AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!

ಇತ್ತೀಚಿನ ದಿನಗಳಲ್ಲಿ ಫ್ಯಾಟಿ ಲಿವರ್ ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಆದರೆ ಜನ ಈ ಬಗ್ಗೆ ಅಷ್ಟಾಗಿ ಗಮನಕೊಡುತ್ತಿಲ್ಲ. ತಜ್ಞರ ಪ್ರಕಾರ, ಫ್ಯಾಟಿ ಲಿವರ್ ಕೇವಲ ಯಕೃತ್ತಿನ ಸಮಸ್ಯೆಯಲ್ಲ; ಇದು ದೇಹದ ಇತರ ಪ್ರಮುಖ ಅಂಗಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಹಾಗಾಗಿ ಇದನ್ನು ನಿರ್ಲಕ್ಷ್ಯ ಮಾಡುವುದು ಸರಿಯಲ್ಲ. ಹಾಗಾದರೆ ಈ ಸಮಸ್ಯೆ ಯಾವ ಅಂಗಗಳ ಮೇಲೆ ಪರಿಣಾಮ ಬೀರುತ್ತದೆ, ಫ್ಯಾಟಿ ಲಿವರ್ ಸಮಸ್ಯೆಯನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!
Fatty Liver DiseaseImage Credit source: Getty images
ಪ್ರೀತಿ ಭಟ್​, ಗುಣವಂತೆ
|

Updated on: May 10, 2026 | 9:40 PM

Share

ಇತ್ತೀಚಿನ ದಿನಗಳಲ್ಲಿ ಫ್ಯಾಟಿ ಲಿವರ್ (Fatty Liver) ಸಮಸ್ಯೆ ವೇಗವಾಗಿ ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಆರಂಭಿಕ ಹಂತದಲ್ಲಿ ಹೆಚ್ಚಿನ ಲಕ್ಷಣಗಳು ಕಾಣಿಸದ ಕಾರಣ ಅನೇಕರು ಇದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ತಜ್ಞರ ಪ್ರಕಾರ, ಫ್ಯಾಟಿ ಲಿವರ್ ಕೇವಲ ಯಕೃತ್ತಿನ ಸಮಸ್ಯೆಯಲ್ಲ; ಇದು ದೇಹದ ಇತರ ಪ್ರಮುಖ ಅಂಗಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ವೈದ್ಯರ ಪ್ರಕಾರ, ಯಕೃತ್ತಿನಲ್ಲಿ ಅಗತ್ಯಕ್ಕಿಂತ ಹೆಚ್ಚು ಕೊಬ್ಬು ಜಮೆಯಾಗುವುದನ್ನು ಫ್ಯಾಟಿ ಲಿವರ್ ಎಂದು ಕರೆಯಲಾಗುತ್ತದೆ. ಯಕೃತ್ತು ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಹಾಕುವುದು, ಜೀರ್ಣಕ್ರಿಯೆಗೆ ಸಹಾಯ ಮಾಡುವುದು ಹಾಗೂ ದೇಹದ ಶಕ್ತಿಯನ್ನು ಸಮತೋಲನದಲ್ಲಿ ಇಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಆದರೆ ಈ ಯಕೃತ್ತಿನ ಕಾರ್ಯಕ್ಷಮತೆ ಕುಂದಿದಾಗ ದೇಹದ ಇತರ ಅಂಗಗಳ ಮೇಲೂ ಪರಿಣಾಮ ಕಾಣಿಸಿಕೊಳ್ಳಬಹುದು. ಹಾಗಾದರೆ ಈ ಸಮಸ್ಯೆ ಯಾವ ಅಂಗಗಳ ಮೇಲೆ ಪರಿಣಾಮ ಬೀರುತ್ತದೆ, ಫ್ಯಾಟಿ ಲಿವರ್ ಸಮಸ್ಯೆಯನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಯಾವ ಅಂಗಗಳ ಮೇಲೆ ಪರಿಣಾಮ ಬೀರುತ್ತದೆ?

ಲೇಡಿ ಹಾರ್ಡಿಂಗ್ ಆಸ್ಪತ್ರೆಯ ಮೆಡಿಸಿನ್ ವಿಭಾಗದ ನಿರ್ದೇಶಕ ಡಾ. ಎಲ್.ಎಚ್. ಘೋಟೇಕರ್ ಹೇಳುವ ಪ್ರಕಾರ, ಫ್ಯಾಟಿ ಲಿವರ್ ಸಮಸ್ಯೆಯಿಂದ ಹೃದಯ, ಮೂತ್ರಪಿಂಡ, ಪ್ಯಾಂಕ್ರಿಯಾಸ್ ಮತ್ತು ದೇಹದ ಮೆಟಾಬಾಲಿಸಂ ಮೇಲೂ ದುಷ್ಪರಿಣಾಮ ಉಂಟಾಗಬಹುದು. ಜೊತೆಗೆ ಫ್ಯಾಟಿ ಲಿವರ್ ಇರುವವರಲ್ಲಿ ಹೈ ಬ್ಲಡ್ ಪ್ರೆಶರ್, ಕೊಲೆಸ್ಟ್ರಾಲ್ ಹೆಚ್ಚಳ, ಇನ್ಸುಲಿನ್ ರೆಸಿಸ್ಟೆನ್ಸ್ ಹಾಗೂ ಟೈಪ್- 2 ಮಧುಮೇಹದ ಅಪಾಯ ಹೆಚ್ಚಾಗುತ್ತದೆ. ಯಕೃತ್ತು ಸರಿಯಾಗಿ ಕೆಲಸ ಮಾಡದಿದ್ದರೆ ದೇಹದಲ್ಲಿ ಉರಿಯೂತ ಹೆಚ್ಚಾಗಿ ಹೃದಯ ಮತ್ತು ರಕ್ತನಾಳಗಳ ಆರೋಗ್ಯಕ್ಕೂ ಹಾನಿಯಾಗಬಹುದು. ಕೆಲವೊಮ್ಮೆ ಮೂತ್ರಪಿಂಡದ ಕಾರ್ಯಕ್ಷಮತೆಯೂ ಕುಂದಬಹುದು. ಪ್ಯಾಂಕ್ರಿಯಾಸ್ ಮೇಲೆ ಪರಿಣಾಮ ಬಿದ್ದರೆ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣ ಕಷ್ಟವಾಗಬಹುದು. ಸಮಸ್ಯೆ ಗಂಭೀರವಾದರೆ ಲಿವರ್ ಉರಿಯೂತ, ಫೈಬ್ರೋಸಿಸ್, ಸಿರೋಸಿಸ್ ಮತ್ತು ಲಿವರ್ ಫೇಲ್ಯರ್ ಅಪಾಯವೂ ಎದುರಾಗಬಹುದು.

ಇದನ್ನೂ ಓದಿ: ಈ ಆಹಾರಗಳನ್ನು ಸೇವನೆ ಮಾಡ್ತೀರಾ? ಹಾಗಿದ್ರೆ ಫ್ಯಾಟಿ ಲಿವರ್ ಸಮಸ್ಯೆ ಬರುತ್ತೆ ಹುಷಾರ್!

ಫ್ಯಾಟಿ ಲಿವರ್ ತಡೆಗಟ್ಟಲು ಏನು ಮಾಡಬೇಕು?

ಆರೋಗ್ಯಕರ ಆಹಾರ ಪದ್ಧತಿ ಮತ್ತು ನಿಯಮಿತ ವ್ಯಾಯಾಮ ಅತ್ಯಂತ ಮುಖ್ಯ. ಹೆಚ್ಚು ಎಣ್ಣೆ, ಸಕ್ಕರೆ, ಜಂಕ್ ಫುಡ್ ಮತ್ತು ಪ್ರೊಸೆಸ್ಡ್ ಆಹಾರವನ್ನು ಕಡಿಮೆ ಮಾಡಬೇಕು. ಹಣ್ಣು, ತರಕಾರಿ, ಧಾನ್ಯಗಳು ಮತ್ತು ಪ್ರೋಟೀನ್‌ಯುಕ್ತ ಆಹಾರ ಸೇವನೆ ಮಾಡಬೇಕು. ಪ್ರತಿದಿನ ಕನಿಷ್ಠ 30 ನಿಮಿಷ ವ್ಯಾಯಾಮ ಮಾಡುವುದು, ಸಾಕಷ್ಟು ನೀರು ಕುಡಿಯುವುದು ಮತ್ತು ತೂಕ ನಿಯಂತ್ರಣದಲ್ಲಿಡುವುದು ಅಗತ್ಯ. ಜೊತೆಗೆ ಧೂಮಪಾನ ಹಾಗೂ ಮದ್ಯಪಾನದಿಂದ ದೂರವಿರುವುದು ಲಿವರ್ ಆರೋಗ್ಯಕ್ಕೆ ಸಹಕಾರಿ ಎಂದು ತಜ್ಞರು ಸಲಹೆ ನೀಡಿದ್ದಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ