ನೀಲಗಿರಿ ಎಣ್ಣೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಈ ಎಣ್ಣೆಯು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇದು ಉತ್ತಮ ನಂಜು ನಿರೋಧಕವಾಗಿಯೂ ಕೆಲಸ ಮಾಡುತ್ತದೆ. ನೀಲಗಿರಿ ಎಣ್ಣೆಯನ್ನು ತಲೆನೋವು, ಸ್ನಾಯು ನೋವಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಬಳಸಲಾಗುತ್ತದೆ.
ನೀಲಗಿರಿ ಎಣ್ಣೆಯ ಪ್ರಯೋಜನಗಳು
ನೀಲಗಿರಿ ಎಣ್ಣೆಯು ಬ್ಯಾಕ್ಟೀರಿಯಾ ಮತ್ತು ವೈರಸ್ಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಸಂಧಿವಾತ, ಉರಿಯೂತವನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇದು ಸ್ನಾಯುಗಳಲ್ಲಿನ ನೋವು ಮತ್ತು ಊತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ತಲೆ ನೋವನ್ನು ಹೋಗಲಾಡಿಸಲು ಎರಡು ಹನಿ ನೀಲಗಿರಿ ಎಣ್ಣೆಯನ್ನು ಹಣೆಗೆ ಹಚ್ಚಿ ಮಸಾಜ್ ಮಾಡಿ.
ನೀಲಗಿರಿ ಎಣ್ಣೆ ಉಸಿರಾಟ ಕ್ರಿಯೆಯನ್ನು ಸರಾಗಗೊಳಿಸುತ್ತದೆ. ಇದು ಶ್ವಾಸಕೋಶ ಸಂಬಂಧಿ ಖಾಯಿಲೆ, ಅಸ್ತಮಾ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಈ ಎಣ್ಣೆಯು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ ಹಾಗಾಗಿ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ.
ನೀಲಗಿರಿ ಎಣ್ಣೆ ಒತ್ತಡ ಅಥವಾ ಬಳಲಿಕೆಯಿಂದ ಉಂಟಾಗುವ ತಲೆನೋವಿನ ವಿರುದ್ಧ ಹೋರಾಡಲು ಸಹಾಯಕವಾಗಿದೆ. ಜತೆಗೆ ಈ ಎಣ್ಣೆಯಲ್ಲಿ ಆ್ಯಂಟಿಮೈಕ್ರೋಬಿಯಲ್ ಮತ್ತು ನಂಜುನಿರೋಧಕ ಗುಣಗಳನ್ನು ಹೊಂದಿದೆ. ಎಣ್ಣೆಯು ಚರ್ಮದ ಖಾಯಿಲೆ, ತುರಿಕೆ, ಹುಣ್ಣು, ಗಾಯಗಳಿಗೆ ಪರಿಹಾರ ನೀಡುತ್ತದೆ.
ಇದನ್ನೂ ಓದಿ:
Health Tips: ಅರಿಶಿಣ ನೀರು ಸೇವಿಸುವುದರಿಂದ ಆರೋಗ್ಯ ಪ್ರಯೋಜನಗಳು ಎಷ್ಟಿವೆ ತಿಳಿಯಿರಿ