AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಯಾಬಿಟೀಸ್‌ ಇರುವವರಲ್ಲಿ ಹಲ್ಲು ಮತ್ತು ಒಸಡುಗಳಲ್ಲಿ ರಕ್ತಸ್ರಾವ ಆಗುವುದಕ್ಕೆ ಕಾರಣವೇನು? ಇಲ್ಲಿದೆ ತಜ್ಞರ ಸಲಹೆ

ಮಧುಮೇಹವಿದ್ದಾಗ, ದೇಹದಲ್ಲಿ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಇದರಲ್ಲಿ ಹಲ್ಲು ಮತ್ತು ಒಸಡು ದುರ್ಬಲವಾಗುವುದು ಸಹ ಸೇರಿವೆ. ಹಲ್ಲುಗಳು ಅಥವಾ ಒಸಡಿನಲ್ಲಿ ರಕ್ತಸ್ರಾವವಾಗುತ್ತಿದ್ದರೆ, ಅದು ಅಧಿಕ ರಕ್ತದ ಸಕ್ಕರೆಯ ಸಂಕೇತವಾಗಿರಬಹುದು. ಹಾಗಾದರೆ ಈ ರೀತಿ ಆಗುವುದಕ್ಕೆ ಕಾರಣವೇನು, ಇದರಿಂದ ರಕ್ಷಿಸಿಕೊಳ್ಳಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಡಯಾಬಿಟೀಸ್‌ ಇರುವವರಲ್ಲಿ ಹಲ್ಲು ಮತ್ತು ಒಸಡುಗಳಲ್ಲಿ ರಕ್ತಸ್ರಾವ ಆಗುವುದಕ್ಕೆ ಕಾರಣವೇನು? ಇಲ್ಲಿದೆ ತಜ್ಞರ ಸಲಹೆ
Diabetes And Oral HealthImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jul 07, 2026 | 9:26 PM

Share

ಮುಖ್ಯಾಂಶಗಳು

  • ಹಲ್ಲಿನ ಒಸಡಿನಿಂದ ರಕ್ತ ಬರುತ್ತಿರುವುದಕ್ಕೆ ಮಧುಮೇಹವೂ ಕಾರಣವಾಗಿರಬಹುದು
  • ಮಧುಮೇಹ ಇರುವವರ ಬಾಯಿಯ ಆರೈಕೆ ಹೇಗಿರಬೇಕು ಎಂಬುದರ ಬಗ್ಗೆ ತಜ್ಞರ ಸಲಹೆ
  • ಡಯಾಬಿಟೀಸ್‌ನಲ್ಲಿ ಹಲ್ಲು ಬೀಳುವ ಅಪಾಯ ಹೆಚ್ಚಾಗಿರುತ್ತದೆಯೇ ಅದಕ್ಕೆ ಕಾರಣವೇನು?

ಡಯಾಬಿಟೀಸ್‌ ಕೇವಲ ರಕ್ತದಲ್ಲಿನ ಸಕ್ಕರೆ ಮಟ್ಟವನ್ನೇ ಹೆಚ್ಚಿಸುವ ಕಾಯಿಲೆ ಮಾತ್ರವಲ್ಲ, ಇದು ಹೃದಯ, ಮೂತ್ರಪಿಂಡ, ಕಣ್ಣುಗಳ ಜೊತೆಗೆ ಬಾಯಿ, ಹಲ್ಲು ಮತ್ತು ಹಲ್ಲಿನ ದವಡೆಯ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ರಕ್ತದಲ್ಲಿನ ಸಕ್ಕರೆ ನಿಯಂತ್ರಣದಲ್ಲಿರದಿದ್ದರೆ ಕೆಲವರಿಗೆ ಹಲ್ಲು ಮತ್ತು ಒಸಡುಗಳಲ್ಲಿ ರಕ್ತಸ್ರಾವದ ಸಮಸ್ಯೆ, ಊತ, ಬಾಯಿಯ ದುರ್ವಾಸನೆ ಹಾಗೂ ಹಲ್ಲುಗಳು ಸಡಿಲವಾಗುವ ಸಮಸ್ಯೆಗಳು ಕಾಣಿಸಬಹುದು. ಹಾಗಾದರೆ ಈ ರೀತಿ ಆಗುವುದಕ್ಕೆ ಕಾರಣವೇನು, ಇದರಿಂದ ರಕ್ಷಿಸಿಕೊಳ್ಳಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ತಜ್ಞರ ಪ್ರಕಾರ, ಡಯಾಬಿಟೀಸ್‌ನಿಂದ ದೇಹದ ರೋಗನಿರೋಧಕ ಶಕ್ತಿ ದುರ್ಬಲವಾಗುತ್ತದೆ. ಇದರಿಂದ ಬಾಯಿಯಲ್ಲಿರುವ ಬ್ಯಾಕ್ಟೀರಿಯಾಗಳ ವಿರುದ್ಧ ದೇಹ ಸಮರ್ಪಕವಾಗಿ ಹೋರಾಡಲು ಸಾಧ್ಯವಾಗುವುದಿಲ್ಲ. ಜೊತೆಗೆ ಹೆಚ್ಚಿನ ಗ್ಲೂಕೋಸ್ ಲಾಲಾರಸದಲ್ಲೂ ಸೇರಿ ಬ್ಯಾಕ್ಟೀರಿಯಾಗಳ ಬೆಳವಣಿಗೆಗೆ ಕಾರಣವಾಗುತ್ತದೆ. ಪರಿಣಾಮವಾಗಿ ಪ್ಲಾಕ್‌ ರೂಪುಗೊಂಡು ಒಸಡಿನಲ್ಲಿ ಸೋಂಕು ಉಂಟಾಗುವ ಅಪಾಯ ಹೆಚ್ಚುತ್ತದೆ. ಹೆಚ್ಚಿನ ಸಕ್ಕರೆ ಮಟ್ಟ ದೇಹದಲ್ಲಿ ಉರಿಯೂತವನ್ನು ಹೆಚ್ಚಿಸುವುದರ ಜೊತೆಗೆ ಹಲ್ಲಿನ ಮಾಂಸದ ಕೊಲಾಜನ್‌ಗೆ ಹಾನಿ ಉಂಟುಮಾಡಬಹುದು. ಇದರಿಂದ ಹಲ್ಲುಗಳಿಗೆ ಬೆಂಬಲ ನೀಡುವ ಮೂಳೆಗಳೂ ದುರ್ಬಲವಾಗಿ, ಹಲ್ಲಿನ ಮಾಂಸದಿಂದ ರಕ್ತಸ್ರಾವ ಅಥವಾ ಹಲ್ಲು ಬೀಳುವ ಸಮಸ್ಯೆ ಕಾಣಿಸಬಹುದು.

ಇದನ್ನೂ ಓದಿ: ಜಿಮ್ ಬೇಡ! ಕೇವಲ ಮೆಟ್ಟಿಲು ಹತ್ತಿ ಇಳಿಯುವುದರಿಂದ ಸಿಗುತ್ತೆ 5 ಅದ್ಭುತ ಆರೋಗ್ಯ ಪ್ರಯೋಜನ

ಇದರ ಜೊತೆಗೆ ಡಯಾಬಿಟೀಸ್ ಇರುವವರಿಗೆ ಬಾಯಿ ಒಣಗುವ ಸಮಸ್ಯೆಯೂ ಸಾಮಾನ್ಯ. ಬಾಯಿ ಒಣಗಿದಾಗ ಬ್ಯಾಕ್ಟೀರಿಯಾಗಳು ವೇಗವಾಗಿ ಹೆಚ್ಚಾಗಿ ಹಲ್ಲು ಕುಳಿಯಾಗುವ ಹಾಗೂ ಸೋಂಕಿನ ಅಪಾಯ ಹೆಚ್ಚಾಗುತ್ತದೆ. ಸಮಯಕ್ಕೆ ಚಿಕಿತ್ಸೆ ಪಡೆಯದಿದ್ದರೆ ಕಾಯಿಲೆ ಗಂಭೀರವಾಗಬಹುದು.

ಈ ಸಮಸ್ಯೆಯಿಂದ ಹೇಗೆ ರಕ್ಷಿಸಿಕೊಳ್ಳಬಹುದು?

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಡುವುದು ಅತ್ಯಂತ ಮುಖ್ಯ. ದಿನಕ್ಕೆ ಎರಡು ಬಾರಿ ಹಲ್ಲು ತೊಳೆಯುವುದು, ಪ್ರತಿದಿನ ಫ್ಲಾಸ್ ಬಳಸುವುದು, ಸಾಕಷ್ಟು ನೀರು ಕುಡಿಯುವುದು ಮತ್ತು ಪ್ರತಿ ಆರು ತಿಂಗಳಿಗೊಮ್ಮೆ ದಂತ ತಪಾಸಣೆ ಮಾಡಿಸಿಕೊಳ್ಳುವುದು ಬಾಯಿಯ ಆರೋಗ್ಯ ಕಾಪಾಡಲು ಸಹಕಾರಿ. ಹಲ್ಲಿನ ಮಾಂಸದಿಂದ ಪದೇಪದೇ ರಕ್ತಸ್ರಾವವಾಗುವುದು, ಊತ ಕಡಿಮೆಯಾಗದಿರುವುದು ಅಥವಾ ಹಲ್ಲುಗಳು ಸಡಿಲವಾಗುವುದು ಕಂಡುಬಂದರೆ ನಿರ್ಲಕ್ಷ್ಯ ಮಾಡಬೇಡಿ. ತಕ್ಷಣ ದಂತ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯುವುದು ಉತ್ತಮ. ಡಯಾಬಿಟೀಸ್‌ ನಿಯಂತ್ರಣದಲ್ಲಿದ್ದರೆ ಹಲ್ಲು ಮತ್ತು ಒಸಡಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರೀತಿ ಭಟ್​, ಗುಣವಂತೆ
ಪ್ರೀತಿ ಭಟ್​, ಗುಣವಂತೆ

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ