AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಫೋನ್​​ಗಳ ಅತಿಯಾದ ಬಳಕೆ ಅನೇಕ ರೋಗಗಳಿಗೆ ಕಾರಣವಾಗುತ್ತೆ; ಸಂಶೋಧನೆ

ಮೊಬೈಲ್ ಫೋನ್ ಗಳು ಪ್ರಪಂಚದ ಮಾಹಿತಿ ಪಡೆಯಲು ಅಥವಾ ಯಾವುದೇ ಕೆಲಸವನ್ನು ತಕ್ಷಣ ಪೂರ್ಣಗೊಳಿಸಲು, ದೈನಂದಿನ ಅಗತ್ಯಗಳನ್ನು ಪೂರೈಸಲು ಅತ್ಯಂತ ಸಹಕಾರಿಯಾಗಿದೆ. ಇದರ ಮೂಲಕ ಇಂಟರ್ನೆಟ್ ಜೊತೆಗೆ ಅನೇಕ ಅಪ್ಲಿಕೇಶನ್ ಗಳನ್ನು ಬಳಸಿಕೊಂಡು ನಮಗೆ ಅಗತ್ಯವಿರುವ ಮಾಹಿತಿಯನ್ನು ನಾವು ಎಲ್ಲಿಯಾದರೂ, ಯಾವಾಗ ಬೇಕಾದರೂ ಪಡೆದುಕೊಳ್ಳಬಹುದಾಗಿದೆ. ಆದರೆ ಯಾವುದೇ ವ್ಯಕ್ತಿ ಅಥವಾ ವಸ್ತುವಾಗಿರಲಿ ಅವುಗಳಲ್ಲಿ ಒಳ್ಳೆಯದರ ಜೊತೆಗೆ ಕೆಟ್ಟದ್ದು ಇರುತ್ತದೆ. ಫೋನ್ ಬಳಕೆ ಅನೇಕ ರೀತಿಯ ಪ್ರಯೋಜನಗಳನ್ನು ನೀಡುತ್ತದೆ. ಆದರೆ ಅದನ್ನು ಹೆಚ್ಚು ಬಳಸುವುದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಇಂದಿನ ಕಾಲದಲ್ಲಿ, ನಾವು ಫೋನ್ ಮೇಲೆ ಎಷ್ಟು ಅವಲಂಬಿತರಾಗಿದ್ದೇವೆ ಎಂದರೆ ಅದರ ವ್ಯಸನಿಗಳಾಗಿದ್ದೇವೆ. ಈ ರೀತಿಯ ಅಭ್ಯಾಸ ನಮಗೆ ಅನೇಕ ರೀತಿಯ, ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಫೋನ್ ನಿಮ್ಮ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಮೊಬೈಲ್ ಫೋನ್​​ಗಳ ಅತಿಯಾದ ಬಳಕೆ ಅನೇಕ ರೋಗಗಳಿಗೆ ಕಾರಣವಾಗುತ್ತೆ; ಸಂಶೋಧನೆ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Oct 09, 2024 | 5:00 PM

Share

ಇತ್ತೀಚಿನ ವರ್ಷಗಳಲ್ಲಿ ಯಾವುದನ್ನಾದರೂ ಬಿಡಬಹುದು ಆದರೆ ಮೊಬೈಲ್ ಫೋನ್ ಗಳನ್ನು ಬಿಡಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಒಂದು ರೀತಿಯಲ್ಲಿ, ನಮ್ಮ ಜೀವನವನ್ನು ಸುಲಭ, ವೇಗ ಮತ್ತು ಅನುಕೂಲಕರವಾಗಿಸಿದೆ. ಸ್ನೇಹಿತರೊಂದಿಗೆ ಸಂಪರ್ಕದಲ್ಲಿರಲು, ಪ್ರಪಂಚದ ಮಾಹಿತಿ ಪಡೆಯಲು ಅಥವಾ ಯಾವುದೇ ಕೆಲಸವನ್ನು ತಕ್ಷಣ ಪೂರ್ಣಗೊಳಿಸಲು, ದೈನಂದಿನ ಅಗತ್ಯಗಳನ್ನು ಪೂರೈಸಲು ಅತ್ಯಂತ ಸಹಕಾರಿಯಾಗಿದೆ. ಇದರ ಮೂಲಕ ಇಂಟರ್ನೆಟ್ ಜೊತೆಗೆ ಅನೇಕ ಅಪ್ಲಿಕೇಶನ್ ಗಳನ್ನು ಬಳಸಿಕೊಂಡು ನಮಗೆ ಅಗತ್ಯವಿರುವ ಮಾಹಿತಿಯನ್ನು ನಾವು ಎಲ್ಲಿಯಾದರೂ, ಯಾವಾಗ ಬೇಕಾದರೂ ಪಡೆದುಕೊಳ್ಳಬಹುದಾಗಿದೆ. ಆದರೆ ಯಾವುದೇ ವ್ಯಕ್ತಿ ಅಥವಾ ವಸ್ತುವಾಗಿರಲಿ ಅವುಗಳಲ್ಲಿ ಒಳ್ಳೆಯದರ ಜೊತೆಗೆ ಕೆಟ್ಟದ್ದು ಇರುತ್ತದೆ. ಫೋನ್ ಬಳಕೆ ಅನೇಕ ರೀತಿಯ ಪ್ರಯೋಜನಗಳನ್ನು ನೀಡುತ್ತದೆ. ಆದರೆ ಅದನ್ನು ಹೆಚ್ಚು ಬಳಸುವುದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಇಂದಿನ ಕಾಲದಲ್ಲಿ, ನಾವು ಫೋನ್ ಮೇಲೆ ಎಷ್ಟು ಅವಲಂಬಿತರಾಗಿದ್ದೇವೆ ಎಂದರೆ ಅದರ ವ್ಯಸನಿಗಳಾಗಿದ್ದೇವೆ. ಈ ರೀತಿಯ ಅಭ್ಯಾಸ ನಮಗೆ ಅನೇಕ ರೀತಿಯ, ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಫೋನ್ ನಿಮ್ಮ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ಫೋನ್ ನಿಂದ ಹೊರಹೊಮ್ಮುವ ವಿದ್ಯುತ್ಕಾಂತೀಯ ವಿಕಿರಣ ಮತ್ತು ಫೋನ್ ಪರದೆಯಿಂದ ಹೊರಸೂಸುವ ನೀಲಿ ಬೆಳಕು ನಮ್ಮ ದೇಹಕ್ಕೆ ಹಾನಿ ಮಾಡುತ್ತದೆ. ವಿಶೇಷವಾಗಿ ನಾವು ಫೋನ್ ಅನ್ನು ತಲೆಯ ಬಳಿ ಇಟ್ಟಾಗ, ಅಂದರೆ, ಫೋನ್ ಮತ್ತು ಬಳಕೆದಾರರ ನಡುವಿನ ಅಂತರ ಕಡಿಮೆಯಿದ್ದರೆ, ದೇಹದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಹಾಗಾಗಿ ಆರೋಗ್ಯಕ್ಕೆ ಸಂಬಂಧಿತ ಕಾಯಿಲೆಗಳ ಅಪಾಯವು ಹೆಚ್ಚಾಗುತ್ತದೆ. ಅತಿಯಾದ ಫೋನ್ ಬಳಕೆಯು ದೈಹಿಕ ಮಾತ್ರವಲ್ಲದೆ ಮಾನಸಿಕ ಸಮಸ್ಯೆಗಳನ್ನು ಉಂಟು ಮಾಡಬಹುದು. ಹೆಚ್ಚು ಫೋನ್ ಬಳಕೆಯಿಂದ ಯಾವ ರೋಗಗಳು ಉಂಟಾಗಬಹುದು ತಿಳಿದುಕೊಳ್ಳಿ.

ಯಾವ ರೋಗಗಳ ಅಪಾಯವಿದೆ?

ಮೊಬೈಲ್ ಫೋನ್ ಗಳ ಅತಿಯಾದ ಬಳಕೆಯು ಕಣ್ಣುಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ದೀರ್ಘಕಾಲದ ವರೆಗೆ ಫೋನ್ ನಲ್ಲಿ ಕೆಲಸ ಮಾಡುವುದರಿಂದ ಕಣ್ಣು ಮಸುಕಾಗುವುದು, ಕಿರಿಕಿರಿಯಂತಹ ಸಮಸ್ಯೆಗಳು ಉಂಟಾಗಬಹುದು. ರಾತ್ರಿ ಮಲಗುವ ಮೊದಲು ಫೋನ್ ಬಳಸುವುದರಿಂದ ಮೆಲಟೋನಿನ್ ಹಾರ್ಮೋನ್ ಮಟ್ಟ ಕಡಿಮೆಯಾಗುತ್ತದೆ, ಇದು ನಿದ್ರೆಗೆ ತೊಂದರೆ ಉಂಟು ಮಾಡುತ್ತದೆ. ಇದಲ್ಲದೆ, ಫೋನ್ ಗಳನ್ನು ನಿರಂತರವಾಗಿ ಕೈಯಲ್ಲಿ ಹಿಡಿದುಕೊಳ್ಳುವುದು ಅಥವಾ ಕುತ್ತಿಗೆ ಬಗ್ಗಿಸಿ ಮೊಬೈಲ್ ನೋಡುವುದರಿಂದ ದೇಹವು ಕೆಟ್ಟ ಭಂಗಿಯಿಂದ ಬಳಲು ಕಾರಣವಾಗುತ್ತದೆ. ಫೋನ್ ಬಳಸುವಾಗ ದೀರ್ಘಕಾಲ ಕುಳಿತುಕೊಳ್ಳುವುದು, ದೈಹಿಕ ಚಟುವಟಿಕೆಯ ಕೊರತೆ, ಒತ್ತಡ ಮತ್ತು ತಲೆನೋವು ಹೃದಯ ಮತ್ತು ಮೆದುಳಿಗೆ ಸಂಬಂಧಿಸಿದ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಪುರುಷರಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಅಪಾಯ; ಲಕ್ಷಣಗಳೇನು? ಇಲ್ಲಿದೆ ಮಾಹಿತಿ

ಇದರಿಂದ ರಕ್ಷಣೆ ಪಡೆಯುವುದು ಹೇಗೆ?

ನಿಮ್ಮ ಮೊಬೈಲ್ ಫೋನ್ ಗಳನ್ನು ಆದಷ್ಟು ಹಾಸಿಗೆಯಿಂದ ದೂರವಿಡಿ.

ನಿಮ್ಮ ಫೋನ್ ಅನ್ನು ಪರಿಶೀಲಿಸಲು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಿಕೊಳ್ಳಿ.

ಕೆಲಸ ಅಥವಾ ಅಧ್ಯಯನದ ಸಮಯದಲ್ಲಿ ಫೋನ್ ಅನ್ನು ದೂರವಿಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ