಿಯ ಲಕ್ಷಣಗಳು ಕಂಡುಬರುತ್ತದೆ, ಲಸಿಕೆ ಇದ್ದರೂ ಈ ಮಹಾಮಾರಿಗೆ ಕಡಿವಾಣ ಹಾಕಲು ಆಗದಿರುವುದಕ್ಕೆ ಕಾರಣವೇನು ಎಂಬುದನ್ನು ಈ ಸ್ಟೋರಿಯಲ್ಲಿ ತಿಳಿದುಕೊಳ್ಳಿ.

ಎಬೋಲಾ ವೈರಸ್‌ಗೆ ಲಸಿಕೆ ಲಭ್ಯವಿದ್ದರೂ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿರುವುದಕ್ಕೆ ಕಾರಣವೇನು?
EbolaImage Credit source: Getty images
ಪ್ರೀತಿ ಭಟ್​, ಗುಣವಂತೆ
|

Updated on: May 21, 2026 | 7:22 PM

Share

ಎಬೋಲಾ (Ebola) ವೈರಸ್ ಮತ್ತೆ ಜಗತ್ತಿನ ಆತಂಕಕ್ಕೆ ಕಾರಣವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಈ ವೈರಸ್ ಅನ್ನು ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿಯಾಗಿ ಘೋಷಿಸಿದೆ. ಈಗಾಗಲೇ ಈ ಸೋಂಕಿನಿಂದ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ವಿಶೇಷವಾಗಿ ಆಫ್ರಿಕಾದ ಕೆಲವು ಭಾಗಗಳಲ್ಲಿ ವೈರಸ್ ವೇಗವಾಗಿ ಹರಡುತ್ತಿರುವುದು ಆರೋಗ್ಯ ತಜ್ಞರ ಚಿಂತೆಗೆ ಕಾರಣವಾಗಿದೆ. ಆದರೆ ಈ ಎಬೋಲಾ ವೈರಸ್‌ಗೆ ಲಸಿಕೆ ಲಭ್ಯವಿದ್ದರೂ ಅಪಾಯ ಏಕೆ ಕಡಿಮೆಯಾಗಿಲ್ಲ ಎಂಬ ಪ್ರಶ್ನೆ ಹಲವರಲ್ಲಿ ಮೂಡಿದೆ. ಹಾಗಾದರೆ ಎಬೋಲಾ ವೈರಸ್ ಎಂದರೇನು, ಯಾವ ರೀತಿಯ ಲಕ್ಷಣಗಳು ಕಂಡುಬರುತ್ತದೆ, ಲಸಿಕೆ ಇದ್ದರೂ ಈ ಮಹಾಮಾರಿಗೆ ಕಡಿವಾಣ ಹಾಕಲು ಆಗದಿರುವುದಕ್ಕೆ ಕಾರಣವೇನು ಎಂಬುದನ್ನು ಈ ಸ್ಟೋರಿಯಲ್ಲಿ ತಿಳಿದುಕೊಳ್ಳಿ.

ಎಬೋಲಾ ವೈರಸ್ ಎಂದರೇನು?

ಸಾಮಾನ್ಯವಾಗಿ ಎಬೋಲಾ ಒಂದು ಗಂಭೀರ ವೈರಲ್ ಸೋಂಕು. ಸೋಂಕಿತ ವ್ಯಕ್ತಿಯ ರಕ್ತ, ದೇಹದ ದ್ರವಗಳು ಅಥವಾ ಸೋಂಕಿತ ಪ್ರಾಣಿಗಳ ಸಂಪರ್ಕದಿಂದ ಇದು ಹರಡುತ್ತದೆ. 1976ರಲ್ಲಿ ಕಾಂಗೋದಲ್ಲಿ ಮೊದಲ ಬಾರಿ ಈ ವೈರಸ್ ಪತ್ತೆಯಾಯಿತು. ಬಳಿಕ ಉಪ- ಸಹಾರಾ ಆಫ್ರಿಕಾದ ಹಲವು ಪ್ರದೇಶಗಳಲ್ಲಿ ಪ್ರಕರಣಗಳು ವರದಿಯಾಗಿವೆ. ತಜ್ಞರ ಪ್ರಕಾರ, ಎಬೋಲಾ ಸೋಂಕಿನ ಮರಣ ಪ್ರಮಾಣ ತುಂಬಾ ಹೆಚ್ಚು. ಕೆಲ ಸಂದರ್ಭಗಳಲ್ಲಿ ಸೋಂಕಿತ ವ್ಯಕ್ತಿಯ ದೇಹದ ಒಳಭಾಗದಲ್ಲಿ ರಕ್ತಸ್ರಾವ ಉಂಟಾಗಿ ಜೀವಕ್ಕೆ ಅಪಾಯವಾಗಬಹುದು. ಕೆಲವು ಅಧ್ಯಯನಗಳ ಪ್ರಕಾರ, ಈ ವೈರಸ್‌ನ ಮರಣ ಪ್ರಮಾಣ 80ರಿಂದ 90 ಶೇಕಡಾವರೆಗೆ ಇರಬಹುದು. ಹಾಗಾಗಿ ಎಚ್ಚರಿಕೆ ಅನುಸರಿಸುವುದು ಬಹಳ ಅನಿವಾರ್ಯವಾಗಿದೆ.

ಲಸಿಕೆ ಇದ್ದರೂ ಅಪಾಯಕಾರಿ ಏಕೆ?

ಮಹಾಮಾರಿ ತಜ್ಞ ಡಾ. ಜುಗಲ್ ಕಿಶೋರ್ ಅವರ ಪ್ರಕಾರ, ಇದಕ್ಕೆ ಪ್ರಮುಖ ಕಾರಣ ವೈರಸ್‌ನ ವಿಭಿನ್ನ ಸ್ಟ್ರೇನ್‌ಗಳು. ಎಬೋಲಾ ವೈರಸ್‌ ಹಲವು ರೂಪಗಳಲ್ಲಿ ಕಂಡುಬರುತ್ತದೆ. ಕೆಲವು ಸ್ಟ್ರೇನ್‌ಗಳ ವಿರುದ್ಧ ಲಸಿಕೆ ಪರಿಣಾಮಕಾರಿಯಾಗಿದ್ದರೂ, ಎಲ್ಲ ರೂಪಗಳ ಮೇಲೂ ಅದು ಸಮಾನವಾಗಿ ಕೆಲಸ ಮಾಡುವುದಿಲ್ಲ. ಅದೇರೀತಿ ಎಬೋಲಾದ ಬುಂಡಿಬುಗ್ಯೊ (Bundibugyo) ಎಂಬ ಅಪಾಯಕಾರಿ ಸ್ಟ್ರೇನ್ ಈಗ ಹೆಚ್ಚು ಪ್ರಕರಣಗಳಿಗೆ ಕಾರಣವಾಗುತ್ತಿದೆ. ಈ ಸ್ಟ್ರೇನ್ ವಿರುದ್ಧ ಪರಿಣಾಮಕಾರಿ ಮತ್ತು ಪ್ರಮಾಣಿತ ಲಸಿಕೆ ಇನ್ನೂ ಲಭ್ಯವಿಲ್ಲ. ಇದೇ ಕಾರಣದಿಂದ ಸೋಂಕಿನ ಭೀತಿ ಹೆಚ್ಚುತ್ತಿದೆ. ಇದಕ್ಕೂ ಹೊರತು, ಆಫ್ರಿಕಾದ ದೂರದ ಪ್ರದೇಶಗಳಲ್ಲಿ ಆರೋಗ್ಯ ಸೌಲಭ್ಯಗಳ ಕೊರತೆ, ಸಮಯಕ್ಕೆ ಚಿಕಿತ್ಸೆ ಸಿಗದಿರುವುದು ಹಾಗೂ ಲಸಿಕೆ ತಲುಪಿಸುವಲ್ಲಿ ಆಗುತ್ತಿರುವ ತೊಂದರೆಗಳು ಪರಿಸ್ಥಿತಿಯನ್ನು ಗಂಭೀರಗೊಳಿಸುತ್ತಿವೆ.

ಇದನ್ನೂ ಓದಿ: ಕಿಡ್ನಿ ವೈಫಲ್ಯಕ್ಕೆ ಟ್ರಾನ್ಸ್‌ಪ್ಲಾಂಟ್ ಯಾವಾಗ ಅಗತ್ಯ ಎಂಬುದನ್ನು ಡಾ. ರವಿಶಂಕರ್ ಅವರಿಂದ ತಿಳಿದುಕೊಳ್ಳಿ

ಎಬೋಲಾ ವೈರಸ್‌ನ ಲಕ್ಷಣಗಳು:

  • ತೀವ್ರ ಜ್ವರ
  • ದೇಹ ನೋವು ಮತ್ತು ದೌರ್ಬಲ್ಯ
  • ವಾಂತಿ
  • ತಲೆನೋವು
  • ದೇಹದ ಒಳ ಹಾಗೂ ಹೊರ ರಕ್ತಸ್ರಾವ

ಹೇಗೆ ಮುನ್ನೆಚ್ಚರಿಕೆ ವಹಿಸಬೇಕು?

ತಜ್ಞರು ಹೇಳುವಂತೆ, ಸೋಂಕು ಹೆಚ್ಚಿರುವ ಪ್ರದೇಶಗಳಿಗೆ ಅನಗತ್ಯ ಪ್ರಯಾಣ ತಪ್ಪಿಸುವುದು ಉತ್ತಮ. ಸೋಂಕಿತ ವ್ಯಕ್ತಿಗಳ ಸಂಪರ್ಕದಿಂದ ದೂರವಿರಬೇಕು. ಕೈಗಳ ಸ್ವಚ್ಛತೆ ಮತ್ತು ಆರೋಗ್ಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅಗತ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್