Methi Seeds: ಮೆಂತ್ಯ ಸೇವನೆಯಿಂದ ಆಗುವ ಅಡ್ಡ ಪರಿಣಾಮಗಳೇನು?

ಮೆಂತ್ಯದಿಂದ ಕೆಲವರಿಗೆ ಅತಿಸಾರ ಮತ್ತು ಅಜೀರ್ಣದಂತಹ ಅಡ್ಡಪರಿಣಾಮಗಳು ಉಂಟಾಗುತ್ತದೆ. ಇನ್ನು ಕೆಲವರಲ್ಲಿ ಹಸಿವಿನ ಪ್ರಮಾಣ ಕಡಿಮೆಯಾಗುತ್ತದೆ. ನೀವು ದಪ್ಪಗಾಗಲು ಬಯಸಿದ್ದರೆ ಅಥವಾ ಹಸಿವನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ ಮೆಂತ್ಯ ಸೇವನೆ ಮಾಡಬೇಡಿ.

Methi Seeds: ಮೆಂತ್ಯ ಸೇವನೆಯಿಂದ ಆಗುವ ಅಡ್ಡ ಪರಿಣಾಮಗಳೇನು?
ಮೆಂತ್ಯImage Credit source: iStock
Follow us
ಸುಷ್ಮಾ ಚಕ್ರೆ
|

Updated on: Sep 13, 2023 | 2:22 PM

ಮೆಂತ್ಯ ಕಾಳನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಉಪಯೋಗಗಳು ಎಷ್ಟಿದೆಯೋ ಹಾಗೇ ಅಡ್ಡ ಪರಿಣಾಮಗಳೂ ಇವೆ. ಕೆಲವರ ದೇಹ ಪ್ರಕೃತಿಗೆ ಮೆಂತ್ಯ ಹೊಂದುವುದಿಲ್ಲ. ಅಂಥವರಲ್ಲಿ ಈ ಕೆಳಗಿನ ಲಕ್ಷಣಗಳು ಕಂಡುಬಂದರೆ ಮೆಂತ್ಯ ಸೇವನೆಯನ್ನು ನಿಲ್ಲಿಸಬೇಕು. ಹಾಗೇ, ವೈದ್ಯರನ್ನು ಸಂಪರ್ಕಿಸಬೇಕು. ಮೆಂತ್ಯವು ಕಬ್ಬಿಣ, ಮೆಗ್ನೀಷಿಯಂ ಮತ್ತು ಮ್ಯಾಂಗನೀಸ್ ಸೇರಿದಂತೆ ಫೈಬರ್, ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಜೀರ್ಣಕ್ರಿಯೆಗೆ ಸಹಾಯ ಮಾಡುವುದು, ರಕ್ತದಲ್ಲಿನ ಸಕ್ಕರೆಯ ನಿಯಂತ್ರಣವನ್ನು ಸುಧಾರಿಸುವುದು, ಉರಿಯೂತವನ್ನು ಕಡಿಮೆ ಮಾಡುವುದು ಇತ್ಯಾದಿ ಉಪಯೋಗಗಳನ್ನು ಮೆಂತ್ಯದಿಂದ ಪಡೆಯಬಹುದು.

ಮೆಂತ್ಯ ಅಜೀರ್ಣ, ಮಲಬದ್ಧತೆಯಂತಹ ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಇದರಲ್ಲಿ ಹೆಚ್ಚಿನ ಫೈಬರ್ ಅಂಶ ಇರುತ್ತದೆ. ಇದು ಉತ್ತಮ ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಕಾರಿ. ಮೆಂತ್ಯ ಹಸಿವನ್ನು ನಿಗ್ರಹಿಸುವ ಮೂಲಕ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಚಯಾಪಚಯ ದರವನ್ನು ಹೆಚ್ಚಿಸುತ್ತದೆ ಮತ್ತು ಕೊಬ್ಬಿನ ಶೇಖರಣೆಯನ್ನು ಕಡಿಮೆ ಮಾಡುತ್ತದೆ. ಮೆಂತ್ಯದ ನೀರಿನ ಸೇವನೆ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮೆಂತ್ಯ ನೀರು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಇದು ಮಧುಮೇಹ ಸಮಸ್ಯೆ ಇರುವ ವ್ಯಕ್ತಿಗಳಿಗೆ ಪ್ರಯೋಜನಕಾರಿಯಾಗಿದೆ.

ಇದನ್ನೂ ಓದಿ: Anjeer Benefits: ಅಂಜೂರ ತಿನ್ನುವುದರಿಂದ ಆಗುವ 8 ಪ್ರಯೋಜನಗಳಿವು

ಮೆಂತ್ಯದ ನೀರು ಉರಿಯೂತವನ್ನು ಕಡಿಮೆ ಮಾಡುತ್ತದೆ. ಸಂಧಿವಾತ ಮತ್ತು ಅಸ್ತಮಾದಂತಹ ಉರಿಯೂತ ಸಂಬಂಧಿತ ಪರಿಸ್ಥಿತಿಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ಮೆಂತ್ಯದ ನೀರು ಅದರ ಫೈಟೊಈಸ್ಟ್ರೊಜೆನ್ ಅಂಶಕ್ಕೆ ಹೆಸರುವಾಸಿಯಾಗಿದೆ. ಇದು ಹಾರ್ಮೋನ್ ಅಸಮತೋಲನವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಮೆಂತ್ಯದಿಂದ ಕೆಲವರಿಗೆ ಅತಿಸಾರ ಮತ್ತು ಅಜೀರ್ಣದಂತಹ ಅಡ್ಡಪರಿಣಾಮಗಳು ಉಂಟಾಗುತ್ತದೆ. ಇನ್ನು ಕೆಲವರಲ್ಲಿ ಹಸಿವಿನ ಪ್ರಮಾಣ ಕಡಿಮೆಯಾಗುತ್ತದೆ. ನೀವು ದಪ್ಪಗಾಗಲು ಬಯಸಿದ್ದರೆ ಅಥವಾ ಹಸಿವನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ ಮೆಂತ್ಯ ಸೇವನೆ ಮಾಡಬೇಡಿ. ನೀವು ಮಧುಮೇಹ ಔಷಧಿ ಅಥವಾ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವ ಇತರ ಸಪ್ಲಿಮೆಂಟ್​​ಗಳನ್ನು ತೆಗೆದುಕೊಳ್ಳುತ್ತಿದ್ದರೆ ಮೆಂತ್ಯವನ್ನು ಎಚ್ಚರಿಕೆಯಿಂದ ಬಳಸಬೇಕು.

ಇದನ್ನೂ ಓದಿ: ರಾತ್ರಿ ತಡವಾಗಿ ಮಲಗುವುದರಿಂದ ಡಯಾಬಿಟಿಸ್ ಬರಬಹುದು ಎಚ್ಚರ!

ಅನೇಕ ಔಷಧಿಗಳು ಮತ್ತು ಗಿಡಮೂಲಿಕೆಗಳಂತೆ ಮೆಂತ್ಯದಿಂದ ಕೂಡ ಕೆಲವರಿಗೆ ಅಡ್ಡಪರಿಣಾಮಗಳು ಉಂಟಾಗುತ್ತದೆ. ಮೆಂತ್ಯ ಸೇವನೆಯಿಂದ ಕೆಲವರು ಅತಿಸಾರ, ಗ್ಯಾಸ್ಟ್ರಿಕ್, ವಾಕರಿಕೆ ಅಥವಾ ವಾಂತಿ, ಹೊಟ್ಟೆ ನೋವು ಹೀಗೆ ಕೆಲವು ಸಣ್ಣಪುಟ್ಟ ಸಮಸ್ಯೆಗಳನ್ನು ಎದುರಿಸಬಹುದು. ಇನ್ನು ಕೆಲವರಿಗೆ ಮೆಂತ್ಯದಿಂದ ಅಲರ್ಜಿ ಉಂಟಾಗಬಹುದು. ಇದರಿಂದ ದೇಹದಲ್ಲಿ ಊತ, ತುರಿಕೆ, ದದ್ದು ಮತ್ತು ಉಸಿರಾಟದ ತೊಂದರೆಗಳ ಲಕ್ಷಣಗಳನ್ನು ಅನುಭವಿಸಬಹುದು. ಕಡಲೆಕಾಯಿ, ಕಡಲೆ, ಅಥವಾ ದ್ವಿದಳ ಧಾನ್ಯದ ಅಲರ್ಜಿಯನ್ನು ನೀವು ಅನುಭವಿಸುತ್ತಿದ್ದರೆ ಮೆಂತ್ಯದಿಂದಲೂ ಸಮಸ್ಯೆ ಎದುರಾಗಬಹುದು.

ನೀವು ಹೈಪೋಕಾಲೆಮಿಯಾ (ಕಡಿಮೆ ಪೊಟ್ಯಾಸಿಯಮ್) ಹೊಂದಿದ್ದರೆ, ಮೆಂತ್ಯ ಸೇವನೆಯಿಂದ ನೀವು ಸ್ನಾಯು ದೌರ್ಬಲ್ಯ ಅಥವಾ ಸೆಳೆತ, ಅಸಹಜ ಹೃದಯ ಬಡಿತದ ಲಕ್ಷಣಗಳನ್ನು ಅನುಭವಿಸಬಹುದು. ಕೆಲವರಿಗೆ ಚರ್ಮದ ಮೇಲೆ ಗುಳ್ಳೆಗಳು ಉಂಟಾಗಬಹುದು. ಇಂತಹ ಸಮಯದಲ್ಲಿ ವೈದ್ಯರ ಬಳಿ ಚಿಕಿತ್ಸೆ ಪಡೆಯಲು ಮರೆಯಬೇಡಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ