AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Elaichi Water Benefits: ಏಲಕ್ಕಿ ನೀರನ್ನು ಕುಡಿದು ತೂಕ ಕಡಿಮೆ ಮಾಡಿಕೊಳ್ಳಬಹುದೇ?

ಏಲಕ್ಕಿ ಚಹಾ ಅಥವಾ ಕುಡಿಯುವ ನೀರಿನಲ್ಲಿ ಕುದಿಸಿ ಕುಡಿಯುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಜೊತೆಗೆ ಇದರ ನೀರು ದೇಹದಲ್ಲಿ ಸಂಗ್ರಹವಾದ ಹೆಚ್ಚುವರಿ ಕೊಬ್ಬನ್ನು ಕರಗಿಸುತ್ತದೆ. ಇದು ತೂಕ ನಿಯಂತ್ರಣಕ್ಕೂ ಸಹಾಯ ಮಾಡುತ್ತದೆ. ಹಾಗಾದರೆ ಇದರ ಆರೋಗ್ಯ ಪ್ರಯೋಜನಗಳೇನು? ಯಾವ ರೀತಿಯಲ್ಲಿ ಉಪಯೋಗಿಸಿದರೆ ಒಳ್ಳೆಯದು? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

Elaichi Water Benefits: ಏಲಕ್ಕಿ ನೀರನ್ನು ಕುಡಿದು ತೂಕ ಕಡಿಮೆ ಮಾಡಿಕೊಳ್ಳಬಹುದೇ?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 20, 2024 | 2:38 PM

Share

ಏಲಕ್ಕಿ ಹೇರಳವಾದ ಔಷಧೀಯ ಗುಣಗಳನ್ನು ಹೊಂದಿದೆ. ಇದು ಒಂದು ರೀತಿಯ ಪೋಷಕಾಂಶಗಳ ಗಣಿ ಎಂದರೆ ತಪ್ಪಾಗಲಾರದು. ಇದನ್ನು ಚಹಾ ಅಥವಾ ಕುಡಿಯುವ ನೀರಿನಲ್ಲಿ ಕುದಿಸಿ ಕುಡಿಯುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ಬಗ್ಗೆ ನಿಮಗೆಷ್ಟು ಗೊತ್ತು? ಏಲಕ್ಕಿಯಲ್ಲಿ ವಿಟಮಿನ್ ಗಳು-ರೈಬೋಫ್ಲೇವಿನ್, ನಿಯಾಸಿನ್, ವಿಟಮಿನ್-ಸಿ, ಖನಿಜಗಳು, ಕಬ್ಬಿಣದ ಅಂಶ, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ಪಿನಿನ್, ಸಬಿನಿನ್, ಮೈಸಿನ್, ಫೆಲಾಂಡ್ರಿನ್ ಮತ್ತು ಆಹಾರದ ಫೈಬರ್ ಸಮೃದ್ಧವಾಗಿದೆ. ಇಷ್ಟೇ ಅಲ್ಲದೆ ಏಲಕ್ಕಿ ನೀರು ದೇಹದಲ್ಲಿ ಸಂಗ್ರಹವಾದ ಹೆಚ್ಚುವರಿ ಕೊಬ್ಬನ್ನು ಕರಗಿಸುತ್ತದೆ. ಇದು ತೂಕ ನಿಯಂತ್ರಣಕ್ಕೂ ಸಹಾಯ ಮಾಡುತ್ತದೆ. ಹಾಗಾದರೆ ಇದರ ಆರೋಗ್ಯ ಪ್ರಯೋಜನಗಳೇನು? ಯಾವ ರೀತಿಯಲ್ಲಿ ಉಪಯೋಗಿಸಿದರೆ ಒಳ್ಳೆಯದು? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಈಗ ಮಳೆಗಾಲ ಹವಾಮಾನ ಬದಲಾವಣೆಯಿಂದ ಶೀತ, ಜ್ವರ ಬರುವುದು ಸಾಮಾನ್ಯ. ಇದರಿಂದ ಮುಕ್ತಿ ಪಡೆಯಲು ನೀವು ಏಲಕ್ಕಿ ಸೇವನೆ ಮಾಡಬಹುದು. ಪ್ರತಿದಿನ ಇದರ ನೀರನ್ನು ಕುಡಿಯುವುದರಿಂದ ಶೀತ ಮತ್ತು ಗಂಟಲು ನೋವು ಕಡಿಮೆಯಾಗುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಅದರಲ್ಲಿಯೂ ಏಲಕ್ಕಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು, ಇದರ ನೀರನ್ನು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆಯಲ್ಲಿ ಕಂಡು ಬರುವ ಸಮಸ್ಯೆಯನ್ನು ದೂರ ಮಾಡುತ್ತದೆ ಜೊತೆಗೆ ಹೊಟ್ಟೆ ನೋವನ್ನು ಕೂಡ ನಿವಾರಿಸುತ್ತದೆ. ಇನ್ನು ಏಲಕ್ಕಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ಹೃದಯಾಘಾತದ ಅಪಾಯವನ್ನು ಕೂಡ ಕಡಿಮೆ ಮಾಡುತ್ತದೆ.

ನಿಮಗೆ ಗೊತ್ತಾ? ಏಲಕ್ಕಿ ಖಿನ್ನತೆಯನ್ನು ದೂರ ಮಾಡುವಂತಹ ವಿಶಿಷ್ಟ ಸಾಮರ್ಥ್ಯವನ್ನು ಹೊಂದಿದೆ. ನಿಮ್ಮ ಬೆಳಗಿನ ಚಹಾಕ್ಕೆ ಏಲಕ್ಕಿ ಸೇರಿಸಿದರೆ ಅಥವಾ ಇದರ ಪುಡಿಯನ್ನು ಸೇರಿಸಿ ಕುಡಿದರೆ ಮಾನಸಿಕ ಆರೋಗ್ಯ ಸುಧಾರಿಸುತ್ತದೆ.

ಅಸ್ತಮಾವನ್ನು ತಡೆಗಟ್ಟುವಲ್ಲಿ ಏಲಕ್ಕಿ ತುಂಬಾ ಪ್ರಯೋಜನಕಾರಿ. ಮಲಬದ್ಧತೆಯಂತಹ ಸಮಸ್ಯೆ ಇರುವವರು ಏಲಕ್ಕಿ ನೀರನ್ನು ಕುಡಿಯಬೇಕು. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಎಲ್ಲಾ ರೀತಿಯ ಜೀರ್ಣಕಾರಿ ಸಮಸ್ಯೆಗಳು ಶಮನಗೊಳ್ಳುತ್ತದೆ. ಅದರ ಜೊತೆಗೆ ತೂಕ ನಿಯಂತ್ರಣವೂ ಆಗುತ್ತದೆ.

ಇದನ್ನೂ ಓದಿ: ಒಂದು ತಿಂಗಳು ನೆನೆಸಿದ ಒಣದ್ರಾಕ್ಷಿ ತಿನ್ನಿ, ಆರೋಗ್ಯದಲ್ಲಿ ಈ ಬದಲಾವಣೆ ಖಂಡಿತ

ಏಲಕ್ಕಿ ಪ್ರಬಲ ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳನ್ನು ಹೊಂದಿದೆ. ಇದು ಬಾಯಿಯ ದುರ್ವಾಸನೆಯನ್ನು ಶಾಶ್ವತವಾಗಿ ಹೋಗಲಾಡಿಸುತ್ತದೆ. ಏಲಕ್ಕಿಯಲ್ಲಿ ಕಂಡುಬರುವ ಸಿನಿಯೋಲ್ ಎಂಬ ಫೈಟೊಕೆಮಿಕಲ್, ವಾಸನೆ ಉಂಟುಮಾಡುವ ಬ್ಯಾಕ್ಟೀರಿಯಾವನ್ನು ಕೊಲ್ಲಲು ಮತ್ತು ಕುಳಿಗಳು ಮತ್ತು ದಂತಕ್ಷಯವನ್ನು ತಡೆಗಟ್ಟುವ ಪ್ರಬಲ ನಂಜುನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!