Sign In

By signing in or creating an account, you agree with Associated Broadcasting Company's Terms & Conditions and Privacy Policy.

Child Care Tips: ಮಕ್ಕಳಿಗೆ ಮೊಟ್ಟೆ ತಿನಿಸುವಾಗ ಈ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಿ

ಮೊಟ್ಟೆ ಸಾಕಷ್ಟು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭಗಳಿವೆ ? ಮಗುವಿಗೆ ಯಾವ ವಯಸ್ಸಿನಲ್ಲಿ ಮೊಟ್ಟೆ ತಿನಿಸಲು ಪ್ರಾರಂಭಿಸಬೇಕು? ಜೊತೆಗೆ ದಿನಕ್ಕೆ ಎಷ್ಟು ಮೊಟ್ಟೆಗಳನ್ನು ನೀಡಬೇಕು? ಎಂಬ ಸಾಕಷ್ಟು ಪ್ರಶ್ನೆಗಳಿಗೆ ಉತ್ತರವನ್ನು ಇಲ್ಲಿ ತಿಳಿದುಕೊಳ್ಳಿ.

Child Care Tips: ಮಕ್ಕಳಿಗೆ ಮೊಟ್ಟೆ ತಿನಿಸುವಾಗ ಈ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಿ
Feeding Eggs to Babies
Follow us
ಅಕ್ಷತಾ ವರ್ಕಾಡಿ
|

Updated on: Apr 18, 2024 | 6:24 PM

ಮೊಟ್ಟೆ ಮಕ್ಕಳಿಗೆ, ಪ್ರೋಟೀನ್, ಖನಿಜ ಮತ್ತು ಇತರ ಅಗತ್ಯ ಪೋಷಕಾಂಶಗಳನ್ನು ಒದಗಿಸುವಲ್ಲಿ ಸಹಾಯಕವಾಗಿದೆ. ಮೊಟ್ಟೆಯಲ್ಲಿರುವ ವಿಟಮಿನ್ ಎ, ಡಿ ಮತ್ತು ಇ ಮಕ್ಕಳ ಮೂಳೆ, ಸ್ನಾಯುಗಳನ್ನು ಬಲಪಡಿಸುತ್ತದೆ. ಇದಲ್ಲದೇ ಕಣ್ಣಿನ ಆರೋಗ್ಯಕ್ಕೆ ಸಂಬಂಧಪಟ್ಟಂತೆ ತುಂಬಾ ಒಳ್ಳೆಯದು. ಆದ್ದರಿಂದ ಮಕ್ಕಳಿಗೆ ಯಾವ ವಯಸ್ಸಿನಲ್ಲಿ ಮೊಟ್ಟೆ ತಿನಿಸಲು ಪ್ರಾರಂಭಿಸಬೇಕು? ಜೊತೆಗೆ ದಿನಕ್ಕೆ ಎಷ್ಟು ಮೊಟ್ಟೆಗಳನ್ನು ನೀಡಬೇಕು? ಎಂಬುದು ತಿಳಿದುಕೊಳ್ಳುವುದು ಅವಶ್ಯಕ.

ಯಾವ ವಯಸ್ಸಿನಿಂದ ಮಕ್ಕಳಿಗೆ ಮೊಟ್ಟೆ ತಿನಿಸಲು ಪ್ರಾರಂಭಿಸಬೇಕು?

ವಾಸ್ತವವಾಗಿ ಆರು ತಿಂಗಳ ನಂತರ ಮಗುವಿಗೆ ಮೊಟ್ಟೆ ನೀಡಲು ಪ್ರಾರಂಭಿಸಬಹುದು. ಈ ವಯಸ್ಸಿನಿಂದ ಅವರಿಗೆ ಹೆಚ್ಚಿನ ಪೋಷಣೆಯ ಅಗತ್ಯವಿರುತ್ತದೆ. ಮೊಟ್ಟೆ ಪ್ರೋಟೀನ್ ಮತ್ತು ಖನಿಜಗಳಲ್ಲಿ ಸಮೃದ್ಧವಾಗಿವೆ. ಇವು ಮಕ್ಕಳ ಆರೋಗ್ಯಕ್ಕೆ ಒಳ್ಳೆಯದು.

ಇದನ್ನೂ ಓದಿ: ಮಕ್ಕಳಲ್ಲಿ ಬೊಜ್ಜು ಹೆಚ್ಚಿಸುವ ಜಂಕ್​ಫುಡ್ ಚಟ ಬಿಡಿಸುವುದು ಹೇಗೆ?

ಮಗುವಿಗೆ ದಿನಕ್ಕೆ ಎಷ್ಟು ಮೊಟ್ಟೆ ನೀಡಬೇಕು?

ಮಗು ಆರು ತಿಂಗಳ ವಯಸ್ಸಿನಿಂದ ಮೊಟ್ಟೆ ನೀಡಲು ಪ್ರಾರಂಭಿಸಬಹುದು. ಆದರೆ ಆರಂಭದಲ್ಲಿ ಅರ್ಧ ಮೊಟ್ಟೆಯನ್ನು ಮಾತ್ರ ನೀಡಿ. ನಿಧಾನವಾಗಿ ತಿನ್ನಲು ಹೇಳಿ ಅಥವಾ ತಿನ್ನಿಸಿ. ಕೆಲವೊಮ್ಮೆ ಅಲರ್ಜಿಯಾಗುವ ಸಾಧ್ಯತೆ ಇದೆ. ಕ್ರಮೇಣ ಮಗು ಬೆಳೆದಂತೆ ಅರ್ಧ ಮೊಟ್ಟೆಯ ಬದಲಿಗೆ ಸಂಪೂರ್ಣ ಮೊಟ್ಟೆಯನ್ನು ನೀಡಲು ಆರಂಭಿಸಬೇಕು. ಒಂದು ವರ್ಷದ ವಯಸ್ಸಿನಿಂದ ಇಡೀ ಮೊಟ್ಟೆಯನ್ನು ಪ್ರತಿದಿನ ತಿನ್ನಬಹುದು. ಇದು ಮಗುವಿನ ಬೆಳವಣಿಗೆಗೆ ಮಾತ್ರವಲ್ಲದೆ ಮಗುವಿನ ಮೂಳೆಗಳನ್ನು ಬಲಪಡಿಸುತ್ತದೆ.

ಮೊಟ್ಟೆಗಳನ್ನು ತಿನ್ನುವಾಗ ಈ ಮುನ್ನೆಚ್ಚರಿಕೆ:

ಕೆಲವು ಮಕ್ಕಳು ಮೊಟ್ಟೆ ಸೇವನೆಯಿಂದ ಅಲರ್ಜಿಯನ್ನು ಹೊಂದಿರಬಹುದು. ಆದ್ದರಿಂದ ಮೊದಲಿಗೆ ಸ್ವಲ್ಪ ಮೊಟ್ಟೆಯನ್ನು ಮಾತ್ರ ನೀಡಿ. ಅಲರ್ಜಿಯ ಲಕ್ಷಣಗಳು ಕಂಡುಬಂದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ. ಶಿಶುಗಳಿಗೆ ಯಾವಾಗಲೂ ತಾಜಾ ಮೊಟ್ಟೆಗಳನ್ನು ನೀಡಬೇಕು. ದೀರ್ಘಕಾಲ ಸಂಗ್ರಹಿಸಿದ ಮೊಟ್ಟೆಗಳನ್ನು ನೀಡಬಾರದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ