ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸೋಮವಾರ ಸಾಯಂಕಾಲ ದೊರಕಿರುವ ಮಾಹಿತಿ ಪ್ರಕಾರ್ ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 11 ಜನ ಸತ್ತಿದ್ದಾರೆ ಮತ್ತು ಹೊಸದಾಗಿ 998 ಜನರಲ್ಲಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಈವರೆಗೆ ಕೊವಿಡ್-19 ವ್ಯಾಧಿಯಿಂದ 11,867 ಜನ ಮರಣಿಸಿದ್ದಾರೆ ಮತ್ತು ಸೋಂಕಿತರ ಸಂಖ್ಯೆ 8,94,004ಕ್ಕೇರಿದೆ
ಸೋಂಕಿತರ ಪೈಕಿ 8,57,351 ಜನ ಗುಣಮುಖರಾಗಿದ್ದಾರೆ ಮತ್ತು ಮಿಕ್ಕಿದ 24,767 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾಗೆಯೇ, ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿಗೆ 7 ಜನರ ಬಲಿಯಾಗಿದ್ದಾರೆ, 501 ಜನರಿಗೆ ಸೋಂಕು ತಗುಲಿದೆ. ನಗರದಲ್ಲಿ ಕೊರೊನಾದಿಂದ ಈವರೆಗೆ 4,190 ಜನ ಮರಣಿಸಿದ್ದಾರೆ ಮತ್ತು ಸೋಂಕು ಪೀಡಿತರ ಸಂಖ್ಯೆ 3,74,525 ತಲುಪಿದೆ
ಸೋಂಕಿತರ ಪೈಕಿ 3,51,065 ಜನರು ಗುಣಮುಖರಾಗಿದ್ದಾರೆ ಮತ್ತು ಉಳಿದ 19,269 ಸೋಂಕಿತರಿಗೆ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆಯೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಲಭ್ಯವಾಗಿರುವ ಮಾಹಿತಿ ತಿಳಿಸುತ್ತದೆ.