AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fenugreek Water: ಖಾಲಿ ಹೊಟ್ಟೆಯಲ್ಲಿ ಮೆಂತ್ಯ ನೀರು ಕುಡಿಯಿರಿ, ಈ ರೋಗಗಳಿಂದ ದೂರವಿರಿ

ಮೆಂತೆಕಾಳು ಕಹಿಯಾಗಿದ್ದರೂ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಹಲವಾರು ರೀತಿಯ ಪೋಷಕಾಂಶಗಳು ಹಾಗೂ ಖನಿಜಾಂಶಗಳು ಇವೆ. ಮೆಂತ್ಯೆ ಕಾಳನ್ನು ನೀರಿನಲ್ಲಿ ನೆನೆಸಿಟ್ಟುಕೊಂಡು ಅದನ್ನು ಕುಡಿಯುವುದರಿಂದ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹಾಗಾದರೆ ಯಾವ ಸಮಸ್ಯೆಗಳಿರುವವರು ಇದನ್ನು ಕುಡಿಯಬೇಕು? ಇಲ್ಲಿದೆ ಮಾಹಿತಿ.

Fenugreek Water: ಖಾಲಿ ಹೊಟ್ಟೆಯಲ್ಲಿ ಮೆಂತ್ಯ ನೀರು ಕುಡಿಯಿರಿ, ಈ ರೋಗಗಳಿಂದ ದೂರವಿರಿ
Fenugreek Water
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 04, 2024 | 7:23 PM

Share

ಹಿಂದಿನ ಕಾಲದಿಂದಲೂ ಮೆಂತ್ಯವನ್ನು ಅಡುಗೆಗೆ ಮಾತ್ರವಲ್ಲ ಔಷಧಿಯಾಗಿಯೂ ಬಳಸಲಾಗುತ್ತಿದೆ. ಮೆಂತೆಕಾಳು ಕಹಿಯಾಗಿದ್ದರೂ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಹಲವಾರು ರೀತಿಯ ಪೋಷಕಾಂಶಗಳು ಹಾಗೂ ಖನಿಜಾಂಶಗಳು ಇವೆ. ಮೆಂತ್ಯೆ ಕಾಳನ್ನು ನೀರಿನಲ್ಲಿ ನೆನೆಸಿಟ್ಟುಕೊಂಡು ಅದನ್ನು ಕುಡಿಯುವುದರಿಂದ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹಾಗಾದರೆ ಯಾವ ಸಮಸ್ಯೆಗಳಿರುವವರು ಇದನ್ನು ಕುಡಿಯಬೇಕು? ಇಲ್ಲಿದೆ ಮಾಹಿತಿ.

ಮೆಂತ್ಯವನ್ನು ನೆನೆಸಿ ಬೆಳಿಗ್ಗೆ ಆ ನೀರನ್ನು ಕುಡಿಯುವುದರಿಂದ, ಅನೇಕ ರೀತಿಯ ಕಾಯಿಲೆಗಳನ್ನು ಗುಣಪಡಿಸಬಹುದು. ಇದು ಅಜೀರ್ಣ, ಉಬ್ಬರ ಮತ್ತು ಮಲಬದ್ಧತೆಯಂತಹ ಜೀರ್ಣಕಾರಿ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಮೆಂತ್ಯ ನೀರು ಹಸಿವನ್ನು ಕಡಿಮೆ ಮಾಡುತ್ತದೆ. ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ, ಜೊತೆಗೆ ಕೊಬ್ಬು ಶೇಖರಣೆಯನ್ನು ಕಡಿಮೆ ಮಾಡುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಒಟ್ಟಾರೆ ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ.

ಇದನ್ನೂ ಓದಿ: ಬೆವರುವುದು ಆರೋಗ್ಯಕ್ಕೆ ಒಳ್ಳೆಯದು , ಯಾಕೆ ಗೊತ್ತಾ?

ಖಾಲಿ ಹೊಟ್ಟೆಯಲ್ಲಿ ಮೆಂತ್ಯ ನೀರನ್ನು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು, ಅಲ್ಲದೆ ತೂಕ ಇಳಿಕೆಗೂ ಸಹಾಯ ಮಾಡುತ್ತದೆ. ಇದನ್ನು ಕುಡಿದಾಗ ಹೊಟ್ಟೆ ತುಂಬಿದ ಭಾವನೆ ಬರುವುದರಿಂದ ನೀವು ಹೆಚ್ಚಾಗಿ ಆಹಾರ ಸೇವನೆ ಮಾಡಲು ಸಾಧ್ಯವಾಗುವುದಿಲ್ಲ. ಅಲ್ಲದೆ ಇದು ಹೆಚ್ಚುವರಿ ಕ್ಯಾಲೊರಿ ಸೇವನೆಯನ್ನು ಕಡಿಮೆ ಮಾಡುವ ಮೂಲಕ ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ. ಇದೆಲ್ಲದರ ಜೊತೆಗೆ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಉರಿಯೂತವನ್ನು ಕಡಿಮೆ ಮಾಡುತ್ತದೆ. ಸೋಂಕುಗಳ ವಿರುದ್ಧ ದೇಹವನ್ನು ರಕ್ಷಿಸುತ್ತದೆ. ಮುಟ್ಟಿನ ನೋವನ್ನು ಕೂಡ ನಿವಾರಿಸುತ್ತದೆ. ಇದು ಋತುಚಕ್ರದ ಸೆಳೆತ ಮತ್ತು ಉಬ್ಬರದಂತಹ ರೋಗಲಕ್ಷಣಗಳನ್ನು ನಿವಾರಿಸಲು ಪ್ರಯೋಜನಕಾರಿ ಗುಣಗಳನ್ನು ಹೊಂದಿದೆ. ಅಲ್ಲದೆ, ಮೆಂತ್ಯವನ್ನು ನೆನೆಸಿ ತಲೆಗೆ ಹಚ್ಚುವುದು ಕೂದಲಿನ ಆರೋಗ್ಯಕ್ಕೂ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು