AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ 3 ಮೀನುಗಳು ಉಚಿತವಾಗಿ ಸಿಕ್ಕರು ತಿನ್ನಬೇಡಿ! ಆರೋಗ್ಯ ಹಾಳಾಗುತ್ತೆ

ಮೀನುಗಳಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳು, ವಿಟಮಿನ್ ಡಿ, ವಿಟಮಿನ್ ಬಿ2, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಸತು, ಅಯೋಡಿನ್ ಮತ್ತು ಪ್ರೋಟೀನ್‌ಗಳು ಸಮೃದ್ಧವಾಗಿವೆ. ಆದರೆ ಕೆಲವು ರೀತಿಯ ಮೀನುಗಳು ನಮ್ಮ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಅವುಗಳನ್ನು ಅಪ್ಪಿತಪ್ಪಿ ಸೇವನೆ ಮಾಡಿದರೆ ಆರೋಗ್ಯಕ್ಕೆ ಹಾನಿಯಾಗುವುದು ಪಕ್ಕಾ. ಹಾಗಾದರೆ ಆ ಮೀನುಗಳು ಯಾವವು? ಯಾಕೆ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದನ್ನು ತಿಳಿದುಕೊಳ್ಳಿ.

ಈ 3 ಮೀನುಗಳು ಉಚಿತವಾಗಿ ಸಿಕ್ಕರು ತಿನ್ನಬೇಡಿ! ಆರೋಗ್ಯ ಹಾಳಾಗುತ್ತೆ
ಸಾಂದರ್ಭಿಕ ಚಿತ್ರImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 11, 2025 | 8:23 PM

Share

ಮಾಂಸಾಹಾರ (Meat) ಸೇವನೆ ಮಾಡುವವರು ಮೀನು (Fish) ತಿನ್ನುವುದನ್ನು ಹೆಚ್ಚಾಗಿ ಇಷ್ಟಪಡುತ್ತಾರೆ. ಫಿಶ್ ಕರಿ, ಫ್ರೈ, ಗ್ರಿಲ್ ಮತ್ತು ಫಿಶ್ ಬಿರಿಯಾನಿ ಹೀಗೆ ವಿವಿಧ ರೀತಿಯಲ್ಲಿ ಖಾದ್ಯ ತಯಾರಿಸಿ ಸೇವನೆ ಮಾಡುತ್ತಾರೆ. ಇವು ನಾಲಿಗೆಗೆ ರುಚಿ ನೀಡುವುದರ ಜೊತೆ ಜೊತೆಗೆ ಆರೋಗ್ಯಕ್ಕೂ ಅನೇಕ ರೀತಿಯಲ್ಲಿ ಪ್ರಯೋಜನಗಳನ್ನು ನೀಡುತ್ತದೆ. ಮೀನಿನಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳು, ವಿಟಮಿನ್ ಡಿ, ವಿಟಮಿನ್ ಬಿ2, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಸತು, ಅಯೋಡಿನ್ ಮತ್ತು ಪ್ರೋಟೀನ್‌ಗಳು ಸಮೃದ್ಧವಾಗಿವೆ. ಇಷ್ಟು ಪ್ರಯೋಜನವಿದ್ದರೂ ಕೂಡ ಕೆಲವು ರೀತಿಯ ಮೀನುಗಳು ಆರೋಗ್ಯಕ್ಕೆ ಒಳ್ಳೆಯದಲ್ಲ, ಅವುಗಳನ್ನು ಸೇವನೆ ಮಾಡುವುದರಿಂದ ಅನೇಕ ರೀತಿಯ ಆರೋಗ್ಯ (Health) ಸಮಸ್ಯೆಗಳು ಉಂಟಾಗಬಹುದು. ಅಂತಹ ವಿಷಕಾರಿ ಮೀನುಗಳಿಂದ ದೂರವಿದ್ದಷ್ಟು ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಆ ಮೀನುಗಳು ಯಾವವು? ಯಾಕೆ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದನ್ನು ತಿಳಿದುಕೊಳ್ಳಿ.

ಈ ರೀತಿಯ ಮೀನುಗಳು ಆರೋಗ್ಯಕ್ಕೆ ಹಾನಿಕಾರಕ

ಮೀನು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಅವುಗಳಲ್ಲಿ ಕೆಲವು ರೀತಿಯ ಮೀನುಗಳು ನಮ್ಮ ಆರೋಗ್ಯಕ್ಕೆ ಹಾನಿಕಾರಕ ಎಂದು ತಜ್ಞರು ಹೇಳುತ್ತಾರೆ. ಕಿಂಗ್ ಮ್ಯಾಕೆರೆಲ್ ಎನ್ನುವ ಮೀನಿನಲ್ಲಿ ಹೆಚ್ಚಿನ ಮಟ್ಟದ ಪಾದರಸ ಇರುತ್ತದೆ ಎಂದು ಹೇಳಲಾಗುತ್ತದೆ, ಇದು ನರಮಂಡಲದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ವಿಶೇಷವಾಗಿ ಪೆಸಿಫಿಕ್ ಮಹಾಸಾಗರದಲ್ಲಿ ಕಂಡುಬರುವಂತಹ ಈ ಕಿಂಗ್ ಮ್ಯಾಕೆರೆಲ್ ಅನ್ನು ಮಕ್ಕಳು ಮತ್ತು ಗರ್ಭಿಣಿಯರು ಸೇವಿಸಲೇಬಾರದು ಎಂದು ಹೇಳಲಾಗುತ್ತದೆ. ಇವುಗಳನ್ನು ಸೇವನೆ ಮಾಡುವುದರಿಂದ ಮೂತ್ರಪಿಂಡ ಮತ್ತು ನರಮಂಡಲದ ಮೇಲೆ ಪರಿಣಾಮ ಬೀರಬಹುದು. ಬಾಸಾ ಮೀನು ಕೂಡ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುವ ಹಾನಿಕಾರಕ ಕೊಬ್ಬಿನಾಮ್ಲಗಳನ್ನು ಹೊಂದಿದ್ದು ಇವುಗಳ ಸೇವನೆಯಿಂದ ಉಸಿರಾಟದ ತೊಂದರೆಗಳು ಅಥವಾ ಸಂಧಿವಾತ ಸಮಸ್ಯೆ ಮತ್ತಷ್ಟು ಹೆಚ್ಚಾಗುತ್ತದೆ ಹಾಗಾಗಿ ಈ ಮೀನುಗಳಿಂದ ದೂರವಿರುವುದು ಬಹಳ ಉತ್ತಮ.

ಇದನ್ನೂ ಓದಿ: ಪ್ರತಿದಿನ ನೀವು ಮಾಡುವ ಈ 4 ತಪ್ಪುಗಳು ರಾತ್ರಿಯ ನಿದ್ರೆಗೆ ಭಂಗ ತರುತ್ತೆ

ಇದನ್ನೂ ಓದಿ
Image
ಪ್ರತಿದಿನ ನೀವು ಮಾಡುವ ಈ ತಪ್ಪುಗಳೇ ರಾತ್ರಿ ನಿದ್ರೆಯನ್ನು ಹಾಳುಮಾಡುತ್ತೆ
Image
ಮಹಿಳೆಯರೇ ಈ ರೀತಿ ಲಕ್ಷಣ ಕಂಡು ಬಂದಾಗ ನಿರ್ಲಕ್ಷಿಸಬೇಡಿ
Image
ಗರ್ಭಾವಸ್ಥೆಯಲ್ಲಿ ಮಲಬದ್ಧತೆ ಕಂಡು ಬಂದರೆ ನಿರ್ಲಕ್ಷ್ಯ ಮಾಡಬೇಡಿ
Image
ಕಣ್ಣುಗಳಲ್ಲಿ ಕಂಡುಬರುವ ತುರಿಕೆ ಈ ರೋಗದ ಮುನ್ಸೂಚನೆ

ಸಾರ್ಡೀನ್‌ ಕೂಡ ಸಾಗರ ಮೀನುಗಳು. ಇವುಗಳಲ್ಲಿ ಹೆಚ್ಚಿನ ಪ್ರಮಾಣದ ಯೂರಿಕ್ ಆಮ್ಲವೂ ಇರುತ್ತದೆ. ಇವುಗಳನ್ನು ಸೇವಿಸುವುದರಿಂದ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎಂದು ತಜ್ಞರು ಹೇಳುತ್ತಾರೆ. ಅದರಲ್ಲಿಯೂ ಅತಿಯಾಗಿ ಸೇವನೆ ಮಾಡುವುದರಿಂದ ಮೆದುಳಿನ ಆರೋಗ್ಯಕ್ಕೆ ಹಾನಿಯಾಗುತ್ತದೆ ಎಂದು ಹೇಳಲಾಗುತ್ತದೆ. ಹಾಗಾಗಿ ಇವುಗಳನ್ನು ಚಿಕ್ಕ ಮಕ್ಕಳು ಮತ್ತು ಗರ್ಭಿಣಿಯರಿಗೆ ಯಾವುದೇ ಕಾರಣಕ್ಕೂ ನೀಡಬಾರದು. ಈ ರೀತಿಯ ಮೀನುಗಳಿಂದ ದೂರವಿರಬೇಕು. ಇಲ್ಲವಾದಲ್ಲಿ ಇದು ನರಗಳ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ